Homeಕರ್ನಾಟಕಬೆಂಗಳೂರು ನಗರ: ಮ್ಯಾಜಿಕ್ ಮಾಡದ ಮೋದಿ ರೋಡ್ ಶೋ; ಯಥಾಸ್ಥಿತಿ ಉಳಿಸಿಕೊಂಡ ಬಿಜೆಪಿ

ಬೆಂಗಳೂರು ನಗರ: ಮ್ಯಾಜಿಕ್ ಮಾಡದ ಮೋದಿ ರೋಡ್ ಶೋ; ಯಥಾಸ್ಥಿತಿ ಉಳಿಸಿಕೊಂಡ ಬಿಜೆಪಿ

- Advertisement -
- Advertisement -

ಬೆಂಗಳೂರು ನಗರದ ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳಿದ್ದು 2018ರ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನಗಳನ್ನು, 15 ಸ್ಥಾನಗಳನ್ನು ಕಾಂಗ್ರೆಸ್ ಮತ್ತು ಜೆಡಿಎಸ್ 2 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಆದರೆ 2019ರ ಆಪರೇಷನ್ ಕಮಲದ ನಂತರ ನಾಲ್ಕು ಜನ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡಿ ಬಿಜೆಪಿ ಸ್ಥಾನಗಳು 15 ಸ್ಥಾನಕ್ಕೆ ಬೆಳೆದರೆ, ಕಾಂಗ್ರೆಸ್ 12, ಜೆಡಿಎಸ್ 1 ಸ್ಥಾನಕ್ಕೆ ಕುಸಿದಿತ್ತು. ಹಲವರು ಸಚಿವರು ಇರುವ ಬೆಂಗಳೂರು ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 2023ರ ಚುನಾವಣೆಯ ಸಮಯದಲ್ಲಿ ಎರಡು ದಿನಗಳ ರೋಡ್ ಶೋ ಮಾಡಿದ್ದರಿಂದ ಬಿಜೆಪಿ ಇನ್ನಷ್ಟು ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿತ್ತು.

ಆದರೆ ಕಾಂಗ್ರೆಸ್ 13 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 15 ಸ್ಥಾನಗಳಲ್ಲಿ ಗೆದ್ದು ಸಮಾಧಾನಕರ ಪ್ರದರ್ಶನ ತೋರಿಸಿದೆ. ಜೆಡಿಎಸ್ ಒಂದು ಸ್ಥಾನವನ್ನೂ ಗೆದ್ದಿಲ್ಲ.

  1. ಗೋವಿಂದರಾಜನಗರ: 2018ರಲ್ಲಿ ವಿ ಸೋಮಣ್ಣ ಇಲ್ಲಿನ ಶಾಸಕರಾಗಿದ್ದರು. ಬಿಜೆಪಿ ಅವರನ್ನು ಈ ಬಾರಿ ವರುಣಾ ಮತ್ತು ಚಾಮರಾಜನಗರಕ್ಕೆ ಅಭ್ಯರ್ಥಿಯನ್ನಾಗಿಸಿತ್ತು. ಎರಡೂ ಕಡೆಗಳಲ್ಲಿ ಅವರು ಸೋತಿದ್ದಾರೆ. ಗೋವಿಂದರಾಜನಗರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಕೆ ಉಮೇಶ್ ಶೆಟ್ಟಿ ಕಾಂಗ್ರೆಸ್‌ನ ಪ್ರಿಯಾಕೃಷ್ಣ ಎದುರು ಸೋಲು ಕಂಡಿದ್ದಾರೆ.
  2. ವಿಜಯನಗರ: ಸಿದ್ದರಾಮಯ್ಯನವರ ಸರ್ಕಾರದಲ್ಲಿ ವಸತಿ ಸಚಿವರಾಗಿದ್ದ ಎಂ ಕೃಷ್ಣಪ್ಪ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಅವರು ಬಿಜೆಪಿಯ ಎಚ್ ರವೀಂದ್ರ ವಿರುದ್ಧ ಪ್ರಯಾಸಕರ ಗೆಲುವು ಸಾಧಿಸಿದ್ದಾರೆ.
  3. ಚಿಕ್ಕಪೇಟೆ: ಬಿಜೆಪಿ ಅಭ್ಯರ್ಥಿ ಉದಯ್ ಗರುಡಾಚಾರ್ ಮರು ಆಯ್ಕೆಯಾದಿದ್ದು ಕಾಂಗ್ರೆಸ್‌ನ ಆರ್ ವಿ ದೇವರಾಜ್ ಸೋಲುಕಂಡಿದ್ದಾರೆ. ಕಾಂಗ್ರೆಸ್‍ನಿಂದ ಸಿಡಿದೆದ್ದು ಪಕ್ಷೇತರನಾಗಿ ನಿಂತಿದ್ದ ಕೆಜಿಎಫ್ ಬಾಬು ಮೂರನೇ ಸ್ಥಾನದಲ್ಲಿ ಗಣನೀಯ ಮತಗಳನ್ನು ಗಳಿಸಿದ್ದಾರೆ.
  4. ಬಸವನಗುಡಿ: ಬಿಜೆಪಿಯ ರವಿ ಸುಬ್ರಮಣ್ಯ ಕಾಂಗ್ರೆಸ್‌ನ ಯು ಬಿ ವೆಂಕಟೇಶ್ ವಿರುದ್ಧ ಭಾರಿ ಅಂತರದಲ್ಲಿ ಗೆದ್ದಿದ್ದಾರೆ.
  5. ಪದ್ಮನಾಭನಗರ: ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಆರ್ ಅಶೋಕ್ ಕಾಂಗ್ರೆಸ್‌ನ ರಘುನಾಥ್ ನಾಯ್ಡು ವಿರುದ್ಧ ಗೆಲುವು ಸಾಧಿಸಿದ್ದಾರೆ.
  6. ಬಿಟಿಎಂ ಲೇಔಟ್: ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿಯ ಕೆ ಆರ್ ಶ್ರೀಧರ ವಿರುದ್ಧ ಗೆಲುವು ಸಾಧಿಸಿದ್ದಾರೆ.
  7. ಜಯನಗರ: ಹಾಲಿ ಶಾಸಕಿ ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ ಅಲ್ಪ ಮತಗಳ (100+) ಅಂತರದಿಂದ ಬಿಜೆಪಿಯ ಸಿ ಕೆ ರಾಮಮೂರ್ತಿ ವಿರುದ್ಧ ಗೆಲುವು ಕಂಡಿದ್ದಾರೆ.
  8. ಬೊಮ್ಮನಹಳ್ಳಿ: ಬಿಜೆಪಿಯ ಹಾಲಿ ಶಾಸಕ ಸತೀಶ್ ರೆಡ್ಡಿ ಕಾಂಗ್ರೆಸ್‌ನ ಉಮಾಪತಿ ಅವರ ವಿರುದ್ಧ ಸುಲಭವಾದ ಗೆಲುವು ಕಂಡಿದ್ದಾರೆ.
  9. ಯಲಹಂಕ: ಬಿಜೆಪಿಯ ವಿಶ್ವನಾಥ್ ಕಾಂಗ್ರೆಸ್‌ನ ಕೇಶವ ರಾಜಣ್ಣ ವಿರುದ್ಧ ಗೆಲುವು ಸಾಧಿಸಿದ್ದಾರೆ.
  10. ಬ್ಯಾಟರಾಯನಪುರ: ಮಾಜಿ ಶಾಸಕ ಕಾಂಗ್ರೆಸ್‌ನ ಕೃಷ್ಣ ಭೈರೇಗೌಡ ಬಿಜೆಪಿಯ ತಮ್ಮೇಶ್ ಗೌಡ ಎದುರು ಗೆಲುವು ಕಂಡಿದ್ದಾರೆ.
  11. ಯಶವಂತಪುರ: 2019ರ ಆಪರೇಷನ್ ಕಮಲದಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಜಿಗಿದಿದ್ದ ಎಸ್ ಟಿ ಸೋಮಶೇಕರ್ ಅವರು ಜೆಡಿಎಸ್‌ನ ಜವರಾಯ ರೆಡ್ಡಿ ವಿರುದ್ಧ ಪ್ರಯಾಸಕರವಾಗಿ ಗೆದ್ದಿದ್ದಾರೆ.
  12. ದಾಸರಹಳ್ಳಿ: ಬಿಜೆಪಿಯ ಎಸ್ ಮುನಿರಾಜು ಜೆಡಿಎಸ್‌ನ ಆರ್ ಮಂಜುನಾಥ್ ವಿರುದ್ಧ ಗೆದ್ದಿದ್ದಾರೆ.
  13. ಮಹದೇವಪುರ: ಬಿಜೆಪಿ ಹಾಲಿ ಶಾಸಕ ಅರವಿಂದ ಲಿಂಬಾಳಿ ಬದಲು ಅವರ ಪತ್ನಿ ಮಂಜುಳಾ ಅವರಿಗೆ ಟಿಕೆಟ್ ನೀಡಿತ್ತು. ಮಂಜುಳಾ ಕಾಂಗ್ರೆಸ್‌ನ ಎಚ್ ನಾಗೇಶ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
  14. ಬೆಂಗಳೂರು ದಕ್ಷಿಣ: ಬಿಜೆಪಿಯ ಎಂ ಕೃಷ್ಣಪ್ಪ ಕಾಂಗ್ರೆಸ್‌ನ ರಮೇಶ್ ವಿರುದ್ಧ ಗೆದ್ದು ತಮ್ಮ ಗೆಲುವಿನ ಓಟವನ್ನು ಮುಂದುವರಿಸಿದ್ದಾರೆ.
  15. ಸರ್ವಜ್ಞ ನಗರ: ಕಾಂಗ್ರೆಸ್‌ನ ಮಾಜಿ ಸಚಿವ ಕೆ.ಜೆ. ಜಾರ್ಜ್ ಎದುರಾಳಿ ಬಿಜೆಪಿಯ ಪದ್ಮನಾಭ ರೆಡ್ಡಿಯವರ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ.
  16. ಸಿ. ವಿ. ರಾಮನ್ ನಗರ: ಹಾಲಿ ಶಾಸಕ ಬಿಜೆಪಿಯ ಎಸ್ ರಘು ಕಾಂಗ್ರೆಸ್‌ನ ಆನಂದ್ ಕುಮಾರ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
  17. ಶಿವಾಜಿ ನಗರ: ಕಾಂಗ್ರೆಸ್ ಪಕ್ಷದ ಹಾಲಿ ಶಾಸಕ ರಿಜ್ವಾನ್ ಅರ್ಷದ್ ಬಿಜೆಪಿಯ ಎನ್ ಚಂದ್ರ ವಿರುದ್ಧ 20 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.
  18. ಶಾಂತಿ ನಗರ: ಹಾಲಿ ಶಾಸಕ ಕಾಂಗ್ರೆಸ್‌ನ ಎನ್ ಎ ಹ್ಯಾರಿಸ್ ಬಿಜೆಪಿಯ ಕೆ ಶಿವಕುಮಾರ್ ವಿರುದ್ಧ ಪ್ರಯಾಸಕರ ಗೆಲುವು ಸಾಧಿಸಿದ್ದಾರೆ.
  19. ಗಾಂಧಿ ನಗರ: ಮಾಜಿ ಶಾಸಕ ಕಾಂಗ್ರೆಸ್‌ನ ದಿನೇಶ್ ಗುಂಡೂರಾವ್ ಅಲ್ಪ ಮತಗಳ ಅಂತರದಿಂದ ಬಿಜೆಪಿಯ ಸಪ್ತಗಿರಿ ಗೌಡ ಎದುರು ಜಯ ಸಾಧಿಸಿದ್ದಾರೆ.
  20. ರಾಜಾಜಿನಗರ: ಬಿಜೆಪಿಯ ಸುರೇಶ್ ಕುಮಾರ್, ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿದ್ದ ಪುಟ್ಟಣ್ಣ ವಿರುದ್ಧ ಗೆಲುವು ಸಾಧಿಸಿದ್ದಾರೆ.
  21. ಚಾಮರಾಜಪೇಟೆ: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಬಿಜೆಪಿಯ ಭಾಸ್ಕರ್ ರಾವ್ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ.
  22. ಹೆಬ್ಬಾಳ: ಸಿದ್ದರಾಮಯ್ಯನವರ ಆಪ್ತ ಕಾಂಗ್ರೆಸ್‌ನ ಭೈರತಿ ಸುರೇಶ್ ಬಿಜೆಪಿಯ ಕಟ್ಟ ಸುಬ್ರಮಣ್ಯ ನಾಯ್ಡು ಅವರ ಪುತ್ರ ಕಟ್ಟ ಜಗದೀಶ್ ವಿರುದ್ಧ ಗೆದ್ದಿದ್ದಾರೆ.
  23. ಆನೇಕಲ್: ಕಾಂಗ್ರೆಸ್ ಪಕ್ಷದ ಶಿವಣ್ಣ ಬಿಜೆಪಿಯ ಶ್ರೀನಿವಾಸ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
  24. ಮಹಾಲಕ್ಷ್ಮಿ ಲೇಔಟ್: 2019ರ ಆಪರೇಷನ್ ಕಮಲ ಕಲಿ ಗೋಪಾಲಯ್ಯ ಕಾಂಗ್ರೆಸ್‌ನ ಕೇಶವಮೂರ್ತಿ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.
  25. ರಾಜರಾಜೇಶ್ವರಿ ನಗರ: ತೀವ್ರ ಪೈಪೋಟಿ ನೀಡಿದ್ದ ಕಾಂಗ್ರೆಸ್‌ನ ಕುಸುಮಾ 2019ರ ಆಪರೇಷನ್ ಕಮಲಕ್ಕೆ ಬಲಿಯಾಗಿದ್ದ ಮುನಿರತ್ನ ವಿರುದ್ಧ ಅಲ್ಪ ಮತಗಳ ಅಂತರದಿಂದ ಸೋತಿದ್ದಾರೆ.
  26. ಕೆ. ಆರ್. ಪುರ: 2019ರ ಆಪರೇಷನ್ ಕಮಲದಲ್ಲಿ ಬಿಜೆಪಿ ಪಾಲಾಗಿದ್ದ ಭೈರತಿ ಬಸವರಾಜ್ ಕಾಂಗ್ರೆಸ್‌ನ ಡಿ ಕೆ ಮೋಹನ್ ವಿರುದ್ಧ ಗೆಲುವುದು ಸಾಧಿಸಿದ್ದಾರೆ.
  27. ಮಲ್ಲೇಶ್ವರಂ: ಬಿಜೆಪಿ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಸಿ ಎನ್ ಅಶ್ವತ್ಥ ನಾರಾಯಣ ಕಾಂಗ್ರೆಸ್‌ನ ಅನೂಪ್ ಅಯ್ಯಂಗಾರ್ ವಿರುದ್ಧ ಸುಲಭ ಗೆಲುವು ಸಾಧಿಸಿದ್ದಾರೆ.
  28. ಪುಲಿಕೇಶಿನಗರ: ಕಾಂಗ್ರೆಸ್ ಅಭ್ಯರ್ಥಿ ಎ ಸಿ ಶ್ರೀನಿವಾಸ್ ಅವರು ಪಕ್ಷೇತರ ಅಭ್ಯರ್ಥಿ ಅಖಂಡ ಶ್ರೀನಿವಾಸ್ ವಿರುದ್ಧ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Road show and other gimmicks can’t earn votes. A beautiful lesson , a clear messages sent by people of Karnataka. Only proper work can fech votes. Not lies. Really a great lesson. Hats off to all the the Kannadigas.

  2. Big lesson to bjp, Modi gimik and lies will not work on matured voters.This is caution to drama people and get packup in 2024 election

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...