Homeಮುಖಪುಟ'ಮೋದಿ ಎಂದರೆ ಭ್ರಷ್ಟಾಚಾರ': ಬಿಜೆಪಿ ನಾಯಕಿ ಖುಷ್ಬು ಹಳೆಯ ಟ್ವೀಟ್ ವೈರಲ್

‘ಮೋದಿ ಎಂದರೆ ಭ್ರಷ್ಟಾಚಾರ’: ಬಿಜೆಪಿ ನಾಯಕಿ ಖುಷ್ಬು ಹಳೆಯ ಟ್ವೀಟ್ ವೈರಲ್

- Advertisement -
- Advertisement -

‘ಮೋದಿ ಸರ್‌ನೇಮ್‌‌’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ, ವಯನಾಡ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹಗೊಳಿಸಲಾಗಿದೆ. ಈ ಬೆನ್ನಲ್ಲೇ  ಹಿಂದೆ ಕಾಂಗ್ರೆಸ್‌ನಲ್ಲಿದ್ದ ಬಿಜೆಪಿ ನಾಯಕಿ ಖುಷ್ಬು ಸುಂದರ್ ಅವರು ಮೋದಿ ಸರ್‌ನೇಮ್‌ನ್ನು ಭ್ರಷ್ಟಾಚಾರಕ್ಕೆ ಲಿಂಕ್ ಮಾಡಿದ ಹಳೆಯ ಟ್ವೀಟ್ ವೈರಲ್‌ ಆಗಿದೆ. ಈ ಬಗ್ಗೆ ಶನಿವಾರ ಖುಷ್ಬು ಅವರು ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮದ ಬಗ್ಗೆ ಮಾಡಿದ ಹೇಳಿಕೆಗಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಈ ಟ್ವೀಟ್ ಮಹತ್ವ ಪಡೆದುಕೊಂಡಿದೆ. ಶುಕ್ರವಾರ, ದೋಷಾರೋಪಣೆಯ ಆಧಾರದ ಮೇಲೆ ಗಾಂಧಿ ಅವರನ್ನು ಲೋಕಸಭೆಯ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಯಿತು.

ಗಾಂಧಿ ವಿರುದ್ಧದ ಕ್ರಮ ಸೇಡಿನ ರಾಜಕಾರಣ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ., ಆದರೆ ಸ್ಕ್ರೋಲ್‌ ಜೊತೆ ಮಾತನಾಡುವ ಕಾನೂನು ತಜ್ಞರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗಳು ಮೋದಿ ಸರ್‌ನೇಮ್ ಹೊಂದಿರುವ ಎಲ್ಲರನ್ನು ದೂಷಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಖುಷ್ಬು ಸುಂದರ್ ಅವರು 2018ರಲ್ಲಿ ಪೋಸ್ಟ್ ಮಾಡಿದ್ದ ಟ್ವೀಟ್ ಶನಿವಾರ ಮತ್ತೆ ಮುನ್ನಲೆಗೆ ಬಂದಿದೆ. ಅಲ್ಲಿ ಅವರು ಲಲಿತ್ ಮೋದಿ ಮತ್ತು ನೀರವ್ ಮೋದಿಯನ್ನು ಉಲ್ಲೇಖಿಸಿದ್ದಾರೆ – ವಂಚನೆ ಆರೋಪದಲ್ಲಿ ಪರಾರಿಯಾಗಿರುವ ಉದ್ಯಮಿಗಳು. “ಮೋದಿ ಎಂದರೆ ಭ್ರಷ್ಟಾಚಾರ”, “ಮೋದಿಯ ಅರ್ಥವನ್ನು ಭ್ರಷ್ಟಾಚಾರ ಎಂದು ಬದಲಾಯಿಸೋಣ … ಅದೇ ಉತ್ತಮವಾಗಿದೆ” ಎಂದು ಸುಂದರ್ ಪೋಸ್ಟ್ ಮಾಡಿದ್ದರು.

ಕರ್ನಾಟಕದಲ್ಲಿ 2019ರ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿಯವರು, ”ನನ್ನ ಬಳಿ ಒಂದು ಪ್ರಶ್ನೆ ಇದೆ. ನೀರವ್ ಮೋದಿ ಇರಬಹುದು, ಲಲಿತ್ ಮೋದಿ ಇರಬಹುದು ಅಥವಾ ನರೇಂದ್ರ ಮೋದಿ ಇರಬಹುದು. ಎಲ್ಲ ಕಳ್ಳರ ಹೆಸರಿನಲ್ಲಿಯೂ ಮೋದಿ ಎಂದು ಏಕೆ ಇದೆ? ಎಂದು ಹೇಳಿದ್ದರು. ಖುಷ್ಬು ಅವರ ಟ್ವೀಟ್‌ನಲ್ಲೂ ರಾಹುಲ್‌ ಗಾಂಧಿಯವರ ಹೇಳಿಕೆಯನ್ನು ಹೋಲುವ ಬರಹವಿದೆ.

ಶನಿವಾರ ಪಿಟಿಐ ಜೊತೆ ಮಾತನಾಡಿದ ಖುಷ್ಬು ಅವರು ತಮ್ಮ ಟ್ವೀಟ್‌ಗೆ ಸಮರ್ಥನೆ ಮಾಡಿಕೊಂಡಿದ್ದಾರೆ. ”ನಾನು ಈ ಕಾಮೆಂಟ್ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್‌ನಲ್ಲಿದ್ದೆ. ನಾನು ಅಲ್ಲಿಯ ನಾಯಕರನ್ನು ಅನುಸರಿಸುತ್ತಿದ್ದೆ ಮತ್ತು ಆ ಪಕ್ಷದ ಭಾಷೆಯಲ್ಲಿಯೇ ಮಾತನಾಡುತ್ತಿದ್ದೆ” ಎಂದು ಹೇಳಿದ್ದಾರೆ.

”ಈಗ ಕಾಂಗ್ರೆಸ್‌ನವರು ನನ್ನ ಹಳೆಯ ಟ್ವೀಟ್‌ಗಳನ್ನು ತರಾಟೆಗೆ ತೆಗೆದುಕೊಂಡಿರುವುದನ್ನು ನೋಡಿದರೆ ಅವರು ಎಷ್ಟು ಹತಾಶವಾಗಿದೆ ಎಂಬುದನ್ನು ತೋರಿಸುತ್ತದೆ. ಭ್ರಷ್ಟಾಚಾರದ ಆರೋಪ ಮಾಡುವುದಕ್ಕೂ ಯಾರನ್ನಾದರೂ ಕಳ್ಳ ಎಂದು ಕರೆಯುವುದಕ್ಕೂ ವ್ಯತ್ಯಾಸವಿದೆ. ಧೈರ್ಯವಿದ್ದರೆ ನನ್ನ ವಿರುದ್ಧ ಕೇಸು ದಾಖಲಿಸಿ” ಎಂದು ಖುಷ್ಬು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈ ಮಧ್ಯೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಗಾಂಧಿ ಅವರು, ”ತಮ್ಮ ವಿರುದ್ಧದ ಕ್ರಮಗಳಿಗೆ ಹೆದರುವುದಿಲ್ಲ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಕೈಗಾರಿಕೋದ್ಯಮಿ ಗೌತಮ್ ಅದಾನಿ ನಡುವಿನ ಸಂಬಂಧಗಳ ಬಗ್ಗೆ ಪ್ರಶ್ನೆಗಳನ್ನು ಕೇಳುವುದನ್ನು ಮುಂದುವರಿಸುತ್ತೇನೆ” ಎಂದು ಪ್ರತಿಪಾದಿಸಿದರು. ಸಂಸತ್ತಿನಲ್ಲಿ ಅದಾನಿ ಬಗ್ಗೆ ಮಾತನಾಡಲು ಪ್ರಧಾನಿ ಹೆದರಿದ್ದರಿಂದ, ತಮ್ಮನ್ನು ಅನರ್ಹಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅದಾನಿ ವಂಚನೆ ಬಗ್ಗೆ ಹಿಂಡೆನ್‌ಬರ್ಗ್ ವರದಿ ಮಾಡಿದ ಬೆನ್ನಲ್ಲೇ ಜನವರಿಯಿಂದ ಅದಾನಿ ಸಂಸ್ಥೆಗಳ ಷೇರುಗಳು ಕುಸಿದಿವೆ. ಅದಾನಿ ವಿರುದ್ಧ ತನಿಖೆಗೆ ಆದೇಶಿಸುವಂತೆ ಪ್ರತಿಪಕ್ಷಗಳು ಆಗ್ರಹಿಸುತ್ತಿದ್ದರೂ ಸರ್ಕಾರ ಮಾತನಾಡುತ್ತಿಲ್ಲ. ಅದಾನಿ ಸಮೂಹದ ಸಂಸ್ಥಾಪಕ ಗೌತಮ್ ಅದಾನಿಗೆ ಪ್ರಧಾನಿ ಒಲವು ತೋರುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...