Homeಮುಖಪುಟಮೋದಿಯವರು ಸ್ವಯಂ ಪಟ್ಟಾಭಿಷೇಕದ ಗೀಳಿಗೆ ಒಳಗಾಗಿದ್ದು, ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದೆ: ಕಾಂಗ್ರೆಸ್ ಟೀಕೆ

ಮೋದಿಯವರು ಸ್ವಯಂ ಪಟ್ಟಾಭಿಷೇಕದ ಗೀಳಿಗೆ ಒಳಗಾಗಿದ್ದು, ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದೆ: ಕಾಂಗ್ರೆಸ್ ಟೀಕೆ

- Advertisement -
- Advertisement -

ಮಣಿಪುರದಲ್ಲಿ ಭಾನುವಾರ ಭುಗಿಲೆದ್ದ ಹಿಂಸಾಚಾರದಲ್ಲಿ ಪೊಲೀಸ್​ ಸೇರಿದಂತೆ 5 ಮಂದಿ ಮೃತಪಟ್ಟಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಒಂದು ತಿಂಗಳಿನಿಂದ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವು ಕನಿಷ್ಠ 70 ಮಂದಿಯನ್ನು ಬಲಿಪಡೆದಿದೆ. ಮತ್ತೊಂದೆಡೆ ಪ್ರಧಾನಿ ಮೋದಿ ಅವರು ನೂತನ ಸಂಸತ್ ಉದ್ಘಾಟನೆಯಲ್ಲಿ ತೊಡಗಿರುವುದನ್ನು ಕಾಂಗ್ರೆಸ್ ಟೀಕೆ ಮಾಡಿದೆ.

”ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಯಂ ಪಟ್ಟಾಭಿಷೇಕದ ಗೀಳಿಗೆ ಒಳಾಗಗಿದ್ದು, ರಾಜ್ಯದಲ್ಲಿ ಹಿಂಸಾಚಾರ ಮುಂದುವರೆದಿದೆ” ಎಂದು ಕೇಂದ್ರ ಸರ್ಕಾರವನ್ನು ಕಾಂಗ್ರೆಸ್‌ ಟೀಕಿಸಿದೆ.

”ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಆಡಳಿತದ ಸಂಪೂರ್ಣ ಸ್ಥಗಿತವಾಗಿದೆ. ಪ್ರಧಾನಿ ತಮ್ಮ ಸ್ವಯಂ-ಪಟ್ಟಾಭಿಷೇಕದ ಬಗ್ಗೆ ಗೀಳನ್ನು ಹೊಂದಿದ್ದು, ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಅಲ್ಲಿನ ಜನತೆಗೆ ಅಥವಾ ಸಮುದಾಯಕ್ಕಾಗಲಿ ಒಂದು ಮನವಿಯನ್ನೂ ಸಹ ಮಾಡಿಲ್ಲ” ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವಿಟ್ ಮಾಡಿದ್ದು, ”ಮಣಿಪುರ ಹೊತ್ತಿ ಉರಿಯಲು ಪ್ರಾರಂಭಿಸಿದ 25 ದಿನಗಳ ನಂತರ, ಕೇಂದ್ರ ಗೃಹ ಸಚಿವರ ಬಹುನಿರೀಕ್ಷಿತ ಇಂಫಾಲ್ ಭೇಟಿಯ ಮುನ್ನಾದಿನದಂದು ಪರಿಸ್ಥಿತಿ ಕೆಟ್ಟದಾಗಿದೆ. 355ನೇ ವಿಧಿಯನ್ನು ವಿಧಿಸಲಾಗಿದ್ದರೂ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಯಂ ಪಟ್ಟಾಭಿಷೇಕದ ಗೀಳಿಗೆ ಒಳಾಗಗಿದ್ದು, ರಾಜ್ಯದಲ್ಲಿ ಹಿಂಸಾಚಾರ ಮುಂದುವರೆದಿದೆ. ಇದೊಂದು ಭೀಕರ ದುರಂತ. ಅವರು ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಅಲ್ಲಿನ ಜನತೆಗೆ ಅಥವಾ ಸಮುದಾಯಕ್ಕಾಗಲಿ ಒಂದು ಮನವಿಯನ್ನೂ ಸಹ ಮಾಡಿಲ್ಲ” ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದ ನಿಯೋಗವು ಮಂಗಳವಾರ ಬೆಳಗ್ಗೆ ರಾಷ್ಟ್ರಪತಿ ಅವರನ್ನು ಭೇಟಿ ಮಾಡಲಿದ್ದಾರೆ.

ಇದನ್ನೂ ಓದಿ: ‘30 ಉಗ್ರರನ್ನು ಕೊಲ್ಲಲಾಗಿದೆ’: ಮಣಿಪುರ ಮುಖ್ಯಮಂತ್ರಿ ಬಿರೇನ್‌ ಸಿಂಗ್‌

ಹಿಂಸಾಚಾರ ಪೀಡಿತ ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಗಂಟೆಗಳ ಮೊದಲು ಇದು ಸಂಭವಿಸಿದೆ. ಗೃಹ ಸಚಿವ ಅಮಿತ್ ಶಾ ಇಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ. ಅವರು ಶಾಂತ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು ಮನವಿ ಮಾಡಿದ್ದಾರೆ. ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಕೂಡ ಶನಿವಾರ ಮಣಿಪುರಕ್ಕೆ ತೆರಳಿ ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸಿದರು.

”ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯಲು ಸರ್ಕಾರವು ಹಲವಾರು ಪ್ರದೇಶಗಳಲ್ಲಿ ಕರ್ಫ್ಯೂ ಮತ್ತು ಇಂಟರ್ನೆಟ್ ನಿಷೇಧವನ್ನು ವಿಧಿಸಿದೆ. ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿರುವ ಮಣಿಪುರ ರಾಜ್ಯದ ಹಲವು ಪ್ರದೇಶಗಳಲ್ಲಿ ಎಂಟು ಗಂಟೆಗಳ ಕಾಲ ಪೊಲೀಸ್ ಕಮಾಂಡೋಗಳು ನಡೆಸಿದ ಕಾರ್ಯಾಚರಣೆಯಲ್ಲಿ 40 ಮಂದಿ ಬಂಡುಕೋರರನ್ನು ಹತ್ಯೆಮಾಡಲಾಗಿದೆ” ಎಂದು ಮನೋಜ್ ಪಾಂಡೆ ತಿಳಿಸಿದ್ದಾರೆ.

”ಭಯೋತ್ಪಾದಕರು ನಾಗರಿಕರ ವಿರುದ್ಧ M-16 ಮತ್ತು AK-47 ರೈಫಲ್‌ಗಳು ಮತ್ತು ಸ್ನೈಪರ್‌ಗನ್‌ಗಳನ್ನು ಬಳಸುತ್ತಿದ್ದಾರೆ. ಜನರ ಮನೆಗಳನ್ನು ಸುಟ್ಟುಹಾಕಲು ಹಳ್ಳಿಗಳಿಗೆ ನುಗ್ಗಿದ್ದರು. ನಾವು ಸೇನೆ ಮತ್ತು ಇತರ ಭದ್ರತಾ ಪಡೆಗಳ ಸಹಾಯದಿಂದ ಅವರ ವಿರುದ್ಧ ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳಲು ಪ್ರಾರಂಭಿಸಿದ್ದೇವೆ. ಸುಮಾರು 40 ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿರುವ ವರದಿಗಳು ನಮಗೆ ಸಿಕ್ಕಿವೆ” ಎಂದು ತಿಳಿಸಿದರು.

ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಭಾನುವಾರ ಹೇಳಿಕೆ ನೀಡಿದ್ದು, ”ಮೇ 3 ರಂದು ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಭದ್ರತಾ ಪಡೆಗಳು ಹಾಗೂ ಬಂಡುಕೋರ ಸಂಘಟನೆಗಳ ನಡುವೆ ನಡೆದ ಸರಣಿ ಎನ್‌ಕೌಂಟರ್‌ಗಳಲ್ಲಿ 33 ಬಂಡುಕೋರರನ್ನು ಹತರಾಗಿದ್ದಾರೆ ” ಎಂದು ಹೇಳಿದ್ದಾರೆ.

”ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರೊಂದಿಗೆ ಸಭೆ ನಡೆಸಿದ ಬಳಿಕ ಸಿಂಗ್, ಭದ್ರತಾ ಪಡೆಗಳು ಹಾಗೂ ಭಂಡುಕೋರರ ವಿರುದ್ಧ ಹಲವು ಜಿಲ್ಲೆಗಳಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆವು. ಬಂಡುಕೋರರು ನಾಗರಿಕರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ” ಎಂದು ಸಿಂಗ್ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...