Homeಮುಖಪುಟಹುಲಿ ಕಾಣಿಸದಿದ್ದಕ್ಕೆ ಭದ್ರತಾ ಸಿಬ್ಬಂದಿ ಮೇಲೆ ರೇಗಿದ ಮೋದಿ; ಸಫಾರಿ ಚಾಲಕನ ವಿರುದ್ಧ ಕ್ರಮಕ್ಕೆ ಬಿಜೆಪಿ...

ಹುಲಿ ಕಾಣಿಸದಿದ್ದಕ್ಕೆ ಭದ್ರತಾ ಸಿಬ್ಬಂದಿ ಮೇಲೆ ರೇಗಿದ ಮೋದಿ; ಸಫಾರಿ ಚಾಲಕನ ವಿರುದ್ಧ ಕ್ರಮಕ್ಕೆ ಬಿಜೆಪಿ ನಾಯಕರ ಒತ್ತಾಯ

- Advertisement -
- Advertisement -

ಇತ್ತಿಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಫಾರಿ ನಡೆಸಿದರು. ಈ ವೇಳೆ ಅವರಿಗೆ ಹುಲಿಗಳೇ ಕಾಣದಿರುವುದಕ್ಕೆ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ಆತನ ವಾಹನದ ನೋಂದಣಿ ರದ್ದುಪಡಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಬಿಜೆಪಿಯ ಕೆಲವು ಮುಖಂಡರು ಒತ್ತಡ ಹೇರುತ್ತಿದ್ದಾರೆ. ಆದರೆ ಪ್ರಧಾನಿ ಮತ್ತು ಅರಣ್ಯ ಅಧಿಕಾರಿಗಳು ಭದ್ರತಾ ತಂಡಗಳನ್ನು ದೂಷಿಸುತ್ತಿದ್ದಾರೆ.

ಪ್ರಧಾನಿ ಮೋದಿ ಅವರು 22 ಕಿಲೋಮೀಟರ್ ಸಫಾರಿ ನಡೆಸಿದರೂ ಒಂದೇ ಒಂದು ಹುಲಿ ಕೂಡ ಕಣ್ಣಿಗೆ ಬೀಳದಿರುವುದಕ್ಕೆ, ಸಫಾರಿ ವೇಳೆ ಚಾಲನೆ ಮಾಡಿದ 29 ವರ್ಷದ ಮಧುಸೂಧನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿರಿಯ ಅಧಿಕಾರಿಗಳಿಗೆ ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಹುಲಿಗಳು ಕಾಣಿಸಿಕೊಳ್ಳುವ ಕಡೆಗೆ ಸಫಾರಿ ಮಾರ್ಗವನ್ನು ಆಯ್ಕೆ ಮಾಡಲಾಗಿದೆ ಆದರೆ ಮೋದಿ ಹೋದಾಗ ಕಾಣಲಿಲ್ಲ. ”ಚಾಲಕ ಮಾರ್ಗವನ್ನು ಬದಲಾಯಿಸಬಹುದಿತ್ತು, ಆದರೆ ಅದು ಮಾಡಲಿಲ್ಲ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ‘ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!’: ಮೋದಿ ನಡೆಸಿದ ಸಫಾರಿ ಕುರಿತು ಎಚ್‌ಡಿಕೆ ಟೀಕೆ

ಆದಾಗ್ಯೂ, ಮುಖ್ಯ ಕಚೇರಿ ಮತ್ತು ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಹಿರಿಯ ಅಧಿಕಾರಿಗಳು ”ಮಧುಸೂಧನ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಅವರು ತಮ್ಮ ಕೆಲಸವನ್ನು ಮಾಡಿದರು. ಭದ್ರತಾ ತಂಡ ಅಂತಿಮಗೊಳಿಸಿದ ಮಾರ್ಗದಲ್ಲಿ ಅವರು ಪ್ರಧಾನಿಯನ್ನು ಕರೆದೊಯ್ದರು. ವಾಸ್ತವವಾಗಿ, ಇದಕ್ಕೆ ನೇರ ಕಾರಣ ಮೋದಿ ಅವರ ಭದ್ರತಾ ತಂಡ ಹಾಗಾಗಿ ಅವರನ್ನು ದೂಷಿಸಬೇಕು” ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತಾರಣ್ಯ ನಿರ್ದೇಶಕ ರಮೇಶ್‌ಕುಮಾರ್‌ ಮಾತನಾಡಿ, ”ಮಧುಸೂಧನ್ ಅವರ ವಾಹನದ ನೋಂದಣಿಯನ್ನು ರದ್ದುಗೊಳಿಸಲಾಗಿದೆ ಎಂಬ ಹೇಳಿಕೆ ಸುಳ್ಳು. ಚಲಾವಣೆಯಲ್ಲಿರುವ ವಾಹನ ಸಂಖ್ಯೆ ಹಳೆಯದಾಗಿದ್ದು, ಅದರ ಅವಧಿ ಈಗಾಗಲೇ ಮುಗಿದಿದೆ. ವಾಹನ ಈಗ ಬಳಕೆಯಲ್ಲಿಲ್ಲ. ಮಧುಸೂಧನ್ ಅವರದ್ದು ಯಾವದೇ ತಪ್ಪಿಲ್ಲ. ಹೆಚ್ಚಿನ ಭದ್ರತೆಯ ಹೆಸರಿನಲ್ಲಿ, ವಾಹನಗಳು ಪದೇ ಪದೇ ಆಯ್ದ ಮಾರ್ಗದಲ್ಲಿ ಹೋಗುತ್ತಿದ್ದರಿಂದ ಅಲ್ಲಿ ಅವರಿಗೆ ಹುಲಿಗಳು ಕಾಣಿಸಿಕೊಂಡಿಲ್ಲ” ಎಂದು ಹೇಳಿದ್ದಾರೆ.

ಹುಲಿಗಳು ಕಾಣಿಸದಿರುವದಕ್ಕೆ ಪ್ರಧಾನಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಭದ್ರತೆ ವಿಚಾರವಾಗಿ ಆ ಮಾರ್ಗದಲ್ಲಿ ಹೆಚ್ಚು ವಾಹನಗಳು ಓಡಾಡಿದ್ದರಿಂದ ಹುಲಿಗಳು ಕಾಣಿಸಿಕೊಂಡಿಲ್ಲ ಎಂದು ಅವರಿಗೆ ವಿವರಿಸಿದ್ದೇವೆ. ಈ ವಿಚಾರವಾಗಿ ಅವರು ಎಸ್‌ಪಿಜಿಯನ್ನು ಗದರಿಸಿದ್ದರು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...