Homeಮುಖಪುಟಮೊದಲ ಕೋವಿಡ್ ಲಸಿಕೆ ಮೋದಿಯವರೇ ತೆಗೆದುಕೊಳ್ಳಲಿ, ನಂತರ ನಮಗೆ: ತೇಜ್ ಪ್ರತಾಪ್ ಯಾದವ್

ಮೊದಲ ಕೋವಿಡ್ ಲಸಿಕೆ ಮೋದಿಯವರೇ ತೆಗೆದುಕೊಳ್ಳಲಿ, ನಂತರ ನಮಗೆ: ತೇಜ್ ಪ್ರತಾಪ್ ಯಾದವ್

- Advertisement -
- Advertisement -

ಕೋವಿಡ್ ಲಸಿಕೆಯ ಪರಿಣಾಮಕಾರಿತ್ವ ಮತ್ತು ಅಡ್ಡ ಪರಿಣಾಮಗಳ ಬಗ್ಗೆ ಹಲವು ಅನುಮಾನಗಳು ಎದ್ದಿರುವ ಸಮಯದಲ್ಲಿ ಲಸಿಕೆ ವಿರೋಧಿಗಳ ಸಂಖ್ಯೆಯು ಹೆಚ್ಚುತ್ತಿದೆ. ದೇಶದ ಮೊದಲ ಕೋವಿಡ್ ಲಸಿಕೆಯನ್ನು ಪ್ರಧಾನಿ ಮೋದಿಯವರೇ ತೆಗೆದುಕೊಳ್ಳಲಿ. ನಂತರ ನಾವು ತೆಗೆದುಕೊಳ್ಳುತ್ತೇವೆ ಎಂದು ಆರ್‌ಜೆಡಿ ಮುಖಂಡ ತೇಜ್ ಪ್ರತಾಪ್ ಯಾದವ್ ಆಗ್ರಹಿಸಿದ್ದಾರೆ.

ಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಇಲ್ಲ ಎಂದು ವಿಜ್ಞಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ ಎಂದು  ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಅಘಾತಕಾರಿ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈ ಎಲ್ಲಾ ಹಿನ್ನೆಲೆಯಲ್ಲಿ ಬಹತೇಕರು ಕೋವಿಡ್ ಲಸಿಕೆ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಮುಖಂಡರು ಲಸಿಕೆ ಹೆಸರಿನಲ್ಲಿ ಪ್ರಚಾರ ಪಡೆದುಕೊಳ್ಳುತ್ತಿದ್ದು, ಭಾರತದಲ್ಲೇ ತಯಾರಿಸುತ್ತಿರುವ ಕೋವಿಡ್ ಲಸಿಕೆ ಅತ್ಯಂತ ಪರಿಣಾಮಕಾರಿ ಎನ್ನುತ್ತಿದ್ದಾರೆ. ಹಾಗಾಗಿ ಬಹುತೇಕರು ಮೋದಿಯವರೆ ಮೊದಲು ಲಸಿಕೆ ತೆಗೆದುಕೊಳ್ಳಲಿ ಎಂದು ಸವಾಲು ಹಾಕುತ್ತಿದ್ದಾರೆ.

ಬಿಹಾರದ ಚುನಾವಣಾ ಫಲಿತಾಂಶದ ಕುರಿತು ಆರ್‌ಜೆಡಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ತೇಜ್‌ ಪ್ರತಾಪ್ ಯಾದವ್ “ಮೊದಲ ಕೋವಿಡ್ ಲಸಿಕೆಯನ್ನು ದೇಶದ ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಳ್ಳಲಿ. ನಂತರ ನಾವೆಲ್ಲರೂ ತೆಗೆದುಕೊಳ್ಳುತ್ತೇವೆ” ಎಂದು ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಈ ಹಿಂದೆ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ “ನಾನು ಸದ್ಯಕ್ಕೆ ಲಸಿಕೆ ತೆಗೆದುಕೊಳ್ಳಲು ಹೋಗುತ್ತಿಲ್ಲ. ಬಿಜೆಪಿಯ ಲಸಿಕೆಯನ್ನು ನಾನು ಹೇಗೆ ನಂಬಲಿ? ನಮ್ಮ ಸರ್ಕಾರ ರಚನೆಯಾದಾಗ ಎಲ್ಲರಿಗೂ ಉಚಿತ ಲಸಿಕೆ ಸಿಗುತ್ತದೆ. ನಾವು ಬಿಜೆಪಿಯ ಲಸಿಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದ್ದರು.

ಅದೇ ರೀತಿಯಲ್ಲಿ ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ, ಶಶಿ ತರೂರ್, ಜೈರಾಮ್ ರಮೇಶ್ ಸಹ ಲಸಿಕೆಯ ಕುರಿತು ಪ್ರಶ್ನೆಗಳನ್ನು ಎತ್ತಿದ್ದರು. ಭಾರತ್‌ ಬಯೋಟೆಕ್‌ ತಯಾರಿಸುತ್ತಿರುವ ಕೊವ್ಯಾಕ್ಸಿನ್ ಮೂರನೇ ಹಂತದ ಪ್ರಯೋಗಗಳ ಫಲಿತಾಂಶವಿಲ್ಲದೆ ಲಸಿಕೆಯನ್ನು ನಂಬುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದರು.

ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಲಸಿಕೆಗಳಿಗೆ ತುರ್ತು ಅನುಮೋದನೆ ನೀಡುವಲ್ಲಿ ಎಚ್ಚರಿಕೆ ವಹಿಸಬೇಕೆಂದು ತಿಳಿಸಿತ್ತು.

ಈ ವಾರದ ಆರಂಭದಲ್ಲಿ ಮಾತನಾಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ “ಬಿಹಾರ ರಾಜ್ಯದಾದ್ಯಂತ ಕೋವಿಡ್ 19 ವ್ಯಾಕ್ಸಿನೇಷನ್ ನೀಡಲು ರಾಜ್ಯ ಸರ್ಕಾರ ಸಿದ್ಧವಾಗಿದೆ. ರಾಜ್ಯದ ಜನರಿಗೆ ಲಸಿಕೆ ನೀಡುವುದು ನಮ್ಮ ಆದ್ಯತೆಯ ಎಂದು ಹೇಳಿದ್ದರು.


ಇದನ್ನೂ ಓದಿ: ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಮೋ… ಭಕ್ತರಿಗೆ ಮೊದಲು ನೀಡಬೇಕು.
    ನಂತರ ಮೋ… ವಿರೋಧಿಗಳಿಗೆ ನೀಡಲಿ.

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣಾ ಆಯೋಗ ಪಕ್ಷಾತೀತವಾಗಿ ನಡೆದುಕೊಳ್ಳುತ್ತಿಲ್ಲ: ಪಿಣರಾಯಿ ವಿಜಯನ್

0
ಪ್ರಧಾನಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ಮುಸ್ಲಿಮರ ವಿರುದ್ಧ ನೀಡಿದ್ದ ಹೇಳಿಕೆಗಳಿಗೆ ಸಂಬಂಧಿಸಿದಂತೆ ತಕ್ಷಣ ಕ್ರಮ ಕೈಗೊಳ್ಳುವ ಮೂಲಕ ಚುನಾವಣಾ ಆಯೋಗವು ಪಕ್ಷಾತೀತವಾಗಿ ವರ್ತಿಸದಿರುವುದು ದುರದೃಷ್ಟಕರ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಮೋದಿಯ...