Homeಮುಖಪುಟಹೆಡಗೆವಾರ್ ಜನ್ಮದಿನ, ಚೆಡ್ಡಿಗಳ ಸೋಗಲಾಡಿತನ ಮತ್ತು ಮೋದಿಯ ಮಹಾ ಮೌನ!

ಹೆಡಗೆವಾರ್ ಜನ್ಮದಿನ, ಚೆಡ್ಡಿಗಳ ಸೋಗಲಾಡಿತನ ಮತ್ತು ಮೋದಿಯ ಮಹಾ ಮೌನ!

- Advertisement -
| -ಮಲ್ಲಿ |  
ಅಯ್ಯೋ ಮಾತೆತ್ತಿದರೆ ರಾಷ್ಟ್ರೀಯವಾದ, ಹಿಂದೂ ರಾಷ್ಟ್ರ ಎನ್ನುವವರೆಲ್ಲ ಆರೆಸ್ಸೆಸ್ ಸಂಸ್ಥಾಪಕ ಹೆಡಗೆವಾರ್ ಜನ್ಮದಿನದಂದು ಜೋರಾಗಿ ಮಾತೇ ಆಡಲ್ಲ! ಈಗ ಚುನಾವಣಾ ಸಮಯ, ಇವತ್ತು ಈ ‘ದೇಶಭಕ್ತ’ನ ಜನ್ಮದಿನ…(ಏಲ್ 01 ಎಂಬುದು ಕಾಕತಾಳೀಯ ಆಗಿರಕ್ಕಿಲ್ಲ!) ಚುನಾವಣೆ ಲಾಭಕ್ಕಾದರೂ ಈ ಪುಣ್ಯಾತ್ಮನ ಸ್ಟೋರಿಯನ್ನು ಅಲ್ಟ್ರಾ ದೇಶಭಕ್ತ ಮೋದಿಯಾದರೂ ವಿವರಿಸಬೇಕಿತ್ತು, ಚಿಲ್ಟೂ ತೇಜಸ್ವಿ ಸೂರ್ಯನಾದರೂ ಹೆಡಗೆವಾರ್ ಫೋಟೊಕ್ಕೆ ಹಾರ ಹಾಕಿ ಮಿಂಚಬಹುದಿತ್ತು ಅಲ್ಲವೇ?
ತಮಗೆ ಸಂಬಂಧವೇ ಇಲ್ಲದ, ತಮ್ಮ ಸಿದ್ದಾಂತಗಳನ್ನು ಪ್ರತಿಪಾದಿಸದೇ ಇದ್ದ ಗಾಂಧಿ, ಅಂಬೇಡ್ಕರ್, ವಿವೇಕಾನಂದ, ಭಗತ್‍ಸಿಂಗ್, ಬಸವಣ್ಣ, ವಲ್ಲಭಭಾಯಿ ಪಟೇಲ್-ಇವರೆಲ್ಲರ ಜನ್ಮದಿನ ಆಚರಿಸುವ ಚೆಡ್ಡಿಗಳಿಗೆ ತಮ್ಮದೇ ಗುರು ಹೆಡಗೆವಾರ್ ಜನ್ಮದಿನ ಅಂದರೆ ಅಸಡ್ಡೆ ಏಕೆ? ಅದನ್ನು ಕದ್ದುಮುಚ್ಚಿ ನಾಗಪುರದ ಕಚೇರಿಯಲ್ಲಿ ಮಾತ್ರ ಆಚರಿಸುವುದೇಕೆ?
ಇವತ್ತು ಮುಂಜಾನೆ ಸಾಫ್ಟ್‍ವೇರ್‍ನಲ್ಲಿರುವ ಮಿತ್ರನಿಗೆ ಹೆಡಗೆವಾರ್ ಜನ್ಮದಿನ ಇವತ್ತು…. ಆ ಬಗ್ಗೆ ಏನೂ ಮೆಸ್ಸೆಜೇ ಇಲ್ವಲ್ಲೋ ಎಂದೆ. ಅದಕ್ಕೆ ಆತ, ರಾಮಕೃಷ್ಣ ಹೆಗಡೆದಾ? ಹೊಗ್ಲಿಬಿಡು ಎಂದ!
ಸಂಘ ಪರಿವಾರದ ಸುಳ್ಳುಗಳನ್ನು ನಂಬಿ ‘ನಶಾ’ಕ್ಕೆ  (ರಾಘವೇಂದ್ರ ಕುಷ್ಟಗಿಯವರ ಪ್ರಕಾರ, ನಶಾ- ನರೇಂದ್ರ-ಅಮಿತ್ ಶಾ) ಒಳಗಾಗಿರುವ ಇಂತಹ ಸುಶಿಕ್ಷಿತ ಯುವಕರಿಗೆ ಸತ್ಯ ದರ್ಶನ ಮಾಡಿಸುವ ಕೆಲಸ ನಮ್ಮದಾಗಬೇಕು ಅನಿಸಿತು…
ಹೆಡಗೆವಾರ್ ಸ್ವಾತಂತ್ರ್ಯ ಚಳವಳಿಯಲ್ಲಿ ಬ್ರಿಟಿಷರ ಜೊತೆ ಸಹಕರಿಸಿದ ಧೂರ್ತ. ಇಡೀ ದೇಶ ಉಪ್ಪಿನ ಸತ್ಯಾಗ್ರಹ,  ಕ್ವಿಟ್ ಇಂಡಿಯಾ ಚಳವಳಿ ಪರ ನಿಂತಾಗ, ಆರೆಸ್ಸೆಸ್ ಕಾರ್ಯಕರ್ತರು, ಬೆಂಬಲಿಗರು ಅದರಲ್ಲಿ ಭಾಗವಹಿಸಬಾರದು ಎಂದು ಫರ್ಮಾನು ಹೊರಡಿಸಿದ ದೇಶದ್ರೋಹಿ ಈತ…
ಈತನ ಬಗ್ಗೆ ಹೇಳಿಕೊಳ್ಳಲು ಬಿಜೆಪಿಗೆ ಕಂಟೆಂಟೇ ಇಲ್ಲವೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...