Homeಮುಖಪುಟಮೋದಿ ಸರ್ ನೇಮ್ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ

ಮೋದಿ ಸರ್ ನೇಮ್ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ

- Advertisement -
- Advertisement -

ಏಪ್ರಿಲ್ 2019ರಲ್ಲಿ ಕೋಲಾರದಲ್ಲಿ ನಡೆದ ರಾಜಕೀಯ ಪ್ರಚಾರದ ಸಂದರ್ಭದಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೊಳಗಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯಿಂದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಹಿಂದೆ ಸರಿದಿದ್ದಾರೆ.

ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜನಪ್ರತಿನಿಧಿಗಳ ಮತ್ತು ಸೂರತ್ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಗುಜರಾತ್‌ ಹೈಕೋರ್ಟ್ ಮೊರೆ ಹೋಗಿದ್ದಾರೆ. ಆದರೆ, ಯಾವುದೇ ಕಾರಣ ನೀಡದೆ ನ್ಯಾಯಮೂರ್ತಿ ಗೀತಾ ಗೋಪಿ ಅವರು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

ಮೋದಿ ಉಪನಾಮ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರಿಗೆ ಗುಜರಾತ್‌ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷಯ ತೀರ್ಪನ್ನು ರಾಹುಲ್ ಸೂರತ್ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಆದರೆ, ಸೂರತ್ ನ್ಯಾಯಾಲಯ ರಾಹುಲ್ ಗಾಂಧಿ ಮನವಿ ತಿರಸ್ಕರಿಸಿತ್ತು. ಬಳಿಕ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ರಾಹುಲ್ ಪರ ವಕೀಲ ಪಂಕಜ್ ಚಂಪನೇರಿ ಅವರು ಏಪ್ರಿಲ್ 29ರಂದು ಅರ್ಜಿ ವಿಚಾರಣೆ ನಡೆಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದಾರೆ. ಆದರೆ, ಯಾವುದೇ ಕಾರಣ ನೀಡದ ನ್ಯಾಯಾಮೂರ್ತಿ ಗೀತಾ ಗೋಪಿ ಅವರು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

ಗೀತಾ ಗೋಪಿ ಅವರು ವಿಚಾರಣೆಯಿಂದ ಹಿಂದೆ ಸರಿದ ಬಳಿಕ, ಏಪ್ರಿಲ್ 29ರಂದು ವಿಚಾರಣೆ ಕೈಗೆತ್ತಿಕೊಳ್ಳುವಂತೆ ಹಂಗಾಮಿ ನ್ಯಾಯಾಮೂರ್ತಿ ಎ.ಜೆ ದೇಸಾಯಿ ಅವರ ಮುಂದೆ ರಾಹುಲ್ ಅವರ ವಕೀಲ ಪಂಕಜ್ ಚಂಪನೇರಿ ಪ್ರಸ್ತಾಪಿಸಿದ್ದಾರೆ. ಎಸಿಜೆ ದೇಸಾಯಿ ಅವರು ವಿಚಾರಣಾ ದಿನಾಂಕವನ್ನು ಪಟ್ಟಿ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದಿರುವ ಗೀತಾ ಗೋಪಿ ಅವರು ಪ್ರಕರಣವನ್ನು ಬೇರೆ ಪೀಠಕ್ಕೆ ನಿಯೋಜಿಸಲು ಮುಖ್ಯ ನ್ಯಾಯಮೂರ್ತಿಗೆ ಹಸ್ತಾಂತರಿಸುವಂತೆ ಕೋರ್ಟ್ ರಿಜಿಸ್ಟ್ರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಎಲ್ಲಾ ಕಳ್ಳರು ಮೋದಿ ಎಂಬ ಉಪನಾಮವನ್ನು ಏಕೆ ಹೊಂದಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಖಂಡಿಸಿ ಗುಜರಾತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಅಪರಾಧ ಮಾನಹಾನಿ ಮೊಕದ್ದಮೆ ದಾಖಲಿಸಿದ್ದರು. ಈ ಸಂಬಂಧ ಸೂರತ್‌ನ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು.

ಇದನ್ನೂ ಓದಿ; ಗುಪ್ತಚರ ಮತ್ತು ಭದ್ರತಾ ವೈಫಲ್ಯ-ಕೊಲೆ-ನಿರ್ಲಕ್ಷ್ಯದ ಸಾವು- ಯಾವುದನ್ನೂ ಪ್ರಶ್ನಿಸದೆ ಮೈಮರೆತ ಮುಖ್ಯವಾಹಿನಿ ಮಾಧ್ಯಮಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...