Homeಮುಖಪುಟಇದು ಟ್ರೈಲರ್ ಮಾತ್ರ. ಸಿನಿಮಾ ಇನ್ನು ಬಾಕಿ ಇದೆ: ಗುಡುಗಿದ ಮೋದಿ

ಇದು ಟ್ರೈಲರ್ ಮಾತ್ರ. ಸಿನಿಮಾ ಇನ್ನು ಬಾಕಿ ಇದೆ: ಗುಡುಗಿದ ಮೋದಿ

- Advertisement -
- Advertisement -

ಭ್ರಷ್ಟರನ್ನು ಜೈಲಿಗೆ ತಳ್ಳುವ ನಮ್ಮ ಪ್ರತಿಜ್ಞೆಯ ಕೆಲಸ ಪ್ರಗತಿಯಲ್ಲಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಸೇರಿದ್ದಂತೆ ಕೆಲವರು ಈಗಾಗಲೇ ಜೈಲಿನಲ್ಲಿದ್ದಾರೆ. ಇನ್ನು ಕೆಲವರು ಶೀಘ್ರದಲ್ಲೇ ಸೇರಲಿದ್ದಾರೆ. ಇದು ಟ್ರೈಲರ್ ಮಾತ್ರ. ಪೂರ್ತಿ ಸಿನಿಮಾ ಇನ್ನು ಬಾಕಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ನೂತನ ಸರ್ಕಾರವು 100 ದಿನ ಪೂರೈಸಿದ ಕಾರ್ಯಕ್ರಮದಲ್ಲಿ ಗುಡುಗಿದ್ದಾರೆ.

“ನಮ್ಮ ಹೋರಾಟವು ಭ್ರಷ್ಟಾಚಾರದ ವಿರುದ್ಧವಾಗಿದೆ ಮತ್ತು ಅಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ವ್ಯಕ್ತಿಗಳ ವಿರುದ್ಧ 100 ದಿನಗಳಲ್ಲಿ ನಾವು ಕೆಲ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಅವರಲ್ಲಿ ಕೆಲವರನ್ನು ಜೈಲಿಗೆ ಕಳುಹಿಸಲಾಗಿದೆ. ಭ್ರಷ್ಟಾಚಾರವನ್ನು ಕೊನೆಗೊಳಿಸುವುದೇ ತಮ್ಮ ಸರ್ಕಾರದ ಗುರಿ”ಎಂದು ಪ್ರಧಾನಿ ಮೋದಿಯವರು ಜಾರ್ಖಂಡ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದರು.

ಆಡಳಿತದ ಮೊದಲ 100 ದಿನಗಳಲ್ಲಿ ತಮ್ಮ ಕ್ಯಾಬಿನೆಟ್ ಸಾಧಿಸಿದ ಸಾಧನೆಗಳು ಕೇವಲ “ಟ್ರೈಲರ್”, ಮತ್ತು ಮುಂದಿನ ವರ್ಷಗಳಲ್ಲಿ ಸಂಪೂರ್ಣ ಚಿತ್ರಣ ಹೊರಹೊಮ್ಮಲಿದೆ. “ಚುನಾವಣೆಗೆ ಮುಂಚಿತವಾಗಿ, ನಾನು ಬಲವಾದ ಮತ್ತು ಕೆಲಸ-ಆಧಾರಿತ ಸರ್ಕಾರವನ್ನು ರಚಿಸುವ ಭರವಸೆ ನೀಡಿದ್ದೆ – ಹಿಂದಿನ ಸರ್ಕಾರಕ್ಕಿಂತಲೂ ವೇಗವಾಗಿ ಕೆಲಸ ಮಾಡುವ ಈ ಸರ್ಕಾರ, ನಿಮ್ಮ ಎಲ್ಲ ಆಕಾಂಕ್ಷೆಗಳನ್ನು ನನಸಾಗಿಸಲು ಶ್ರಮಿಸುವ ಸರ್ಕಾರ ಎಂದು ಹೇಳಿದ್ದಾರೆ.

ದೇಶದ ಸರ್ವತೋಮುಖ ಪ್ರಗತಿಯನ್ನು ಖಾತ್ರಿಪಡಿಸಿಕೊಳ್ಳುವುದರ ಜೊತೆಗೆ ಅದನ್ನು ಲೂಟಿ ಮಾಡುವವರಿಗೆ ಶಿಕ್ಷೆ ವಿಧಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಅಭಿವೃದ್ಧಿಯು ನಮ್ಮ ಭರವಸೆ ಮತ್ತು ಉದ್ದೇಶವಾಗಿದೆ. ದೇಶವು ಈ ರೀತಿಯ ಅಭಿವೃದ್ಧಿಯ ವೇಗವನ್ನು ಈ ಹಿಂದೆ ನೋಡಿಲ್ಲ” ಎಂದು ಅವರು ಹೇಳಿದರು. ಅದೇ ಸಮಯದಲ್ಲಿ, “ನಮ್ಮ ಸರ್ಕಾರ ಬಂದ ನಂತರ ಭ್ರಷ್ಟಾಚಾರದ ಮೇಲೆ ಭಾರಿ ದಬ್ಬಾಳಿಕೆ ಪ್ರಾರಂಭವಾಗಿದೆ. ಸಾರ್ವಜನಿಕರನ್ನು ಲೂಟಿ ಮಾಡಲು ಪ್ರಯತ್ನಿಸುವ ಜನರಿಗೆ ಸರಿಯಾದ ಸ್ಥಳಗಳನ್ನು ತೋರಿಸಲಾಗುತ್ತದೆ, ”ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಪ್ರತಿಪಕ್ಷ ಕಾಂಗ್ರೆಸ್ 100 ದಿನಗಳ ಅವಧಿಯ ಬಿಜೆಪಿಯ ಕ್ರಮವನ್ನು ಟೀಕಿಸಿದೆ. “ಬಿಜೆಪಿ 2.0 ಯ ಮೊದಲ 100 ದಿನಗಳನ್ನು ದಬ್ಬಾಳಿಕೆ, ಅವ್ಯವಸ್ಥೆ ಮತ್ತು ಅರಾಜಕತೆ ಎಂದು ಮೂರು ಪದಗಳಲ್ಲಿ ವಿವರಿಸಬಹುದು” ಎಂದು ಪಕ್ಷವು ಹೇಳಿದೆ, ಕೈಗಾರಿಕಾ ವಲಯದಲ್ಲಿನ ಮಂದಗತಿ ಮತ್ತು ದೇಶದ ಜಿ.ಡಿ.ಪಿ ಬೆಳವಣಿಗೆಯು ಶೇಕಡಾ 5 ಕ್ಕೆ ಇಳಿದಿದೆ. “ಎಂಟು ವಲಯಗಳು ಶೇಕಡಾ 2 ಕ್ಕಿಂತ ಕಡಿಮೆ ಬೆಳವಣಿಗೆಯ ದರವನ್ನು ದಾಖಲಿಸಿವೆ. ನಮ್ಮ ಆರ್ಥಿಕತೆಯು ತೀವ್ರ ಕುಸಿತದಲ್ಲಿದೆ ಎಂದು ಒಪ್ಪಿಕೊಳ್ಳಲು ನಮ್ಮ ಕೇಂದ್ರ ಹಣಕಾಸು ಸಚಿವರು ಇನ್ನೂ ನಿರಾಕರಿಸುತ್ತಿದ್ದಾರೆ. ಬಿಜೆಪಿಯ ಈ ನಿರ್ಲಕ್ಷ್ಯ ಮತ್ತು ವಂಚನೆಯು ಇದೇ ಹಾದಿಯಲ್ಲಿ ಮುಂದುವರಿದರೆ, ನಾವು ಆರ್ಥಿಕ ಹಿಂಜರಿತದತ್ತ ಸಾಗುತ್ತೇವೆ ಎಂದು ಕಾಂಗ್ರೆಸ್ ಟೀಕಿಸಿದೆ.

ಸ್ವತಃ ಖ್ಯಾತ ಅರ್ಥಶಾಸ್ತ್ರಜ್ಞ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಈ ತಿಂಗಳ ಆರಂಭದಲ್ಲಿ ತನ್ನ ಕಾರ್ಯ ವಿಧಾನವನ್ನು ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿದ್ದರು. “ಈ ಹಾದಿಯಲ್ಲಿ ಮುಂದುವರಿಯಲು ಭಾರತಕ್ಕೆ ಸಾಧ್ಯವಿಲ್ಲ. ಆದ್ದರಿಂದ, ನಮ್ಮ ಆರ್ಥಿಕತೆಯನ್ನು ಈ ಬಿಕ್ಕಟ್ಟಿನಿಂದ ದೂರವಿರಿಸಲು ದ್ವೇಷ ರಾಜಕೀಯವನ್ನು ಬದಿಗಿಟ್ಟು, ಮತ್ತು ಎಲ್ಲಾ ವಿವೇಕದ ಧ್ವನಿಗಳು ಮತ್ತು ಆಲೋಚನಾ ಮನಸ್ಸುಗಳನ್ನು ತಲುಪಬೇಕೆಂದು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದು ಅವರು ಹೇಳಿದ್ದರು.

ಕಳೆದ ಕೆಲವು ವಾರಗಳಿಂದ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ನ ಪ್ರಮುಖ ನಾಯಕರಾದ ಪಿ.ಚಿದಂಬರಂ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವುದು ನರೇಂದ್ರ ಮೋದಿ ಸರ್ಕಾರದ ರಾಜಕೀಯ ಕುತಂತ್ರವಾಗಿದೆ. ಪ್ರತಿಪಕ್ಷದ ನಾಯಕರನ್ನು ಗುರಿಯಾಗಿಸಲು ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 21 ರಂದು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಕಾಂಗ್ರೆಸ್ ನ ಪಿ ಚಿದಂಬರಂ ಅವರನ್ನು ಬಂಧಿಸಲಾಗಿತು. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಚಿದಂಬರಂ ಹಣಕಾಸು ಸಚಿವರಾಗಿದ್ದಾಗ 2007 ರಲ್ಲಿ ಐಎನ್‌ಎಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿ ವಿದೇಶಿ ಹೂಡಿಕೆಗೆ ಸರ್ಕಾರದ ಅನುಮೋದನೆಯೊಂದಿಗೆ ಭ್ರಷ್ಟಾಚಾರದ ಪ್ರಕರಣ ಸಂಬಂಧ ಹೊಂದಿದೆ. ಕಳೆದ ವಾರ 14 ದಿನಗಳ ನ್ಯಾಯಾಂಗ ಬಂಧನಕ್ಕಾಗಿ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿತ್ತು.

ಪಿ ಚಿದಂಬರಂ ಮತ್ತು ಅವರ ಮಗ ಕಾರ್ತಿ ಇಬ್ಬರೂ ಎಲ್ಲಾ ಆರೋಪಗಳನ್ನು ಬಲವಾಗಿ ನಿರಾಕರಿಸಿದ್ದಾರೆ ಮತ್ತು ಮೋದಿ ಸರ್ಕಾರವು “ರಾಜಕೀಯ ದುರುದ್ದೇಶದಿಂದ” ಪ್ರೇರೇಪಿಸಲ್ಪಟ್ಟಿದೆ ಎಂದು ಆರೋಪಿಸಿದ್ದಾರೆ.

ಮೋದಿ ಸರ್ಕಾರವು ಎರಡನೇ ಅವಧಿಗೆ ಹೆಚ್ಚಿನ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ನಂತರ ಕಳೆದ ಮೂರು ತಿಂಗಳಲ್ಲಿ ದೇಶದ ಪ್ರಮುಖ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ವಿರೋಧಿ ಏಜೆನ್ಸಿಗಳಾದ ಕೇಂದ್ರ ತನಿಖಾ ಮತ್ತು ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಹಲವಾರು ಉನ್ನತ ರಾಜಕೀಯ ಮುಖಂಡರನ್ನು ಬಂಧಿಸಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ತಮ್ಮ ನಾಯಕರನ್ನು ಬೆದರಿಸಲು ಅಥವಾ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...