Homeಕರ್ನಾಟಕರೌಡಿಶೀಟರ್ ಫೈಟರ್ ರವಿ ಎದುರು ಕೈಮುಗಿದು ನಿಂತ ಮೋದಿ, ಇದು ಪ್ರಧಾನಿ ಹುದ್ದೆಗೆ ಕಳಂಕ ಎಂದ...

ರೌಡಿಶೀಟರ್ ಫೈಟರ್ ರವಿ ಎದುರು ಕೈಮುಗಿದು ನಿಂತ ಮೋದಿ, ಇದು ಪ್ರಧಾನಿ ಹುದ್ದೆಗೆ ಕಳಂಕ ಎಂದ ಕಾಂಗ್ರೆಸ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಹೆಲಿಪ್ಯಾಡ್‍ಗೆ ಬಂದಿಳಿದ ವೇಳೆ ಬಿಜೆಪಿ ಮುಖಂಡರು ಗಾರ್ಲೆಂಡ್ ಮಾಡಿ ಸ್ವಾಗತ ಕೋರಿದರು. ಈ ವೇಳೆ ಬಿಜೆಪಿ ಮುಖಂಡರ ಜೊತೆ ನಾಗಮಂಗಲ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಸಹ ಮೋದಿ ಅವರಿಗೆ ಸ್ವಾಗತಕೋರಿದ್ದಾರೆ.

ಬೆಂಗಳೂರಿನ ವಯ್ಯಾಲಿಕಾವಲ್ ಪೊಲೀಸ್‌ ಠಾಣೆಯ ರೌಡಿಪಟ್ಟಿಯಲ್ಲಿ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಹೆಸರಿದೆ ಎಂದು ಪೊಲೀಸರು ತಿಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಫೈಟರ್ ರವಿ ಪರಸ್ಪರರು ಕೈಜೋಡಿಸಿ ನಮಸ್ಕಾರ ಮಾಡುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ನೋಡಿದ ಎಂಥವರಿಗೂ ಇದು ಪ್ರಧಾನಿ ಹುದ್ದೆಯ ಘನತೆ ಕುಗ್ಗಿಸುವ ದೃಶ್ಯ ಎನ್ನುವುದು ಮನವರಿಕೆಯಾಗುತ್ತದೆ.

ಇದೀಗ ಕಾಂಗ್ರೆಸ್, ಫೈಟರ್ ರವಿ ವಿಚಾರ ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ಮುಗಿಬಿದ್ದಿದೆ. ಮೋದಿ ಅವರು ಮಂಡ್ಯಕ್ಕೆ ಬಂದಾಗ ಫೈಟರ್ ರವಿ ಹಾಗೂ ಮೋದಿ ಪರಸ್ಪರ ಕೈಜೋಡಿಸಿ ನಮಸ್ಕರಿಸುವ ಫೋಟೋ ಹಂಚಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ: ‘ಖಾಲಿ ಕುರ್ಚಿಯಿಂದ ಮೋದಿಗೆ ಮುಜಗರ ಆಗಬಾರದೆಂದು ಬಲವಂತವಾಗಿ ಜನರನ್ನು ಕರೆತಂದ ಬೊಮ್ಮಾಯಿ’: ಕಾಂಗ್ರೆಸ್

ಭಾನುವಾರ ದಶಪಥ ಉದ್ಘಾಟನೆಗೆ ಪಿಇಎಸ್‌ ಕಾಲೇಜು ಹೆಲಿಪ್ಯಾಡ್‌ಗೆ ಬಂದಿಳಿದ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ಈ ವೇಳೆ ಮಲ್ಲಿಕಾರ್ಜುನ (ಫೈಟರ್ ರವಿ) ಕೂಡ ಇದ್ದರು. ಪ್ರಧಾನಿ ಮೋದಿ ಹಾಗೂ ಫೈಟರ್ ರವಿ ಪರಸ್ಪರ ನಮಸ್ಕಾರ ಮಾಡಿದರು. ಮಲ್ಲಿಕಾರ್ಜುನ ಮೇಲೆ ರೌಡಿಶೀಟರ್ ಆರೋಪ ಇದೆ ಎಂದು ಬಿಂಬಿತವಾಗಿರುವ ಹಿನ್ನೆಲೆಯಲ್ಲಿ ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಕುರಿತು ಟ್ವಿಟ್ ಮಾಡಿರುವ ಕಾಂಗ್ರೆಸ್, ”ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ..  ಇಲ್ಲ. ಫೈಟರ್ ರವಿ ಎಂಬ ರೌಡಿಶೀಟರ್ ಎದುರು ಕೈಮುಗಿದು ನಿಂತ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು” ಎಂದು ಟ್ವಿಟ್ ಮಾಡಿದೆ.

ಈ ಹಿಂದೆ ಕಾಂಗ್ರೆಸ್, ”ರೌಡಿಗಳಿಗೂ ಬಿಜೆಪಿ ನಾಯಕರಿಗೂ ಏನು ಸಂಬಂಧ? ಏನು ವ್ಯವಹಾರ? ಯಾವ ನಂಟು? ಸೈಲೆಂಟ್ ಸುನೀಲ, ಫೈಟರ್ ರವಿ, ಬೆತ್ತನಗೆರೆ ಶಂಕರ ಬಿಜೆಪಿ ಜೊತೆಗೆ ಗುರುತಿಸಿಕೊಂಡ ನಂತರ ವಿಲ್ಸನ್ ಗಾರ್ಡನ್ ನಾಗ ಎಂಬ ರೌಡಿ ಶೀಟರ್ ಸಚಿವ ವಿ.ಸೋಮಣ್ಣ ಮನೆಗೆ ಬಂದಿದ್ದೇಕೆ? ಆತನೂ ಬಿಜೆಪಿ ರೌಡಿ ಮೋರ್ಚಾ ಸೇರುವ ಸಂಭವವಿದೆಯೇ?” ಎಂದು ರಾಜ್ಯ ಬಿಜೆಪಿಗೆ ಪ್ರಶ್ನೆ ಮಾಡಿತ್ತು.

”ಮೊದಲೆಲ್ಲ ರೌಡಿ ಶೀಟರ್‌ಗಳು ಪೊಲೀಸರೆದುರು ಪರೇಡ್ ನಡೆಸುತ್ತಿದ್ದರು. ಈಗ ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ಪರೇಡ್ ನಡೆಸಲು ಸಜ್ಜಾಗಿದ್ದಾರೆ! ರೌಡಿಗಳೊಂದಿಗೆ ಬಿಜೆಪಿಗರ ಬಾಂಧವ್ಯ ಹೊರಬರುತ್ತಿರುವಾಗ ಮತ್ತೊಬ್ಬ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸಚಿವ ಸೊಮ್ಮಣ್ಣನವರ ಮನೆಗೆ ಭೇಟಿ ನೀಡಿದ್ದು ಬಿಜೆಪಿಯ ರೌಡಿ ಮೋರ್ಚಾಗೆ ಶಕ್ತಿ ನೀಡವುದಕ್ಕಾ?” ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.

ಈಗ ರೌಡಿ ಶೀಟರ್ ಆಗಿದ್ದ ಫೈಟರ್ ರವಿ ಬಿಜೆಪಿ ನಾಯಕರೊಟ್ಟಿಗೆ ನಿಂತು ಪ್ರಧಾನಿ ಮೋದಿಗೆ ಸ್ವಾಗತ ಕೋರಿದ್ದಾರೆ. ಅಷ್ಟೇ ಅಲ್ಲದೇ ದೇಶದ ಪ್ರಧಾನಿಯೂ ರೈಡಿ ಶೀಟರ್‌ಗೆ ಕೈಮುಗಿದಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಮೋದಿ ಅವರು ಪ್ರಧಾನಿ ಹುದ್ದೆಗೆ ಕಳಂಕ ತಂದಂತಾಗಿದೆ ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...