Homeಮುಖಪುಟಮೋದಿ ಸರ್‌ ನೇಮ್ ಪ್ರಕರಣ: ಜುಲೈ 21 ರಂದು ರಾಹುಲ್ ಗಾಂಧಿ ಮೇಲ್ಮನವಿ ವಿಚಾರಣೆ ನಡೆಸಲಿರುವ...

ಮೋದಿ ಸರ್‌ ನೇಮ್ ಪ್ರಕರಣ: ಜುಲೈ 21 ರಂದು ರಾಹುಲ್ ಗಾಂಧಿ ಮೇಲ್ಮನವಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

- Advertisement -
- Advertisement -

ಮೋದಿ ಸರ್‌ ನೇಮ್ ಪ್ರಕರಣದಲ್ಲಿ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಜುಲೈ 21 ರಂದು ವಿಚಾರಣೆಗೆ ಕೈಗೊಳ್ಳಲಿದೆ.

ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಈ ವಿಷಯವನ್ನು ಪ್ರಸ್ತಾಪಿಸಿದ ನಂತರ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ರಾಹುಲ್ ಗಾಂಧಿಯವರ ಮೇಲ್ಮನವಿಯ ವಿಚಾರಣೆಯ ದಿನಾಂಕವನ್ನು ನಿಗದಿಪಡಿಸಿದ್ದಾರೆ.

ಮೋದಿ ಉಪನಾಮ ಹೊಂದಿದವರೆಲ್ಲ ಕಳ್ಳರು ಎಂಬ ಹೇಳಿಕೆ ಸಂಬಂಧ ರಾಹುಲ್ ಗಾಂಧಿ ವಿರುದ್ಧದ ಕೆಳ ನ್ಯಾಯಾಲಯದ ಶಿಕ್ಷೆ ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್‌ ಹೈಕೋರ್ಟ್‌ ಜುಲೈ 7 ರಂದು ತಿರಸ್ಕರಿಸಿದೆ. ಹಾಗಾಗಿ ರಾಹುಲ್‌ ಅವರ ಲೋಕಸಭೆ ಸದಸ್ಯತ್ವದ ಅನರ್ಹತೆ ಮುಂದುವರಿಯುವಂತಾಗಿದೆ.

ಈ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಜುಲೈ 15 ರಂದು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಶಿಕ್ಷೆಯ ಆದೇಶವು ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ, ಮುಕ್ತ ಚಿಂತನೆ ಮತ್ತು ಮುಕ್ತ ಹೇಳಿಕೆಗೆ ಧಕ್ಕೆಗೆ ಕಾರಣವಾಗುತ್ತದೆ ಎಂದಿರು ಅವರು ತಮ್ಮ ಮೇಲಿನ ಶಿಕ್ಷೆಯನ್ನು ರದ್ದುಪಡಿಸಿ, ಸಂಸತ್ ಸ್ಥಾನವನ್ನು ಮರಳಿ ಕೊಡಬೇಕೆಂದು ವಾದಿಸಿದ್ದರೆ.

ಇದು ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ವ್ಯವಸ್ಥಿತವಾಗಿ, ಪುನರಾವರ್ತಿತವಾಗಿ ಕಸಿದುಕೊಳ್ಳಲು ಕೊಡುಗೆ ನೀಡುತ್ತದೆ. ಹಾಗಾಗಿ ಪ್ರಜಾಪ್ರಭುತ್ವದ ಕತ್ತು ಹಿಸುಕಿದಂತಾಗುತ್ತಿದೆ. ಇದು ಭಾರತದ ರಾಜಕೀಯ ವಾತಾವರಣ ಮತ್ತು ಭವಿಷ್ಯಕ್ಕೆ ತೀವ್ರವಾಗಿ ಹಾನಿಕಾರಕವಾಗಿದೆ ಎಂದು ಅವರು ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ರಾಹುಲ್‌ ಗಾಂಧಿ ಅವರಿಗೆ ಮಾನಹಾನಿ ಪ್ರಕರಣದಲ್ಲಿ ಗುಜರಾತ್‌ ಸೆಷನ್ಸ್‌ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ರಾಹುಲ್‌ ಅವರು ಗುಜರಾತ್‌ ಹೈಕೋರ್ಟ್‌ ಮೊರೆ ಹೋಗಿದ್ದರು.

ರಾಹುಲ್ ಅವರು 2019ರಲ್ಲಿ ಕೋಲಾರದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆ ವೇಳೆ ‘ಮೋದಿ ಉಪನಾಮ ಹೊಂದಿರುವವರೆಲ್ಲಾ ಕಳ್ಳರು’ ಎಂದು ಹೇಳಿದ್ದರು. ಗುಜರಾತ್ ಸೂರತ್‌ನ ಸೆಷನ್ಸ್‌ ನ್ಯಾಯಾಲಯದಲ್ಲಿ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ರಾಹುಲ್ ಗಾಂಧಿಯವರಿಗೆ ಮಾರ್ಚ್‌ 23 ರಂದು 2 ವರ್ಷಗಳ ಶಿಕ್ಷೆ ವಿಧಿಸಿತ್ತು. ಬಳಿಕ ರಾಹುಲ್‌ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.

ಇದನ್ನೂ ಓದಿ: ರಾಹುಲ್ ಗಾಂಧಿ ಅನರ್ಹತೆ ಒಂದು ರಾಜಕೀಯ ತಿರುವಾಗಬಹುದು ಹೇಗೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read