Homeಮುಖಪುಟತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

ತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

- Advertisement -
- Advertisement -

ಹೈದರಾಬಾದ್‌ನ ಬೇಗಂಪೇಟೆ ವಿಮಾನ ನಿಲ್ದಾಣಕ್ಕೆ ಶನಿವಾರ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಬರಮಾಡಿಕೊಳ್ಳಲು ಹೋಗುವುದಿಲ್ಲ. ಆರು ತಿಂಗಳಲ್ಲಿ ಮೂರನೇ ಬಾರಿಗೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌‌ ಅವರು ಪ್ರಧಾನಿಯವರನ್ನು ಸ್ವಾಗತಿಸದೆ ಪ್ರೋಟೋಕಾಲ್‌ ಅನುಸರಿಸಿಲ್ಲ ಎಂದು ಆರೋಪಿಸಲಾಗಿದೆ.

ತೆಲಂಗಾಣ ಸರ್ಕಾರವು ಹಂಚಿಕೊಂಡ ಟಿಪ್ಪಣಿಯ ಪ್ರಕಾರ, ಪ್ರಧಾನಿ ಮೋದಿ ಅವರು ಮಧ್ಯಾಹ್ನ 2:55ಕ್ಕೆ ಹೈದರಾಬಾದ್‌ಗೆ ಬಂದಿಳಿಯಲಿದ್ದಾರೆ. ರಾಜ್ಯದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ತಲಸಾನಿ ಶ್ರೀನಿವಾಸ್ ಯಾದವ್ ಅವರು ಪ್ರಧಾನಿಯವರನ್ನು ಬರಮಾಡಿಕೊಳ್ಳಲಿದ್ದಾರೆ. ಸಚಿವರು ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ನಾಯಕರಾಗಿದ್ದು, ಪ್ರಧಾನ ಮಂತ್ರಿಯನ್ನು ಬರಮಾಡಿಕೊಳ್ಳುವಂತೆ ಟಿಆರ್‌ಎಸ್‌ನ ಮುಖ್ಯಸ್ಥರೂ ಆಗಿರುವ ಮುಖ್ಯಮಂತ್ರಿಯವರು ನಿರ್ದೇಶಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಕೊನೆಗೊಳ್ಳಲಿರುವ ಬಿಜೆಪಿಯ 2 ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಅವರು ತೆಲಂಗಾಣಕ್ಕೆ ಆಗಮಿಸಲಿದ್ದಾರೆ.

ಇದರ ನಡುವೆ ಮತ್ತೊಂದು ಬೆಳವಣಿಗೆಯಾಗಿದೆ. ತೆಲಂಗಾಣ ಸಿಎಂ ಚಂದ್ರಶೇರ್‌ ಅವರು ಪ್ರಧಾನಿಯವರನ್ನು ಬರಮಾಡಿಕೊಳ್ಳದೆ, ಯಶವಂತ್ ಸಿನ್ಹಾ ಅವರನ್ನು ಸ್ವಾಗತಿಸಲು ಮುಂದಾದರು. ರಾಷ್ಟ್ರಪತಿ ಚುನಾವಣೆಯಲ್ಲಿ ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಸ್ಪರ್ಧಿಸಿದ್ದು, ಪ್ರಧಾನಿ ಆಗಮಿಸುವ ಎರಡು ಗಂಟೆಗಳ ಮೊದಲು ಐಟಿ ನಗರಕ್ಕೆ ಸಿನ್ಹಾ ಬರುವುದು ನಿಗದಿಯಾಗಿತ್ತು.

ಜುಲೈ 18ರಂದು ನಡೆಯುವ ರಾಷ್ಟ್ರಪತಿ ಚುನಾವಣೆಯಲ್ಲಿ ಕೆಸಿಆರ್ ಅವರು ತಮ್ಮ ಪಕ್ಷದ ಬೆಂಬಲವನ್ನು ಸಿನ್ಹಾಗೆ ನೀಡಿದ್ದಾರೆ. ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಅವರು ಎನ್‌ಡಿಎ ಪರವಾಗಿ ಸ್ಪರ್ಧಿಸಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ, ಕೆಸಿಆರ್ ಅವರು ಕೇಂದ್ರ ಸರ್ಕಾರದ ತೀವ್ರ ಟೀಕಾಕಾರರಾಗಿದ್ದಾರೆ. ಕಳೆದ ತಿಂಗಳಷ್ಟೇ ಹೊಸದಾಗಿ ಪ್ರಾರಂಭಿಸಲಾದ ಅಗ್ನಿಪಥ್ ಮಿಲಿಟರಿ ನೇಮಕಾತಿ ಯೋಜನೆಯ ವಿರುದ್ಧ ಕೆಸಿಆರ್‌ ಮಾತನಾಡಿದ್ದರು. ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳು ಅಗ್ನಿಪಥ್ ವಿರುದ್ಧ ಆಕ್ರೋಶ ಹೊರಹಾಕಿವೆ.

ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಹೈದರಾಬಾದ್‌ಗೆ ಭೇಟಿ ನೀಡಿದಾಗ ಕೆಸಿಆರ್ ಗೈರು ಹಾಜರಾಗಿದ್ದರು. ಫೆಬ್ರವರಿಯಲ್ಲಿ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್‌ನ 20ನೇ ವರ್ಷದ ವಾರ್ಷಿಕ ಸಮಾರಂಭಗಳಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ಹೈದರಾಬಾದ್‌ಗೆ ಭೇಟಿ ನೀಡಿದಾಗಲೂ ಅವರು ಬೆಂಗಳೂರಿಗೆ ಬಂದಿದ್ದರು.

ಇರಾನಿ ಟೀ, ಧಮ್‌ ಬಿರಿಯಾನಿ ಸೇವಿಸುವುದು ಮರೆಯದಿರಿ: ಕೆ.ಟಿ.ರಾಮರಾವ್‌

ತೆಲಂಗಾಣ ಐಟಿ ಸಚಿವ ಕೆಟಿ ರಾಮರಾವ್ ಅವರು ರಾಜ್ಯ ರಾಜಧಾನಿ ಹೈದರಾಬಾದ್‌ನಲ್ಲಿರುವ ಬೃಹತ್‌‌ ಕಟ್ಟಡಗಳ ಚಿತ್ರಗಳನ್ನು ಹಂಚಿಕೊಂಡು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ರಾವ್ ಅವರು ಬಿಜೆಪಿಯ ಹೆಸರನ್ನು ಉಲ್ಲೇಖಿಸದಿದ್ದರೂ, “ವಾಟ್ಸ್‌‌ಅಪ್‌‌ ವಿಶ್ವವಿದ್ಯಾನಿಲಯದ ಕಾರ್ಯಕಾರಿ ಮಂಡಳಿ ಸಭೆ” ಮತ್ತು “ಜುಮ್ಲಾ ಜೀವೀಸ್‌” ಥರದ ಪದಗಳನ್ನು ಬಳಸಿ ಟಾರ್ಗೆಟ್ ಮಾಡಿದ್ದಾರೆ.

ನಕಲಿ ಸುದ್ದಿ, ವದಂತಿ ಹರಡುವವರನ್ನು “ವಾಟ್ಸ್‌ಅಪ್‌ ವಿಶ್ವವಿದ್ಯಾನಿಲಯದವರು”ಎಂದು ಸಾಮಾನ್ಯವಾಗಿ ಕಾಲೆಳೆಯಲಾಗುತ್ತದೆ. ಬಿಜೆಪಿಯನ್ನು ಗೇಲಿ ಮಾಡಲೂ ವಿರೋಧ ಪಕ್ಷಗಳು ಈ ಸಾಲನ್ನು ಹೆಚ್ಚಾಗಿ ಬಳಸುತ್ತವೆ.

ಇದನ್ನೂ ಓದಿರಿ: ರಾಷ್ಟ್ರೀಯ ಪಕ್ಷ ಸ್ಥಾಪನೆ ಮಾಡುವತ್ತ ಕೆಸಿಆರ್‌‌? ಏನಿದು ತಂತ್ರಗಾರಿಕೆ?

“ತೆಲಂಗಾಣಕ್ಕೆ ಭೇಟಿ ನೀಡುವವರು, ಇಲ್ಲಿನ ಸರ್ಕಾರವು ಜಾರಿಗೊಳಿಸುತ್ತಿರುವ ಉತ್ತಮ ಯೋಜನೆಗಳನ್ನು ಅನುಸರಿಸಬೇಕು” ಎಂದು ರಾಮರಾವ್‌ ಸಲಹೆ ನೀಡಿದ್ದಾರೆ.

“ನಮ್ಮ ದಮ್ ಬಿರಿಯಾನಿ ಮತ್ತು ಇರಾನಿ ಚಾಯ್ ಅನ್ನು ಆನಂದಿಸಲು ಮರೆಯಬೇಡಿ” ಎಂದು ತಿಳಿಸಿದ್ದಾರೆ.

18 ವರ್ಷಗಳ ನಂತರ ಹೈದರಾಬಾದ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ದಕ್ಷಿಣ ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿಯ ಮೂರನೇ ಸಭೆ ಇದಾಗಿದೆ.

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಸರ್ಕಾರವನ್ನು ಪದಚ್ಯುತಗೊಳಿಸಿದ ನಂತರ ಬಿಜೆಪಿಯು ದಕ್ಷಿಣದ ರಾಜ್ಯಗಳ ಮೇಲೆ ವಿಶೇಷವಾಗಿ ತೆಲಂಗಾಣದ ಮೇಲೆ ತನ್ನ ದೃಷ್ಟಿ ನೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಹೈದರಾಬಾದ್‌ನಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಬಿಜೆಪಿ ನಾಲ್ಕು ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ವಾಟ್ಸಪ್ ಯೂನಿವರ್ಸಿಟಿಯವರಿಗೆ ಹಿಂಬಾಗಿಲಿನಿಂದ ಬಂದು ಅಧಿಕಾರ ಮಾಡೊ ಅಭ್ಯಾಸ ಇದೆ. ನೇರವಾಗಿ ಚುನಾವಣೆ ಎದುರಿಸಿ ಅಧಿಕಾರ ಹಿಡಿಯಲು ಆಗುವುದಿಲ್ಲಾ… Ekanath and Devendra Fadnavis (ED) govt. ಇದಕ್ಕೆ ಉದಾಹರಣೆ…

  2. ದುರಂಕಾರಿ ಕೆಸಿಆರ್ ಗೆ ಮುಂಂದಿನ ದಿನಗಳಲ್ಲಿ ತೆಲಂಗಾಣ ರಾಜ್ಯದ ಜನ ಚಿಪ್ಪೆಯಲ್ಲಿ ನೀರು ಕುಡಿಸ್ತಾರೆ ಅನ್ನೋದು ಖಚಿತ ಆಗಿದೆ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...