Homeಮುಖಪುಟಮೋದಿ ಭ್ರಷ್ಟಾಚಾರದ ಸಮರ್ಥಕರು: RTI ಕಾಯ್ದೆಗೆ ತಿದ್ದುಪಡಿ ವಿರುದ್ಧ ಪ್ರತಿಪಕ್ಷಗಳ ಕಿಡಿ...

ಮೋದಿ ಭ್ರಷ್ಟಾಚಾರದ ಸಮರ್ಥಕರು: RTI ಕಾಯ್ದೆಗೆ ತಿದ್ದುಪಡಿ ವಿರುದ್ಧ ಪ್ರತಿಪಕ್ಷಗಳ ಕಿಡಿ…

- Advertisement -
- Advertisement -

ನಿನ್ನೆಯಷ್ಟೇ ಲೋಕಸಭೆಯಲ್ಲಿ ಆರ್.ಟಿ.ಐ ಕಾಯ್ದೆಗೆ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡಿಸಿದೆ. ಅದಕ್ಕೆ ಬಹುಮತವೂ ಲಭಿಸಿದೆ. ಮುಂದಿನ ವಾರ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ಈ ಕುರಿತು ಪ್ರಮುಖರು ಏನು ಹೇಳಿದ್ದಾರೆ ನೊಡೋಣ ಬನ್ನಿ.

ಅವರು ತಮ್ಮ ವಿದೇಶ ಪ್ರವಾಸಗಳಲ್ಲಿ ತಮ್ಮ ಕ್ರೋನಿ ಸ್ನೇಹಿತರಿಗೆ ಮಾಡಿಕೊಟ್ಟ ವ್ಯಾಪಾರದ ಒಪ್ಪಂದಗಳ ಮಾಹಿತಿಯನ್ನು ಮರೆಮಾಚುತ್ತಾರೆ. ಯಾವ ಸಾರ್ವಜನಿಕ ವಲಯದ ಸಂಸ್ಥೆಗಳು ಹಿಂಬಾಗಿಲಿನಿಂದ ಗಣಿಗಾರಿಕೆ ಒಪ್ಪಂದಗಳನ್ನು ಯಾವ ಮಿತ್ರರಿಗೆ ನೀಡಿದ್ದಾರೆ ಎಂಬ ಮಾಹಿತಿಯನ್ನು ಅವರು ಮರೆಮಾಚುತ್ತಾರೆ. ಅವರು ರಫೇಲ್ ಒಪ್ಪಂದದ ಮಾಹಿತಿಯನ್ನು, ವಿಶೇಷವಾಗಿ ಆಫ್‌ಸೆಟ್ ಒಪ್ಪಂದಗಳನ್ನು ಅದಾನಿಗೆ ಕೊಡುವುದನ್ನು ಮರೆಮಾಚುತ್ತಾರೆ. ಹಾಗಾಗಿ ಅವರು ಆರ್‌ಟಿಐಯನ್ನು ಕೊಲ್ಲಲು ಪ್ರಯತ್ನಿಸುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ – ಪ್ರಶಾಂತ್ ಭೂಷಣ್, ಸುಪ್ರೀಂ ಕೋರ್ಟಿನ ಹಿರಿಯ ವಕೀಲರು.

ಮಾಹಿತಿ ಹಕ್ಕು ಕಾಯ್ದೆಯನ್ನು ಮಟ್ಟಹಾಕಲು ಹೊರಟಿರುವ ಕೇಂದ್ರ ಸರ್ಕಾರದ ಪ್ರಯತ್ನ ಬಹಳ ಗಂಭೀರ ವಿಷಯವಾಗಿದೆ. ಇದು ಯುಪಿಎ ಅವಧಿಯಲ್ಲಿ ತಂದ ಪ್ರಮುಖ ಶಾಸನಗಳಲ್ಲಿ ಒಂದಾಗಿದೆ. ಇದು ನಮ್ಮ ಜನರನ್ನು ಸಬಲೀಕರಣಗೊಳಿಸಲು ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸಲು ಸಹಕಾರಿಯಾಗಿದೆ. ಕಳೆದ ಒಂದು ದಶಕದಲ್ಲಿ ಸುಮಾರು 60 ಲಕ್ಷ ಜನರು ಇದರ ಲಾಭ ಪಡೆದಿದ್ದಾರೆ. – ಅಶೋಕ್ ಗೆಹ್ಲೋಟ್, ರಾಜಸ್ಥಾನದ ಮುಖ್ಯಮಂತ್ರಿ.

ಆರ್‌ಟಿಐ ಕಾಯ್ದೆಯು ಅಪರಿಮಿತ ಭ್ರಷ್ಟಾಚಾರ ಮತ್ತು ದುರಾಡಳಿತದ ಅಧಿಕಾರಕ್ಕೆ ಸವಾಲಾಗಿ ಪರಿಣಮಿಸಿದೆ ಎಂಬುದಕ್ಕೆ 80 ಕ್ಕೂ ಹೆಚ್ಚು ಆರ್‌ಟಿಐ ಕಾರ್ಯಕರ್ತರ ಹತ್ಯೆಯೇ ಸಾಕ್ಷಿಯಾಗಿದೆ! ಪ್ರಸ್ತಾವಿತ ತಿದ್ದುಪಡಿಗಳು ಮಾಹಿತಿ ಆಯೋಗಗಳ ಸ್ವಾತಂತ್ರ್ಯವನ್ನು ತೀವ್ರವಾಗಿ ದುರ್ಬಲಗೊಳಿಸುತ್ತವೆ. ಹಾಗಾಗಿ ಅದನ್ನು ತೀವ್ರವಾಗಿ ವಿರೋಧಿಸಬೇಕು – ಅತಿಶಿ ಮರ್ಲೀನಾ, ಆಮ್ ಆದ್ಮಿ ಪಕ್ಷ ದೆಹಲಿ.

ಬಹಳಷ್ಟು ಮೋದಿ ಅಭಿಮಾನಿಗಳು ಈಗ ಎಚ್ಚರವಾಗಿ ಕೇಂದ್ರ ಸರ್ಕಾರದ ಆರ್.ಟಿ.ಐ ಕಾಯ್ದೆಗೆ ತಂದ ತಿದ್ದುಪಡಿಗಳನ್ನು ವಿರೋಧಿಸುತ್ತಿದ್ದಾರೆ. ಕಳೆದು ಐದು ವರ್ಷಗಳಲ್ಲಿ ಈ ಸರ್ಕಾರವು ಹೇಗೆ ಸ್ವತಂತ್ರ ಸಂಸ್ಥೆಗಳನ್ನು ನಾಶ ಮಾಡುತ್ತಿದೆ ಎಂಬುದರ ಬಗ್ಗೆ ನಾನು ಸೇರಿದಂತೆ ನಮ್ಮ ಥರ ಯೋಚಿಸುವವರು ದನಿ ಎತ್ತಿದೆವು. ಆಗ ಈ ಮೋದಿ ಅಭಿಮಾನಿಗಳು ನಮ್ಮನ್ನು ಟ್ರೋಲ್ ಮಾಡುವುದರಲ್ಲಿ ಬ್ಯುಸಿಯಾಗಿದ್ದರು. ಈಗ ಸಮಯ ಮೀರಿ ಹೋಗಿದೆ. ವಿರೋಧವು ಮುಗಿದಿದೆ – ಧೃವ್ ರಾಠೀ, ಖ್ಯಾತ ಯೂಟ್ಯೂಬರ್, ಯುವ ಚಿಂತಕ.

ಮೋದಿ ಲೋಕಪಾಲ್ ರನ್ನು ಕೊಂದರು.
ಮೋದಿ ವಿಶಲ್ ಬ್ಲೋವರ್ಸ್ ಕಾಯ್ದೆಯನ್ನು ಕೊಂದರು
ಮೋದಿ ಈಗ ಆರ್‌ಟಿಐ ಕಾಯ್ದೆಯನ್ನು ಸಹ ಕೊಂದಿದ್ದಾರೆ

ಭಾರತದಲ್ಲಿ ಭ್ರಷ್ಟಾಚಾರ ಮತ್ತು ಕ್ರೋನಿ ಬಂಡವಾಳಶಾಹಿಗೆ ಮೋದಿ ಅತಿದೊಡ್ಡ ಸಹಾಯಕರಾಗಿದ್ದಾರೆ ಎಂಬ ಬಗ್ಗೆ ಯಾವುದೇ ಸಂದೇಹವಿದೆಯೇ? – ಶ್ರೀವತ್ಸ, ಸಾಮಾಜಿಕ ಕಾರ್ಯಕರ್ತ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...