Homeಕರ್ನಾಟಕಮತ ಕದ್ದು ಪ್ರಧಾನಿಯಾಗಿರುವ ಮೋದಿಗೆ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ: ಸಿದ್ದರಾಮಯ್ಯ

ಮತ ಕದ್ದು ಪ್ರಧಾನಿಯಾಗಿರುವ ಮೋದಿಗೆ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ: ಸಿದ್ದರಾಮಯ್ಯ

- Advertisement -
- Advertisement -

ಚುನಾವಣಾ ಆಯೋಗದ ದುರುಪಯೋಗ, ಮತ ಕಳವು ಮತ್ತು ಅಧಿಕಾರ ದುರ್ಬಳಕೆಯ ಮೂಲಕ ಪ್ರಧಾನಿಯಾಗಿರುವ ಮೋದಿ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯಲು ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮಹದೇವಪುರ ಕ್ಷೇತ್ರವೊಂದರಲ್ಲೇ 1 ಲಕ್ಷಕ್ಕೂ ಅಧಿಕ ನಕಲಿ ಮತದಾರರನ್ನು ಸೃಷ್ಟಿಸಲಾಗಿದೆ ಎಂಬ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಧ್ವನಿಗೂಡಿಸಿರುವ ಮುಖ್ಯಮಂತ್ರಿ ಸಿದ್ದರಾನಯ್ಯ, ಕೇಂದ್ರ ಬಿಜೆಪಿ ಮತ್ತು ಪ್ತಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ದಾಖಲೆಗಳ ಸಹಿತ ಇಂದು ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲ ಮಾಹಿತಿಗಳು ಚುನಾವಣಾ ಆಯೋಗವೇ ನೀಡಿದ ದಾಖಲೆಗಳಾಗಿವೆ. ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ವಿರುದ್ಧ ವ್ಯಾಪಕವಾದ ಜನಾಕ್ರೋಶವಿದ್ದರೂ ಅವರು ಹೇಗೆ ಮತಗಳ್ಳತನದ ಮೂಲಕ ಅಧಿಕಾರದ ಗದ್ದುಗೆ ಏರಲು ಸಾಧ್ಯವಾಯಿತು ಎನ್ನುವುದಕ್ಕೆ ಇಂದು ರಾಹುಲ್‌ ಗಾಂಧಿ ಅವರು ಬಿಡುಗಡೆ ಮಾಡಿರುವ ದಾಖಲೆಗಳು ಸಾಕ್ಷಿ” ಎಂದಿದ್ದಾರೆ.

“ಚುನಾವಣಾ ಆಯೋಗದ ದುರುಪಯೋಗ, ಮತ ಕಳವು ಮತ್ತು ಅಧಿಕಾರ ದುರ್ಬಳಕೆಯ ಮೂಲಕ ಪ್ರಧಾನಿಯಾಗಿರುವ ಮೋದಿ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯಲು ಯಾವ ನೈತಿಕತೆಯೂ ಇಲ್ಲ. ಈ ಕೂಡಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಸರ್ಕಾರ ವಿಸರ್ಜನೆ ಮಾಡಬೇಕು ಎಂದು ಆಗ್ರಹಿಸುತ್ತೇನೆ. ಈ ಬಗ್ಗೆ ಕಾಂಗ್ರೆಸ್‌ ಪಕ್ಷ ದೇಶಾದ್ಯಂತ ಧ್ವನಿಯೆತ್ತಿ, ಬಿಜೆಪಿಯ ಈ ಎಲ್ಲ ಅನಾಚಾರಗಳನ್ನು ಪ್ರತಿಯೊಬ್ಬರಿಗೂ ಅರ್ಥ ಮಾಡಿಸುವ ಕೆಲಸ ಮಾಡಲಿದೆ” ಎಂದು ಹೇಳಿದ್ದಾರೆ.

“ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ದಾಖಲೆಗಳನ್ನು ರಾಹುಲ್‌ ಗಾಂಧಿ ಅವರ ಮಾರ್ಗದರ್ಶನದಲ್ಲಿ ಸುದೀರ್ಘ 6 ತಿಂಗಳ ಕಾಲ ಹಲವು ಮಂದಿ ಅಧ್ಯಯನ ನಡೆಸಿ, ಮತಗಳ್ಳತನದ ಇಂಚಿಂಚೂ ಮಾಹಿತಿಯನ್ನು ಪತ್ತೆಹಚ್ಚಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಕೇವಲ ಮೂರುವರೆ ಲಕ್ಷ ಮತದಾರರಿರುವ ಮಹದೇವಪುರ ಕ್ಷೇತ್ರದಲ್ಲಿ 1ಲಕ್ಷದ 250 ಮತಗಳನ್ನು ಅಕ್ರಮವಾಗಿ ಪಡೆದುಕೊಂಡು ಚುನಾವಣೆಯಲ್ಲಿ ಜಯಿಸಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 5 ರೀತಿಯಲ್ಲಿ ಚುನಾವಣಾ ಅಕ್ರಮ ಎಸಗಲಾಗಿದೆ” ಎಂದು ವಿವರಣೆ ನೀಡಿದ್ದಾರೆ.

“ಒಟ್ಟು 11,965 ಮಂದಿ ನಕಲಿ ಮತದಾರರು ಈ ಕ್ಷೇತ್ರದಲ್ಲಿ ಮತಚಲಾವಣೆ ಮಾಡಿದ್ದಾರೆ. ಒಬ್ಬನೇ ಮತದಾರ ನಾಲ್ಕಾರು ಮತಗಟ್ಟೆಗಳಲ್ಲಿ ಮತ ಚಲಾಯಿಸಿರುವುದು, ಒಬ್ಬನೇ ಮತದಾರ ಈ ಕ್ಷೇತ್ರದ ಜೊತೆ ರಾಜ್ಯದ ವಿವಿಧ ಭಾಗಗಳಲ್ಲಿ ಮತ್ತು ಹೊರರಾಜ್ಯಗಳಲ್ಲಿ ಕೂಡ ಮತ ಚಲಾವಣೆ ಮಾಡಿರುವುದು. ಹೀಗೆ ಮತದಾನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಳ್ಳಲಾಗಿದೆ” ಎಂದು ಆರೋಪಿಸಿದ್ದಾರೆ.

“ಒಟ್ಟು 40,009 ಮಂದಿ ನಕಲಿ ವಿಳಾಸ ಹೊಂದಿರುವ ಮತದಾರರನ್ನು ಈ ಕ್ಷೇತ್ರದಲ್ಲಿ ಪತ್ತೆ ಮಾಡಲಾಗಿದೆ. ಮನೆಯ ನಂಬರ್‌ ‘0’ ಎಂದು ನಮೂದಾಗಿರುವ ಸಾವಿರಾರು ವಿಳಾಸವೇ ಇಲ್ಲದ ಮತದಾರರು, ತಂದೆ ಮತ್ತು ಪತಿಯ ಹೆಸರು ಇರುವ ಜಾಗದಲ್ಲಿ ಅರ್ಥವೇ ಇಲ್ಲದಂತೆ ಮನಸೋಇಚ್ಛೆ ಇಂಗ್ಲೀಷ್‌ ಅಕ್ಷರಗಳನ್ನು ನಮೂದಿಸಿರುವುದು ಮತ್ತು ಅಸ್ತಿತ್ವದಲ್ಲಿ ಇಲ್ಲದ ವಿಳಾಸಗಳನ್ನು ನೀಡಿರುವುದು. ಹೀಗೆ ನಕಲಿ ವಿಳಾಸ ನೀಡಿ ಮತಗಳ್ಳತನ ನಡೆಸಲಾಗಿದೆ” ಎಂದು ಗಂಭೀರ ಲೋಪಗಳ ಬಗ್ಗೆ ಅವರು ಮಾತನಾಡಿದ್ದಾರೆ.

“ಒಟ್ಟು 10,452 ಮಂದಿ ಮತದಾರರು ಎಲ್ಲರೂ ಒಟ್ಟಿಗೆ ಬೆರಳೆಣಿಕೆಯಷ್ಟು ಸಂಖ್ಯೆಯ ವಿಳಾಸದಲ್ಲಿ ವಾಸಿಸುತ್ತಿದ್ದಾರೆ ಎಂಬುದನ್ನು ಪತ್ತೆ ಮಾಡಲಾಗಿದೆ. ಸಿಂಗಲ್‌ ಬೆಡ್‌ ರೂಂ ಮನೆಯ ವಿಳಾಸ ನೀಡಿ 80 ಜನ ಮತದಾರರ ಗುರುತಿನ ಚೀಟಿ ಪಡೆದಿದ್ದಾರೆ. 68 ಮಂದಿ ಮತದಾರರ ಗುರುತಿನ ಚೀಟಿಯಲ್ಲಿ ಒಂದು ಖಾಸಗಿ ಕ್ಲಬ್‌ ನ ವಿಳಾಸವಿದೆ. ಈ ಬಗ್ಗೆ ಅಲ್ಲಿ ವಿಚಾರಣೆ ನಡೆಸಿದಾಗ ಗುರುತಿನ ಚೀಟಿ ಹೊಂದಿರುವ ಯಾರೊಬ್ಬರೂ ಅಲ್ಲಿ ವಾಸವಿಲ್ಲ ಎಂಬುದನ್ನು ದೃಢಪಡಿಸಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

“ಒಟ್ಟು ಈ ಕ್ಷೇತ್ರದಲ್ಲಿ 4,132 ಮಂದಿಯ ಗುರುತಿನ ಚೀಟಿಯಲ್ಲಿ ಫೋಟೋಗಳೇ ಲಭ್ಯವಿಲ್ಲ ಅಥವಾ ಫೋಟೋಗಳನ್ನು ಗುರುತಿಸಲು ಸಾಧ್ಯವಾಗದಂತೆ ಅತ್ಯಂತ ಚಿಕ್ಕದಾಗಿ ನಮೂದಿಸಲಾಗಿದೆ. ಅಂದರೆ ಗುರುತೇ ಹಿಡಿಯಲಾಗದವರು ಕೂಡ ಮತದಾನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ” ಎಂದಿದ್ದಾರೆ.

“ಈ ಕ್ಷೇತ್ರದಲ್ಲಿ ಮೊದಲ ಬಾರಿಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡ 33,692 ಮಂದಿಯ ವಯಸ್ಸು 60 ರಿಂದ 90 ವರ್ಷಕ್ಕೂ ಮೇಲ್ಪಟ್ಟಿದೆ. ಹೊಸ ಅಥವಾ ಯುವ ಮತದಾರರು ನರೇಂದ್ರ ಮೋದಿಗೆ ಮತ ನೀಡುತ್ತಾರೆ ಎಂಬ ಮಾತನ್ನು ಆಗಾಗ್ಗೆ ಬಿಜೆಪಿಯವರೇ ಹೇಳುತ್ತಿರುತ್ತಾರೆ. ವಾಸ್ತವದಲ್ಲಿ 98 ವರ್ಷ, 89 ವರ್ಷದ ವಯೋವೃದ್ಧರು ಮೊದಲ ಬಾರಿಗೆ ಚುನಾವಣೆಯಲ್ಲಿ ಮತದಾನ ಮಾಡಿರುವುದು ಈ ಹಗರಣದ ಆಳ, ಅಗಲವನ್ನು ತೋರಿಸುತ್ತದೆ” ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

“ರಾಹುಲ್‌ ಗಾಂಧಿ ಅವರು ಕೇಳಿದ ಮತದಾರರ ಎಲೆಕ್ಟ್ರಾನಿಕ್ ಮಾಹಿತಿ ಮತ್ತು ಸಿಸಿ ಟಿವಿ ದಾಖಲೆಗಳನ್ನು ನೀಡಿ ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ನಡೆದುಕೊಂಡಿದ್ದರೆ ಈ ಹಗರಣವನ್ನು ಚುನಾವಣೆ ನಡೆದ ಕೆಲವೇ ದಿನಗಳಲ್ಲಿ ಬಹಿರಂಗ ಪಡಿಸಲು ಸಾಧ್ಯವಿತ್ತು. ಮಾಹಿತಿ ಮುಚ್ಚಿಡುವ ಏಕೈಕ ಉದ್ದೇಶದೊಂದಿಗೆ ಚುನಾವಣಾ ಆಯೋಗವು ತನ್ನ ನಿಯಮಗಳನ್ನು ಮನಸ್ಸಿಗೆ ಬಂದಂತೆ ತಿದ್ದುಪಡಿ ಮಾಡಿಕೊಂಡಿದೆ. ಇದು ಮಹದೇವಪುರ ಕ್ಷೇತ್ರಕ್ಕೆ ಸೀಮಿತವಾದ ಹಗರಣವಲ್ಲ, ಇಡೀ ದೇಶದಲ್ಲೇ ಇದೇ ಮಾದರಿಯ ಮತಗಳ್ಳತನ ಮಾಡಿ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ ಎನ್ನುವುದರಲ್ಲಿ ಯಾವ ಅನುಮಾನವೂ ಉಳಿದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮಹದೇವಪುರ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ್ಳತನ: ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಆರೋಪಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...