Homeಮುಖಪುಟವಾರಣಾಸಿ ಜನರ ವಿಶ್ವಾಸ ಕಳೆದುಕೊಳ್ಳುತ್ತಿರುವ ಮೋದಿ: ಕ್ಷೇತ್ರದಲ್ಲಿನ ಈ ಬಾರಿಯ ಫಲಿತಾಂಶ ಏನು ಹೇಳುತ್ತದೆ?

ವಾರಣಾಸಿ ಜನರ ವಿಶ್ವಾಸ ಕಳೆದುಕೊಳ್ಳುತ್ತಿರುವ ಮೋದಿ: ಕ್ಷೇತ್ರದಲ್ಲಿನ ಈ ಬಾರಿಯ ಫಲಿತಾಂಶ ಏನು ಹೇಳುತ್ತದೆ?

- Advertisement -
- Advertisement -

2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅವರನ್ನು 1,52,513ಕ್ಕೂ ಹೆಚ್ಚು ಮತಗಳಿಂದ ಸೋಲಿಸುವ ಮೂಲಕ ಸತತ ಮೂರನೇ ಅವಧಿಗೆ ಗೆಲುವನ್ನು ಕಂಡುಕೊಂಡಿದ್ದಾರೆ. ಕಳೆದ ಎರಡು ಅವಧಿಯ ಲೋಕಸಭೆ ಚುನಾವಣೆಯ ಫಲಿತಾಂಶವನ್ನು ಗಮನಿಸಿದರೆ ಈ ಬಾರಿ ವಾರಣಾಸಿಯಲ್ಲಿ ಮೋದಿ ಗೆಲುವಿನ ಅಂತರ ಗಣನೀಯವಾಗಿ ಕಡಿಮೆಯಾಗಿರುವುದು ಕಂಡು ಬಂದಿದೆ.

ಲೋಕಸಭೆ ಚುನಾವಣೆಯ ಒಟ್ಟಾರೆ ಫಲಿತಾಂಶದಲ್ಲಿ ಈ ಬಾರಿ ಮೋದಿ ನೇತೃತ್ವದಲ್ಲಿ ಬಿಜೆಪಿ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಇದು ಜಾಗತಿಕ ನಾಯಕ ಎಂದು ಬಿಜೆಪಿ ನಾಯಕರಿಂದ ಕರೆಸಿಕೊಂಡಿರುವ, ತಾನು ಜೈವಿಕ ಅಲ್ಲ, ದೇವರು ನನ್ನನ್ನು ಕಳುಹಿಸಿದ್ದಾರೆ ಎಂದು ಸ್ವಯಂ ಹೇಳಿಕೊಂಡಿರುವ ಮೋದಿಗೆ ದೊಡ್ಡ ಹಿನ್ನಡೆಯಾಗಿದೆ. ತಾನೊಬ್ಬ ಪ್ರಶ್ನಾತೀತ ನಾಯಕ ಎಂದು ಅಂದುಕೊಂಡಿರುವ ಮೋದಿಗೆ ಬೆವರಿಳಿಸುವಂತೆ ಮಾಡಿದೆ.

ವಾರಣಾಸಿ ಕ್ಷೇತ್ರದಲ್ಲಿ ಮತ ಎಣಿಕೆಯ ಪ್ರಕ್ರಿಯೆಯನ್ನು ಗಮನಿಸಿದರೆ, ಕಾಂಗ್ರೆಸ್‌ ಅಭ್ಯರ್ಥ ಅಜಯ್‌ ರೈ ವಿರುದ್ಧ ಪೋಸ್ಟಲ್ ಮತ ಎಣಿಕೆ ವೇಳೆ ಮೋದಿ 6,223 ಮತಗಳಿಂದ ಹಿನ್ನಡೆಯನ್ನು ಸಾಧಿಸಿದ್ದರು. ದೇಶದ ಪ್ರಧಾನಿಯೋರ್ವರು ಸಾಮಾನ್ಯ ಅಭ್ಯರ್ಥಿಯ ವಿರುದ್ಧ ಹಿನ್ನಡೆಯನ್ನು ಸಾಧಿಸಿರುವುದು ವಿಶೇಷವೇ ಆಗಿದೆ.

ಪ್ರಧಾನಿ ಮೋದಿ ಅಂತಿಮವಾಗಿ 6,12,970 ಮತಗಳನ್ನು ಗಳಿಸಿದ್ದು, 4,60,457 ಮತಗಳನ್ನು ಅಜಯ್‌ ರೈ ಗಳಿಸಿದ್ದಾರೆ. ಈ ಬಾರಿ ಮೋದಿಯ ಗೆಲುವಿನ ಅಂತರ 1,52,513 ಆಗಿದ್ದು, ಇದು 2019 ಮತ್ತು 2014ರ ಗೆಲುವಿನ ಅಂತರಕ್ಕಿಂತ ಕಡಿಮೆಯಾಗಿದೆ.

2019ರಲ್ಲಿ ಮೋದಿ ಗೆಲುವಿನ ಅಂತರ 4,79,505 ಆಗಿತ್ತು. ಅವರು ಆ ಬಾರಿ ಸಮಾಜವಾದಿ ಪಕ್ಷದ ಶಾಲಿನಿ ಯಾದವ್ ಅವರನ್ನು ಸೋಲಿಸಿದರೆ, ಕಾಂಗ್ರೆಸ್‌ನ ಅಜಯ್ ರೈ  ಮೂರನೇ ಸ್ಥಾನದಲ್ಲಿದ್ದರು. 2014ರಲ್ಲಿ ಎಎಪಿಯ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದಾಗ ಮೋದಿ 3,71,784 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದರು. ಈ ಬಾರಿ ಪ್ರಧಾನಿ ಮೋದಿ ಗೆಲುವಿನ ಅಂತರ ದಾಖಲೆ ಸೃಷ್ಟಿಸಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರು. ಆದರೆ ನಿರೀಕ್ಷೆ ಹುಸಿಯಾಗಿದ್ದು, 2014ರ ಲೋಕಸಭೆ ಚುನಾವಣೆಯಲ್ಲಿ ಮೋದಿಯ ಗೆಲುವಿನ ಅಂತರ ಕುಗ್ಗಿದೆ.

ಇದನ್ನು ಓದಿ: ಮಣಿಪುರದ ಬಗ್ಗೆ ನಿರ್ಲಕ್ಷ್ಯಕ್ಕೆ ಬೆಲೆತೆತ್ತ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...