Homeಮುಖಪುಟ'ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ' ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್: ದಾಖಲೆಯ 60 ಲಕ್ಷ...

‘ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ’ ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್: ದಾಖಲೆಯ 60 ಲಕ್ಷ ಟ್ವೀಟ್‌ಗಳು!

- Advertisement -
- Advertisement -

ಭಾರತದಾದ್ಯಂತ ಯುವಜನರು ನಿರುದ್ಯೋಗದ ವಿರುದ್ಧ ಸಿಡಿದೆದ್ದಿದ್ದು, ಉದ್ಯೋಗಕ್ಕಾಗಿ ದನಿಯೆತ್ತಿದ್ದಾರೆ. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಟ್ವಿಟರ್ ದಾಳಿ ನಡೆಸಿರುವ ಯುವಜನತೆ ಉದ್ಯೋಗ ಕೊಡಿ ಎಂದು ತಾಕೀತು ಮಾಡುತ್ತಿದ್ದಾರೆ.

#modi_job_do, #modi_rojgar_do, ಉದ್ಯೋಗ ಕೊಡಿ ಮೋದಿ ಎಂಬ ಹ್ಯಾಷ್‌ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಸದ್ದು ಮಾಡಿವೆ. ದಾಖಲೆಯ 60 ಲಕ್ಷ ಟ್ವೀಟ್‌ಗಳು ಪ್ರಸಾರವಾಗುವುದರೊಂದಿಗೆ ಭಾರತದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಟ್ರೆಂಡ್ ಆದರೆ, ಪ್ರಪಂಚದಾದ್ಯಂತ ಎರಡನೇ ಸ್ಥಾನದಲ್ಲಿ ಟ್ರೆಂಡ್ ಆಗುವ ಮೂಲಕ ದಾಖಲೆ ಸೃಷ್ಟಿಸಿವೆ.

ಎಸ್‌ಎಸ್‌ಸಿ ಪರೀಕ್ಷೆಯನ್ನು ಸಮಯಕ್ಕೆ ಸರಿಯಾಗಿ ಪಾರದರ್ಶಕವಾಗಿ ನಡೆಸಬೇಕು ಮತ್ತು ಯುವಜನರಿಗೆ ಉದ್ಯೋಗ ಕಲ್ಪಿಸಬೇಕು ಎಂಬ ಹಿನ್ನೆಲೆಯಲ್ಲಿ ಈ ಟ್ವಿಟರ್ ಟ್ರೆಂಡ್ ಆರಂಭವಾಗಿದೆ.

ನರೇಂದ್ರ ಮೋದಿಯವರು 2014ರಲ್ಲಿ ಪ್ರಧಾನಿಯಾಗುವ ಮೊದಲು ವರ್ಷಕ್ಕೆ ಒಂದು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಆದರೆ ಅವರು ಪ್ರಧಾನಿಯಾದ ನಂತರ ಉದ್ಯೋಗ ಸೃಷ್ಟಿಯಾಗುವುದು ಇರಲಿ, ಇರುವ ಉದ್ಯೋಗಗಳೇ ಕಾಣೆಯಾಗುತ್ತಿವೆ. ಹಲವು ಸರ್ಕಾರೀ ಸಂಸ್ಥೆಗಳು ಖಾಸಗಿಯವರ ಪಾಲಾಗುತ್ತಾ ಬೃಹತ್ ಉದ್ಯೋಗ ನಷ್ಟ ಸಂಭವಿಸುತ್ತಿದ್ದು, ಇದಕ್ಕೆ ಮೋದಿಯವರ ಕೆಟ್ಟ ನೀತಿಗಳೇ ಕಾರಣ ಎಂದು ಯುವಜನರು ದೂರಿದ್ದಾರೆ.

ಈ 45 ವರ್ಷಗಳಲ್ಲೆ ಕಂಡು ಕೇಳರಿಯದಂತಹ ನಿರುದ್ಯೋಗ ಭಾರತದಲ್ಲಿ ಇಂದು ತಲೆಎತ್ತಿದೆ. ಈ ಕುರಿತು ಗಂಭೀರವಾಗಿ ಯೋಚಿಸಬೇಕಾದ ಮೋದಿಯವರು ಖಾಸಗಿಯವರನ್ನು ಉತ್ತೇಜಿಸುವ ಮಾತುಗಳನ್ನಾಡುತ್ತಿದ್ದಾರೆ. ಅಲ್ಲದೇ ಕೆಲಸಕ್ಕೆ ಬಾರದ ಚರ್ಚೆಯಲ್ಲಿ ಮುಳುಗಿದ್ದಾರೆ ಎಂದು ಯುವಜನರು ಕಿಡಿಕಾರಿದ್ದಾರೆ.

ಮೋದಿ ಸರ್ಕಾರ ನಮ್ಮ ರಾಷ್ಟ್ರದ ಆರ್ಥಿಕ ಬೆಳವಣಿಗೆಯನ್ನು ನಾಶಪಡಿಸಿದೆ. ಲಕ್ಷಾಂತರ ಯುವಜನರು ನಿರುದ್ಯೋಗಿಗಳಾಗಿದ್ದಾರೆ. ಮೋದಿಯವರು 2 ಕೋಟಿ ಉದ್ಯೋಗಗಳ ಭರವಸೆ ನೀಡಿದ್ದರು. ಆದರೆ ಉದ್ಯೋಗಗಳು ಎಲ್ಲಿವೆ? ಎಂದು ಮಹಮ್ಮದ್ ಕಬೀರ್ ಅಹ್ಮದ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ವರ್ಷಕ್ಕೆ ಕೋಟಿ ಉದ್ಯೋಗಗಳು ಇಲ್ಲ,
15 ಲಕ್ಷ ಇಲ್ಲ,
100 ಸ್ಮಾರ್ಟ್ ಸಿಟೀಸ್ ಇಲ್ಲ,
ಬುಲೆಟ್ ರೈಲು ಇಲ್ಲ,
ರೈತರ ಆದಾಯ ಡಬಲ್ ಇಲ್ಲ,
ಭಯೋತ್ಪಾದನೆಯನ್ನು ತೆಗೆದುಹಾಕುವುದು ಇಲ್ಲ,
ಆದರೆ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಮಾತ್ರ ಆಗಿದೆ ಎಂದು ಗೌರವ್ ಪಾಂಡಿ ವ್ಯಂಗ್ಯವಾಡಿದ್ದಾರೆ.

ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಉದ್ಯೋಗಬೇಕು, ಕೌಶಲ್ಯಬೇಕು ಎಂದು ಆಗ್ರಹಿಸಿ ಟ್ವೀಟ್ ಮಾಡಿರುವುದನ್ನು ನೆನಪಿಸಿರುವ ಯುವಜನರು ಹೀಗೇಕೆ ಉದ್ಯೋಗ ಕೊಡುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿ: ಬಿಹಾರ: 19 ಲಕ್ಷ ಉದ್ಯೋಗ ನೀಡದಿದ್ದರೆ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ – ತೇಜಸ್ವಿ ಯಾದವ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Petrol tax decrease immidiatly and also collected tax amt utilize the honestly and important public require ments. Present situation regarding vehicle on different taxes(lifetax, insurence, toll tax , tragic taxes vehicle loan and intrest), fines, is very irritate the common and middle classes, govt concentrate to common rule to vip and common publics.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...