Homeಮುಖಪುಟಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? - ಇಲ್ಲಿದೆ ಡೀಟೈಲ್ಸ್

ಸಂಪುಟ ಪುನರ್‌ರಚನೆ: ಯಾರಿಗೆ ಯಾವ ಖಾತೆ? – ಇಲ್ಲಿದೆ ಡೀಟೈಲ್ಸ್

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅಧಿಕಾರಕ್ಕೆ ಬಂದ ಎರಡು ವರ್ಷಗಳ ಬಳಿಕ ಸಂಪುಟ ಪುನರ್ರಚನೆ ಪೂರ್ಣಗೊಳಿಸಿದೆ. ಕ್ಯಾಬಿನೆಟ್ ಮಂತ್ರಿಗಳ ಸಂಖ್ಯೆಯನ್ನು 21 ರಿಂದ 30 ಕ್ಕೆ ಮತ್ತು ಕಿರಿಯ ಮಂತ್ರಿಗಳ ಸಂಖ್ಯೆಯನ್ನು 23 ರಿಂದ 45 ಕ್ಕೆ ಹೆಚ್ಚಿಸಿದೆ. ನಲವತ್ತನಾಲ್ಕು ಸಚಿವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರಲ್ಲಿ ಹದಿನೈದು ಮಂದಿ ಕೇಂದ್ರ ಸಚಿವ ಸಂಪುಟದ ಭಾಗವಾದರು. ಅವರಲ್ಲಿ ಯಾರಿಗೆ ಯಾವ ಸ್ಥಾನ ನೀಡಿದೆ ಎಂಬ ವಿವರ ಇಲ್ಲಿದೆ.

ಕೋವಿಡ್ ಎದುರಿಸುವಲ್ಲಿ ವಿಫಲರಾದರು ಎಂಬ ಹಣೆಪಟ್ಟೆ ಹೊತ್ತಿದ್ದ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಸ್ಥಾನವನ್ನು ಇನ್ನುಮುಂದೆ ಮನ್ಸುಖ್ ಮಾಂಡವಿಯಾ ತುಂಬಲಿದ್ದಾರೆ. ಅವರ ಕಿರಿಯ ಸಚಿವರರಾಗಿ ಡಾ.ಭಾರತಿ ಪವಾರ್ ಇರಲಿದ್ದಾರೆ. ಇದಲ್ಲದೆ, ಮನ್ಸುಖ್ ರಾಸಾಯನಿಕ ರಸಗೊಬ್ಬರಗಳ ಸಚಿವಾಲಯವನ್ನು ಉಳಿಸಿಕೊಂಡಿದ್ದಾರೆ.

ಒಡಿಶಾದ ರಾಜ್ಯಸಭಾ ಸಂಸದ ಅಶ್ವಿನಿ ವೈಷ್ಣವ್ ಅವರಿಗೆ ರೈಲ್ವೆ ಮತ್ತು ಐಟಿ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ.

ಕಾನೂನು ಮತ್ತು ನ್ಯಾಯ ಸಚಿವಾಲಯವು ಕಾನೂನು ಪದವೀಧರರಾದ ಕಿರೆನ್ ರಿಜಿಜು ಅವರ ಪಾಲಾಗಿದೆ.

ಜ್ಯೋತಿರಾಧಿತ್ಯ ಸಿಂಧಿಯಾ – ನಾಗರಿಕ ವಿಮಾನಯಾನ ಸಚಿವಾಲಯ. (ಈ ಹಿಂದೆ ಇದನ್ನು ಅವರ ತಂದೆ ಮಾಧವ ಸಿಂಧಿಯಾ ನಿರ್ವಹಿಸಿದ್ದರು)

ಮೊದಲ ಬಾರಿಗೆ ಪ್ರಧಾನಿ ಮೋದಿ ಅವರ ಸರ್ಕಾರಕ್ಕೆ ಸೇರ್ಪಡೆಗೊಂಡ ನಿತೀಶ್ ಕುಮಾರ್ ಅವರ ಜೆಡಿಯುನ ರಾಮಚಂದ್ರ ಪ್ರಸಾದ್ ಸಿಂಗ್ ಅವರಿಗೆ ಉಕ್ಕಿನ ಖಾತೆ ನೀಡಲಾಗಿದೆ.

ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಕಿರಿಯ ಸಚಿವರಾಗಿದ್ದ ಅನುರಾಗ್ ಸಿಂಗ್ ಠಾಕೂರ್ ಅವರಿಗೆ ಸದ್ಯ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ. ಹೆಚ್ಚುವರಿಯಾಗಿ, ಅವರು ಯುವಜನ ಮತ್ತು ಕ್ರೀಡೆ ಖಾತೆ ನಿರ್ವಹಿಸುತ್ತಾರೆ.

ಮೊದಲ ಎನ್‌ಡಿಎ ಸರ್ಕಾರದಲ್ಲಿ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವಾಲಯವನ್ನು ನಿರ್ವಹಿಸಿದ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರಿಗೆ ಬಂದರು, ಹಡಗು ಮತ್ತು ಜಲಮಾರ್ಗಗಳ ಖಾತೆಯ ಉಸ್ತುವಾರಿ ವಹಿಸಲಾಗಿದೆ. ಜೊತೆಗೆ ಆಯುಷ್ ಸಚಿವಾಲಯವನ್ನೂ ಅವರು ನಿರ್ವಹಿಸಲಿದ್ದಾರೆ.

ರಮೇಶ್ ಪೋಖ್ರಿಯಲ್ ನಿಶಾಂಕ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಶಿಕ್ಷಣ ಸಚಿವಾಲಯವು ಧರ್ಮಮೇಂದ್ರ ಪ್ರಧಾನ್ ಅವರ ಪಾಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಗೃಹ ಇಲಾಖೆಯ ಜೊತೆಗೆ ಹೊಸದಾಗಿ ರಚಿಸಿದ ಸಹಕಾರ ಸಚಿವಾಲಯದ ಉಸ್ತುವಾರಿಯನ್ನು ಪಡೆದಿದ್ದಾರೆ.

ಮೀನಾಕ್ಷಿ ಲೇಖಿ – ವಿದೇಶಾಂಗ ಮತ್ತು ಸಂಸ್ಕೃತಿ ಸಚಿವಾಲಯದ ರಾಜ್ಯ ಸಚಿವರು.

ಪಾರ್ಶೋತ್ತಮ್ ರೂಪಾಲ – ಪಶು ಸಂಗೋಪನೆ ಮತ್ತು ಮೀನುಗಾರಿಕೆ

ಹರ್ದೀಪ್ ಸಿಂಗ್ ಪುರಿ – ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವರಾಗಲಿದ್ದಾರೆ.

ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷದಲ್ಲಿ ಬಂಡಾಯವೆದ್ದ ಗುಂಪಿನ ನೇತೃತ್ವ ವಹಿಸಿರುವ ಪಶುಪತಿ ಪರಾಸ್ ಅವರಿಗೆ ಆಹಾರ ಸಂಸ್ಕರಣಾ ಖಾತೆ ನೀಡಲಾಗಿದೆ.

ಭೂಪೇಂದರ್ ಯಾದವ್ – ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ.

ಜಿ ಕಿಶನ್ ರೆಡ್ಡಿ – ಈಶಾನ್ಯ ವಲಯದ ಸಂಸ್ಕೃತಿ, ಪ್ರವಾಸೋದ್ಯಮ ಮತ್ತು ಅಭಿವೃದ್ಧಿ ಖಾತೆ ನಿರ್ವಹಿಸಲಿದ್ದಾರೆ.

ಕರ್ನಾಟಕ

ಶೋಭಾ ಕರದ್ಲಾಂಜೆಗೆ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ, ಎ.ನಾರಾಯಣ ಸ್ವಾಮಿ ಅವರಿಗೆ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ, ರಾಜೀವ್ ಚಂದ್ರಶೇಖರ್ ಅವರಿಗೆ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಹಾಗೂ ಭಗವಂತ ಖೂಬಾ ಅವರಿಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ನೀಡಲಾಗಿದೆ.

ರವಿಶಂಕರ್ ಪ್ರಸಾದ್, ಡಾ.ಹರ್ಷವರ್ಧನ್ ಮತ್ತು ಪ್ರಕಾಶ್ ಜಾವಡೇಕರ್ ಸೇರಿ 12 ಮಂತ್ರಿಗಳು ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಅವರೆಲ್ಲರೂ ಮೊದಲು ಅವರು ಪ್ರಧಾನಮಂತ್ರಿಯ ಪ್ರಮುಖ ತಂಡದಲ್ಲಿದ್ದರು. ಅವರೇ ರಾಜೀನಾಮೆ ನೀಡಿರುವುದು ದೊಡ್ಡ ಟೀಕೆಗೆ ಕಾರಣವಾಗಿದೆ. ಯಶಸ್ಸಿನ ಕೀರ್ತಿ ಮೋದಿಗೆ ಸಲ್ಲುತ್ತದೆ. ವಿಫಲತೆಯ ಪರಿಣಾಮವನ್ನು ಮಾತ್ರ ಮಂತ್ರಿಗಳು ಅನುಭವಿಸಬೇಕೆ ಎಂಬ ಆರೋಪ ಕೇಳಿಬಂದಿದೆ.


ಇದನ್ನೂ ಓದಿ: ಕರ್ನಾಟಕದ ನಾಲ್ವರಿಗೆ ಮೋದಿ ಸಂಪುಟದಲ್ಲಿ ಸ್ಥಾನ: ಡೀಟೈಲ್ಸ್ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...