Homeಕರ್ನಾಟಕಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

ಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

- Advertisement -
- Advertisement -

ನಿನ್ನೆ ಮತ್ತು ಇಂದ ಕರ್ನಾಟಕಕ್ಕೆ ಬಂದ ಪ್ರಧಾನಿ ಮೋದಿಯವರು ಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮೋದಿಯವರು ಪ್ರವಾಹ ಪರಿಹಾರಕ್ಕೆ ಹಣ ಘೋಷಣೆ ಮಾಡುತ್ತಾರೆ ಎಂದು ನಿರೀಕ್ಷೆ ಇತ್ತು. ಆದರೆ ಅವರು ಅದರ ಬಗ್ಗೆ ಪರೀಶೀಲನೆ ಮಾಡುತ್ತೇನೆ ಎಂದೂ ಸಹ ಹೇಳಲಿಲ್ಲ. ಇದರಿಂದ ಕರ್ನಾಟಕದ ಬಗ್ಗೆ ಅವರಿಗಿರುವ ಅಸಡ್ಡೆ, ನಿರ್ಲಕ್ಷ್ಯ ಎಷ್ಟು ಎಂಬುದು ಅರಿವಾಗಲಿದೆ. ಅವರ ನಡವಳಿಕೆಯಿಂದ ಸ್ಪಷ್ಟವಾಗಿ ಗೊತ್ತಾಗಲಿದೆ ಎಂದು ಕಿಡಿಕಾರಿದ್ದಾರೆ.

ಪ್ರವಾಹ ಪೀಡಿತರಿಗೆ ಪರಿಹಾರ ಕೊಡಲು ನಮ್ಮ ಬಳಿ ಹಣವಿಲ್ಲ, ದಯವಿಟ್ಟು ಕೇಂದ್ರದಿಂದ ಹಣ ಕೊಡಿ ಮುಖ್ಯಮಂತ್ರಿ ಯಡಿಯೂರಪ್ಪನವರು ಗೋಗೆರೆಯುತ್ತಿದ್ದಾರೆ. ಆದರೂ ಮೋದಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆಗೆ ಮೊದಲು ಕರ್ನಾಟಕದ ಬಿಜೆಪಿಯ 28 ಬಿಜೆಪಿ ಅಭ್ಯರ್ಥಿಗಳು ನಮಗೆ ಓಟು ಕೊಡಬೇಡಿ, ನರೇಂದ್ರ ಮೋದಿಯವರಿಗೆ ಓಟು ಕೊಡಿ ಎಂದು ಕೇಳಿದ್ದರು. ರಾಜ್ಯದ ಜನ ನರೇಂದ್ರ ಮೋದಿಯವರ ಮುಖ ನೋಡಿ ಓಟು ಹಾಕಿಬಿಟ್ರು. ಆದರೆ ಇವತ್ತು ಮೋದಿ ಕರ್ನಾಟಕ್ಕೆ ದೊಡ್ಡ ದ್ರೋಹ ಮಾಡಿದ್ದಾರೆ ಎಂದು ಸಿದ್ದು ಆರೋಪಿಸಿದ್ದಾರೆ.

ನಾನು ಇದನ್ನು ಹೇಳಿದರೆ ಬಿಜೆಪಿಯವರಿಗೆ ಕೋಪ ಬರುತ್ತದೆ. ಆದರೆ ಮೋದಿಯವರು ಶಾಲಾಮಕ್ಕಳ ಜೊತೆಗೆ ಏನು ಮಾತಾಡಬೇಕು? ವಿದ್ಯಾಭ್ಯಾಸ, ಅವರ ಭವಿಷ್ಯದ ಬಗ್ಗೆ ಮಾತಾಡಬೇಕು. ಅಲ್ಲಿ ಹೋಗಿ ರಾಜಕೀಯ ಭಾಷಣ ಮಾಡಿದರೆ ಹೇಗೆ? ಸಿಎಎ, ಎನ್‌ಆರ್‌ಸಿ ಬಗ್ಗೆ ಮಾತಾಡುವುದು ಎಷ್ಟು ಔಚಿತ್ಯ, ಸಮರ್ಪಕ? ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ನವರು ಮತ್ತು ಮಿತ್ರಪಕ್ಷಗಳು ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಮಾತಾಡಿ ಎಂದು ಮೋದಿ ಹೇಳಿದ್ದಾರೆ. ಪಾಕಿಸ್ತಾನ ಒಂದು ದುಷ್ಟ ರಾಷ್ಟ್ರ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಅಲ್ಲಿ ಅವರು ಅಲ್ಪಸಂಖ್ಯಾತರರಿಗೆ ತೊಂದರೆ ಕೊಡುತ್ತಿದ್ದಾರೆ ಸರಿ. ಆದರೆ ಭಾರತದಲ್ಲಿರುವ ಅಲ್ಪಸಂಖ್ಯಾತರರ ಮೇಲೆ ನೀವು ಏನು ಮಾಡುತ್ತಿದ್ದೀರಿ ನರೇಂದ್ರ ಮೋದಿಯವರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಂವಿಧಾನದ ವಿರುದ್ಧವಾಗಿ ಸಿಎಎ ಕಾನೂನು ಮಾಡುವುದು ಸರಿಯೇ? ದೇಶವನ್ನು ಧರ್ಮದ ಆಧಾರದಲ್ಲಿ ವಿಭಜನೆ ಮಾಡುವುದು ಸರಿಯೇ? ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಬಹುದೆ? ಎಂದ ಅವರು, ಒಬ್ಬ ಪ್ರಧಾನ ಮಂತ್ರಿಯಾಗಿ ಮೋದಿ ಭಾಷಣದಲ್ಲಿ ಶೂರರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಅವರು ವಿದ್ಯಾರ್ಥಿಗಳ ಮುಂದೆಯೂ, ಸಾರ್ವಜನಿಕರ ಮುಂದೆಯೂ, ರೈತರ ಬಗ್ಗೆಯೂ ಅದೇ ಭಾಷಣ ಮಾಡಿದರೆ ಅದು ಸಲ್ಲದು ಎಂದಿದ್ದಾರೆ.

ನೀವು ದೇಶದ ಸಮಸ್ಯೆಗಳ ಬಗ್ಗೆ ಮಾತಾಡಬೇಕು. ಆರ್ಥಿಕ ಪರಿಸ್ಥಿತಿ ಏನಾಗಿದೆ, ನೀವು ಕೊಟ್ಟ ಭರವಸೆಗಳು ಏನಾಗಿವೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳ ಸೃಷ್ಟಿ ಏನಾಯಿತು, ರೈತರ ಆದಾಯ ದುಪ್ಪಟ್ಟು ಮಾಡುವುದು ಏನಾಯ್ತು? 2020ಕ್ಕೆ ರೈತರ ಆದಾಯ ದುಪ್ಪಟ್ಟು ಆಗಿದೆಯೇ? ಇದಕ್ಕೆ ಉತ್ತರಕೊಡಿ. ರೈತರ ಸಂಕಷ್ಟ ದುಪ್ಪಟ್ಟು ಆಗಿದೆಯೇ ಹೊರತು ಆದಾಯವಲ್ಲ. ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಮುಂದುವರೆದಿದೆ. ರೈತರ ಸಾಲಾಮನ್ನ ಆಗಿಲ್ಲ. ಮಹಾದಾಯಿ ವಿವಾದ ಬಗೆಹರಿದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ, ಜಾವಡೇಕರ್‌ ಸಹ ಸುಳ್ಳು ಹೇಳುತ್ತಾರೆ. ಅವರು ಬಾಯಿ ಬಿಟ್ಟರೆ ಬರೀ ಸುಳ್ಳು.. ಮೋದಿಯವರು ಕೊಟ್ಟ 90% ಭರವಸೆಗಳನ್ನು ಈಡೇರಿಸಿಲ್ಲ. ಕರ್ನಾಟಕಕ್ಕೆ ಬಂದಾಗಲೆಲ್ಲ ಸುಳ್ಳು ಹೇಳುತ್ತಾರೆ. ಸುಳ್ಳುಗಳಿಂದ ಸ್ವರ್ಗ ಸೃಷ್ಟಿ ಮಾಡಿಬಿಡುತ್ತಾರೆ. ಆದರೆ ನರೇಂದ್ರ ಮೋದಿಯವರ ಇಂತಹ ಮಾತುಗಲಿಂದ ಜನರ ಹೊಟ್ಟೆತುಂಬುವುದಿಲ್ಲ.. ನಿರುದ್ಯೋಗ ಬಗೆಹರಿಯುವುದಿಲ್ಲ ಅಲ್ಲವೇ ಎಂದಿದ್ದಾರೆ.

ಇಂದು ಜಿಡಿಪಿ ಅತ್ಯಂತ ತಳಮಟ್ಟಕ್ಕೆ ಹೋಗಿಬಿಟ್ಟಿದೆ. ಅವರು 4.5 ಇದೆ ಅನ್ನುತ್ತಿದ್ದಾರೆ. ಆದರೆ ನನ್ನ ಪ್ರಕಾರ ಅದು 2.5 ಅಷ್ಟೇ ಇರುವುದು. ಮನಮೋಹನ್‌ ಸಿಂಗ್‌ ಕಾಲದಲ್ಲಿ ಜಿಡಿಪಿ 8-9 ಇತ್ತು. ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಐದುವರೆ ವರ್ಷಗಳಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿಯತ್ತ ತೆಗೆದುಕೊಂಡು ಹೋಗಿದ್ದಾರೆ. ಜಿಎಸ್‌ಟಿ ಪರಿಹಾರ ಬಂದಿಲ್ಲ. ಕುಡಿಯುವ ನೀರಿನ ಹಣ ಬಂದಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...