Homeಕರ್ನಾಟಕಮೋದಿಯವರ 'ಮನ್‌ ಕಿ ಬಾತ್‌ನಲ್ಲಿ ದೇಶದ ಜನ ಇರೋದಿಲ್ಲ': ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮೋದಿಯವರ ‘ಮನ್‌ ಕಿ ಬಾತ್‌ನಲ್ಲಿ ದೇಶದ ಜನ ಇರೋದಿಲ್ಲ’: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್‌ ಕಿ ಬಾತ್‌ನಲ್ಲಿ ದೇಶದ ಜನ ಇರೋದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ”ನಾನು ನನ್ನ ಅನುಭವದಿಂದ ಹೇಳ್ತಾ ಇದ್ದೇನೆ. ಯಾವುದೇ ಉತ್ಪ್ರೇಕ್ಷೆ ಇಲ್ಲದೆ ಹೇಳುತ್ತೇನೆ. 2024 ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸೋಲುತ್ತದೆ. ಈ ಪ್ರಧಾನಿ ಮೋದಿ ಪಾರ್ಲಿಮೆಂಟ್‌ಗೆ ಸರಿಯಾಗಿ ಹೋಗಲ್ಲ, ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಲ್ಲ ಎಂದು ಟೀಕಿಸಿದ್ದಾರೆ.

”ಮೋದಿ ಅವರದ್ದು ಬರೀ ಮನ್ ಕಿ ಬಾತ್. ಆ ಬಾತ್ ನಲ್ಲೂ ದೇಶದ ಜನ ಇರೋದಿಲ್ಲ. ದೇಶದ ಜನ‌ ನೆಮ್ಮದಿಯಾಗಿ, ಸಂತೋಷದಿಂದ ಇದ್ದರೆ ಬಿಜೆಪಿಯ ನೆಮ್ಮದಿ ಹಾಳಾಗುತ್ತದೆ. ಹೊಟ್ಟೆಕಿಚ್ಚು ಹೆಚ್ಚಾಗುತ್ತದೆ. ಈಗ ನಾವು ಬಿಜೆಪಿ ಕಾಲದ ಎಲ್ಲಾ ಹಗರಣಗಳು, ಭ್ರಷ್ಟಾಚಾರದ ತನಿಖೆ ಆರಂಭಿಸಿದ್ದೇವೆ. ಸದ್ಯದಲ್ಲೇ ಬಿಜೆಪಿ ಬೇಳೆಕಾಳು ಹೊರಗೆ ಬರುತ್ತದೆ” ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

”ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶದ ಜನರ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭರವಸೆಯನ್ನು ಹೆಚ್ಚಿಸಿ ಸಂಚಲನ ಮೂಡಿಸಿದೆ. ಒಂದು ಕಡೆ RSS ಹಿಡನ್ ಅಜೆಂಡಾ ಜಾರಿಗೊಳಿಸುತ್ತಾ, ಮತ್ತೊಂದು ಕಡೆ ಬೆಲೆ ಏರಿಕೆ, ಹಣದುಬ್ಬರ, ಭ್ರಷ್ಟಾಚಾರ, ದುರಾಡಳಿತದಿಂದ ನಾಡಿನ, ದೇಶದ ಜನತೆಯನ್ನು ವಿಪರೀತ ಸಂಕಷ್ಟಕ್ಕೆ ಸಿಲುಕಿಸಿದ್ದರು. ನಾಡಿನ ಜನ ಈ ಎಲ್ಲಾ ದುಷ್ಟಾಚಾರವನ್ನು ಸಮರ್ಥವಾಗಿ ಧಿಕ್ಕರಿಸಿ ಸೋಲಿಸಿದ್ದಾರೆ” ಎಂದು ಬಿಜೆಪಿಯನ್ನು ಟೀಕಿಸಿದ್ದಾರೆ.

”ವಿಧಾನಸಭಾ ಚುನಾವಣೆ ಬಳಿಕ ನಮ್ಮ ಕಾರ್ಯಕರ್ತರು ರಿಲಾಕ್ಸ್ ಆಗಬಾರದು. ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗೆಲ್ತೀವಿ ಎಂದು ಹೈಕಮಾಂಡ್ ಗೆ ಭರವಸೆ ನೀಡಿದ್ದೀನಿ. ಇದಕ್ಕೂ ಹೆಚ್ಚು ಸೀಟು ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...