Homeಕರ್ನಾಟಕಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಆರ್‌ಎಸ್‌ಎಸ್‌ ಹೊಗಳಿರುವುದು ಸಂವಿಧಾನದ ಆಶಯಗಳಿಗೆ ಮಾಡಿರುವ ಅವಮಾನ: ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಆರ್‌ಎಸ್‌ಎಸ್‌ ಹೊಗಳಿರುವುದು ಸಂವಿಧಾನದ ಆಶಯಗಳಿಗೆ ಮಾಡಿರುವ ಅವಮಾನ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸ್ವಾತಂತ್ರ್ಯೋತ್ಸವದ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಆರ್‌ಎಸ್‌ಎಸ್‌ ಅನ್ನು ಹಾಡಿ ಹೊಗಳಿರುವುದು ಸ್ವಾತಂತ್ರ್ಯ ಹೋರಾಟ, ರಾಷ್ಟ್ರಧ‍್ವಜ ಮತ್ತು ಸಂವಿಧಾನದ ನಿಜ ಆಶಯಗಳಿಗೆ ಮಾಡಿರುವ ಅವಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೋದಿ ಭಾಷಣಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಸಿಎಂ, “ಸ್ವಾತಂತ್ರ್ಯಹೋರಾಟದಲ್ಲಿ ಎಂದೂ ಭಾಗವಹಿಸದೆ ಇದ್ದ ಮತ್ತು ಇತ್ತೀಚಿನವರೆಗೆ ನಮ್ಮ ಹೆಮ್ಮೆಯ ತ್ರಿವರ್ಣ ರಾಷ್ಟ್ರಧ್ವಜವನ್ನು ತಮ್ಮ ಕಚೇರಿಯಲ್ಲಿ ಆರೋಹಣ ಮಾಡಲು ನಿರಾಕರಿಸಿದ್ದ ಆರ್‌ಎಸ್‌ಎಸ್‌ಗೆ ಅಭಿನಂದನೆ ಸಲ್ಲಿಸುವ ಮೂಲಕ ಮೋದಿಯವರು ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪವಿತ್ರವಾದ ವೇದಿಕೆಯನ್ನು ತಮ್ಮ ಸ್ಥಾನದ ಮೂಲಕ ದುರುಪಯೋಗ ಮಾಡಿಕೊಂಡಿದ್ದಾರೆ ಎಂದಿದ್ದಾರೆ.

ಸ್ವತಂತ್ರ ಭಾರತದಲ್ಲಿ ಬಿಜೆಪಿ ಸೇರಿದಂತೆ ಯಾವ ಪಕ್ಷಗಳ ಪ್ರಧಾನ ಮಂತ್ರಿಯವರೂ ಈ ರೀತಿ ಸ್ವಾತಂತ್ರ್ಯೋತ್ಸವದ ವೇದಿಕೆಯನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿಲ್ಲ. ನರೇಂದ್ರ ಮೋದಿಯವರು ದೇಶದ ಜನ ಗೌರವಿಸುವ ಈ ವೇದಿಕೆಯ ಘನತೆ-ಗೌರವಗಳನ್ನು ಮಣ್ಣು ಪಾಲು ಮಾಡಿದ್ದಾರೆ ಎಂದು ಸಿಎಂ ಬೇಸರ ಹೊರ ಹಾಕಿದ್ದಾರೆ.

ಆರ್‌ಎಸ್‌ಎಸ್ ನಾಯಕರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆಗಳೇ ಇಲ್ಲ. ಅದೇ ರೀತಿ ನಾಗಪುರದಲ್ಲಿರುವ ಆರ್‌ಎಸ್‌ಎಸ್‌ನ ಕೇಂದ್ರ ಕಚೇರಿಯಲ್ಲಿ 2001ರ ವರೆಗೆ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯೋತ್ಸವದ ದಿನಗಳಲ್ಲಿ ರಾಷ್ಟ್ರ ಧ್ವಜದ ಆರೋಹಣ ಮಾಡಿರಲೇ ಇಲ್ಲ. 2001ರಲ್ಲಿ ಧ್ವಜಾರೋಹಣ ಮಾಡಿದ್ದ ತಮ್ಮದೇ ಸಂಘಟನೆಯ ಯುವಕರ ವಿರುದ್ಧ ಆರ್‌ಎಸ್‌ಎಸ್ ದೂರು ಕೊಟ್ಟು ಜೈಲಿಗೆ ಅಟ್ಟಿತ್ತು ಎನ್ನುವುದನ್ನು ದೇಶದ ಜನ ಮರೆತಿಲ್ಲ ಎಂದಿದ್ದಾರೆ.

ಕೆಂಪುಕೋಟೆ ಭಾರತೀಯ ಜನತಾ ಪಕ್ಷದ ರಾಜಕೀಯ ವೇದಿಕೆ ಅಲ್ಲ, ಆ ಸ್ಥಳದಲ್ಲಿ ಪಕ್ಷಾತೀತವಾಗಿ ಆಚರಿಸಲಾಗುವ ಸ್ವಾತಂತ್ರ್ಯತ್ಸೋವದಲ್ಲಿ ಎಲ್ಲ ಜಾತಿ-ಧರ್ಮ, ಪಕ್ಷ-ಪಂಥಗಳ ಜನ ಭಾಗವಹಿಸುತ್ತಾರೆ. ಅಂತಹ ಪವಿತ್ರ ವೇದಿಕೆಯಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಮಾತನಾಡದೆ ಆರ್‌ಎಸ್‌ಎಸ್ ಪ್ರಚಾರಕನಂತೆ ಮಾತನಾಡಿರುವುದು ದುರದೃಷ್ಟಕರ ಎಂದು ಸಿಎಂ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ಹನ್ನೊಂದು ವರ್ಷಗಳಲ್ಲಿ ಸ್ವಾತಂತ್ರ್ಯೋತ್ಸವದ ದಿನ ಆರ್‌ಎಸ್‌ಎಸ್ ಅನ್ನು ನೆನಪು ಮಾಡಿಕೊಳ್ಳದ ಪ್ರಧಾನಿ ನರೇಂದ್ರ ಮೋದಿಯವರು, ಈ ಬಾರಿ ಆರ್‌ಎಸ್‌ಎಸ್ ಸೇವೆಯನ್ನು ಸ್ಮರಿಸಿಕೊಂಡಿರುವುದು ಖಂಡಿತ ಅದರ ಮೇಲಿನ ಅಭಿಮಾನದಿಂದ ಅಲ್ಲ. ಇದಕ್ಕೆ ಮುಖ್ಯ ಕಾರಣ ಕುಸಿಯುತ್ತಿರುವ ಜನಪ್ರಿಯತೆಯಿಂದಾಗಿ ಅವರಲ್ಲಿ ಹುಟ್ಟಿರುವ ಅಭದ್ರತೆ. ಕಳೆದ ಚುನಾವಣೆಯಲ್ಲಿನ ಹಿನ್ನಡೆಯ ನಂತರ ಮೋದಿಯವರು ತಮ್ಮ ಮಾತೃಸಂಸ್ಥೆಗೆ ಸಾಷ್ಟಾಂಗ ನಮಸ್ಕಾರ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿಶ್ವದ ಅತಿ ದೊಡ್ಡ ಸರ್ಕಾರೇತರ ಸೇವಾ ಸಂಸ್ಥೆ ಎಂದು ನರೇಂದ್ರ ಮೋದಿ ಅವರು ಬಣ್ಣಿಸಿರುವ ಆರ್‌ಎಸ್‌ಎಸ್, ಇಂದಿನವರೆಗೂ ಅಧಿಕೃತವಾಗಿ ನೋಂದಣಿಯಾಗದ, ಸಾರ್ವಜನಿಕ ದೇಣಿಗೆ ಸಂಗ್ರಹಿಸಿದರೂ ತೆರಿಗೆ ಪಾವತಿ ಮಾಡದ ಮತ್ತು ಸಂವಿಧಾನ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಸಂಘಟನೆಯಾಗಿದೆ. ಪಾರದರ್ಶಕತೆಯಾಗಲಿ, ಉತ್ತರದಾಯಿತ್ವವಾಗಲಿ ಇಲ್ಲದ ಆರ್‌ಎಸ್‌ಎಸ್ ರಹಸ್ಯ ಸಂಘಟನೆಯಾಗಿಯೇ ಕೆಲಸ ಮಾಡುತ್ತಿರುವುದನ್ನು ದೇಶದ ಜನತೆ ಗಮನಿಸದ್ದಾರೆ ಎಂದಿದ್ದಾರೆ.

ಕೋಮುವಾದವನ್ನೇ ಉಸಿರಾಗಿಸಿಕೊಂಡ ಆರ್‌ಎಸ್‌ಎಸ್ ಹಿಂದೂ ಧರ್ಮವನ್ನು ರಾಜಕೀಯ ಆಯುಧವಾಗಿ ಬಳಸಿಕೊಂಡು ಭಾರತೀಯರನ್ನು ಒಡೆದು ಹಾಕಿ ಭಾರತೀಯ ಜನತಾ ಪಕ್ಷವನ್ನು ರಾಜಕೀಯವಾಗಿ ಬಲಪಡಿಸಲು ಹಗಲು-ರಾತ್ರಿ ಶ್ರಮಿಸುತ್ತಿದೆ. ಇವರಿಗೆ ದೇಶದ ಬಗ್ಗೆಯಾಗಲಿ, ಹಿಂದೂ ಧರ್ಮದ ಬಗ್ಗೆಯಾಗಲಿ ಯಾವ ಪ್ರೀತಿ-ಅಭಿಮಾನ, ಬದ್ಧತೆಯಾಗಲಿ ಇಲ್ಲ ಎನ್ನುವುದು ಸಾಬೀತಾಗಿದೆ ಎಂದು ಸಿಎಂ ಕಿಡಿಕಾರಿದ್ದಾರೆ.

ಸ್ವಾತಂತ್ರ್ಯದಿನಾಚರಣೆಯ ವೇದಿಕೆಯನ್ನು ಆರ್‌ಎಸ್‌ಎಸ್‌ಗೆ ಅಭಿನಂದನೆ ಸಲ್ಲಿಸಲು ದುರುಪಯೋಗ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾತುಗಳನ್ನು ಹಿಂದಕ್ಕೆ ಪಡೆದು ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಭಾರತದ ಕಲ್ಪನೆ ನಾಶಮಾಡುವ ಪ್ರಯತ್ನವನ್ನು ಕೋಮುವಾದಿ ಶಕ್ತಿಗಳು ಬಲಪಡಿಸುತ್ತಿವೆ: ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...