Homeಮುಖಪುಟದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

- Advertisement -
- Advertisement -

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ ಪಕ್ಷಗಳು ತಳೆದ ನಿಲುವುವನ್ನು ‘ಹೆಣ್ಣು ಭ್ರೂಣ ಹತ್ಯೆ’ಗೆ ಹೋಲಿಸುವ ಮೂಲಕ ಅಸಾಧಾರಣ ರೀತಿಯಲ್ಲಿ ಟೀಕಿಸಿದ್ದಾರೆ.

ಶುಕ್ರವಾರದ ವಿಶೇಷ ಸಂಸತ್ತಿನ ಅಧಿವೇಶನದಲ್ಲಿ ತಮ್ಮ ಸರ್ಕಾರದ ಮೂರು ಮಸೂದೆಗಳು ಲೋಕಸಭಾ ಸಂಸದರಲ್ಲಿ ಮೂರನೇ ಎರಡರಷ್ಟು ಬಹುಮತವನ್ನು ಗಳಿಸುವಲ್ಲಿ ವಿಫಲವಾದ ಕಾರಣಕ್ಕಾಗಿ ಮೋದಿ ತಮ್ಮ 29 ನಿಮಿಷಗಳ ಭಾಷಣದ ಆರಂಭದಲ್ಲಿ ಭಾರತದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳಿಂದ ಕ್ಷಮೆ ಯಾಚಿಸಿದ್ದಾರೆ.

“ಮಹಿಳೆಯು ಎಲ್ಲವನ್ನೂ ಮರೆಯಬಹುದು, ಆದರೆ ತಮಗೆ ಉಂಟಾದ ಅವಮಾನವನ್ನು ಎಂದಿಗೂ ಮರೆಯುವುದಿಲ್ಲ ಎಂದಿರುವ ಪ್ರಧಾನಿಯವರು, ಮಸೂದೆಗಳ ವಿರುದ್ಧ ಮತ ಚಲಾಯಿಸುವ ವಿರೋಧ ಪಕ್ಷಗಳ ನಿರ್ಧಾರವು ಕೇವಲ ಮಹಿಳೆಯರಿಗೆ ಮಾಡಿದ ಅವಮಾನವಷ್ಟೇ ಅಲ್ಲ, ಅದು ‘ಹೆಣ್ಣು ಭ್ರೂಣ ಹತ್ಯೆ’ಗೆ ಸಮಾನವಾದುದು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಎಲ್ಲರ ಸಮ್ಮುಖದಲ್ಲೇ ಸಂಸತ್ತಿನಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡಿವೆ ಎಂದು ಮೋದಿ ಹೇಳಿದ್ದಾರೆ. “ಅವರು ಹೆಣ್ಣು ಭ್ರೂಣ ಹತ್ಯೆ ಮಾಡಿದ್ದಾರೆ, ಕಾಂಗ್ರೆಸ್, ಟಿಎಂಸಿ, ಎಸ್‌ಪಿ ಮತ್ತು ಡಿಎಂಕೆಯಂತಹ ಪಕ್ಷಗಳೇ ಈ ಹೆಣ್ಣು ಭ್ರೂಣ ಹತ್ಯೆಯ ಅಪರಾಧಿಗಳು. ಇವರು ದೇಶದ ಸಂವಿಧಾನದ ಅಪರಾಧಿಗಳು. ಇವರು ದೇಶದ ನಾರಿ ಶಕ್ತಿಯ ವಿರುದ್ಧದ ಅಪರಾಧಿಗಳು” ಎಂದು ಪ್ರಧಾನಿ ಗುಡುಗಿದ್ದಾರೆ.

ಈ ಪಕ್ಷಗಳು ‘ಪರಿವಾರವಾದ’ (ಕುಟುಂಬ ರಾಜಕಾರಣ)ಕ್ಕೆ ಧಕ್ಕೆಯಾಗಬಹುದು ಎಂಬ ಭಯದಿಂದ ಮೂರು ಮಸೂದೆಗಳ ವಿರುದ್ಧ ಮತ ಚಲಾಯಿಸಿವೆ ಎಂದು ಮೋದಿ ಆರೋಪಿಸಿದ್ದಾರೆ. ಅಲ್ಲದೆ, ದೇಶ ಇಂದು ಎದುರಿಸುತ್ತಿರುವ ಎಲ್ಲಾ ಪ್ರಮುಖ ಸವಾಲುಗಳಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ದೂಷಿಸಿದ ಅವರು, ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳ ಜೊತೆಗೆ ಡಿಎಂಕೆ ಮತ್ತು ಟಿಎಂಸಿ ಹೆಸರನ್ನು ಪದೇ ಪದೇ ಪ್ರಸ್ತಾಪಿಸಿ ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ತಮ್ಮ ರಾಷ್ಟ್ರೀಯ ಪ್ರೈಮ್‌ಟೈಮ್ ಭಾಷಣವನ್ನು ಬಳಸಿಕೊಂಡು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದಂತೆ ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡು ಟೀಕೆ ವ್ಯಕ್ತಪಡಿಸಿದ್ದಾರೆ. ಈ ಪಕ್ಷಗಳ ಭದ್ರಕೋಟೆಗಳಾದ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಕೆಲವೇ ದಿನಗಳಲ್ಲಿ ಮತದಾನ ನಡೆಯಲಿದ್ದು, ‘ರಾಜಕೀಯ ಸುದ್ದಿಗಳ ಪಕ್ಷಪಾತದ ಪ್ರಸಾರ’ಕ್ಕಾಗಿ ಅಧಿಕೃತ ಸಮೂಹ ಮಾಧ್ಯಮಗಳನ್ನು ಬಳಸಬಾರದು’ ಎಂಬ ಚುನಾವಣೆಯ ಮಾದರಿ ನೀತಿ ಸಂಹಿತೆಯ (ಎಂಸಿಸಿ) ಉಲ್ಲಂಘನೆಯಾಗಿದೆ.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿರುವ ಚುನಾವಣೆಯ ಮಾದರಿ ನೀತಿ ಸಂಹಿತೆ ಪಟ್ಟಿಯಲ್ಲಿ ಅಧಿಕಾರದಲ್ಲಿರುವ ಪಕ್ಷಗಳಿಗೆ ಎಂಬ ವಿಭಾಗದಡಿ..”ಕೇಂದ್ರದಲ್ಲಿ ಅಥವಾ ಸಂಬಂಧಪಟ್ಟ ರಾಜ್ಯ ಅಥವಾ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಪಕ್ಷವು, ತನ್ನ ಚುನಾವಣಾ ಪ್ರಚಾರದ ಉದ್ದೇಶಗಳಿಗಾಗಿ ತನ್ನ ಅಧಿಕೃತ ಸ್ಥಾನಮಾನವನ್ನು ಬಳಸಿಕೊಂಡಿದೆ ಎಂಬ ಯಾವುದೇ ದೂರಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಬೇಕು ಮತ್ತು ವಿಶೇಷವಾಗಿ ಈ ಕೆಳಗಿನ ಅಂಶಗಳನ್ನು ಖಚಿತಪಡಿಸಿಕೊಳ್ಳಬೇಕು” ಎಂದಿದೆ.

ಈ ಕೆಳಗಿನ ಅಂಶಗಳು ಎಂಬುವುದರಲ್ಲಿ ನಾಲ್ಕನೇ ಅಂಶ ಹೀಗಿದೆ..” ಸಾರ್ವಜನಿಕ ಹಣದ ವೆಚ್ಚದಲ್ಲಿ ಪತ್ರಿಕೆಗಳು ಮತ್ತು ಇತರ ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ನೀಡುವುದು ಹಾಗೂ ಚುನಾವಣಾ ಅವಧಿಯಲ್ಲಿ ರಾಜಕೀಯ ಸುದ್ದಿಗಳ ಪಕ್ಷಪಾತದ ಪ್ರಸಾರಕ್ಕಾಗಿ ಮತ್ತು ಆಡಳಿತ ಪಕ್ಷದ ಗೆಲುವಿನ ಸಾಧ್ಯತೆಗಳನ್ನು ಹೆಚ್ಚಿಸುವ ಉದ್ದೇಶದಿಂದ ಸಾಧನೆಗಳ ಪ್ರಚಾರಕ್ಕಾಗಿ ಅಧಿಕೃತ ಸಮೂಹ ಮಾಧ್ಯಮಗಳನ್ನು ದುರುಪಯೋಗಪಡಿಸಿಕೊಳ್ಳುವುದನ್ನು ಕಡ್ಡಾಯವಾಗಿ ತಪ್ಪಿಸಬೇಕು

ಪ್ರಧಾನಿ ಮೋದಿಯವರ ಭಾಷಣ ಸಾರ್ವಜನಿಕ (ಸರ್ಕಾರಿ) ಮಾಧ್ಯಮಗಳಾದ ಡಿಡಿ ನ್ಯೂಸ್‌ ಸೇರಿದಂತೆ ಹಲವೆಡೆ ನೇರ ಪ್ರಸಾರಗೊಂಡಿದೆ. ಪ್ರಧಾನಿ ಚುನಾವಣೆ ನಡೆಯುತ್ತಿರುವ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ರಾಜ್ಯಗಳ ಪ್ರಮುಖ ಪಕ್ಷಗಳ ವಿರುದ್ದ ಮಾಡಿರುವ ಆರೋಪಗಳು ಚುನಾವಣೆಯ ಮೇಲೆ ಪರಿಣಾಮ ಬೀರುತ್ತದೆ ಎನ್ನುವುದರಲ್ಲಿ ಅನುಮಾನ ಇಲ್ಲ. ಹಾಗಾಗಿ, ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎನ್ನಬಹುದು.

ವಿರೋಧ ಪಕ್ಷದವರು ಮೋದಿಯವರ ಭಾಷಣವನ್ನು ತೀವ್ರವಾಗಿ ಖಂಡಿಸಿದ್ದಾರೆ. ಅವರು ಇದನ್ನು ‘ರಾಷ್ಟ್ರದ ಹಿತಾಸಕ್ತಿಯ ಭಾಷಣಕ್ಕಿಂತ ಹೆಚ್ಚಾಗಿ ಹತಾಶೆಯ ಭಾಷಣ’ ಎಂದು ಆರೋಪಿಸಿದ್ದಾರೆ. ಪ್ರಧಾನಿ ಮತ್ತೊಂದು ಸಾರ್ವಜನಿಕ ವೇದಿಕೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

ಪ್ರಧಾನಿಯವರು ವಿರೋಧ ಪಕ್ಷಗಳನ್ನು ಟೀಕಿಸಲು ರಾಷ್ಟ್ರೀಯ ಉದ್ದೇಶಿತ ಭಾಷಣವನ್ನು ಬಳಸಿಕೊಂಡ ಅಂಶವನ್ನು ಹಲವಾರು ವಿರೋಧ ಪಕ್ಷದ ನಾಯಕರು ಪ್ರಸ್ತಾಪಿಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮತ್ತು ವಕ್ತಾರೆ ಸಾಗರಿಕಾ ಘೋಷ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, “ಮೋದಿ ಅವರು ತೆರಿಗೆದಾರರ ಹಣದಿಂದ ನಡೆಯುವ ಭಾರತದ ರಾಷ್ಟ್ರೀಯ ಪ್ರಸಾರ ಸಂಸ್ಥೆಯಾದ ದೂರದರ್ಶನವನ್ನು ಬಳಸಿಕೊಂಡಿದ್ದಾರೆ. ಅವರು ಇದನ್ನು ಎಲ್‌ಪಿಜಿ ಬೆಲೆ ಏರಿಕೆ, ಇಂಧನ ಅಥವಾ ಉದ್ಯೋಗಗಳಂತಹ ನಾಗರಿಕರ ಕಳಕಳಿಯ ವಿಷಯಗಳ ಬಗ್ಗೆ ಮಾತನಾಡಲು ಬಳಸುವ ಬದಲು, ಸಂಪೂರ್ಣವಾಗಿ ವಿರೋಧ ಪಕ್ಷಗಳನ್ನು ಗುರಿಯಾಗಿಸುವ ರಾಜಕೀಯ ಭಾಷಣ ಮಾಡಲು ಬಳಸಿಕೊಂಡಿದ್ದಾರೆ” ಎಂದು ದೂರಿದ್ದಾರೆ.

“ಮೋದಿಯವರು ಪ್ರತಿಯೊಂದು ಸಂಸ್ಥೆಯನ್ನು ಅತ್ಯಂತ ಹೀನಾಯವಾದ, ಅಲ್ಪದೃಷ್ಟಿಯ ಮತ್ತು ಕೆಳಮಟ್ಟದ ರಾಜಕೀಯಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದೀಗ ಮತ್ತೊಂದು ಸಾರ್ವಜನಿಕ ವೇದಿಕೆಯನ್ನು ಅವರು ದುರುಪಯೋಗಪಡಿಸಿಕೊಂಡಿದ್ದಾರೆ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿ, ಅವಮಾನಕರ ಮತ್ತು ಹತಾಶೆಯ ನಡೆ” ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಸಂಸದ ಮತ್ತು ಪಕ್ಷದ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಪ್ರತಿಕ್ರಿಯಿಸಿ, “ಪದವಿಯಲ್ಲಿರುವ ಪ್ರಧಾನ ಮಂತ್ರಿಯೊಬ್ಬರು ರಾಷ್ಟ್ರವನ್ನುದ್ದೇಶಿಸಿ ಮಾಡುವ ಭಾಷಣವು ರಾಷ್ಟ್ರೀಯ ಸಂಕಲ್ಪ ಮತ್ತು ಆತ್ಮವಿಶ್ವಾಸವನ್ನು ಬೆಳೆಸುವ ಉದ್ದೇಶದ ನಿಷ್ಪಕ್ಷಪಾತದ ಭಾಷಣವಾಗಿರಬೇಕು. ಆದರೆ, ಶನಿವಾರದ ಮೋದಿಯವರ ಭಾಷಣವು ಅತ್ಯಂತ ಹೀನಾಯವಾದ ಪಕ್ಷಪಾತದಿಂದ ಕೂಡಿದ ಮತ್ತು ವಿವಾದಾತ್ಮಕ ವಾಗ್ದಾಳಿಯಾಗಿದೆ” ಎಂದು ಹೇಳಿದ್ದಾರೆ.

“ಇಂತಹ ‘ರಾಷ್ಟ್ರೀಯ ಭಾಷಣಕ್ಕಿಂತ ಹೆಚ್ಚಾಗಿ ಹತಾಶೆಯ ಭಾಷಣ’ವು ಪತ್ರಿಕಾಗೋಷ್ಠಿಯಲ್ಲಿ ನಡೆದಿದ್ದರೆ ಹೆಚ್ಚು ಸೂಕ್ತವಾಗಿರುತ್ತಿತ್ತು” ಎಂದು ಅವರು (ಜೈರಾಮ್ ರಮೇಶ್) ಹೇಳಿದ್ದಾರೆ. ಇದರ ಬೆನ್ನಲ್ಲೇ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಮೋದಿ ಅವರು ಮಾಡಿದ ಭಾಷಣವು “ಪ್ರಜಾಪ್ರಭುತ್ವ ಮತ್ತು ಭಾರತದ ಸಂವಿಧಾನಕ್ಕೆ ಎಸಗಿದ ಅವಮಾನ” ಎಂದಿದ್ದಾರೆ.

ರಾಷ್ಟ್ರೀಯ ಜನತಾದಳದ (ಆರ್‌ಜೆಡಿ) ಸಂಸದ ಮನೋಜ್ ಕುಮಾರ್ ಝಾ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ಅದರಲ್ಲಿ “ಮೋದಿಯವರ ರಾಷ್ಟ್ರವನ್ನುದ್ದೇಶಿಸಿದ ಭಾಷಣವು ನಿಜಕ್ಕೂ ಒಂದು ಚುನಾವಣಾ ಭಾಷಣದಂತೆ ಕಂಡುಬಂದಿದೆ” ಎಂದು ಹೇಳಿದ್ದಾರೆ. ಅಲ್ಲದೆ, ಈ ಭಾಷಣದ ವೆಚ್ಚವನ್ನು ಅವರ ಚುನಾವಣಾ ವೆಚ್ಚಕ್ಕೆ ಸೇರಿಸಬೇಕು ಒತ್ತಾಯಿಸಿದ್ದಾರೆ.

ಮೋದಿಯವರು ತಮ್ಮ ಭಾಷಣದಲ್ಲಿ ತಮ್ಮ ಸರ್ಕಾರದ ಸಂವಿಧಾನ (131ನೇ ತಿದ್ದುಪಡಿ) ಮಸೂದೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ಈ ಮಸೂದೆಯು ಇತರ ವಿಷಯಗಳ ಜೊತೆಗೆ 2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಶೀಘ್ರವಾಗಿ ಜಾರಿಗೆ ತರಲು ತಿದ್ದುಪಡಿ ತರುವ ಪ್ರಸ್ತಾವನೆಯನ್ನು ಹೊಂದಿತ್ತು. ಇದರೊಂದಿಗೆ ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಶನ್) ಮಸೂದೆ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ (ತಿದ್ದುಪಡಿ) ಮಸೂದೆಯನ್ನು ಸಹ ಅವರು ಬೆಂಬಲಿಸಿ ಮಾತನಾಡಿದ್ದಾರೆ.

ಈ ಪ್ರಸ್ತಾವಿತ ಶಾಸನಗಳು “ಭಾರತದ 21ನೇ ಶತಮಾನದ ಮಹಿಳೆಯರ ಹಾದಿಯಲ್ಲಿರುವ ಅಡೆತಡೆಗಳನ್ನು ತೆಗೆದುಹಾಕುವ ಮಹಾಯಜ್ಞ” ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಅಲ್ಲದೆ, ಇವು ಭಾರತದ ಉತ್ತರ, ದಕ್ಷಿಣ, ಪೂರ್ವ ಅಥವಾ ಪಶ್ಚಿಮದ ಯಾವುದೇ ಭಾಗದಲ್ಲಿದ್ದರೂ ಮತ್ತು ಅವುಗಳ ಜನಸಂಖ್ಯೆ ಎಷ್ಟೇ ಇರಲಿ, “ಎಲ್ಲಾ ರಾಜ್ಯಗಳ ಸಮಾನ ಅಭಿವೃದ್ಧಿ”ಗಾಗಿ ಇರುವ ಸಾಧನಗಳು ಎಂದು ಅವರು ಹೇಳಿದ್ದಾರೆ.

“ಯಾವುದೇ ರಾಜ್ಯದ ಲೋಕಸಭಾ ಪ್ರಾತಿನಿಧ್ಯದ ಅನುಪಾತ ಬದಲಾಗುವುದಿಲ್ಲ ಅಥವಾ ಯಾರ ಪ್ರಾತಿನಿಧ್ಯವೂ ಕಡಿಮೆಯಾಗುವುದಿಲ್ಲ ಎಂದು ಸರ್ಕಾರ ಮೊದಲ ದಿನವೇ ಸ್ಪಷ್ಟಪಡಿಸಿದೆ” ಎಂದು ಮೋದಿ ಹೇಳಿದ್ದಾರೆ. “ಪ್ರತಿಯೊಂದು ರಾಜ್ಯದ ಸೀಟುಗಳ ಸಂಖ್ಯೆಯು ಸಮಾನ ಅನುಪಾತದಲ್ಲಿ ಹೆಚ್ಚಾಗುತ್ತದೆ” ಎಂದಿದ್ದಾರೆ. ವಿರೋಧ ಪಕ್ಷಗಳು “ಕ್ಷೇತ್ರ ಮರುವಿಂಗಡಣೆಯ ಬಗ್ಗೆ ಸತತವಾಗಿ ಸುಳ್ಳು ಹೇಳುತ್ತಿವೆ” ಎಂದು ಆರೋಪಿಸಿದ್ದಾರೆ.

ಆದಾಗ್ಯೂ, ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನಗಳ ಸಂಖ್ಯೆಯು ಶೇಕಡಾ 50 ರಷ್ಟು ಹೆಚ್ಚಾಗಲಿದೆ ಎಂದು ಸರ್ಕಾರವು ಮೌಖಿಕವಾಗಿ ಪ್ರತಿಪಾದಿಸಿದೆ. ಆದರೆ ಸಂವಿಧಾನ ತಿದ್ದುಪಡಿ ಮಸೂದೆಯಲ್ಲಾಗಲಿ ಅಥವಾ ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಶನ್) ಮಸೂದೆಯಲ್ಲಾಗಲಿ ಅಂತಹ ಯಾವುದೇ ವ್ಯವಸ್ಥೆಯ ಬಗ್ಗೆ ಉಲ್ಲೇಖವಿರಲಿಲ್ಲ.

ಮಹಿಳಾ ಮೀಸಲಾತಿಯನ್ನು ‘ಕಾರ್ಯರೂಪಕ್ಕೆ ತರಲು’ ಎಂಬ ನೆಪದಲ್ಲಿ ಕ್ಷೇತ್ರ ಮರುವಿಂಗಡಣೆಯ ಮೇಲಿನ 50 ವರ್ಷಗಳ ತಡೆಯನ್ನು ತೆಗೆದುಹಾಕುವ ಸಂವಿಧಾನ ತಿದ್ದುಪಡಿ ಮಸೂದೆಯ ಪ್ರಯತ್ನ ಮತ್ತು ಲೋಕಸಭೆಯ ವಿಸ್ತರಣೆಗಾಗಿ 2011ರ ಜನಗಣತಿಯನ್ನು ಬಳಸಿಕೊಳ್ಳುವ ಮುನ್ಸೂಚನೆಯನ್ನು ಒಟ್ಟಾಗಿ ಗಮನಿಸಿದರೆ, ಇದು ದಕ್ಷಿಣದ ರಾಜ್ಯಗಳಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ದಶಕಗಳಿಂದ ಜನಸಂಖ್ಯೆಯನ್ನು ನಿಯಂತ್ರಿಸಿದ ದಕ್ಷಿಣ ಮತ್ತು ಇತರ ರಾಜ್ಯಗಳ ಹಿತಾಸಕ್ತಿಗೆ ವಿರುದ್ಧವಾಗಿ, ಜನಸಂಖ್ಯೆ ನಿಯಂತ್ರಿಸದ ಹಿಂದಿ ಭಾಷಿಕ ರಾಜ್ಯಗಳು ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯುವ ಮೂಲಕ ಲಾಭ ಪಡೆಯಲಿವೆ ಎಂಬ ಆತಂಕ ಮೂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...