Homeಕರ್ನಾಟಕಮೋದಿ ಹುಬ್ಬಳ್ಳಿ ಭೇಟಿ: ಪ್ರಾಂಶುಪಾಲರಿಗೆ 100 ವಿದ್ಯಾರ್ಥಿಗಳನ್ನು ಕರೆತರುವಂತೆ ಟಾರ್ಗೆಟ್‌ ನೀಡಿದ ಶಿಕ್ಷಣ ಇಲಾಖೆ!

ಮೋದಿ ಹುಬ್ಬಳ್ಳಿ ಭೇಟಿ: ಪ್ರಾಂಶುಪಾಲರಿಗೆ 100 ವಿದ್ಯಾರ್ಥಿಗಳನ್ನು ಕರೆತರುವಂತೆ ಟಾರ್ಗೆಟ್‌ ನೀಡಿದ ಶಿಕ್ಷಣ ಇಲಾಖೆ!

- Advertisement -
- Advertisement -

ಪ್ರಧಾನಿ ಮೋದಿ ಅವರ ಹುಬ್ಬಳ್ಳಿ ಭೇಟಿಯ ವೇಳೆ ನಗರದ ಪ್ರತಿ ಪಿಯು ಕಾಲೇಜುಗಳ ಪ್ರಾಂಶುಪಾಲರು ಕನಿಷ್ಠ 100 ವಿದ್ಯಾರ್ಥಿಗಳನ್ನು ಕರೆತರುವಂತೆ ಶಿಕ್ಷಣ ಇಲಾಖೆ ಅಧಿಕಾರಿ ವಿವಾದಾತ್ಮಕ ಸುತ್ತೋಲೆ ಹೊರಡಿಸಿದ್ದು, ಸುತ್ತೋಲೆಯು ಟೀಕೆಗೆ ಒಳಗಾಗುತ್ತಿದ್ದಂತೆ ಅದನ್ನು ಹಿಂಪಡೆದಿದ್ದಾರೆ.

ಜನವರಿ 12ರ ಗುರುವಾರದಂದು ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ. ಈ ಸಮಾರಂಭದ ವೇಳೆ ಪಟ್ಟಣದ ಎಲ್ಲಾ ಪಿಯು ಕಾಲೇಜುಗಳ ಪ್ರಾಂಶುಪಾಲರು ಕನಿಷ್ಠ 100 ವಿದ್ಯಾರ್ಥಿಗಳನ್ನು ಕರೆತರುವಂತೆ ಧಾರವಾಡ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಾನಾಯ್ಕ್ ಸುತ್ತೋಲೆ ಹೊರಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಷ್ಟ್ರೀಯ ಯುವಜನೋತ್ಸವಕ್ಕೆ ತಮ್ಮದೇ ಆದ ಜವಾಬ್ದಾರಿಯಡಿಯಲ್ಲಿ ಜನವರಿ 9 ರಂದು ಹೊರಡಿಸಿದ ಆದೇಶದಲ್ಲಿ, ಹುಬ್ಬಳ್ಳಿ ನಗರ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪಿಯು ಕಾಲೇಜುಗಳ ಪ್ರಾಂಶುಪಾಲರು ತಮ್ಮ ಕಾಲೇಜಿನ ಕನಿಷ್ಠ 100 ವಿದ್ಯಾರ್ಥಿಗಳನ್ನು ಕರೆತರುವಂತೆ ಅವರು ಸೂಚಿಸಿದ್ದಾರೆ.

ಸುತ್ತೋಲೆಯು ವಿವಾದವಾಗುತ್ತಿದ್ದಂತೆ ಅದರಕ್ಕೆ ಪ್ರತಿಕ್ರಿಯಿಸಿರುವ ಕೃಷ್ಣಾನಾಯ್ಕ್‌, “ಅಜಾಗರೂಕತೆಯಿಂದ ತಪ್ಪಾಗಿ ಆದೇಶ ಹೊರಡಿಸಲಾಗಿದ್ದು, ಈಗ ಅದನ್ನು ಹಿಂಪಡೆಯಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಹೊಸ ಸುತ್ತೋಲೆ ಹೊರಡಿಸಲಾಗುವುದು” ಎಂದು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ.

ಕಳೆದ ನವೆಂಬರ್‌ನಲ್ಲಿ ಕೂಡಾ ಇದೇ ರೀತಿಯ ಘಟನೆ ಬೆಂಗಳೂರಿನಲ್ಲಿ ನಡೆಡಿತ್ತು.  ನವೆಂಬರ್ 11 ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಹೊಸ ಟರ್ಮಿನಲ್ ಅನ್ನು ಉದ್ಘಾಟನೆಗೆ ಆಗಮಿಸಿದ್ದ ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳಿಗೆ ಹಾಜರಾಗಲು, ವಿದ್ಯಾರ್ಥಿಗಳನ್ನು ಕರೆತರುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾಲೇಜುಗಳಿಗೆ ಪಿಯು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿ ನಂತರ ಹಿಂಪಡೆದಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...