Homeಮುಖಪುಟಮಹಿಳೆಯ ಬಗ್ಗೆ ಮೋದಿ ಆಡಿದ ಮಾತಿಗೆ ಅರ್ಥವಿಲ್ಲವೆ?: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆ ಬಳಿಕ ಪ್ರತಿಪಕ್ಷಗಳ...

ಮಹಿಳೆಯ ಬಗ್ಗೆ ಮೋದಿ ಆಡಿದ ಮಾತಿಗೆ ಅರ್ಥವಿಲ್ಲವೆ?: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆ ಬಳಿಕ ಪ್ರತಿಪಕ್ಷಗಳ ವಾಗ್ದಾಳಿ

- Advertisement -
- Advertisement -

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ನಡೆದ ಬಿಲ್ಕಿಸ್ ಬಾನೋ ಅವರ ಸಾಮೂಹಿಕ ಅತ್ಯಾಚಾರ ಮತ್ತು ಬಾನೋ ಕುಟುಂಬದ ಏಳು ಜನರ ಹತ್ಯೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾದ 11 ಮಂದಿಯನ್ನು ಗುಜರಾತ್ ಸರ್ಕಾರ ಬಿಡುಗಡೆ ಮಾಡಿದೆ. ಅಪರಾಧಿಗಳು ಸಿಹಿಯನ್ನೂ ಹಂಚಿಕೊಂಡು ಸಂಭ್ರಮಾಚರಣೆ ಮಾಡಿದ್ದಾರೆ.

ದುರಂತ ಘಟನೆಯ ಅಪರಾಧಿಗಳಿಗೆ ಕ್ಷಮಾದಾನ ನೀಡಿರುವ ಬಿಜೆಪಿ ಸರ್ಕಾರ ಹಾಗೂ ನರೇಂದ್ರ ಮೋದಿ ನಾಯಕತ್ವದ ವಿರುದ್ಧ ಪ್ರತಿಪಕ್ಷಗಳು ವಾಗ್ದಾಳಿ ನಡೆಸಿವೆ.

ಬಿಜೆಪಿ ಸರ್ಕಾರ ಕ್ಷಮಾದಾನ ಪತ್ರ ನೀಡುವ ಕೆಲವು ಗಂಟೆಗಳ ಮೊದಲು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪ್ರಧಾನಿ ಮೋದಿಯವರು ಮಾಡಿರುವ ಭಾಷಣವನ್ನು ಕಾಂಗ್ರೆಸ್ ಪ್ರಸ್ತಾಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಹಿಳಾ ಶಕ್ತಿಯ ಬಗ್ಗೆ ಮಾತನಾಡಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕ ಪವನ್ ಖೇರಾ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಗುಜರಾತ್ ಸರ್ಕಾರದ ಆದೇಶವನ್ನು ‘ಅಭೂತಪೂರ್ವ’ ಎಂದು ವ್ಯಂಗ್ಯವಾಡಿರುವ ಕಾಂಗ್ರೆಸ್, “ಅಪರಾಧಿಗಳ ಶಿಕ್ಷೆಯ 14 ವರ್ಷಗಳನ್ನು ಉದಾಹರಿಸಿ, ಅಪರಾಧಿಗಳ ನಡವಳಿಕೆಯನ್ನು ಉಲ್ಲೇಖಿಸಿ ಹೊರಗೆ ಕಳುಹಿಸಿದ್ದೀರಿ. ಅಪರಾಧದ ಸ್ವರೂಪ ಹಾಗೂ ಅತ್ಯಾಚಾರವನ್ನು ನೋಡಿದರೆ ಈಗ ನೀಡಿರುವ ಯಾವುದೇ ಶಿಕ್ಷೆಯು ಸಾಕಾಗುವುದಿಲ್ಲ ಎನಿಸುವುದಿಲ್ಲವೆ? ಬಿಡುಗಡೆಯಾದವರನ್ನು ನಾವು ಇಂದು ನೋಡಿದೆವು. ಅವರನ್ನು ಸನ್ಮಾನಿಸಲಾಗುತ್ತಿದೆ, ಗೌರವಿಸಲಾಗುತ್ತಿದೆ. ಇದು ಅಮೃತ ಮಹೋತ್ಸವವೇ?” ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಇದನ್ನೂ ಓದಿರಿ: ಬಿಲ್ಕಿಸ್‌ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣ; ಎಲ್ಲ ಅಪರಾಧಿಗಳಿಗೆ ಕ್ಷಮೆ ನೀಡಿ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರ!

ಅಟಲ್ ಬಿಹಾರಿ ವಾಜಪೇಯಿ ಅವರನ್ನು ನೆನೆದಿರುವ ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಖೇರಾ, “2002ರ ಗಲಭೆಯ ನಂತರ ಗುಜರಾತ್‌ಗೆ ಭೇಟಿ ನೀಡಿದಾಗ ಮಾಜಿ ಪ್ರಧಾನಿ ವಾಜಪೇಯಿಯವರು ರಾಜಧರ್ಮದ ಬಗ್ಗೆ ಮಾತನಾಡಿದ್ದನ್ನು ಮೋದಿ ನೆನೆಯಬೇಕು” ಎಂದು ತಿಳಿಸಿದ್ದಾರೆ.

ಮೋದಿಯವರು ಕೆಂಪುಕೋಟೆಯ ಮೇಲೆ ಹೇಳಿದ್ದು ಕೇವಲ ಪದಗಳೇ ಅಥವಾ ಏನಾದರೂ ಅರ್ಥವಿದೆಯೇ ಎಂಬುದನ್ನು ಅವರು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

“ಪ್ರಧಾನಿ ಮೋದಿಯವರು ಮಾತನಾಡಿರುವುದಕ್ಕೆ ಅರ್ಥವಿಲ್ಲವೇ? ಅಥವಾ ಅವರ ಸ್ವಂತ ಪಕ್ಷ, ಅವರದೇ ಸರ್ಕಾರಗಳು ಮೋದಿಯವರ ಮಾತು ಕೇಳುವುದನ್ನು ನಿಲ್ಲಿಸಿವೆಯೇ? ಅಥವಾ ಮೋದಿಯವರು ದೇಶಕ್ಕೆ ಒಂದು ಮಾತು, ತಮ್ಮ ಪಕ್ಷದ ಸರ್ಕಾರಕ್ಕೆ ಒಂದು ಮಾತು ಹೇಳುತ್ತಾರೆಯೇ?” ಎಂದು ಕೇಳಿದ್ದಾರೆ.

ಬಿಲ್ಕಿಸ್ ಬಾನೊ ಅವರಿಗೆ 50 ಲಕ್ಷ ರೂಪಾಯಿ ಪರಿಹಾರವನ್ನು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ 2017ರಲ್ಲಿ ಮಧ್ಯಪ್ರವೇಶಿಸಿದೆ ಎಂಬ ಅಂಶದತ್ತ ಗಮನಕ್ಕೆ ತಂದ ಖೇರಾ, “ಇದಿಷ್ಟೇ ಸಾಕು. ಬಿಲ್ಕಿಸ್‌ ಅವರಿಗೆ ಆಗಿರುವ ಅನ್ಯಾಯವನ್ನು ಒತ್ತಿಹೇಳುತ್ತದೆ” ಎಂದಿದ್ದಾರೆ.

“ಕೆಂಪು ಕೋಟೆಯಲ್ಲಿ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡಲು ಪ್ರಧಾನಿಯವರಿಗೆ ಎಷ್ಟು ಧೈರ್ಯ?” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿರಿ: 25 ವರ್ಷಗಳಲ್ಲಿ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಬೇಕು: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ

ಭಾರತವು ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸಿದ ದಿನದಂದು ಗುಜರಾತ್ ಆದೇಶ ಬಂದಿತು ಎಂಬ ಅಂಶವನ್ನು ಕಾಂಗ್ರೆಸ್ ಒತ್ತಿಹೇಳಿದೆ.

ಕಥುವಾ, ಉನ್ನಾವೋ ಅತ್ಯಾಚಾರ ಪ್ರಕರಣಗಳಲ್ಲಿ ಏನಾಯಿತು ಎಂಬುದಕ್ಕೆ ಗುಜರಾತ್ ಸರ್ಕಾರದ ಬಿಲ್ಕಿಸ್ ಬಾನೊ ಆದೇಶವನ್ನು ಲಿಂಕ್ ಮಾಡಿದ ಖೇರಾ, “ಇವೆಲ್ಲವೂ ಬಿಜೆಪಿ ಸರ್ಕಾರದ ಮನೋಧರ್ಮವನ್ನು ತೋರಿಸುತ್ತವೆ. ಕಥುವಾ ಪ್ರಕರಣದಲ್ಲಿ, ಬಹುಶಃ ದೇಶದಲ್ಲಿಯೇ ಮೊದಲ ಬಾರಿಗೆ ಬಿಜೆಪಿಯ ಹಿರಿಯ ನಾಯಕರು ಅತ್ಯಾಚಾರಿಗಳ ಬೆಂಬಲಕ್ಕಾಗಿ ಬೀದಿಗಿಳಿದಿದ್ದರು” ಎಂದು ವಿವಾಸಿದ್ದಾರೆ.

ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮೋದಿಯವರು ಆಡಿರುವ ಮಾತುಗಳು ಶ್ಲಾಘನೀಯವಾಗಿದ್ದರೂ, ಅವರು ಈ ಹಿಂದೆ ಪ್ರತಿಪಕ್ಷದ ನಾಯಕರ ಮೇಲೆ ದಾಳಿ ಮಾಡಲು ಅತ್ಯಂತ ಕೀಳುಮಟ್ಟದಲ್ಲಿ ಮಾತನಾಡಿದ್ದರು ಎಂಬುದನ್ನು ಮರೆಯಬಾರದು. ‘50 ಕೋಟಿ ರೂ. ಗೆಳತಿ’, ‘ಕಾಂಗ್ರೆಸ್ ವಿಧವೆ’, ‘ಜೆರ್ಸಿ ಹಸು’ ಮತ್ತು ‘ಸ್ರೂಪನಖಿ’ ಎಂಬ ಪದಗಳನ್ನು ಬಳಸಿದ್ದರು ಎಂದು ಅವರು ಉಲ್ಲೇಖಿಸಿದ್ದಾರೆ.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಖೇರಾ ಅವರು, “ಒಂದೋ ಗುಜರಾತ್ ಸರ್ಕಾರ ತನ್ನ ಆದೇಶವನ್ನು ಹಿಂಪಡೆಯಬೇಕು ಅಥವಾ ಪ್ರಧಾನಿ ಮೋದಿ ತನ್ನ ಮಾತುಗಳನ್ನು ಹಿಂಪಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್‌ನಂತೆಯೇ ಸ್ಪರ್ಧಿಯಾಗಿರುವ ಆಮ್ ಆದ್ಮಿ ಪಕ್ಷವು ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಇತರೆ ಪಕ್ಷಗಳಾದ ಆರ್‌ಜೆಡಿ, ಎಐಎಂಐಎಂ ಮತ್ತು ಸಿಪಿಎಂ ಪಕ್ಷಗಳು ಬಿಜೆಪಿ ಸರ್ಕಾರದ ಕ್ರಮವನ್ನು ಟೀಕಿಸಿವೆ.

ಆರ್‌ಜೆಡಿ ವಕ್ತಾರ ಎಜಾಜ್ ಅಹ್ಮದ್, “ಪ್ರಧಾನಿ ಮೋದಿ ಇಂದು ನಾರಿ ಸಮ್ಮಾನ್ ಬಗ್ಗೆ ದೊಡ್ಡದೊಡ್ಡ ಹೇಳಿಕೆಗಳನ್ನು ನೀಡಿದ್ದಾರೆ. ಮಹಿಳೆಯರನ್ನು ಅವಮಾನಿಸಬಾರದು ಎಂದಿದ್ದಾರೆ. ಆದರೆ ಕೆಲವೇ ಗಂಟೆಗಳ ನಂತರ ಗುಜರಾತ್ ಸರ್ಕಾರವು ಬಿಲ್ಕಿಸ್ ಬಾನೋ ಗ್ಯಾಂಗ್ರೇಪ್ ಪ್ರಕರಣದ ಅಪರಾಧಿಗಳನ್ನು ಬಿಡುಗಡೆ ಮಾಡುವ ಆದೇಶ ನೀಡಿದೆ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿರಿ: ಹಾಸನ: ಕೋರ್ಟ್ ಆವರಣದಲ್ಲಿಯೇ ಹೆಂಡತಿಯ ಕುತ್ತಿಗೆ ಕೊಯ್ದ ವ್ಯಕ್ತಿಯ ಬಂಧನ

ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಟ್ವೀಟ್ ಮಾಡಿದ್ದು, “ಇದು ಬಿಜೆಪಿಯ ಆಜಾದಿ ಕಾ ಅಮೃತ್ ಮಹೋತ್ಸವ ಆವೃತ್ತಿಯಾಗಿದೆ. ಘೋರ ಅಪರಾಧದ ತಪ್ಪಿತಸ್ಥರಿಗೆ ಸ್ವಾತಂತ್ರ್ಯ ನೀಡಲಾಗಿದೆ. ಬಿಜೆಪಿಯ ಧಾರ್ಮಿಕ ಪಕ್ಷಪಾತ ಎಷ್ಟರಮಟ್ಟಿಗೆ ಎಂದರೆ ಕ್ರೂರ ಅತ್ಯಾಚಾರ ಮತ್ತು ದ್ವೇಷದ ಅಪರಾಧಗಳು ಕೂಡ ಕ್ಷಮಾರ್ಹವಾಗಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಗುಜರಾತ್ ಸರ್ಕಾರದ ಆದೇಶಕ್ಕೆ ಸಿಪಿಎಂ ತನ್ನ ತೀವ್ರ ಖಂಡನೆಯನ್ನು ವ್ಯಕ್ತಪಡಿಸಿದ್ದು, “ಇದು ನವ ಭಾರತದ ನಿಜವಾದ ಮುಖ. ಕೊಲೆಗಾರರು ಮತ್ತು ಅತ್ಯಾಚಾರಿಗಳನ್ನು ಬಿಡುಗಡೆ ಮಾಡಲಾಗಿದೆ. ನ್ಯಾಯಕ್ಕಾಗಿ ಹೋರಾಡಿದ ಕಾರ್ಯಕರ್ತೆ ತೀಸ್ತಾ ಜೈಲು ಪಾಲಾಗಿದ್ದಾರೆ” ಎಂದು ವಿಷಾದಿಸಿದೆ.

ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಟ್ವೀಟ್ ಮಾಡಿದ್ದು, “ಗುಜರಾತ್ ಸರ್ಕಾರವು 11 ಜನ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದೆ. ಎಲ್ಲಿದೆ ಆಕ್ರೋಶ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...