Homeಕರ್ನಾಟಕ#ಮೋದಿಶೇಮ್ಸ್‌ಇಂಡಿಯಾ #ಮೌಲಾನಾಮೋದಿ ಹ್ಯಾಷ್‌ಟ್ಯಾಗ್‌ ಟ್ವಿಟ್ಟರ್‌‌ನಲ್ಲಿ ಟ್ರೆಂಡಿಂಗ್‌

#ಮೋದಿಶೇಮ್ಸ್‌ಇಂಡಿಯಾ #ಮೌಲಾನಾಮೋದಿ ಹ್ಯಾಷ್‌ಟ್ಯಾಗ್‌ ಟ್ವಿಟ್ಟರ್‌‌ನಲ್ಲಿ ಟ್ರೆಂಡಿಂಗ್‌

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವರನ್ನು ಅವಹೇಳನ ಮಾಡಿದ ಆರೋಪದ ಮೇಲೆ ಬಿಜೆಪಿ ವಕ್ತಾರರಾದ ನೂಪುರ್‌ ಶರ್ಮಾ ಹಾಗೂ  ನವೀನ್ ಜಿಂದಾಲ್ ಅವರನ್ನು ಬಿಜೆಪಿ ಅಮಾನತು ಮಾಡಿದ್ದು ಈಗ ಬಿಜೆಪಿ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಜೊತೆಗೆ ಭಾರತ ಕ್ಷಮೆ ಕೇಳುವಂತಾಗಿದ್ದು ಭಾರತೀಯರಿಗೆ ಬೇಸರ ತರಿಸಿದ್ದು #maulanamodi (#ಮೌಲಾನಾಮೋದಿ), #ModiShamesIndia (#ಮೋದಿಶೇಮ್ಸ್‌ಇಂಡಿಯಾ) ಹ್ಯಾಷ್‌ ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಟ್ರೆಂಡ್ ಆಗಿವೆ.

ಈ ಎರಡು ಹ್ಯಾಷ್‌ಟ್ಯಾಗ್‌ಗಳಲ್ಲಿ ಸಾವಿರಾರು ಜನರು ಟ್ವೀಟ್ ಮಾಡಿದ್ದು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವಾರು ಮೀಮ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. ದೇಶ ತಲೆತಗ್ಗಿಸುವಂತಾಗಿದೆ ಎಂದು ಅನೇಕರು ಬೇಸರ ವ್ಯಕ್ತಪಡಿಸಿದ್ದಾರೆ.

“ಬಿಜೆಪಿ ತನ್ನ ಕಳಪೆ ಹಾಗೂ  ದ್ವೇಷದ ಮನಸ್ಥಿತಿಯನ್ನು ದೇಶದ ಮೇಲೆ ಹೇರುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಅವಮಾನ ತಂದಿದೆ” ಎಂದು ಎಎಪಿ ನಾಯಕಿ ಸರಿತಾ ಸಿಂಗ್ ಟ್ವೀಟ್ ಮಾಡಿದ್ದಾರೆ.

“ಎಎಪಿಯ ದೆಹಲಿ ಆಡಳಿತ ಮಾದರಿಯು ಭಾರತಕ್ಕೆ ಅಪಾರ ಹೆಮ್ಮೆ ತಂದಿದೆ, ಮತ್ತೊಂದೆಡೆ ಬಿಜೆಪಿಯ ಮಾದರಿಯು ರಾಷ್ಟ್ರಕ್ಕೆ ಅವಮಾನ ತಂದಿದೆ. ನಮ್ಮ ರಾಷ್ಟ್ರಕ್ಕೆ ಅರ್ಹವಾದ ನಮ್ಮ ವೈಭವವನ್ನು ಮರಳಿ ತರಲು ನಾವು ಈಗ ಕಾರ್ಯನಿರ್ವಹಿಸಬೇಕು” ಎಂದು ಎಎಪಿ ನಾಯಕರಾದ ಹಾಜಿ ಯುನುಸ್‌ ‌ಟ್ವೀಟ್ ಮಾಡಿದ್ದಾರೆ.

“ದ್ವೇಷವು ಎರಡು ಅಂಚಿನ ಕತ್ತಿಯಾಗಿದೆ. ಏಕೆಂದರೆ ಪ್ರಿಂಜ್‌‌ ಸರ್ಕಾರ ಏನು ಹೇಳಿದೆ, ವಿದೇಶದಲ್ಲಿರುವ ಭಾರತೀಯರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದೇನಾ ಅಚ್ಛೇ ದಿನ್? ನಮ್ಮ ದೇಶದ ಹೆಸರನ್ನು ಹಾಳು ಮಾಡುತ್ತೀರಾ? ನಿಮ್ಮ ಅಸಹಿಷ್ಣುತೆಯ ಭಾರವನ್ನು ಭಾರತೀಯರು ಏಕೆ ಎದುರಿಸಬೇಕು? ಇದು ನನ್ನ ಭಾರತವಲ್ಲ” ಎಂದು ಮತ್ತೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ.

“ಒಂದು ಕಾಲದಲ್ಲಿ ಗಾಂಧಿಯನ್ನು ಹೊಗಳಿದ್ದ ದೇಶವು ಈಗ ಹಾಲಿ ಪ್ರಧಾನಿ ಮತ್ತು ಅವರ ಪ್ರಿಂಜ್‌ನ ದ್ವೇಷ, ಅಸಹಿಷ್ಣುತೆಗಾಗಿ ನಾಚಿಕೆಪಡುತ್ತಿದೆ. ಇದರಿಂದ ಜನರು ನಮ್ಮ ವಸ್ತುಗಳನ್ನು ಬಹಿಷ್ಕರಿಸುತ್ತಿದ್ದಾರೆ” ಎಂದು ಮತ್ತೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

“ಬಿಜೆಪಿ ಮತ್ತು ಮೋದಿಜೀ ಪ್ರಪಂಚದ ಮುಂದೆ ಭಾರತದ ಇಮೇಜ್ ಕಡಿಮೆ ಮಾಡಿದ್ದಾರೆ. ನಾಚಿಕೆಯಾಗಬೇಕು ಮೋದಿಜಿ” ಎಂದು ರಿಚಾ ಸಿಂಗ್‌ ಎಂಬವರು ಟ್ವೀಟ್ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...