Homeಮುಖಪುಟಅರ್ಜುನ ಪ್ರಶಸ್ತಿ ಸ್ವೀಕರಿಸಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

- Advertisement -
- Advertisement -

ಭಾರತೀಯ ಕ್ರಿಕೆಟಿಗ, ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ.

2023ರಲ್ಲಿ ಅದ್ಭುತ ಪ್ರದರ್ಶನ ನೀಡಿದ ಶಮಿ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಪ್ರತಿಷ್ಠಿತ ಗೌರವಕ್ಕೆ ಮೊಹಮ್ಮದ್ ಶಮಿ ಹೆಸರನ್ನು ಶಿಫಾರಸು ಮಾಡಿತ್ತು.

ಪ್ರಶಸ್ತಿಗೆ ನಾಮನಿರ್ದೇಶನಗೊಂಡಾಗ ಶಮಿಯು ಸಂತಸವನ್ನು ವ್ಯಕ್ತಪಡಿಸಿದ್ದರು. ಈ ಪ್ರಶಸ್ತಿಯು ಒಂದು ಕನಸು, ಹಲವಾರು ಮಂದಿ ತಮ್ಮ ಜೀವಿತಾವಧಿ ಮುಗಿದರೂ ಈ ಪ್ರಶಸ್ತಿ ಪಡೆಯಲು ಸಾಧ್ಯವಾಗುವುದಿಲ್ಲ. ಈ ಪ್ರಶಸ್ತಿಗೆ ನನ್ನನ್ನು ನಾಮಕರಣ ಮಾಡಿದ್ದಕ್ಕೆ ನನಗೆ ಸಂತೋಷವಾಗಿದೆ ಮತ್ತು ನಾನು ಹೆಮ್ಮೆಪಡುತ್ತೇನೆ. ಇದು ಅನೇಕರಿಗೆ ನನಸಾಗದ ಕನಸಾಗಿದೆ ಎಂದು ಶಮಿ ಸೋಮವಾರ ದೇಶದ ಎರಡನೇ ಅತಿದೊಡ್ಡ ಕ್ರೀಡಾ ಗೌರವಕ್ಕೆ ನಾಮನಿರ್ದೇಶನಗೊಂಡ ಬಗ್ಗೆ ಮಾತನಾಡುತ್ತಾ ಹೇಳಿದ್ದಾರೆ.

2023ರ ಏಕದನ ವಿಶ್ವಕಪ್‌ ಪಂದ್ಯದಲ್ಲಿ ಮೊಹಮ್ಮದ್ ಶಮಿ ಭಾರತೀಯ ತಂಡದ ಪ್ರಕಾಶಮಾನವಾದ ತಾರೆಗಳಲ್ಲಿ ಒಬ್ಬರಾಗಿದ್ದರು. ಶಮಿ ಕೇವಲ ಏಳು ಪಂದ್ಯಗಳಲ್ಲಿ 24 ವಿಕೆಟ್‌ಗಳನ್ನು ಪಡೆದರು. ಈ ಮೂಲಕ ಹಲವಾರು ದಾಖಲೆಗಳನ್ನು ಮುರಿದರು ಮತ್ತು ಪಂದ್ಯಾವಳಿಯ ಇತಿಹಾಸದಲ್ಲಿ ಭಾರತದ ಸಾರ್ವಕಾಲಿಕ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಶಮಿ ಈ ಟೂರ್ನಿಯಲ್ಲಿ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರಿಗಿಂತ ಹೆಚ್ಚು ವಿಕೆಟ್‌ಗಳನ್ನು ಗಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು.

ಶಮಿ ಉತ್ತರಪ್ರದೇಶದ ಅಮ್ರೋಹದ ಸಹಸ್ಪುರ ಗ್ರಾಮದ ನಿವಾಸಿಯಾಗಿದ್ದಾರೆ. ಅವರ ತಂದೆ ತೌಸೀಫ್‌ ಅಲಿ ರೈತರಾಗಿದ್ದಾರೆ. ಇವರ ತಂದೆ ತಾಯಿಗೆ ಐವರು ಮಕ್ಕಳು. ಶಮಿ ತಮ್ಮ ಯೌವನದಲ್ಲಿ ವೇಗದ ಬೌಲರ್ ಆಗಿದ್ದರು. ಶಮಿ 15 ವರ್ಷದವನಾಗಿದ್ದಾಗ ಅವರ ಮನೆಯಿಂದ 22 ಕಿಲೋಮೀಟರ್ ದೂರದಲ್ಲಿರುವ ಮೊರದಾಬಾದ್‌ನಲ್ಲಿರುವ ಕ್ರಿಕೆಟ್ ತರಬೇತುದಾರ ಬದ್ರುದ್ದೀನ್ ಸಿದ್ದಿಕ್ ಬಳಿಗೆ ತರಬೇತಿಗೆ ತೆರಳಿದ್ದರು. ಅಲ್ಲಿ ಪರಿಶ್ರಮದಿಂದ ತರಭೇತಿಯನ್ನು ಪಡೆದರು. ಆದರೆ ಉತ್ತರಪ್ರದೇಶದ ಅಂಡರ್‌ 19 ತಂಡಕ್ಕೆ ಪ್ರವೇಶ ಸಿಕ್ಕಿರಲಿಲ್ಲ. 2005ರಲ್ಲಿ ಇವರನ್ನು ರಾಜ್ಯ ತಂಡಕ್ಕೆ ಆಯ್ಕೆ ಮಾಡುವ ಉದ್ದೇಶದಿಂದ ಕೋಚ್‌ ಬದ್ರುದ್ದೀನ್ ಕೊಲ್ಕತ್ತಾಗೆ ಕಳುಹಿಸಿದ್ದರು. ಆ ಬಳಿಕ ಅವರು ಬಂಗಾಳ ಕ್ರಿಕೆಟ್‌ ಅಸೋಸಿಯೇಷನ್‌ ಮಾಜಿ ಸಹಾಯಕ ಕಾರ್ಯದರ್ಶಿ ದೇಬಬ್ರತ ದಾಸ್‌ ಅವರ ಕ್ಲಬ್‌ನಲ್ಲಿ ತರಬೇತಿಯನ್ನು ಪಡೆದಿದ್ದರು. ಶಮಿ ಅವರನ್ನು 2010-11ರಲ್ಲಿ ರಣಜಿ ಟ್ರೋಪಿಗೆ ಬಂಗಾಳ ತಂಡಕ್ಕೆ ಸೇರಿಸಲಾಗಿತ್ತು. ಬಳಿಕ 2010ರಲ್ಲಿ ಅವರು ಟ್ವೆಂಟಿ20 ಪಂದ್ಯಗಳಲ್ಲಿ ಆಡಿದ್ದರು. 2013ರಲ್ಲಿ ಅವರು ಅಂತಾರಷ್ಟ್ರೀಯ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದರು.

ಏಷ್ಯನ್ ಗೇಮ್ಸ್‌ನ ತಾರೆಗಳಿಗೂ ಪ್ರಶಸ್ತಿ ಪ್ರಧಾನ:
ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಏಷ್ಯನ್ ಗೇಮ್ಸ್ ತಾರೆ ಶೀತಲ್ ದೇವಿ ಅವರಿಗೆ ಅರ್ಜುನ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ಇದಲ್ಲದೆ ಭಾರತದ ಏಷ್ಯನ್ ಗೇಮ್ಸ್ ಹೀರೋಗಳಾದ ಅದಿತಿ ಗೋಪಿಚಂದ್ ಸ್ವಾಮಿ, ಶ್ರೀಶಂಕರ್ ಮುರಳಿ, ಪಾರುಲ್ ಚೌಧರಿ, ಇಶಾ ಸಿಂಗ್ ಮತ್ತು ಐಶ್ವರಿ ಪ್ರತಾಪ್ ಸಿಂಗ್ ತೋಮರ್ ಅವರಿಗೂ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

2023 ರಲ್ಲಿ ಅರ್ಜುನ ಪ್ರಶಸ್ತಿ ಪಡೆದ ಕ್ರೀಡಾಪಟುಗಳ ಪಟ್ಟಿ

-ಓಜಸ್ ಪ್ರವೀಣ್ ಡಿಯೋಟಾಲೆ (ಬಿಲ್ಲುಗಾರಿಕೆ)
-ಅದಿತಿ ಗೋಪಿಚಂದ್ ಸ್ವಾಮಿ (ಬಿಲ್ಲುಗಾರಿಕೆ)
-ಶ್ರೀಶಂಕರ್ ಎಂ (ಅಥ್ಲೆಟಿಕ್ಸ್)
-ಪಾರುಲ್ ಚೌಧರಿ (ಅಥ್ಲೆಟಿಕ್ಸ್)
-ಮೊಹಮೀದ್ ಹುಸಾಮುದ್ದೀನ್ (ಬಾಕ್ಸಿಂಗ್)
-ಆರ್ ವೈಶಾಲಿ (ಚೆಸ್)
-ಮೊಹಮ್ಮದ್ ಶಮಿ (ಕ್ರಿಕೆಟ್)
-ಅನುಷ್ ಅಗರ್ವಾಲಾ (ಈಕ್ವೆಸ್ಟ್ರಿಯನ್)
-ದಿವ್ಯಾಕೃತಿ ಸಿಂಗ್ (ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್)
-ದೀಕ್ಷಾ ದಾಗರ್ (ಗಾಲ್ಫ್)
-ಕ್ರಿಶನ್ ಬಹದ್ದೂರ್ ಪಾಠಕ್ (ಹಾಕಿ)
-ಪುಖ್ರಂಬಂ ಸುಶೀಲಾ ಚಾನು (ಹಾಕಿ)
-ಪವನ್ ಕುಮಾರ್ (ಕಬಡ್ಡಿ)
-ರಿತು ನೇಗಿ (ಕಬಡ್ಡಿ)
-ನಸ್ರೀನ್ (ಖೋ-ಖೋ)
-ಪಿಂಕಿ (ಲಾನ್ ಬೌಲ್ಸ್)
-ಐಶ್ವರಿ ಪ್ರತಾಪ್ ಸಿಂಗ್ ತೋಮರ್ (ಶೂಟಿಂಗ್)
-ಇಶಾ ಸಿಂಗ್ (ಶೂಟಿಂಗ್)
-ಹರಿಂದರ್ ಪಾಲ್ ಸಿಂಗ್ ಸಂಧು (ಸ್ಕ್ವಾಷ್)
-ಅಹಿಕಾ ಮುಖರ್ಜಿ (ಟೇಬಲ್ ಟೆನಿಸ್)
-ಸುನಿಲ್ ಕುಮಾರ್ (ಕುಸ್ತಿ)
-ಆಂಟಿಮ್ (ಕುಸ್ತಿ)
-ನವೋರೆಮ್ ರೋಶಿಬಿನಾ ದೇವಿ (ವುಶು)
-ಶೀತಲ್ ದೇವಿ (ಪ್ಯಾರಾ ಆರ್ಚರಿ)
-ಇಲ್ಲೂರಿ ಅಜಯ್ ಕುಮಾರ್ ರೆಡ್ಡಿ (ಅಂಧ ಕ್ರಿಕೆಟ್)
-ಪ್ರಾಚಿ ಯಾದವ್ (ಪ್ಯಾರಾ ಕ್ಯಾನೋಯಿಂಗ್)

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...