Homeಮುಖಪುಟಮೊಹಮ್ಮದ್ ಝುಬೈರ್ ವಿರುದ್ಧದ ಪೋಕ್ಸೊ ಪ್ರಕರಣ ಮುಕ್ತಾಯ | ಹೈಕೋರ್ಟ್‌ಗೆ ಛತ್ತೀಸ್‌ಗಡ ಸರ್ಕಾರ ಮಾಹಿತಿ

ಮೊಹಮ್ಮದ್ ಝುಬೈರ್ ವಿರುದ್ಧದ ಪೋಕ್ಸೊ ಪ್ರಕರಣ ಮುಕ್ತಾಯ | ಹೈಕೋರ್ಟ್‌ಗೆ ಛತ್ತೀಸ್‌ಗಡ ಸರ್ಕಾರ ಮಾಹಿತಿ

- Advertisement -
- Advertisement -

ಖ್ಯಾತ ಫ್ಯಾಕ್ಟ್‌ಚೆಕ್ಕರ್‌, ಆಲ್ಟ್-ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಝುಬೈರ್ ವಿರುದ್ಧದ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣದಲ್ಲಿ ಮುಕ್ತಾಯ ವರದಿಯನ್ನು ಸಲ್ಲಿಸಲಾಗಿದೆ ಎಂದು ಛತ್ತೀಸ್‌ಗಢ ರಾಜ್ಯ ಸರ್ಕಾರ ಅಧಿಕೃತವಾಗಿ ಛತ್ತೀಸ್‌ಗಢ ಹೈಕೋರ್ಟ್‌ಗೆ ತಿಳಿಸಿದೆ. ಝುಬೈರ್ ಅವರು 2020 ರಲ್ಲಿ ಪೋಸ್ಟ್ ಮಾಡಿದ ಟ್ವೀಟ್‌ಗೆ ಸಂಬಂಧಿಸಿ ಈ ಪ್ರಕರಣ ದಾಖಲಾಗಿತ್ತು.

ಮುಖ್ಯ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ವರ್ಮಾ ಅವರನ್ನೊಳಗೊಂಡ ಪೀಠದ ಮುಂದೆ ರಾಜ್ಯದ ವಕೀಲರು ಈ ಮಾಹಿತಿಯನ್ನು ಮಂಡಿಸಿದ್ದಾರೆ. ಇದರ ನಂತರ, ವಿಭಾಗೀಯ ಪೀಠವು ಝುಬೈರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡಿತು. ಇದರಲ್ಲಿ ಐಟಿ ಕಾಯ್ದೆ, ಐಪಿಸಿ ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿದ್ದರು.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮೊಹಮ್ಮದ್ ಝುಬೈರ್ ಅವರು, ಸತ್ಯಕ್ಕೆ ಹಿನ್ನಡೆಯಾಗಬಹುದು, ಆದರೆ ಅದನ್ನು ಸೋಲಿಸಲು ಸಾಧ್ಯವಿಲ್ಲ. ನ್ಯಾಯವು ಗೆಲ್ಲುತ್ತದೆ! ಎಂದು ಹೇಳಿದ್ದಾರೆ.

“ಈಗ ಎರಡು ಕಡಿಮೆಯಾಗಿದೆ, ಇನ್ನೂ ಹತ್ತು ಎಫ್‌ಐಆರ್‌ಗಳು ಬಾಕಿ ಇವೆ. ಛತ್ತೀಸ್‌ಗಢದಲ್ಲಿ ಪೋಕ್ಸೋ ಕಾಯ್ದೆಯಡಿ ನನ್ನ ವಿರುದ್ಧ ಎಫ್‌ಐಆರ್ ದಾಖಲಾಗಿ 4 ವರ್ಷಗಳ ನಂತರ, ರಾಯ್‌ಪುರ ಪೊಲೀಸರು ಅಂತಿಮವಾಗಿ ಮುಕ್ತಾಯ ವರದಿಯನ್ನು ಸಲ್ಲಿಸಿದ್ದಾರೆ. ಛತ್ತೀಸ್‌ಗಢ ನ್ಯಾಯಾಲಯವು ಆದೇಶವನ್ನು ವಿಲೇವಾರಿ ಮಾಡಿದೆ. ಈ ಪ್ರಕರಣದಲ್ಲಿ, ಕನೂಂಗೊ ಪ್ರಿಯಾಂಕ್, ಎನ್‌ಸಿಪಿಸಿಆರ್ ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ದೆಹಲಿ ಮತ್ತು ರಾಯ್‌ಪುರ ಪೊಲೀಸರಿಗೆ ಪತ್ರ ಬರೆದು ನನ್ನ ಟ್ವೀಟ್ ಅಪ್ರಾಪ್ತ ಬಾಲಕಿಯ ಚಿತ್ರಹಿಂಸೆ ಮತ್ತು ಕಿರುಕುಳಕ್ಕೆ ಸಮನಾಗಿದೆ ಎಂದು ಆರೋಪಿಸಿ ನನ್ನ ವಿರುದ್ಧ ಅಪಪ್ರಚಾರ ನಡೆಸಿತು. ಆದರೆ ಕಳೆದ ವರ್ಷ, ದೆಹಲಿ ನ್ಯಾಯಾಲಯವು ನನ್ನ ವಿರುದ್ಧ ಪ್ರಕರಣ ದಾಖಲಿಸಿದ ವ್ಯಕ್ತಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಕೇಳಿತ್ತು. ಮತ್ತು ಈಗ ಛತ್ತೀಸ್‌ಗಢ ಪೊಲೀಸರು ಮುಕ್ತಾಯ ವರದಿಯನ್ನು ಸಲ್ಲಿಸಿ ನನ್ನ ಹೆಸರನ್ನು ತೆರವುಗೊಳಿಸಿದರು.” ಎಂದು ಝುಬೈರ್ ಹೇಳಿದ್ದಾರೆ.

ಪ್ರಕರಣದ ಹಿನ್ನಲೆ

ತಮ್ಮ ಅಪ್ರಾಪ್ತ ಮೊಮ್ಮಗಳೊಂದಿಗೆ ನಿಂತಿದ್ದ ಜಗದೀಶ್ ಸಿಂಗ್ ಎಂಬ ವ್ಯಕ್ತಿಯ ಪ್ರೊಫೈಲ್ ಚಿತ್ರವನ್ನು 2020 ರಲ್ಲಿ ಮೊಹಮ್ಮದ್ ಝುಬೈರ್ ಅವರು ಹಂಚಿಕೊಂಡ ನಂತರ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಜಗಧೀಶ್ ಸಿಂಗ್ ಅವರು ಝುಬೈರ್ ಅವರನ್ನು “ಜಿಹಾದಿ” ಎಂದು ಕರೆಯುವುದು ಸೇರಿದಂತೆ ಅವಹೇಳನಕಾರಿ ಭಾಷೆಯನ್ನು ಬಳಸಿದ್ದರು. ಇದನ್ನು ಉದ್ದೇಶಿಸಿ ಜುಬೈರ್ ಅವರು ಮಗುವನ್ನು ಒಳಗೊಂಡ ಪ್ರೊಫೈಲ್ ಚಿತ್ರವನ್ನು ಹಂಚಿ, ಮಕ್ಕಳ ಜೊತೆಗೆ ಇಂತಹ ಚಿತ್ರ ಹಾಕಿರುವ ನೀವು ಇಂತಹ ಭಾಷೆಯನ್ನು ಬಳಸುವುದು ಸರಿಯೆ ಎಂದು ಪ್ರಶ್ನಿಸಿದ್ದರು.

“ನಮಸ್ಕಾರ ಜಗದೀಶ್ ಸಿಂಗ್. ಸಾಮಾಜಿಕ ಮಾಧ್ಯಮದಲ್ಲಿ ಜನರನ್ನು ನಿಂದಿಸುವ ನಿಮ್ಮ ಅರೆಕಾಲಿಕ ಕೆಲಸದ ಬಗ್ಗೆ ನಿಮ್ಮ ಮುದ್ದಾದ ಮೊಮ್ಮಗಳಿಗೆ ತಿಳಿದಿದೆಯೇ? ನಿಮ್ಮ ಪ್ರೊಫೈಲ್ ಚಿತ್ರವನ್ನು ಬದಲಾಯಿಸಲು ನಾನು ಸೂಚಿಸುತ್ತೇನೆ.” ಎಂದು ಝುಬೈರ್ ಟ್ವೀಟ್ ಮಾಡಿದ್ದು, ಟ್ವೀಟ್ ಪೋಸ್ಟ್ ಮಾಡುವ ಮೊದಲು ಝುಬೈರ್ ಅವರು ಅಪ್ರಾಪ್ತ ಬಾಲಕಿಯ ಮುಖವನ್ನು ಮಸುಕುಗೊಳಿಸಿದ್ದರು.

ಝುಬೈರ್ ಅವರ ಟ್ವೀಟ್‌ನ ನಂತರ, ಜಗದೀಶ್ ಸಿಂಗ್ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ (NCPCR) ದೂರು ದಾಖಲಿಸಿದ್ದರು. ಇದರ ನಂತರ NCPCR ದೆಹಲಿ ಪೊಲೀಸರು ಮತ್ತು ರಾಯ್ಪುರ್ ಪೊಲೀಸರಿಗೆ ಪತ್ರ ಬರೆದು, ಈ ಟ್ವೀಟ್ ಅಪ್ರಾಪ್ತ ಬಾಲಕಿಗೆ ನೀಡುತ್ತಿರುವ ಚಿತ್ರಹಿಂಸೆ ಮತ್ತು ಕಿರುಕುಳವಾಗಿದೆ ಎಂದು ಹೇಳಿಕೊಂಡಿತ್ತು. ಇದರ ಆಧಾರದ ರಾಯ್ಪುರ್ ಪೊಲೀಸರು ಹಲವಾರು ಕಾನೂನು ನಿಬಂಧನೆಗಳ ಅಡಿಯಲ್ಲಿ ಝಬೈರ್‌ ವಿರುದ್ಧ FIR ದಾಖಲಿಸಿದ್ದರು.

ಈ ವೇಳೆ ಅವರ ವಿರುದ್ಧ IPC ಯ ಸೆಕ್ಷನ್ 509B (ಎಲೆಕ್ಟ್ರಾನಿಕ್ ವಿಧಾನಗಳಿಂದ ಲೈಂಗಿಕ ಕಿರುಕುಳ), POCSO ಕಾಯ್ದೆಯ ಸೆಕ್ಷನ್ 12 (ಮಗುವಿನ ಮೇಲೆ ಲೈಂಗಿಕ ಕಿರುಕುಳ ಎಸಗಿದ್ದಕ್ಕಾಗಿ ಶಿಕ್ಷೆ), IT ಕಾಯ್ದೆಯ ಸೆಕ್ಷನ್ 67 (ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಷಯವನ್ನು ಪ್ರಕಟಿಸಿದ್ದಕ್ಕಾಗಿ ಅಥವಾ ರವಾನಿಸಿದ್ದಕ್ಕಾಗಿ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

FIR ಅನ್ನು ಪ್ರಶ್ನಿಸಿ, ಮೊಹಮ್ಮದ್ ಝುಬೈರ್ ಅವರು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 482 ರ ಅಡಿಯಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ಈ ಎಫ್‌ಐಆರ್ ಕಾನೂನು ಪ್ರಕ್ರಿಯೆಯ ದುರುಪಯೋಗವಾಗಿದ್ದು, ತಾನು ಮಾಡಿರುವ ಟ್ವೀಟ್ ಆಪಾದಿತ ವಿಭಾಗಗಳ ಅಡಿಯಲ್ಲಿ ಯಾವುದೇ ಕ್ರಿಮಿನಲ್ ಅಪರಾಧವಲ್ಲ ಎಂದು ಅವರ ವಕೀಲರು ವಾದಿಸಿದ್ದರು. ಅಕ್ಟೋಬರ್ 2020 ರಲ್ಲಿ, ಝುಬೈರ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶ ಹೊರಡಿಸಿತ್ತು.

ಆಗಸ್ಟ್ 2023 ರಲ್ಲಿ, ದೆಹಲಿ ಹೈಕೋರ್ಟ್ ಜಗದೀಶ್ ಸಿಂಗ್ ಅವರು 2020 ರಲ್ಲಿ ಝುಬೈರ್ ಅವರನ್ನು “ಜಿಹಾದಿ” ಎಂದು ಕರೆದಿದ್ದ ಅವರ ಆಕ್ರಮಣಕಾರಿ ಟ್ವೀಟ್‌ಗಾಗಿ ಎಕ್ಸ್‌ನಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಆದೇಶಿಸಿತ್ತು. ಜುಬೈರ್ ವಿರುದ್ಧದ ಆಕ್ರಮಣಕಾರಿ ಕಾಮೆಂಟ್‌ಗಾಗಿ ಸಿಂಗ್ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಹೇಳುವ ಸ್ಥಿತಿ ವರದಿಯನ್ನು ದೆಹಲಿ ಪೊಲೀಸರು ಸಲ್ಲಿಸಿದ ನಂತರ ಈ ಆದೇಶವನ್ನು ಅಂಗೀಕರಿಸಲಾಯಿತು. ಜೊತೆಗೆ ಅವರ ಅವಹೇಳನಕಾರಿ ಕಾಮೆಂಟ್ ಸಾರ್ವಜನಿಕವಾಗಿ ಲಭ್ಯವಿದ್ದರೂ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದಕ್ಕಾಗಿ ದೆಹಲಿ ಪೊಲೀಸರನ್ನು ನ್ಯಾಯಾಲಯವು ಈ ಹಿಂದೆ ಟೀಕಿಸಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ನಿಮ್ಮ ವಿಷವನ್ನು ಕೇರಳ ದೂರವಿಟ್ಟಿದೆ; ಒಬ್ಬ ಗೆದ್ದಿದ್ದಾರೆ, ಆದರೆ ಅದನ್ನು ಮುಚ್ಚುತ್ತೇವೆ’: ಬಿಜೆಪಿಗೆ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್

‘ನಿಮ್ಮ ವಿಷವನ್ನು ಕೇರಳ ದೂರವಿಟ್ಟಿದೆ; ಒಬ್ಬ ಗೆದ್ದಿದ್ದಾರೆ, ಆದರೆ ಅದನ್ನು ಮುಚ್ಚುತ್ತೇವೆ’: ಬಿಜೆಪಿಗೆ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...