Homeಮುಖಪುಟಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

- Advertisement -
- Advertisement -

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ ಲೋಕಸಭೆ ಸೆಕ್ರೆಟರಿಯೇಟ್ ಅವರ ಸದಸ್ಯತ್ವವನ್ನು ಮರುಸ್ಥಾಪಿಸಿದೆ ಎಂದು ಪಿಟಿಐ ವರದಿ ಮಾಡಿದೆ.

”ಮುಂದಿನ ನ್ಯಾಯಾಂಗ ತೀರ್ಪು ಬರುವವರೆಗೂ ಸದನದಿಂದ ಫೈಝಲ್ ಅವರ ಸದಸ್ಯತ್ವವನ್ನು ಮರುಸ್ಥಾಪಿಸಿದೆ” ಎಂದು ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ಅವರು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಈ ವರ್ಷ ಅವರನ್ನು ಎರಡನೇ ಬಾರಿಗೆ ಅಕ್ಟೋಬರ್ 4 ರಂದು ಸಂಸದರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಯಿತು.

ಅಕ್ಟೋಬರ್ 9 ರಂದು, ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಸಂಜಯ್ ಕರೋಲ್ ಅವರ ಸುಪ್ರೀಂ ಕೋರ್ಟ್ ಪೀಠವು ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್ ಆಗಸ್ಟ್ 22ರ ಆದೇಶವು ಜಾರಿಗೆ ಬರಲಿದೆ ಎಂದು ಪೀಠ ಹೇಳಿದೆ.

2009 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಪಿಎಂ ಸಯೀದ್ ಅವರ ಅಳಿಯ ಪಡನಾಥ್ ಸಾಲಿಹ್ ಅವರನ್ನು ಕೊಲೆ ಮಾಡಲು ಯತ್ನಿಸಿದ್ದಕ್ಕಾಗಿ ಲಕ್ಷದ್ವೀಪ್ ಸೆಷನ್ಸ್ ನ್ಯಾಯಾಲಯವು ಜನವರಿ 11 ರಂದು ಫೈಝಲ್ ಮತ್ತು ಇತರ ನಾಲ್ವರನ್ನು ದೋಷಿ ಎಂದು ಘೋಷಿಸಿತು. ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಈ ಶಿಕ್ಷೆಯ ನಂತರ ಫೈಝಲ್ ಅವರನ್ನು ಲೋಕಸಭೆಯ ಸದಸ್ಯರಾಗಿ ಮೊದಲು ಅನರ್ಹಗೊಳಿಸಲಾಯಿತು.

ಕೇರಳ ಹೈಕೋರ್ಟ್‌ನಲ್ಲಿ ಆ ತೀರ್ಪನ್ನು ಪ್ರಶ್ನಿಸಿದ್ದರು, ಜನವರಿ 25ರಂದು ಅವರ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಿತು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಕಾನೂನು ರದ್ದುಗೊಳಿಸುವುದು ತುಂಬಾ ಕಷ್ಟ: ಸುಪ್ರೀಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read