Homeಚಳವಳಿಜುಬೇರ್‌ ಬಂಧನ: ಬರವಣಿಗೆ, ಟ್ವೀಟ್ ಆಧಾರದಲ್ಲಿ ಪತ್ರಕರ್ತರನ್ನು ಜೈಲಿಗೆ ಹಾಕಬಾರದು- ವಿಶ್ವಸಂಸ್ಥೆ

ಜುಬೇರ್‌ ಬಂಧನ: ಬರವಣಿಗೆ, ಟ್ವೀಟ್ ಆಧಾರದಲ್ಲಿ ಪತ್ರಕರ್ತರನ್ನು ಜೈಲಿಗೆ ಹಾಕಬಾರದು- ವಿಶ್ವಸಂಸ್ಥೆ

- Advertisement -
- Advertisement -

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಅವರ ಬಂಧನಕ್ಕೆ ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆ ವಕ್ತಾರರೊಬ್ಬರು “ಪತ್ರಕರ್ತರು ಏನು ಬರೆಯುತ್ತಾರೆ, ಏನು ಟ್ವೀಟ್ ಮಾಡುತ್ತಾರೆ ಮತ್ತು ಏನು ಹೇಳುತ್ತಾರೆಂಬುದರ ಮೇಲೆ ಜೈಲಿಗೆ ಹಾಕಬಾರದು” ಎಂದಿದ್ದಾರೆ.

ಯುಎನ್ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ (Antonio Guterres)ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಮಂಗಳವಾರ ಪ್ರತಿಕ್ರಿಯಿಸಿ, ’ಯಾವುದೇ ಕಿರುಕುಳದ ಬೆದರಿಕೆಯಿಲ್ಲದೆ ಜನರು ಮುಕ್ತವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡುವುದು ಮುಖ್ಯ ಎಂದು ಪ್ರತಿಪಾದಿಸಿದ್ದಾರೆ.

2018ರ ಟ್ವೀಟ್ ಒಂದಕ್ಕೆ ಸಂಬಂಧಿಸಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಆರೋಪದ ಮೇಲೆ ದಿಟ್ಟ ಪತ್ರಕರ್ತ, ಆಲ್ಟ್‌ನ್ಯೂಸ್ ಸಹ ಸಂಪಾದಕ ಮೊಹಮ್ಮದ್ ಜುಬೇರ್‌ರನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮಂಗಳವಾರ ಜುಬೇರ್‌ ಅವರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಇದನ್ನೂ ಓದಿ: ‘ಯಾರಿಗೂ ಹೇಳಬೇಡಿ’: ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಬಂಧನಕ್ಕೆ ಕಾರಣ!

ಜುಬೇರ್ ಬಂಧನಕ್ಕೆ ಪ್ರತಿಕ್ರಿಯಿಸಿದ ಸ್ಟೀಫನ್ ಡುಜಾರಿಕ್ “ಪ್ರಪಂಚದಾದ್ಯಂತ ಯಾವುದೇ ಸ್ಥಳವಿರಲಿ, ಜನರು ತಮ್ಮನ್ನು ಮುಕ್ತವಾಗಿ ವ್ಯಕ್ತಪಡಿಸಲು ಅವಕಾಶ ನೀಡುವುದು ಬಹಳ ಮುಖ್ಯ, ಪತ್ರಕರ್ತರು ತಮ್ಮನ್ನು ಮುಕ್ತವಾಗಿ ಮತ್ತು ಯಾವುದೇ ಕಿರುಕುಳದ ಬೆದರಿಕೆಯಿಲ್ಲದೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಬೇಕು” ಎಂದಿದ್ದಾರೆ.

ಜುಬೇರ್‌ ಬಂಧನದ ಕುರಿತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ದೈನಂದಿನ ಸುದ್ದಿಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸ್ಟೀಫನ್ ಡುಜಾರಿಕ್  “ಪತ್ರಕರ್ತರು ಏನು ಬರೆಯುತ್ತಾರೆ, ಅವರು ಏನು ಟ್ವೀಟ್ ಮಾಡುತ್ತಾರೆ ಮತ್ತು ಅವರು ಏನು ಹೇಳುತ್ತಾರೆಂದು ಜೈಲಿಗೆ ಹಾಕಬಾರದು” ಎಂದು ಹೇಳಿದ್ದಾರೆ.

2002 ರ ಗುಜರಾತ್ ಗಲಭೆಯಲ್ಲಿ “ಕ್ರಿಮಿನಲ್ ಪಿತೂರಿ, ಫೋರ್ಜರಿ ಮತ್ತು ನ್ಯಾಯಾಲಯದಲ್ಲಿ ಸುಳ್ಳು ಪುರಾವೆಗಳನ್ನು ಹಾಕಿ ಅಮಾಯಕರನ್ನು ಬಂಧಿಸಿದ” ಆರೋಪದ ಮೇಲೆ ಗುಜರಾತ್ ಅಧಿಕಾರಿಗಳು ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಿದ ಕೆಲವು ದಿನಗಳ ನಂತರ ಮೊಹಮ್ಮದ್ ಜುಬೇರ್ ಬಂಧನವಾಗಿದೆ.

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಬಂಧನದ ಬಗ್ಗೆ ವಿಶ್ವಸಂಸ್ಥೆ ಮಾನವ ಹಕ್ಕುಗಳ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ ಮತ್ತು ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿದೆ.


ಇದನ್ನೂ ಓದಿ: ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಮತ್ತೆ ನಾಲ್ಕು ದಿನ ಪೊಲೀಸ್ ವಶಕ್ಕೆ

ಇದನ್ನೂ ಓದಿ: ‘ಆಡಳಿತದ ಆಕ್ರಮಣಕಾರಿ ದುರುಪಯೋಗ’: ತೀಸ್ತಾ ಬಂಧನ ವಿರೋಧಿಸಿದ ಭಾರತದ ಮತ್ತು ಯುಎನ್‌ನ ಮಾನವ ಹಕ್ಕುಗಳ ವರ್ಕಿಂಗ್ ಗ್ರೂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...