Homeಮುಖಪುಟಗೋರಖ್‌ಪುರ ಪ್ರವಾಸದ ವೇಳೆ ಆದಿತ್ಯನಾಥ್ ಅವರನ್ನು ಭೇಟಿಯಾಗದ ಮೋಹನ್ ಭಾಗವತ್!

ಗೋರಖ್‌ಪುರ ಪ್ರವಾಸದ ವೇಳೆ ಆದಿತ್ಯನಾಥ್ ಅವರನ್ನು ಭೇಟಿಯಾಗದ ಮೋಹನ್ ಭಾಗವತ್!

- Advertisement -
- Advertisement -

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಗೋರಖ್‌ಪುರದ ಐದು ದಿನಗಳ ಭೇಟಿಯನ್ನು ಮುಗಿಸಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗದೆ ಇರುವುದು ಕುತೂಲ ಮೂಡಿಸಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಯಾಗಿದೆ ಎನ್ನುವ ಊಹಾಪೋಹಗಳಿಗೆ ಈ ಬೆಳವಣಿಗೆ ಮತ್ತಷ್ಟು ಪುಷ್ಟಿ ನೀಡಿದೆ.

ಅವಧ್, ಕಾಶಿ, ಕಾನ್ಪುರ್ ಮತ್ತು ಗೋರಖ್‌ಪುರದಿಂದ ಆರ್‌ಎಸ್‌ಎಸ್ ಕಾರ್ಯಕರ್ತರ ಸುಮಾರು ಅರ್ಧ ಡಜನ್ ಸಭೆಗಳನ್ನು ಉದ್ದೇಶಿಸಿ ಭಾಗವತ್ ಅವರು ಮಾತನಾಡಿದ್ದಾರೆ.

ಭಾಗವತ್ ಅವರು ಗೋರಖ್‌ಪುರದ ಮಣಿರಾಮ್ ಚಿಯುತಾಹ ಪ್ರದೇಶದಲ್ಲಿ ಎಸ್.ವಿ.ಎಂ. ಪಬ್ಲಿಕ್ ಸ್ಕೂಲ್, ಆದಿತ್ಯನಾಥ್ ನೇತೃತ್ವದ ಗೋರಖನಾಥ ದೇವಸ್ಥಾನದಿಂದ ಕೇವಲ 12 ಕಿ.ಮೀ. ದೂರದಲ್ಲಿದೆ. ಆದರೆ, ಅವರು ಯಾವುದೇ ಬಿಜೆಪಿ ನಾಯಕರನ್ನು ಭೇಟಿಯಾಗಲಿಲ್ಲ, ಅಂತಹ ಭೇಟಿಯ ಎಲ್ಲ ವಿನಂತಿಗಳನ್ನು ನಯವಾಗಿ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.

ಗೋರಖ್‌ಪುರಕ್ಕೆ ಭಾಗವತ್ ಆಗಮಿಸಿದ ದಿನವಾದ ಬುಧವಾರದಂದು ಆದಿತ್ಯನಾಥ್ ಅವರನ್ನು ಜೂನ್ 15 ರಂದು ಭೇಟಿಯಾಗಲಿದ್ದಾರೆ ಎಂದು ತಿಳಿಸಲಾಗಿತ್ತು ಎಂದು ಹಲವು ಸಂಘ ಮತ್ತು ಬಿಜೆಪಿ ಮುಖಂಡರು ಈ ಮಾಧ್ಯಮಗಳಿಗೆ ತಿಳಿಸಿದ್ದರು. ಆದರೆ, ಆದಿತ್ಯನಾಥ್ ಶನಿವಾರ ಮತ್ತು ಭಾನುವಾರ ಅವರ ದೇವಸ್ಥಾನದಲ್ಲಿದ್ದರೂ ಅಂತಹ ಯಾವುದೇ ಸಭೆ ನಡೆಯಲಿಲ್ಲ.

ಗೋರಖ್‌ಪುರದ ರಾಜಕೀಯ ವೀಕ್ಷಕರೊಬ್ಬರು ಆರೆಸ್ಸೆಸ್-ಬಿಜೆಪಿ ಭಿನ್ನಾಭಿಪ್ರಾಯವು “ನಿಜವಾದ ವಿರೋಧವನ್ನು ಮರೆಮಾಚುವ” ನಾಟಕವಾಗಿರಬಹುದು ಎಂದು ಅನುಮಾಣ ವ್ಯಕ್ತಪಡಿಸಿದ್ದಾರೆ.

“ಭಾಗವತ್ ಅವರು ತಮ್ಮ ಕಾರ್ಯಕರ್ತರನ್ನು ಅಥವಾ ಮೋದಿಯನ್ನು ದೂಷಿಸಲು ಸಾಧ್ಯವಿಲ್ಲ. ಮೋದಿ ಪ್ರಧಾನಿಯಾದ ನಂತರ ಸಂಘವು ತನ್ನ ಕಾರ್ಯಕರ್ತರಿಗೆ ಬಿಜೆಪಿ ರಾಜಕಾರಣಿಗಳೊಂದಿಗೆ ಬೆರೆಯಲು ಅವಕಾಶ ಮಾಡಿಕೊಟ್ಟಿತು” ಎಂದರು.

ಇದನ್ನೂ ಓದಿ; ಪನ್ನುನ್‌ನನ್ನು ಹತ್ಯೆ ಸಂಚಿನ ಆರೋಪ: ನಿಖಿಲ್ ಗುಪ್ತಾನನ್ನು ಕೋರ್ಟ್‌ಗೆ ಹಾಜರುಪಡಿಸಿದ ಯುಎಸ್ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...