Homeಮುಖಪುಟಫ್ಯಾಕ್ಟ್‌ಚೆಕ್‌: ಜನಸಂಖ್ಯೆ ಹೆಚ್ಚಳ, ಮತಾಂತರ ಕುರಿತು ಮೋಹನ್ ಭಾಗವತ್‌ ಮಾತಿನ ಮರ್ಮವೇನು? ವಾಸ್ತವವೇನು?

ಫ್ಯಾಕ್ಟ್‌ಚೆಕ್‌: ಜನಸಂಖ್ಯೆ ಹೆಚ್ಚಳ, ಮತಾಂತರ ಕುರಿತು ಮೋಹನ್ ಭಾಗವತ್‌ ಮಾತಿನ ಮರ್ಮವೇನು? ವಾಸ್ತವವೇನು?

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ವಾರ್ಷಿಕ ದಸರಾ ಸಮಾರಂಭದಲ್ಲಿ ಮಾಡಿದ ಭಾಷಣದಲ್ಲಿ, ‘ಎಲ್ಲರಿಗೂ ಸಮಾನವಾಗಿ ಅನ್ವಯಿಸುವ ಜನಸಂಖ್ಯೆ ನಿಯಂತ್ರಣ ಕಾನೂನು’ ಬಗ್ಗೆ ಪ್ರಸ್ತಾಪಿಸಿದ್ದಾರೆ. “ಧರ್ಮ ಆಧಾರಿತ ಅಸಮತೋಲನ ಮತ್ತು ಬಲವಂತದ ಮತಾಂತರ ದೇಶವನ್ನು ಒಡೆಯುತ್ತಿದೆ” ಎಂದು ವಿಷಾದಿಸಿರುವುದಾಗಿ ‘ಎನ್‌ಡಿಟಿವಿ’ ವರದಿ ಮಾಡಿದೆ.

ಧಾರ್ಮಿಕ ಸಮುದಾಯ ಆಧಾರಿತ ಅಸಮತೋಲನದ ಕಾರಣದಿಂದ ಹೊಸದಾಗಿ ಹುಟ್ಟಿಕೊಂಡ ಪೂರ್ವ ಟಿಮೋರ್, ಕೊಸೊವೊ ಮತ್ತು ದಕ್ಷಿಣ ಸುಡಾನ್ ದೇಶಗಳ ಉದಾಹರಣೆಗಳನ್ನು ಭಾಗವತ್‌ ಉಲ್ಲೇಖಿಸಿದ್ದಾರೆ.

“ಜನಸಂಖ್ಯೆಯ ನಿಯಂತ್ರಣದ ಜೊತೆಗೆ, ಧಾರ್ಮಿಕ ಆಧಾರದ ಮೇಲೆ ಜನಸಂಖ್ಯೆಯ ಸಮತೋಲನವು ಸಹ ಪ್ರಮುಖ ವಿಷಯವಾಗಿದೆ. ಅದನ್ನು ನಿರ್ಲಕ್ಷಿಸಲಾಗುವುದಿಲ್ಲ” ಎಂದು ಅವರು ಹಿಂದಿಯಲ್ಲಿ ಭಾಷಣ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜನಸಂಖ್ಯೆಗೆ ಸಂಪನ್ಮೂಲಗಳ ಅಗತ್ಯವಿದೆ ಅಥವಾ ಅದು ಹೊರೆಯಾಗುತ್ತದೆ. ಜನಸಂಖ್ಯೆಯು ಒಂದು ಆಸ್ತಿಯಾಗಿರಬಹುದು ಎಂಬ ದೃಷ್ಟಿಕೋನವಿದೆ. ಎರಡೂ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ನಾವು ನೀತಿಯನ್ನು ರೂಪಿಸಬೇಕಾಗಿದೆ” ಎಂದು ತಿಳಿಸಿದ್ದಾರೆ.

ಜನಸಂಖ್ಯೆಯಲ್ಲಿನ ‘ಧರ್ಮ-ಆಧಾರಿತ ಅಸಮತೋಲನ’ದ ಕುರಿತು ಪ್ರಸ್ತಾಪಿಸುತ್ತಾ, “ಜನನ ಪ್ರಮಾಣವೂ ಒಂದು ಕಾರಣವಾಗಿದೆ. ಬಲವಂತದಿಂದ ಆಮಿಷ ಅಥವಾ ದುರಾಶೆಯಿಂದ ಮತಾಂತರ ಆಗುವುದು, ನುಸುಳುಕೋರರು ಬರುವುದು ಇದಕ್ಕೆ ಕಾರಣವಾಗಿದೆ” ಎಂದಿದ್ದಾರೆ.

“ಹೆರಿಗೆ ಮತ್ತು ಜನಸಂಖ್ಯಾ ನಿಯಂತ್ರಣದ ಬಗ್ಗೆ ಆರೆಸ್ಸೆಸ್ ಪ್ರಸ್ತಾಪಿಸುವ ಯಾವುದೇ ನೀತಿಯಲ್ಲಿ ಮಹಿಳೆಯರ ಆರೋಗ್ಯವನ್ನು ಖಂಡಿತವಾಗಿ ನೆನಪಿನಲ್ಲಿಟ್ಟುಕೊಳ್ಳಲಾಗುತ್ತದೆ” ಎಂದು ಆರೆಸ್ಸೆಸ್ ಮುಖ್ಯಸ್ಥರು ಹೇಳಿದ್ದಾರೆ.

ಮೋಹನ್‌ ಭಾಗವತ್‌ ಮಾತಿನ ಹಿಂದಿನ ಮರ್ಮ ಹಾಗೂ ವಾಸ್ತವ

ಬಹುದೊಡ್ಡ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಮರ ಮೇಲೆ ಜನಸಂಖ್ಯಾ ಹೆಚ್ಚಳದ ಆರೋಪ ಹೊರಿಸುವ ಕೆಲಸವನ್ನು ಆರ್‌ಎಸ್‌ಎಸ್‌ ಮತ್ತು ಅದರ ರಾಜಕೀಯ ಮುಖವಾದ ಬಿಜೆಪಿ ಮೊದಲಿನಿಂದಲೂ ಮಾಡುತ್ತಿವೆ. ಅದರ ಮುಂದುವರಿದ ಭಾಗವಾಗಿ ಮೋಹನ್ ಭಾಗವತ್ ಹೇಳಿಕೆ ಹೊರಬಿದ್ದಿದೆ.

ಆದರೆ ವಾಸ್ತವಗಳು ಬೇರೆಯೇ ಕತೆಯನ್ನು ಹೇಳುತ್ತವೆ. ಅಪಾಯಕಾರಿ ಜನಸಂಖ್ಯೆಯ ಹೆಚ್ಚಳದ ಪ್ರತಿಪಾದನೆ ಮತ್ತು ಹಿಂದೂ-ಮುಸ್ಲಿಂ ಜನಸಂಖ್ಯೆಯ ಬೆಳವಣಿಗೆಯಲ್ಲಿ ಇರುವ ವಾಸ್ತವ ವ್ಯತ್ಯಾಸಗಳೇನು ಎಂಬುದನ್ನು ಸಾಕ್ಷಿಗಳು ಬಯಲಿಗೆಳೆದಿವೆ.

ಇದನ್ನೂ ಓದಿರಿ: ಕೋಲ್ಕತಾ: ದುರ್ಗಾಪೂಜೆಯಲ್ಲಿ ಮಹಾತ್ಮಾ ಗಾಂಧಿಯನ್ನು ರಾಕ್ಷಸನಂತೆ ಬಿಂಬಿಸಿದ ಹಿಂದೂ ಮಹಾಸಭಾ

ಈ ಕುರಿತು ‘ದಿ ವೈರ್‌’ ಹಿಂದೆಯೇ ವರದಿ ಮಾಡಿದೆ. ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ (2019-21) ಪ್ರಕಾರ ಹಿಂದೂ  ಮತ್ತು ಮುಸ್ಲಿಂ ಫಲವತ್ತತೆಯ ನಡುವಿನ ವ್ಯತ್ಯಾಸವು ಕೇವಲ 0.42ರಷ್ಟಿದೆ ಎಂದು ಹೇಳುತ್ತದೆ. ಪ್ರತಿ ಹಿಂದೂ ಮಹಿಳೆಗೆ 1.94 ಮಕ್ಕಳು, ಪ್ರತಿ ಮುಸ್ಲಿಂ ಮಹಿಳೆಗೆ 2.36 ಮಕ್ಕಳು ಇರುವುದಾಗಿ ಸಮೀಕ್ಷೆ ಉಲ್ಲೇಖಿಸಿದೆ.

ನಾವು ಪಾಯಿಂಟ್ ಅಂದಾಜಿನ ಬದಲಿಗೆ ‘ಟ್ರೆಂಡ್’ ಅನ್ನು ಗಣನೆಗೆ ತೆಗೆದುಕೊಂಡಾಗ ನಿಜವಾದ ಚಿತ್ರಣ ಸಿಗುತ್ತದೆ. ಕಳೆದ ಎರಡು ದಶಕಗಳಲ್ಲಿ ಹಿಂದೂಗಳ ಫಲವತ್ತತೆ 30%, ಮುಸ್ಲಿಮರಲ್ಲಿ 35% ಕುಸಿದಿದೆ ಎಂದು ಕಂಡುಬಂದಿದೆ. ವಾಸ್ತವವಾಗಿ, ಕಳೆದ 20 ವರ್ಷಗಳಲ್ಲಿ ಮುಸ್ಲಿಮರಲ್ಲಿ ಜನಸಂಖ್ಯೆಯ ಬೆಳವಣಿಗೆಯಲ್ಲಿನ ಕುಸಿತದ ಪ್ರಮಾಣವು ಹಿಂದೂಗಳಿಗಿಂತ ಹೆಚ್ಚಾಗಿದೆ. 2030ರ ವೇಳೆಗೆ ಹಿಂದೂ-ಮುಸ್ಲಿಂ ಫಲವತ್ತತೆ ದರಗಳು ಸಂಪೂರ್ಣ ಒಮ್ಮುಖದ ಹಾದಿಯಲ್ಲಿರುತ್ತವೆ ಎಂಬುದನ್ನು ಸಮೀಕ್ಷೆಗಳು ಕಂಡುಕೊಂಡಿವೆ.

ಪ್ಯೂ ರಿಸರ್ಚ್ ಸೆಂಟರ್‌ನ 2021ರ ವರದಿಯು ಸಹ ಈ ಸಂಶೋಧನೆಗಳನ್ನು ಸಮರ್ಥಿಸುತ್ತದೆ. ಮುಸ್ಲಿಮರಲ್ಲಿ ಫಲವತ್ತತೆ ಪ್ರಮಾಣವು ಈಗ ಬಹುತೇಕ ಹಿಂದೂಗಳಿಗೆ ಸಮಾನವಾಗಿದೆ. 1992 ಮತ್ತು 2015ರ ನಡುವೆ, ಮುಸ್ಲಿಂ ಫಲವತ್ತತೆ ದರವು 4.4 ರಿಂದ 2.6ಕ್ಕೆ ಕುಸಿದಿದ್ದರೆ, ಹಿಂದೂಗಳಲ್ಲಿ 3.3ರಿಂದ 2.1ಕ್ಕೆ ಇಳಿದಿದೆ ಎಂದು ವರದಿ ಹೇಳಿದೆ.

ಈ ಹಿಂದೆ ‘ದಿ ವೈರ್’ ನಡೆಸಿದ ವೀಡಿಯೊ ಸಂದರ್ಶನದಲ್ಲಿ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ. ಖುರೈಶಿ ಅವರು ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್ ಅವರನ್ನು ಭೇಟಿಯಾಗಿದ್ದನ್ನು ನೆನಪಿಸಿಕೊಂಡಿದ್ದರು. “ದಿ ಪಾಪ್ಯುಲೇಶನ್ ಮಿಥ್: ಇಸ್ಲಾಂ, ಫ್ಯಾಮಿಲಿ ಪ್ಲಾನಿಂಗ್ ಮತ್ತು ಪಾಲಿಟಿಕ್ಸ್ ಇನ್ ಇಂಡಿಯಾ” ಪುಸ್ತಕವನ್ನು ನೀಡಲು ಭೇಟಿಯಾಗಿದ್ದಾಗಿ ಖುರೈಶಿ ಹೇಳುತ್ತಾರೆ. “ಮುಸ್ಲಿಮರು ಹಿಂದೂಗಳನ್ನು ಸಂಖ್ಯಾಬಲದಲ್ಲಿ ಹಿಂದಿಕ್ಕುತ್ತಾರೆ ಎಂಬುದು ಹಿಂದುತ್ವ ಗುಂಪುಗಳ ಕಡೆಯಿಂದ ಬಂದ ಶುದ್ಧ ಪ್ರೊಪಗಾಂಡ ಎಂದು ಆರ್‌ಎಸ್‌ಎಸ್ ಮುಖ್ಯಸ್ಥರಿಗೆ ಹೇಳಿದೆ” ಎಂದು ಖುರೇಷಿ ಹೇಳಿಕೊಳ್ಳುತ್ತಾರೆ. (‘ದಿ ವೈರ್‌’ ನಡೆಸಿದ ವಿಡಿಯೊ ಸಂದರ್ಶನದಲ್ಲಿ 8 ನಿಮಿಷ 20 ಸೆಕೆಂಡ್‌ ವೇಳೆಗೆ ಈ ಚರ್ಚೆ ನಡೆಯುವುದನ್ನು ಗಮನಿಸಬಹುದು.)

“ಇನ್ನು 1,000 ವರ್ಷಗಳಾದರೂ ಇದು (ಹಿಂದೂಗಳಿಗಿಂತ ಮುಸ್ಲಿಮರು ಹೆಚ್ಚಾಗುತ್ತಾರೆಂಬುದು) ಸಂಭವಿಸುವುದಿಲ್ಲ. ಬಹುಪತ್ನಿತ್ವದ ಪ್ರಶ್ನೆಯು (ಹಿಂದೂಗಳಿಗಿಂತ ಮುಸ್ಲಿಮರು ಹೆಚ್ಚಾಗುತ್ತಿದ್ದಾರೆ ಎಂದು ವಾದಿಸಲು ಬಳಸುವ ವಾದ) ಭಾರತದಲ್ಲಿ ಬರುವುದೇ ಇಲ್ಲ. ಭಾರತದಲ್ಲಿ ಲಿಂಗಾನುಪಾತವು 1,000 ಪುರುಷರಿಗೆ 940 ಮಹಿಳೆಯರು ಎಂಬ ಲೆಕ್ಕದಲ್ಲಿದೆ. ಸಾವಿರದಲ್ಲಿ 60 ಬ್ಯಾಚುಲರ್‌ಗಳು ತಮ್ಮ ಮೊದಲ ಮದುವೆಯಾಗಲೂ ಹೆಣಗಾಡುತ್ತಿದ್ದಾರೆ ಎಂದು ನಾನು ಅವರಿಗೆ ಹೇಳಿದೆ. ಬಹುಪತ್ನಿತ್ವದ ಪ್ರಶ್ನೆ ಎಲ್ಲಿದೆ ಎಂದು ಕೇಳಿದೆ. ಇದಕ್ಕೆ ಅವರು ಆತ್ಮೀಯ ನಗುವಿನೊಂದಿಗೆ ಪ್ರತಿಕ್ರಿಯಿಸಿದರು. ಅರ್ಥಾತ್, ನಾನು ಏನು ಹೇಳಿದರೂ ಅದನ್ನು ಅವರು ದಾಖಲು ಮಾಡಿಕೊಂಡರು” ಎಂದು ಸಂದರ್ಶನದಲ್ಲಿ ಖುರೇಷಿ ವಿವರಿಸಿದ್ದಾರೆ.

ಜನಸಂಖ್ಯೆ ಸ್ಫೋಟದ ಭೀತಿಯು ಕೂಡ ತಾರ್ಕಿಕವಾಗಿಲ್ಲ. ದತ್ತಾಂಶಗಳು ಬೇರೆಯ ಕತೆಯನ್ನು ಹೇಳುತ್ತವೆ. ಪ್ರಧಾನಿ ನರೇಂದ್ರ ಮೋದಿ ಅವರು 2019ರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಜನಸಂಖ್ಯಾ ಹೆಚ್ಚಳದ ಕುರಿತು ಮಾತನಾಡಿದ್ದರು. “ಜನಸಂಖ್ಯಾ ಸ್ಫೋಟದ ಬಗ್ಗೆ ನಾವು ಚಿಂತಿಸಬೇಕಾಗಿದೆ. ಇದು ಭಾರತದ ಅಭಿವೃದ್ಧಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ” ಎಂದು ಪ್ರಸ್ತಾಪಿಸಿದ್ದರು.

2019-21ರ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS) ಪ್ರಕಾರ, ಒಟ್ಟು ಫಲವತ್ತತೆ ದರ (ಟಿಎಫ್‌ಆರ್‌) 2016ರಲ್ಲಿ 2.2ರಿಂದ 2ಕ್ಕೆ ಇಳಿದಿದೆ. ಟಿಎಫ್‌ಆರ್‌ ಮತ್ತು ವಾರ್ಷಿಕ ಜನಸಂಖ್ಯೆಯ ಬೆಳವಣಿಗೆ ದರವನ್ನು ಜನಸಂಖ್ಯೆಯ ಬೆಳವಣಿಗೆಯನ್ನು ಪ್ರಮಾಣೀಕರಿಸಲು ವಿಶ್ವಾದ್ಯಂತ ಬಳಸಲಾಗುತ್ತದೆ. ಅಲ್ಲದೆ, ವಿಶ್ವಬ್ಯಾಂಕ್ ಅಂಕಿಅಂಶಗಳ ಪ್ರಕಾರ ಭಾರತದ ಜನಸಂಖ್ಯೆಯ ಬೆಳವಣಿಗೆ ದರವು 2001ರಲ್ಲಿ 1.73%ರಷ್ಟಿದ್ದು 2018ರಲ್ಲಿ 1.04%ಕ್ಕೆ ಕುಸಿದಿದೆ. 12 ರಾಜ್ಯಗಳಲ್ಲಿ ಜನಸಂಖ್ಯೆಯ ಬೆಳವಣಿಗೆ ದರವು 1%ಕ್ಕಿಂತ ಕಡಿಮೆಯಿತ್ತು. ಬಿಹಾರ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಹರಿಯಾಣದಂತಹ ರಾಜ್ಯಗಳು ಹೆಚ್ಚಿನ ಫಲವತ್ತತೆಯ ರಾಜ್ಯಗಳಾಗಿ ಹೊಮ್ಮಿವೆ. ಕಾಲಾನಂತರದಲ್ಲಿ ತಮ್ಮ ಬೆಳವಣಿಗೆಯ ದರದಲ್ಲಿ ಗಮನಾರ್ಹ ಕುಸಿತವನ್ನು ತೋರಿಸಿದೆ.

ಇದನ್ನೂ ಓದಿರಿ: ಮಹಿಳೆಯರಿಗೆ ಸ್ವಾತಂತ್ರ್ಯ, ಸಮಾನ ಅವಕಾಶ ನೀಡುವುದು ಅಗತ್ಯ: ಮೋಹನ್ ಭಾಗವತ್‌

ತಮ್ಮ ಭಾಷಣದಲ್ಲಿ ಭಾಗವತ್ ‘ಬಲದಿಂದ ಮತಾಂತರ’ ವಿಚಾರವನ್ನೂ ಉಲ್ಲೇಖಿಸಿದ್ದಾರೆ. ಹಿಂದುತ್ವ ಗುಂಪುಗಳು ‘ಬಲವಂತದ ಮತಾಂತರಗಳ ಹುನ್ನಾರ’ವನ್ನು ಪ್ರಸ್ತಾಪಿಸುತ್ತಿರುತ್ತವೆ. ವಿಶೇಷವಾಗಿ ಕ್ರಿಶ್ಚಿಯನ್ ಧರ್ಮವು ಹಿಂದೂಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತಿದೆ ಎಂದು ವಾದಿಸುತ್ತಾರೆ. ಈ ಹಿಂದೆ ‘ದಿ ವೈರ್’ ನಡೆಸಿದ ವರದಿಯ ಪ್ರಕಾರ, “ಹಿಂದುತ್ವ ಗುಂಪುಗಳು ಈ ಪ್ರತಿಪಾದನೆಗೂ ಯಾವುದೇ ಪುರಾವೆ ಇಲ್ಲ.”

ಜನಗಣತಿಯಿಂದ ಲಭ್ಯವಿರುವ ಮಾಹಿತಿಯನ್ನು ಅವಲೋಕಿಸಿದರೆ ದೇಶದ ಜನಸಂಖ್ಯೆಯಲ್ಲಿ ಕ್ರಿಶ್ಚಿಯನ್ ಸಮುದಾಯದ ಪ್ರಮಾಣ ಸ್ಥಿರವಾಗಿದೆ ಅಥವಾ 1971ರಿಂದ ಇಳಿಮುಖವಾಗಿದೆ. 1971ರ ಜನಗಣತಿಯು ಭಾರತದ ಜನಸಂಖ್ಯೆಯಲ್ಲಿ 2.6%ರಷ್ಟು ಕ್ರಿಶ್ಚಿಯನ್ನರಿದ್ದಾರೆಂದು ಅಂದಾಜಿಸಿದೆ. 2001ರ ಹೊತ್ತಿಗೆ, ಈ ಅಂಕಿ ಅಂಶವು 2.3% ಕ್ಕೆ ಇಳಿಯಿತು. 2011ರ ಜನಗಣತಿಯ ಅಂಕಿಅಂಶಗಳ ಧಾರ್ಮಿಕ ಸಂಗತಿಗಳು ಎಂದಿಗೂ ಬಿಡುಗಡೆಯಾಗಿಲ್ಲ. ಸೋರಿಕೆಯಾದ ಮಾಹಿತಿಯ ಪ್ರಕಾರ ಸಮುದಾಯದ ಪ್ರಮಾಣದಲ್ಲಿ ಮತ್ತಷ್ಟು ಕುಸಿತ ಕಂಡುಬಂದಿದೆ.

ಧಾರ್ಮಿಕ ಮತಾಂತರದ ವಿವಾದಾತ್ಮಕ ವಿಷಯದ ಕುರಿತು ಜೂನ್ 2021ರಲ್ಲಿ ಪ್ಯೂ ಸಂಶೋಧನಾ ವರದಿಯು ಮತ್ತಷ್ಟು ಬೆಳಕು ಚೆಲ್ಲಿತ್ತು. ಭಾರತದಲ್ಲಿ ಯಾರಾದರೂ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಬದಲಾಯಿಸುವುದು ‘ಅಪರೂಪ’ ಎಂದು ವರದಿ ಗಮನ ಸೆಳೆದಿತ್ತು.

ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...