ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಉಜ್ಜಯಿನಿ ದಕ್ಷಿಣ ಕ್ಷೇತ್ರದ ಶಾಸಕ ಮೋಹನ್ ಯಾದವ್ ಅವರನ್ನು ಭಾರತೀಯ ಜನತಾ ಪಕ್ಷ(ಬಿಜೆಪಿ) ವು ಸೋಮವಾರ ಆಯ್ಕೆ ಮಾಡಿದೆ.
#WATCH | BJP leaders including Shivraj Singh Chouhan, congratulate party leader Mohan Yadav after he was named as the new Chief Minister of Madhya Pradesh pic.twitter.com/xzC6aXceBZ
— ANI (@ANI) December 11, 2023
ಭೋಪಾಲ್‌ನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ 58 ವರ್ಷದ ಮೋಹನ್ ಯಾದವ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ. ವಿಧಾನಸಭೆಗೆ ಆಯ್ಕೆಯಾದ ನಂತರ ಕೇಂದ್ರ ಕೃಷಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನರೇಂದ್ರ ಸಿಂಗ್ ತೋಮರ್ ಅವರನ್ನು ಹೊಸ ವಿಧಾನಸಭಾ ಸ್ಪೀಕರ್ ಆಗಿ ಘೋಷಿಸಲಾಗಿದೆ.
भारतीय जनता पार्टी मध्य प्रदेश के विधायक दल की बैठक में उज्जैन दक्षिण विधानसभा क्षेत्र से निर्वाचित विधायक डॉ. @DrMohanYadav51 को विधायक दल के नेता चुने जाने पर हार्दिक बधाई एवं शुभकामनाएँ। pic.twitter.com/nLc8aX0Jiw
— BJP Madhya Pradesh (@BJP4MP) December 11, 2023
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್) ನಲ್ಲಿ ಬೆಳೆದು ಬಂದ ಯಾದವ್ ಅವರು ಈ ಹಿಂದಿನ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮಧ್ಯಪ್ರದೇಶದ ಪ್ರವಾಸೋದ್ಯಮ ಅಭಿವೃದ್ಧಿಗಾಗಿ 2011-2012 ಮತ್ತು 2012-2013 ರಲ್ಲಿ ರಾಷ್ಟ್ರಪತಿಗಳಿಂದ ಯಾದವ್ ಅವರು ವಿಶೇಷ ಪ್ರಶಸ್ತಿ ಸ್ವೀಕರಿಸಿದ್ದರು.
ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 230 ಸ್ಥಾನಗಳ ಪೈಕಿ 163 ಸ್ಥಾನಗಳನ್ನು ಗೆದ್ದ 10 ದಿನಗಳ ನಂತರ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆಯಾಗಿದ್ದಾರೆ.
ಆರಂಭದಲ್ಲಿ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮತ್ತು ನರೇಂದ್ರ ಸಿಂಗ್ ತೋಮರ್ ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದರು. ಆದರೆ, ಇತ್ತೀಚೆಗೆ ಶಿವರಾಜ್ ಸಿಂಗ್ ಚೌಹಾಣ್ “ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ’ ಎಂದಿದ್ದರು. ಆದರೂ, ಅವರೇ ಪುನರಾಯ್ಕೆ ಆಗುವ ನಿರೀಕ್ಷೆ ಜನರಲ್ಲಿ ಇತ್ತು. ಬಿಜೆಪಿ ಹೈಕಮಾಂಡ್ ಮಾತ್ರ ಯಾರೂ ಊಹಿಸದ ವ್ಯಕ್ತಿ ಮೋಹನ್ ಯಾದವ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿ ಅಚ್ಚರಿ ನಿರ್ಧಾರ ಕೈಗೊಂಡಿದೆ.
ಇದನ್ನೂ ಓದಿ : ಲೋಕಸಭೆಯಿಂದ ಉಚ್ಚಾಟನೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಹುವಾ ಮೊಯಿತ್ರಾ


