Homeಮುಖಪುಟಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆ

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆ

- Advertisement -
- Advertisement -

ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಉಜ್ಜಯಿನಿ ದಕ್ಷಿಣ ಕ್ಷೇತ್ರದ ಶಾಸಕ ಮೋಹನ್ ಯಾದವ್ ಅವರನ್ನು ಭಾರತೀಯ ಜನತಾ ಪಕ್ಷ(ಬಿಜೆಪಿ) ವು ಸೋಮವಾರ ಆಯ್ಕೆ ಮಾಡಿದೆ.

 

ಭೋಪಾಲ್‌ನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ 58 ವರ್ಷದ ಮೋಹನ್ ಯಾದವ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ. ವಿಧಾನಸಭೆಗೆ ಆಯ್ಕೆಯಾದ ನಂತರ ಕೇಂದ್ರ ಕೃಷಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನರೇಂದ್ರ ಸಿಂಗ್ ತೋಮರ್ ಅವರನ್ನು ಹೊಸ ವಿಧಾನಸಭಾ ಸ್ಪೀಕರ್ ಆಗಿ ಘೋಷಿಸಲಾಗಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್‌) ನಲ್ಲಿ ಬೆಳೆದು ಬಂದ ಯಾದವ್ ಅವರು ಈ ಹಿಂದಿನ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮಧ್ಯಪ್ರದೇಶದ ಪ್ರವಾಸೋದ್ಯಮ ಅಭಿವೃದ್ಧಿಗಾಗಿ 2011-2012 ಮತ್ತು 2012-2013 ರಲ್ಲಿ ರಾಷ್ಟ್ರಪತಿಗಳಿಂದ ಯಾದವ್ ಅವರು ವಿಶೇಷ ಪ್ರಶಸ್ತಿ ಸ್ವೀಕರಿಸಿದ್ದರು.

ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 230 ಸ್ಥಾನಗಳ ಪೈಕಿ 163 ಸ್ಥಾನಗಳನ್ನು ಗೆದ್ದ 10 ದಿನಗಳ ನಂತರ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆಯಾಗಿದ್ದಾರೆ.

ಆರಂಭದಲ್ಲಿ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮತ್ತು ನರೇಂದ್ರ ಸಿಂಗ್ ತೋಮರ್ ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದರು. ಆದರೆ, ಇತ್ತೀಚೆಗೆ ಶಿವರಾಜ್ ಸಿಂಗ್ ಚೌಹಾಣ್ “ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ’ ಎಂದಿದ್ದರು. ಆದರೂ, ಅವರೇ ಪುನರಾಯ್ಕೆ ಆಗುವ ನಿರೀಕ್ಷೆ ಜನರಲ್ಲಿ ಇತ್ತು. ಬಿಜೆಪಿ ಹೈಕಮಾಂಡ್ ಮಾತ್ರ ಯಾರೂ ಊಹಿಸದ ವ್ಯಕ್ತಿ ಮೋಹನ್ ಯಾದವ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿ ಅಚ್ಚರಿ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ : ಲೋಕಸಭೆಯಿಂದ ಉಚ್ಚಾಟನೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...