Homeಮುಖಪುಟ'ಅಮ್ಮ' ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ : ಸಂಪೂರ್ಣ ಸಮಿತಿ ವಿಸರ್ಜನೆ

‘ಅಮ್ಮ’ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ : ಸಂಪೂರ್ಣ ಸಮಿತಿ ವಿಸರ್ಜನೆ

- Advertisement -
- Advertisement -

ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್ ಲಾಲ್ ರಾಜೀನಾಮೆ ನೀಡಿದ್ದಾರೆ. ವರದಿಗಳ ಪ್ರಕಾರ, ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಜಂಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಹೇಮಾ ಸಮಿತಿ ವರದಿ ಬಹಿರಂಗಗೊಂಡ ಬಳಿಕ ಒಬ್ಬರ ಹಿಂದೆ ಒಬ್ಬರಂತೆ ಮಲಯಾಳಂ ನಟರ ವಿರುದ್ದ ಮಹಿಳಾ ಕಲಾವಿದರ ಮೇಲಿನ ಲೈಂಗಿಕ ಕಿರುಕುಳ ಆರೋಪ ಕೇಳಿ ಬರುತ್ತಿದೆ. ಈ ಹಿನ್ನೆಲೆ ಇಡೀ ಕಲಾವಿದರ ಸಂಘವನ್ನೇ ವಿಸರ್ಜನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯಗಳ ಕುರಿತ ಆಫಾತಕಾರಿ ವಿಷಯಗಳನ್ನು ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಬಿಚ್ಚಿಟ್ಟಿತ್ತು.

ಈ ಬೆನ್ನಲ್ಲೇ ಕೇರಳ ರಾಜ್ಯ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಂಜಿತ್ ವಿರುದ್ದ ಬೆಂಗಾಲಿ ನಟಿ ಶ್ರೀಲೇಕಾ ಮಿತ್ರಾ ಮತ್ತು ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ವಿರುದ್ದ ನಟಿ ರೇವತಿ ಸಂಪತ್ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು.

ತಮ್ಮ ವಿರುದ್ದ ಆರೋಪ ಕೇಳಿ ಬಂದ ಬಳಿಕ ರಂಜಿತ್ ಮತ್ತು ಸಿದ್ದೀಕ್ ಇಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಂಜಿತ್ ವಿರುದ್ದ ನಟಿ ಶ್ರೀಲೇಕಾ ಮಿತ್ರಾ ಮತ್ತು ಸಿದ್ದೀಕ್ ವಿರುದ್ದ ರೇವತಿ ಸಂಪತ್ ದೂರು ದಾಖಲಿಸಿದ್ದಾರೆ. ರೇವತಿ ದೂರಿಗೆ ಪ್ರತಿಯಾಗಿ ಸಿದ್ದೀಕ್ ಕೂಡ ದೂರು ನೀಡಿದ್ದಾರೆ.

ಈ ನಡುವೆ ನಟರಾದ ಜಯಸೂರ್ಯ, ಮಣಿಯನ್ ಪಿಳ್ಳ ರಾಜು, ಶಾಸಕ ಹಾಗೂ ನಟ ಮುಖೇಶ್, ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಪ್ರಮುಖ ನಾಯಕ ಇಡವೇಳ ಬಾಬು ವಿರುದ್ದ ನಟಿ ಮಿನು ಮುನೀರ್ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಎಲ್ಲರ ವಿರುದ್ದ ದೂರು ದಾಖಲಿಸುವುದಾಗಿ ತಿಳಿಸಿದ್ದಾರೆ.

ಮತ್ತೊಂದೆಡೆ, ಮಲಯಾಳಂ ಚಿತ್ರರಂಗದ ಜೂನಿಯರ್ ಕಲಾವಿದೆಯೊಬ್ಬರು ಪ್ರಶಸ್ತಿ ವಿಜೇತ ನಟ ಮತ್ತು ನಿರ್ದೇಶಕ ಬಾಬುರಾಜ್ ಮೇಲೆ ಅತ್ಯಾಚಾರ ಆರೋಪ ಮಾಡಿದ್ದಾರೆ.

ಇಂತಹ ಆರೋಪಗಳ ತನಿಖೆಗೆ ಕೇರಳ ಸರ್ಕಾರ ಏಳು ಮಂದಿ ಪೊಲೀಸರ ವಿಶೇಷ ತಂಡವನ್ನು ರಚಿಸಿದೆ. ಈ ತಂಡದಲ್ಲಿ ನಾಲ್ವರು ಮಹಿಳಾ ಐಪಿಎಸ್ ಅಧಿಕಾರಿಗಳೂ ಇದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಮೋಹನ್‌ಲಾಲ್ ಕಲಾವಿದರ ಸಂಘದ (ಅಮ್ಮ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸುದ್ದಿ ಬಂದಿದೆ.

ಇದನ್ನೂ ಓದಿ : ಮಲಯಾಳಂನ ನಾಲ್ವರು ಪ್ರಮುಖ ನಟರ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ನಟಿ ಮಿನು ಮುನೀರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...