Homeಮುಖಪುಟಮೋದಿ ಸರ್ಕಾರ ನಿರ್ಲಕ್ಷಿಸಿ ಮುಸ್ಲಿಂ ಮಹಿಳೆಯನ್ನು ಜಡ್ಜ್ ಆಗಿ ನೇಮಿಸಿದ ಸುಪ್ರೀಂ ಕೋರ್ಟ್‌..

ಮೋದಿ ಸರ್ಕಾರ ನಿರ್ಲಕ್ಷಿಸಿ ಮುಸ್ಲಿಂ ಮಹಿಳೆಯನ್ನು ಜಡ್ಜ್ ಆಗಿ ನೇಮಿಸಿದ ಸುಪ್ರೀಂ ಕೋರ್ಟ್‌..

- Advertisement -
- Advertisement -

ಪಾರದರ್ಶಕ ಆಡಳಿತ ನೀಡುವುದಾಗಿ ಗಾಳಿಯಲ್ಲಿ ಕೈ ಬೀಸುತ್ತಾ ಮಾತನಾಡುವ ಪ್ರಧಾನಿ ಮೋದಿ, ನ್ಯಾಯಾಂಗದಲ್ಲೂ ಕೈಯಾಡಿಸಿ ಜಾತಿ-ಧರ್ಮದ ಕೆಸರು ಎಬ್ಬಿಸಿ, ಆಡಳಿತವೆಲ್ಲ ರಾಡಿ ಮಾಡುವ ಇವರ ಮುಖವಾಡ ಬಯಲಾಗಿದೆ. ಸಮಾಧಾನಕರ ಸಂಗತಿ ಎಂದರೆ, ಪ್ರಧಾನಿ ಮೋದಿ ಪ್ರಭಾವಕ್ಕೆ ಮಣಿಯದ ಸುಪ್ರೀಂಕೋರ್ಟ್‍ನ ಕೊಲಿಜಿಯಂ ಮಾತ್ರ ಕೇಂದ್ರ ಸರ್ಕಾರವನ್ನೇ ಪ್ರಶ್ನಿಸಿ, ನ್ಯಾಯಪರತೆಯನ್ನು ಎತ್ತಿ ಹಿಡಿದಿದೆ.

ಹಿಂದೂ ವಕೀಲೆಯೊಬ್ಬರು ಮುಸ್ಲಿಂ ಉದ್ಯಮಿಯನ್ನು ಮದುವೆಯಾಗಿ ಆ ಧರ್ಮದ ಅನುಯಾಯಿಯಾಗಿದ್ದನ್ನು ಸಹಿಸದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈ ವಕೀಲೆಗೆ ಜಮ್ಮು-ಕಾಶ್ಮೀರ ಹೈಕೋರ್ಟ್ ನ್ಯಾಯಾಧೀರಾಗುವುದನ್ನು ತಪ್ಪಿಸಲು ಸಾಧ್ಯವಿದ್ದ ಎಲ್ಲ ಪ್ರಯತ್ನ ಮಾಡಿರುವ, 56 ಅಂಗುಲ ಎದೆ ವಿಸ್ತಾರದ ಮನಸ್ಸಿನ ಸಣ್ಣತನ ಬಹಿರಂಗ ಚರ್ಚೆಗೆ ಆಹ್ವಾನ ನೀಡುತ್ತಿದೆ.

ಮೋಕ್ಷಾ ಖಸ್ಮಿ ಖಜುರಿಯಾ ಮೂಲತಃ ಹಿಂದೂ, ಜಮ್ಮು ನಿವಾಸಿ. ವೃತ್ತಿಯಿಂದ ವಕೀಲೆ. ಶ್ರೀನಗರದ ಬಾರ್‍ಜುಲ್ಲಾ ನಿವಾಸಿ ಹಾಗೂ ಉದ್ಯಮಿ ಯಾಸೀರ್ ಸೈಯದ್ ಖಸ್ಮಿ ಅವರೊಂದಿಗೆ ಮದುವೆಯಾಗಿ ಮುಸ್ಲಿಂ ಧರ್ಮವನ್ನು ಒಪ್ಪಿಕೊಂಡಿದ್ದರು.

ಕೊಲಿಜಿಯಂ ಆಯ್ಕೆ
ಜಮ್ಮು-ಕಾಶ್ಮೀರ ಹೈಕೋರ್ಟ್ ಕೊಲಿಜಿಯಂ ಮೋಕ್ಷಾ ಖಸ್ಮಿ ಖಜುರಿಯಾ ಸೇರಿದಂತೆ ಇಬ್ಬರು ವಕೀಲರ ಹೆಸರನ್ನು ಜಮ್ಮು-ಕಾಶ್ಮೀರ ಹೈಕೋರ್ಟ್ ನ್ಯಾಯಮೂರ್ತಿಯ ಹುದ್ದೆಗೆ ನೇಮಿಸಲು ಶಿಫಾರಸು ಮಾಡಿತ್ತು. ಅಕ್ಟೋಬರ್ 15 ರಂದು ನಡೆದ ಸಭೆಯಲ್ಲಿ ಈ ಹೆಸರುಗಳನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ಅನುಮೋದಿಸಿ, ಕೇಂದ್ರ ಸರ್ಕಾರದ ಒಪ್ಪಿಗೆಗೆ ಕಳುಹಿಸಿತ್ತು.

ಕೇಂದ್ರ ಸರ್ಕಾರದ ತಡೆ
ಈ ಇಬ್ಬರ ಹೆಸರಿಗೆ ಒಪ್ಪಿಗೆ ಸೂಚಿಸದ ಕೇಂದ್ರ ಸರ್ಕಾರ, ಏಕಾಏಕಿಯಾಗಿ ಮೋಕ್ಷಾ ಖಸ್ಮಿ ಖಜುರಿಯಾ ಅವರ ವಾರ್ಷಿಕ ಆದಾಯ ಹೆಚ್ಚಿದೆ ಎಂಬ ಸಬೂಬು ನೀಡಿ ವಿಳಂಬ ಧೋರಣೆ ಅನುಸರಿಸಿತು. ಮೋಕ್ಷಾ ಅಂತರ್ ಧರ್ಮೀಯ ಮದುವೆಯಾಗಿದ್ದಾರೆ ಎಂಬ ಅಂಶಕ್ಕೆ ಪರ್ಯಾಯವಾಗಿ ಆದಾಯ ಹೆಚ್ಚಿದ್ದರ ಬಗ್ಗೆ ಸಂಶಯ ವ್ಯಕ್ತಪಡಿಸಿತ್ತು. ಮಾತ್ರವಲ್ಲ; ಮೋಕ್ಷಾ ಅವರ ಆದಾಯವನ್ನೇ ಪ್ರಮುಖ ಗುರಾಣಿಯಾಗಿಸಿ, ಕೊಲಿಜಿಯಂ ಶಿಫಾರಸುಗಳಿಗೆ ತಡೆಯೊಡ್ಡಿತು.

2012 ರಿಂದ 2016ರವರೆಗೆ ಈ ಮೂರು ವರ್ಷಗಳ ಅವಧಿಯಲ್ಲಿ ಕ್ರಮವಾಗಿ 2.50 ಲಕ್ಷ ರೂ.ಗಳಿಂದ 3.25 ಲಕ್ಷ ರೂ.ಗಳಿತ್ತು. ಆದರೆ, 2016 ಹಾಗೂ 2017-18ರಲ್ಲಿ ಕ್ರಮವಾಗಿ 12 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಆದಾಯ ಹೆಚ್ಚಿದೆ ಎಂಬುದು ಕೇಂದ್ರ ಸರ್ಕಾರದ ಆಕ್ಷೇಪವಾಗಿತ್ತು.

ಕೊಲಿಜಿಯಂ ಪ್ರತಿಕ್ರಿಯೆ
ಮದುವೆ ವಿಷಯಕ್ಕೆ ಸಂಬಂಧಿಸಿದಂತೆ, ಕೋಲಿಜಿಯಂ ಮಾತ್ರ ಅಂತರ್ ಧರ್ಮೀಯ ಮದುವೆ ಅಪರಾಧವೇ? ಎಂದು ಪ್ರತಿಕ್ರಿಯಿಸಿತ್ತು. ಆದಾಯ ಹೆಚ್ಚಳ ವಿಷಯದಲ್ಲಿ ಕೇಂದ್ರ ಸರ್ಕಾರದ ಆರೋಪ ಆಧಾರರಹಿತವಾಗಿದೆ ಎಂದು ಪ್ರತಿಕ್ರಿಯಿಸಿ, ಸರ್ಕಾರದ ತಡೆಯನ್ನು ನಿರ್ಲಕ್ಷಿಸಿ, ಮೋಕ್ಷಾ ಖಸ್ಮಿ ಖಜುರಿಯಾ ಅವರನ್ನು ಜಮ್ಮು-ಕಾಶ್ಮೀರ ಹೈಕೋರ್ಟ್‍ಗೆ ನ್ಯಾಯಾಧೀಶರನ್ನಾಗಿ ನೇಮಿಸಿದೆ.

ಇದೇ ಮೋಕ್ಷಾ ಖಸ್ಮಿ ಖಜುರಿಯಾ, ಜಮ್ಮು-ಕಾಶ್ಮಿರದಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದು, ಆ ಸರ್ಕಾರದ ಕಾನೂನು ಸಚಿವ ಅಬ್ದುಲ್ ಹಖ್ ಖಾನ್ ಹಾಗೂ ಅಡ್ವೊಕೇಟ್ ಜನರಲ್ ಜಹಾಂಗೀರ್ ಇಕ್ಬಾಲ್ ಗನೈ ಅವರೊಂದಿಗಿನ ಮನಸ್ತಾಪದ ಹಿನ್ನೆಲೆಯಲ್ಲಿ ಹುದ್ದೆಯನ್ನು ತೊರೆದಿದ್ದರು.

ಪತಿ ಖಸ್ಮಿ ಖಜುರಿಯಾ ಸಹ ಮೆಹಬೂಬಾ ಮುಫ್ತಿ ನೇತೃತ್ವದ ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿಯ ಮುಖಂಡರಾಗಿದ್ದಾರೆ.

ಆಧಾರ: ದಿ ಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...