Homeಮುಖಪುಟಸತತ ಲೈಂಗಿಕ ಕಿರುಕುಳ: ಉತ್ತರಪ್ರದೇಶದಲ್ಲಿ ಬಾವಿಗೆ ಹಾರಿ ಪ್ರಾಣಬಿಟ್ಟ ಅಪ್ರಾಪ್ತೆ

ಸತತ ಲೈಂಗಿಕ ಕಿರುಕುಳ: ಉತ್ತರಪ್ರದೇಶದಲ್ಲಿ ಬಾವಿಗೆ ಹಾರಿ ಪ್ರಾಣಬಿಟ್ಟ ಅಪ್ರಾಪ್ತೆ

ಮೃತ ಸಂತ್ರಸ್ತ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಮೂವರು ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -
- Advertisement -

ಪದೇ ಪದೇ ಕಿರುಕುಳಕ್ಕೆ ಒಳಗಾಗಿದ್ದ ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ 16 ವರ್ಷದ ಅಪ್ರಾಪ್ತೆ ಅ.14 ರಂದು ಮನೆಯ ಮುಂದಿನ ಬಾವಿಗೆ ಹಾರಿ ಮೃತಪಟ್ಟಿದ್ದಾರೆ. ಕಳೆದ ಆರು ತಿಂಗಳಿನಿಂದ ಮೂರು ಸ್ಥಳೀಯ ಯುವಕರು ಮಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ.

ಸಂತ್ರಸ್ತೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಒಬ್ಬ ಆರೋಪಿಯನ್ನು ಪೊಲೀಸರು  ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ನ್ಯೂಸ್ 18 ವರದಿ ಮಾಡಿದೆ.

ಕಳೆದ ಆರು ತಿಂಗಳಿನಿಂದ 11 ನೇ ತರಗತಿ ವಿದ್ಯಾರ್ಥಿನಿಗೆ ಸ್ಥಳೀಯ ಯುವಕರು ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಗುನ್ನು ತಿವಾರಿ, ದಬ್ಬೂ ಸಿಂಗ್ ಮತ್ತು ಗುಡ್ಡು ಎಂಬ ಮೂವರು ಯುವಕರು ಮಂಗಳವಾರ(ಅ.13) ಕೂಡ  ಮನೆಗೆ ನುಗ್ಗಿ ಮಗಳಿಗೆ ಕಿರುಕುಳ ನೀಡಿದ್ದಾರೆ. ಮರುದಿನ( ಅ.14)ರ ಬೆಳಿಗ್ಗೆ ಅವರು ಬಾವಿಗೆ ಹಾರಿದ್ದಾರೆ ಎಂದು ಮೃತ ಬಾಲಕಿಯ ತಾಯಿ ಆರೋಪಿಸಿದ್ದಾರೆ. ದಬ್ಬೂ ಸಿಂಗ್ ಮತ್ತು ಗುಡ್ಡು ಪೊಲೀಸರಿಗೆ ತಿಳಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ಕುಟುಂಬ ತಿಳಿಸಿದೆ.

ಇದನ್ನೂ ಓದಿ: ಉತ್ತರಪ್ರದೇಶ: ಮೂತ್ರ ಕುಡಿಸಿ ದಲಿತ ತಂದೆ-ಮಗನ ಮೇಲೆ ಹಲ್ಲೆ

ಮೃತ ಸಂತ್ರಸ್ತ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಮೂವರು ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಒಬ್ಬ ಆರೋಪಿಯನ್ನು ಬಂಧಿಸಿದ್ದು, ಇತರ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

“16 ವರ್ಷದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಳ್ಳಿಯ ಮೂವರು ಯುವಕರು ಆಕೆಗೆ ಕಿರುಕುಳ ನೀಡಿದ್ದಾರೆ ಎಂದು ಕುಟುಂಬ ಆರೋಪಿಸಿದೆ. ಆರೋಪಿ ಗುಡ್ಡು ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳನ್ನು ಬಂಧಿಸಲು ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ”ಎಂದು ಪ್ರತಾಪ್‌ಗಢದ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ತಿಳಿಸಿದ್ದಾರೆ.

ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಘಟನೆಗಳ ಕುರಿತು ತನಿಖಾ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಆದೇಶಿಸಿದ್ದೇನೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಆಗ್ರಾ, ಚಿತ್ರಕೂಟ್ ಮತ್ತು ಪ್ರತಾಪ್‌ಗಢದ ಘಟನೆಗಳಿಗೆ ಸಂಬಂಧಿಸಿದಂತೆ ತ್ವರಿತ ಮತ್ತು ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಹಿರಿಯ ಅಧಿಕಾರಿಗಳು ತಕ್ಷಣವೇ ತನಿಖಾ ಕ್ರಮಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಬೇಕು ಮತ್ತು ಸಂತ್ರಸ್ತರ ಕುಟುಂಬಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ”ಎಂದು ಟ್ವೀಟ್ ಮಾಡಿದ್ದಾರೆ.

ಚಿತ್ರಕೂಟ ಜಿಲ್ಲೆಯ ಮಾಣಿಕ್‌ಪುರದಲ್ಲಿ ಮೂವರು ಪುರುಷರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 15 ವರ್ಷದ ದಲಿತ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಒಟ್ಟಿನಲ್ಲಿ ಉತ್ತರಪ್ರದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಹಿಂಸಾಚಾರದಲ್ಲಿ ಗಣನೀಯ ಏರಿಕೆಯಾಗಿರುವುದನ್ನು ಕಾಣಬಹುದಾಗಿದೆ.

ಇದನ್ನೂ ಓದಿ: ಯುಪಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಅಪ್ರಾಪ್ತೆ ಅಸಹಜ ಸಾವು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...