Homeಮುಖಪುಟಮನಿ ಲಾಂಡರಿಂಗ್ ಪ್ರಕರಣ: 5 ದಿನ ಇಡಿ ವಶಕ್ಕೆ ಮಾಜಿ ಸಿಎಂ ಹೇಮಂತ್ ಸೊರೇನ್

ಮನಿ ಲಾಂಡರಿಂಗ್ ಪ್ರಕರಣ: 5 ದಿನ ಇಡಿ ವಶಕ್ಕೆ ಮಾಜಿ ಸಿಎಂ ಹೇಮಂತ್ ಸೊರೇನ್

- Advertisement -
- Advertisement -

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ, ಅವರನ್ನು ಐದು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ರಾಂಚಿಯಲ್ಲಿರುವ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ.

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಸೊರೇನ್ ಮುಖ್ಯಮಂತ್ರಿ ಕಚೇರಿಯನ್ನು ತೊರೆದ ಕೂಡಲೇ ಭೂ ಹಗರಣಕ್ಕೆ ಸಂಬಂಧಿಸಿದ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬುಧವಾರ ರಾತ್ರಿ ಇಡಿ ಅಧಿಕಾರಿಗಳು ಬಂಧಿಸಿದ್ದರು.

ರಾಂಚಿಯಲ್ಲಿ ಭೂ-ಸಂಬಂಧಿತ ಅಕ್ರಮಗಳಲ್ಲಿ ಸೊರೇನ್ ಪ್ರಮುಖ ಫಲಾನುಭವಿ ಎಂಬುದಕ್ಕೆ ತನ್ನ ಬಳಿ ಪುರಾವೆಗಳಿವೆ ಎಂದು ಇಡಿ ಹೇಳಿಕೊಂಡಿದೆ. ಅಲ್ಲಿ ದಲ್ಲಾಳಿಗಳು ಮತ್ತು ಉದ್ಯಮಿಗಳ ಜಾಲವು ರಿಜಿಸ್ಟ್ರಾರ್ ಕಚೇರಿಗಳಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅವುಗಳನ್ನು ಮಾರಾಟ ಮಾಡುವ ಕೆಲಸವನ್ನು ಹಲವು ವರ್ಷಗಳಿಂದ ಮಾಡುತ್ತಿದೆ ಎಂದು ಹೇಳಲಾಗಿದೆ.

ಹೇಮಂತ್ ಸೊರೇನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ, ಜೆಎಂಎಂ ನಾಯಕ ಚಂಪೈ ಸೊರೇನ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದರು. ಗುರುವಾರ ರಾತ್ರಿ ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಿದ್ದರು. ಚಂಪೈ ಸೊರೇನ್ ಇಂದು ಮಧ್ಯಾಹ್ನ 12.15ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಹೇಮಂತ್ ಸೊರೇನ್ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದು, ಇಡಿ ತನಗೆ ಸಂಬಂಧವಿಲ್ಲದ ಆರೋಪವನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ. ‘ನನಗೆ ಸಂಬಂಧವೇ ಇಲ್ಲದ ಆರೋಪ ಮಾಡುತ್ತಿದ್ದಾರೆ; ಭೂ ಹಗರಣದ ಆರೋಪ ಮಾಡುತ್ತಿದ್ದಾರೆ. ಆದರೆ, ಆ ಭೂಮಿ ಎಂದಿಗೂ ಮಾರಾಟವಾಗುವುದಿಲ್ಲ. ನನ್ನ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಸಿಗಲಿಲ್ಲ. ದೆಹಲಿಯಲ್ಲಿ ದಾಳಿ ಮಾಡಿ ಏನೂ ಸಿಗಲಿಲ್ಲ. ಇಂದು ಅವರು ಬಂದರು; ಇಡೀ ದಿನ ವಿಚಾರಣೆ ನಡೆಸಿದರು. ಸಂಜೆ ನ್ಯಾಯಾಲಯಗಳು ಮುಚ್ಚಿರುತ್ತವೆ ಎಂಬ ಕಾರಣಕ್ಕೆ ಅವರು ಸಂಜೆ ನನ್ನನ್ನು ಬಂಧಿಸುವ ನಿರ್ಧಾರವನ್ನು ಪ್ರಕಟಿಸುತ್ತಾರೆ’ ಎಂದು ಹೇಮಂತ್ ಸೊರೇನ್ ಹೇಳಿದರು.

ಅವರು ನನ್ನನ್ನು ಬಂಧಿಸುತ್ತಾರೆ; ಆದರೆ ನಾನು ಶಿಬು ಸೊರೇನ್ ಅವರ ಮಗನಾಗಿರುವುದರಿಂದ ನನಗೆ ಭಯವಿಲ್ಲ, ಹೋರಾಟವು ನನ್ನ ರಕ್ತದಲ್ಲಿದೆ, ನನಗೆ ಭೂಮಿ ಹಗರದಲ್ಲಿ ಯಾವುದೇ ಸಂಬಂಧವಿಲ್ಲ, ನಕಲಿ ದಾಖಲೆಗಳ ಆಧಾರದ ಮೇಲೆ ನನ್ನನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಮಮತಾ ಬ್ಯಾನರ್ಜಿ ಖಂಡನೆ:

‘ಪ್ರಬಲ ಬುಡಕಟ್ಟು ನಾಯಕರಾದ ಹೇಮಂತ್ ಸೊರೇನ್ ಅವರ ಅನ್ಯಾಯದ ಬಂಧನವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಬಿಜೆಪಿ ಬೆಂಬಲಿತ ಕೇಂದ್ರೀಯ ಏಜೆನ್ಸಿಗಳ ಸೇಡಿನ ಕ್ರಮವು ಜನಪ್ರಿಯವಾಗಿ ಚುನಾಯಿತ ಸರ್ಕಾರವನ್ನು ದುರ್ಬಲಗೊಳಿಸುವ ಯೋಜಿತ ಪಿತೂರಿಯನ್ನು ಪ್ರಚೋದಿಸುತ್ತದೆ’ ಎಂದು ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಅವರು ನನ್ನ ಆತ್ಮೀಯ ಸ್ನೇಹಿತರಾಗಿದ್ದಾರೆ ಮತ್ತು ಈ ಕಷ್ಟದ ಸಮಯದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸಲು ಸಮರ್ಪಿತವಾಗಿ ಅವರ ಪಕ್ಕದಲ್ಲಿ ನಿಲ್ಲಲು ನಾನು ಪ್ರತಿಜ್ಞೆ ಮಾಡುತ್ತೇನೆ. ಜಾರ್ಖಂಡ್‌ನ ಚೇತರಿಸಿಕೊಳ್ಳುವ ಜನರು ಪ್ರತಿಧ್ವನಿಸುವಂತೆ ಪ್ರತಿಕ್ರಿಯೆಯನ್ನು ನೀಡುತ್ತಾರೆ; ಈ ನಿರ್ಣಾಯಕ ಯುದ್ಧದಲ್ಲಿ ಸೊರೇನ್ ವಿಜಯಶಾಲಿಯಾಗುತ್ತಾರೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ; ‘ನಾವು ಮಧ್ಯಪ್ರವೇಶಿಸುತ್ತಿಲ್ಲ, ಹೈಕೋರ್ಟ್‌ಗೆ ಹೋಗಿ..’; ಸೊರೇನ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...