Homeಮುಖಪುಟಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಹೇಮಂತ್ ಸೊರೇನ್ ಜೈಲಿನಿಂದ ಬಿಡುಗಡೆ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಹೇಮಂತ್ ಸೊರೇನ್ ಜೈಲಿನಿಂದ ಬಿಡುಗಡೆ

- Advertisement -
- Advertisement -

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಅವರಿಗೆ ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿದ ನಂತರ, ಇಂದು ಇಲ್ಲಿನ ಬಿರ್ಸಾ ಮುಂಡಾ ಜೈಲಿನಿಂದ ಬಿಡುಗಡೆಯಾದರು. ನ್ಯಾಯಮೂರ್ತಿ ರೊಂಗೋನ್ ಮುಖೋಪಾಧ್ಯಾಯ ಅವರ ಪೀಠವು ಸಾಮಾನ್ಯ ಜಾಮೀನು ನೀಡಿತು.

ಸೊರೇನ್ ಜೈಲಿನಿಂದ ಹೊರಬರುತ್ತಿದ್ದಂತೆ, ಹೆಚ್ಚಿನ ಸಂಖ್ಯೆಯ ಜೆಎಂಎಂ ಬೆಂಬಲಿಗರು ಹರ್ಷೋದ್ಗಾರ ವ್ಯಕ್ತಪಡಿಸಿ, ಅವರ ಪರವಾಗಿ ಘೋಷಣೆಗಳನ್ನು ಕೂಗಿದರು.

ಜೂನ್ 13 ರಂದು, ಜಾರಿ ನಿರ್ದೇಶನಾಲಯ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಮತ್ತು ಸೊರೇನ್ ಪರವಾಗಿ ವಕೀಲ ಎಸ್ ವಿ ರಾಜು ವಾದಗಳನ್ನು ಆಲಿಸಿದ ನಂತರ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿತ್ತು.

ಜನವರಿ 31, 2024 ರಂದು ಏಳು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಇಡಿ ಸೊರೇನ್ ಅವರನ್ನು ಬಂಧಿಸಿತ್ತು. ಶ್ಬಂಧನ ಖಚಿತವಾಗುತ್ತಿದ್ದಂತೆಯೆ ರಾಜಭವನಕ್ಕೆ ಹೋಗಿ ತಮ್ಮ ಉನ್ನತ ಹುದ್ದೆಗೆ ರಾಜೀನಾಮೆ ನೀಡಿದರು. ಅವರ ರಾಜೀನಾಮೆಯ ನಂತರ ಚಂಪೈ ಸೊರೇನ್ ಅವರು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದರು ಮತ್ತು ಫೆಬ್ರವರಿ 5 ರಂದು, ಹೊಸ ಸರ್ಕಾರವು 47 ಶಾಸಕರು ಮೋಷನ್ ಪರವಾಗಿ ಮತ ಚಲಾಯಿಸುವುದರೊಂದಿಗೆ ವಿಶ್ವಾಸವನ್ನು ಗಳಿಸಿತು.

ರಾಂಚಿಯ ಬದ್ಗೈ ಪ್ರದೇಶದಲ್ಲಿ 8.5 ಎಕರೆ ಸರ್ಕಾರಿ ಜಮೀನಿಗೆ ನಕಲಿ ಭೂ ದಾಖಲೆಗಳನ್ನು ಸೃಷ್ಠಿಸಿ, ಹಣ ವರ್ಗಾವಣೆ ಮಾಡಿದ ಪ್ರಕರಣ ಇದಾಗಿದೆ. ಸರ್ಕಾರಿ ಅಧಿಕಾರಿಗಳು ಸೇರಿದಂತೆ ಹಲವಾರು ವ್ಯಕ್ತಿಗಳ ವಿರುದ್ಧ ಜಾರ್ಖಂಡ್ ಪೊಲೀಸರು ದಾಖಲಿಸಿದ ಬಹು ಎಫ್‌ಐಆರ್‌ಗಳ ಆಧಾರದ ಮೇಲೆ ಇಡಿ ಐದು ಭೂ ಹಗರಣದ ಪ್ರಕರಣಗಳಲ್ಲಿ ತನಿಖೆಯನ್ನು ಪ್ರಾರಂಭಿಸಿದೆ. ಜಾರ್ಖಂಡ್‌ನಲ್ಲಿ ರಾಂಚಿ ಮತ್ತು ಕೋಲ್ಕತ್ತಾದಲ್ಲಿ ಭೂ ದಾಖಲೆಗಳನ್ನು ತಿದ್ದುವ ದಂಧೆಯಲ್ಲಿ ತೊಡಗಿರುವ ಭೂ ಮಾಫಿಯಾದ ದಂಧೆ ಸಕ್ರಿಯವಾಗಿದೆ ಎಂದು ಇಡಿ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ; ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...