Homeಕರೋನಾ ತಲ್ಲಣಮಂಕಿಪಾಕ್ಸ್ ಆತಂಕ: ಮುನ್ನೆಚ್ಚರಿಕೆ ಕ್ರಮ ಕೈಗೊಂಡ ರಾಜ್ಯ ಸರ್ಕಾರ

ಮಂಕಿಪಾಕ್ಸ್ ಆತಂಕ: ಮುನ್ನೆಚ್ಚರಿಕೆ ಕ್ರಮ ಕೈಗೊಂಡ ರಾಜ್ಯ ಸರ್ಕಾರ

- Advertisement -
- Advertisement -

ಕೊರೊನಾ ಪ್ರಕರಣಗಳು ಏರಿಕೆ ನಡುವೆಯೇ ರಾಜ್ಯದಲ್ಲಿಯೂ ಮಂಕಿಪಾಕ್ಸ್ ಸೋಂಕಿನ ಆತಂಕ ಕಾಣಿಸುತ್ತಿದ್ದು, ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಮಾಹಿತಿ ನೀಡಿದ್ದಾರೆ.

ಮಂಕಿಪಾಕ್ಸ್ ನಿರ್ವಹಣೆ ಕುರಿತು ಸಮಗ್ರ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಮೇ 31 ರಂದು ನೀಡಿದ್ದು, ಅದನ್ನು ಕಟ್ಟುನಿಟ್ಟಾಗಿ ಎಲ್ಲಾ ಜಿಲ್ಲೆಗಳಲ್ಲೂ ಪಾಲಿಸಲಾಗುತ್ತದೆ ಎಂದು ಆರೋಗ್ಯ ಸಚಿವ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ವಿಶ್ವದ ಹಲವೆಡೆ ಮಂಕಿಪಾಕ್ಸ್ ಸೋಂಕು ಹರಡುತ್ತಿರುವುದನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ರಾಜ್ಯದಲ್ಲಿ, ಕಾಯಿಲೆಯ ಮುನ್ಸೂಚನೆ ಕಂಡ ಕೂಡಲೇ ಸ್ಕ್ರೀನಿಂಗ್, ಎಲ್ಲ ಜಿಲ್ಲೆಗಳಲ್ಲಿ ಆಸ್ಪತ್ರೆ ಬೆಡ್‌ಗಳನ್ನು ಕಾಯ್ದಿರಿಸುವುದು, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್, ಸೇರಿದಂತೆ ಹಲವು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿ: ಕೊಲ್ಕತ್ತಾ: ಸರ್ಕಾರಿ ಹುದ್ದೆ ಪಡೆದ ಕಾರಣ ಹೆಂಡತಿಯ ಅಂಗೈ ಕತ್ತರಿಸಿದ ಪತಿ

 

ಶಂಕಿತ ಪ್ರಕರಣಗಳು ವರದಿಯಾದಾಗ ಅವುಗಳನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡುವ ಸಲುವಾಗಿ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ 2 ಹಾಸಿಗೆಗಳನ್ನು ಕಾಯ್ದಿರಿಸಲು ಸೂಚಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಮತ್ತು ದಕ್ಷಿಣ ಕನ್ನಡದ ಆರೋಗ್ಯ ಅಧಿಕಾರಿಗಳು ವಿಮಾನ ನಿಲ್ದಾಣದ ಅಧಿಕಾರಿಗಳ ಜೊತೆಗೆ ಸಹಕರಿಸಿ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ನಡೆಸಲು ಸೂಚನೆ ನೀಡಲಾಗಿದೆ.

ಶಂಕಿತ ಪ್ರಕರಣಗಳು ವರದಿಯಾದಲ್ಲಿ ಬೆಂಗಳೂರು ಸಾಂಕ್ರಾಮಿಕ ರೋಗ ಆಸ್ಪತ್ರೆ, ವೆನ್ಲಾಕ್ ಆಸ್ಪತ್ರೆ ಮತ್ತು ಮಂಗಳೂರಿನಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ.

ಶಂಕಿತ ಪ್ರಕರಣಗಳ ಮಾದರಿಯನ್ನು ಸಂಗ್ರಹಿಸಿ ನ್ಯಾಷನಲ್‌ ಇನ್ಟ್ಟಿಟ್ಯೂಟ್‌ ಆಫ್ ವೈರಾಲಜಿ ಪುಣೆಗೆ ಕಳುಹಿಸಲು ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಕಣ್ಗಾವಲು ಅಧಿಕಾರಿ ಹಾಗೂ ಯೋಜನಾ ನಿರ್ದೇಶಕರಾಗಿ ಡಾ. ಶ್ರೀನಿವಾಸ ಎನ್‌ ಅವರನ್ನು ಹಾಗೂ ರಾಜ್ಯ ಮಟ್ಟದ ನೋಡಲ್‌ ಅಧಿಕಾರಿಯಾಗಿ IDSP ಅವರನ್ನು ನೇಮಿಸಲಾಗಿದೆ.

ಮಂಕಿಪಾಕ್ಸ್ ಸೋಂಕು:

ಮಂಕಿಪಾಕ್ಸ್ ಅಪರೂಪದ ಕಾಯಿಲೆಯಾಗಿದ್ದು, ಇದು ಮಂಕಿಪಾಕ್ಸ್ ವೈರಸ್ ಸೋಂಕಿನಿಂದ ಉಂಟಾಗುತ್ತದೆ. ಮಂಕಿಪಾಕ್ಸ್ ವೈರಸ್ ಪಾಕ್ಸ್ವಿರಿಡೆ (Poxviridae) ಕುಟುಂಬದಲ್ಲಿ ಆರ್ಥೋಪಾಕ್ಸ್ (Orthopoxvirus) ವೈರಸ್ ಕುಲಕ್ಕೆ ಸೇರಿದೆ. ಆರ್ಥೋಪಾಕ್ಸ್‌ವೈರಸ್ ಕುಲವು ವೆರಿಯೊಲಾ ವೈರಸ್ (ಸಿಡುಬಿಗೆ ಕಾರಣವಾಗುತ್ತದೆ) ಎಂದು ಸಿಡಿಸಿ (Centers for Disease Control and Prevention) ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ.

ಮಂಕಿಪಾಕ್ಸ್ ಸಾಮಾನ್ಯವಾಗಿ ಜ್ವರ, ತಲೆನೋವು ಮತ್ತು ಚರ್ಮದ ದದ್ದುಗಳನ್ನು ಒಳಗೊಂಡಿರುವ ರೋಗಲಕ್ಷಣಗಳೊಂದಿಗೆ ಉಂಟಾಗುವ ವೈರಲ್ ಸೋಂಕು. ಈ ಸೋಂಕು 1958 ರಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿತ್ತು. ಮಧ್ಯ ಮತ್ತು ಪಶ್ಚಿಮ ಆಫ್ರಿಕನ್ ದೇಶಗಳಲ್ಲಿನ ಜನರಲ್ಲಿ ಖಾಯಿಲೆ ವರದಿಯಾಗಿದೆ.


ಇದನ್ನೂ ಓದಿ: ಕಾರ್ಕಳ: ಗೋಡ್ಸೆ ಬೋರ್ಡ್ ತೆರವು; ರಸ್ತೆಗೆ ನಾರಾಯಣಗುರುಗಳ ಹೆಸರಿಡುವಂತೆ ಕಾಂಗ್ರೆಸ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...