Homeಮುಖಪುಟಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

- Advertisement -
- Advertisement -

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು ಅಧಿಕೃತ ಮಾನ್ಯತೆ ಸಿಗುವ ಮುನ್ನವೇ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಿದ್ದನ್ನು ವಿರೋಧಿಸಿ ವಿರೋಧ ಪಕ್ಷಗಳ ‘INDIA’ ಮೈತ್ರಿಕೂಟದ ನಾಯಕರು ಸಭೆಯಿಂದ ಒಟ್ಟಾಗಿ ಹೊರನಡೆಯುವ ಮೂಲಕ ಸಾಂಕೇತಿಕ ಪ್ರತಿಭಟನೆ ನಡೆಸಿದ್ದಾರೆ.

ಸಂಸತ್ತಿನ ಅನೆಕ್ಸ್‌ ಕಟ್ಟಡದಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯ ಮುಖ್ಯ ಉದ್ದೇಶ ಮುಂಗಾರು ಅಧಿವೇಶನದ ಕಾರ್ಯಸೂಚಿ ಹಾಗೂ ಸದನದಲ್ಲಿ ಚರ್ಚೆಯಾಗಲಿರುವ ಪ್ರಮುಖ ವಿಷಯಗಳ ಕುರಿತು ಸಮಾಲೋಚನೆ ನಡೆಸುವುದಾಗಿತ್ತು. ಆದರೆ, ಸಭೆ ಆರಂಭವಾಗುತ್ತಿದ್ದಂತೆ ಕೇಂದ್ರದ ನಡೆಗೆ ವಿಪಕ್ಷಗಳು ತೀವ್ರ ಆಕ್ರೋಶ ಹೊರಹಾಕಿದವು.

ಸ್ಪೀಕರ್ ಮಾನ್ಯತೆ ನೀಡುವ ಮುನ್ನವೇ ಕೇಂದ್ರದ ಅತಿಥಿ ಸತ್ಕಾರ

ಟಿಎಂಸಿಯಿಂದ ಬಂಡಾಯ ಎದ್ದಿರುವ ಸುಮಾರು 20 ಸಂಸದರು ತಮ್ಮನ್ನು ‘ನ್ಯಾಷನಲಿಸ್ಟ್ ಕಾಂಗ್ರೆಸ್ ಆಫ್ ಪ್ರೊಗ್ರೆಸಿವ್ ಇಂಡಿಯಾ’ (NCPI) ಎಂದು ಕರೆದುಕೊಳ್ಳುತ್ತಿದ್ದಾರೆ. ಆದರೆ, ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರು ಈ ಬಂಡಾಯ ಸಂಸದರನ್ನು ಇನ್ನೂ ಪ್ರತ್ಯೇಕ ಸಂಸದೀಯ ಪಕ್ಷವೆಂದು ಅಧಿಕೃತವಾಗಿ ಗುರುತಿಸಿಲ್ಲ! ಹೀಗಿದ್ದೂ, ಕೇಂದ್ರ ಸರ್ಕಾರವು ಸಭೆಯಲ್ಲಿ ಇವರಿಗಾಗಿ ಪ್ರತ್ಯೇಕ ಮೇಜು ಹಾಗೂ ಆಸನ ವ್ಯವಸ್ಥೆ ಕಲ್ಪಿಸಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.

ಮೂಲಗಳ ಪ್ರಕಾರ, ಟಿಎಂಸಿ ಸಂಸದರ ಪಕ್ಕದಲ್ಲಿ ಕುಳಿತುಕೊಳ್ಳಲು ಬಂಡಾಯ ಸಂಸದರು ನಿರಾಕರಿಸಿದ್ದರಿಂದ ಸರ್ಕಾರ ಅವರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಿತ್ತು ಎನ್ನಲಾಗಿದೆ. ಆದರೆ, ಲೋಕಸಭಾಧ್ಯಕ್ಷರಿಂದ ಯಾವುದೇ ಔಪಚಾರಿಕ ಮಾನ್ಯತೆ ದೊರೆಯದ ಗುಂಪಿಗೆ ಸರ್ಕಾರ ಅಧಿಕೃತ ಸಭೆಯಲ್ಲಿ ಪ್ರತ್ಯೇಕ ಸ್ಥಾನ ನೀಡಿರುವ ಕ್ರಮ ಪ್ರಜಾಪ್ರಭುತ್ವದ ನಿಯಮಗಳಿಗೆ ಬಾಹಿರ ಎಂದು ವಿರೋಧ ಪಕ್ಷಗಳು ಕಿಡಿಕಾರಿವೆ.

ವಿಪಕ್ಷಗಳ ಒಗ್ಗಟ್ಟಿನ ಪ್ರತಿಭಟನೆ; ಸಭೆಗೆ ಮರಳಿದ ನಾಯಕರು

ಕೇಂದ್ರದ ಈ ತಾರತಮ್ಯ ಧೋರಣೆಯನ್ನು ವಿರೋಧಿಸಿ ಕಾಂಗ್ರೆಸ್, ಸಮಾಜವಾದಿ ಪಕ್ಷ, ಡಿಎಂಕೆ, ಜಾರ್ಖಂಡ್ ಮುಕ್ತಿ ಮೋರ್ಚಾ (JMM), ಆಮ್ ಆದ್ಮಿ ಪಾರ್ಟಿ (AAP), ನ್ಯಾಷನಲ್ ಕಾನ್ಫರೆನ್ಸ್, ಎಡಪಕ್ಷಗಳು ಹಾಗೂ ಶಿವಸೇನೆ (UBT) ಸೇರಿದಂತೆ INDIA ಮೈತ್ರಿಕೂಟದ ಪಕ್ಷಗಳ ನಾಯಕರು ಸಭೆಯಿಂದ ಒಟ್ಟಾಗಿ ಹೊರನಡೆದರು.

ಈ ಕುರಿತು ಮಾತನಾಡಿದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಇನ್ನೂ ಅಧಿಕೃತ ಮಾನ್ಯತೆ ಪಡೆಯದ ‘NCPI’ ಎಂಬ ಗುಂಪಿನ ಉಪಸ್ಥಿತಿ ಮತ್ತು ಅವರಿಗೆ ಕಲ್ಪಿಸಲಾದ ವಿಶೇಷ ವ್ಯವಸ್ಥೆಯನ್ನು ವಿರೋಧಿಸಿ INDIA ಮೈತ್ರಿಕೂಟದ ಎಲ್ಲಾ ಪಕ್ಷಗಳು ಸಭಾತ್ಯಾಗ ನಡೆಸಿವೆ, ಎಂದು ಸ್ಪಷ್ಟಪಡಿಸಿದರು.

ಬಳಿಕ ಸಭೆಗೆ ಮರಳಿದ ವಿರೋಧ ಪಕ್ಷದ ನಾಯಕರು, ತಮ್ಮ ಸಭಾತ್ಯಾಗವು ಕೇಂದ್ರದ ಏಕಪಕ್ಷೀಯ ತೀರ್ಮಾನದ ವಿರುದ್ಧದ ‘ಸಾಂಕೇತಿಕ ಪ್ರತಿಭಟನೆ’ಯಾಗಿತ್ತು ಎಂದು ತಿಳಿಸಿ, ಅಧಿವೇಶನದ ಕಾರ್ಯಸೂಚಿ ಹಾಗೂ ವಿವಿಧ ದೇಶಿ ವಿದ್ಯಮಾನಗಳ ಕುರಿತ ಚರ್ಚೆಯಲ್ಲಿ ಭಾಗವಹಿಸಿದರು. ಅಧಿವೇಶನ ಆರಂಭಕ್ಕೂ ಮುನ್ನವೇ ಕೇಂದ್ರ ಮತ್ತು ವಿಪಕ್ಷಗಳ ನಡುವೆ ಸೃಷ್ಟಿಯಾಗಿರುವ ಈ ಆಸನ ವಿವಾದ, ಮುಂಬರುವ ದಿನಗಳಲ್ಲಿ ಸದನದ ಒಳಗೆ ಮತ್ತಷ್ಟು ಕಾವೇರುವ ಮುನ್ಸೂಚನೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...