Homeಮುಖಪುಟಇಂದು ಸಂಸತ್ ಮುಂಗಾರು ಅಧಿವೇಶನ ಆರಂಭ: ಮಣಿಪುರ ಹಿಂಸಾಚಾರ ಸೇರಿ ಹಲವು ವಿಷಯ ಪ್ರಸ್ತಾಪಿಸಲು ವಿಪಕ್ಷಗಳ...

ಇಂದು ಸಂಸತ್ ಮುಂಗಾರು ಅಧಿವೇಶನ ಆರಂಭ: ಮಣಿಪುರ ಹಿಂಸಾಚಾರ ಸೇರಿ ಹಲವು ವಿಷಯ ಪ್ರಸ್ತಾಪಿಸಲು ವಿಪಕ್ಷಗಳ ನಿರ್ಧಾರ

- Advertisement -
- Advertisement -

ಇಂದಿನಿಂದ (ಜುಲೈ 20) ಸಂಸತ್ ಮುಂಗಾರು ಅಧಿವೇಶನ ಪ್ರಾರಂಭವಾಗಲಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಒಟ್ಟು 31 ಮಸೂದೆಗಳನ್ನು ಚರ್ಚಿಸುವ ಸಾಧ್ಯತೆಯಿದೆ. ಇವುಗಳನ್ನು ಈಗಾಗಲೇ ಕೆಳಮನೆಯಲ್ಲಿ ಮಂಡಿಸಲಾಗಿದೆ ಮತ್ತು ಜಂಟಿ ಸಮಿತಿಗಳಿಗೆ ಉಲ್ಲೇಖಿಸಲಾಗಿದೆ.

”ಡೇಟಾ ರಕ್ಷಣೆ ಮಸೂದೆಯು ಕೇಂದ್ರದ ಕಾರ್ಯಸೂಚಿಯ ಒಂದು ಭಾಗವಾಗಿದೆ. ಈ ನಡುವೆ ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಸುಗ್ರೀವಾಜ್ಞೆ, 2023 ಮಸೂದೆಯ ಮೇಲೆ ಇದೆ. ಇದನ್ನು ಆಮ್ ಆದ್ಮಿ ಪಕ್ಷ ಸರ್ಕಾರವು ತೀವ್ರವಾಗಿ ಟೀಕಿಸಿದೆ. ವಿಪಕ್ಷಗಳ ಸಭೆಯಲ್ಲಿಯೂ ಇದನ್ನು ಖಂಡಿಸಲಾಗಿದೆ. ಇಷ್ಟು ದಿನ ಈ ಬಗ್ಗೆ ಸುಮ್ಮನಿದ್ದ ಕಾಂಗ್ರೆಸ್ ಕೂಡ ಬಹಿರಂಗವಾಗಿ ಈ ಮಸೂದೆಯನ್ನು ಟೀಕಿಸಿ, ಎಎಪಿಗೆ ಬೆಂಬಲ ಸೂಚಿಸಿದೆ.

ಮತ್ತೊಂದೆಡೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಹ ಸಜ್ಜಾಗಿವೆ. ಮಣಿಪುರ ಗಲಭೆ, ರಾಹುಲ್ ಗಾಂಧಿ ಅನರ್ಹತೆ, ದೆಹಲಿ ಸುಗ್ರೀವಾಜ್ಞೆ, ಪ್ರವಾಹ, ಒರಿಸ್ಸಾ ರೈಲು ದುರಂತ,  ಬೆಲೆ ಏರಿಕೆ, ನಿರುದ್ಯೋಗ ಮತ್ತು ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚೆಗೆ ಪ್ರತಿಪಕ್ಷದ ನಾಯಕರು ಪಟ್ಟು ಹಿಡಿಯುವ ಸಾಧ್ಯತೆ ಇದೆ.

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ, ನಿರುದ್ಯೋಗ ಸಮಸ್ಯೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಭಾರತ-ಚೀನಾ ಗಡಿ ಸ್ಥಿತಿ, ಮುಂದಿನ ಲೋಕಸಭೆ ಚುನಾವಣೆಗೆ ವಿಪಕ್ಷಗಳ ಮೈತ್ರಿಕೂಟ ರಚನೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಆಡಳಿತ ಮತ್ತು ಪ್ರತಿಪಕ್ಷಗಳು ಮುಖಾಮುಖಿಯಾಗುವುದರೊಂದಿಗೆ ಸಂಸತ್ತಿನ ಮುಂಗಾರು ಅಧಿವೇಶನವು ಗುರುವಾರ ತೀವ್ರ ಗದ್ದಲ, ಕೋಲಾಹಲ ಮಧ್ಯೆ ಪ್ರಾರಂಭವಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಮಣಿಪುರದಲ್ಲಿ ಹೇಯ ಕೃತ್ಯ: ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ

ಮಣಿಪುರದಲ್ಲಿ ಹಿಂಸಾಚಾರದ ಬಗ್ಗೆ ಚರ್ಚೆಗೆ ಸರ್ಕಾರ ಒಪ್ಪಿಗೆ ನೀಡಿದರೆ, ಪ್ರಧಾನ ವಿರೋಧ ಪಕ್ಷವಾದ ಕಾಂಗ್ರೆಸ್ ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಒತ್ತಾಯಿಸಲು ಹಠ ಹಿಡಿದಿದೆ. ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಮುಖಾಮುಖಿಯಾಗುವ ಸಾಧ್ಯತೆಯಿರುವ ಇನ್ನೊಂದು ಪ್ರಮುಖ ವಿಷಯವೆಂದರೆ ದೆಹಲಿ ಸೇವಾ ಸುಗ್ರೀವಾಜ್ಞೆ.

ಮಣಿಪುರದಲ್ಲಿನ ಹಿಂಸಾಚಾರ ಬಗ್ಗೆ ಪ್ರಧಾನಿ ಹೇಳಿಕೆ ನೀಡುವಂತೆ ಪ್ರತಿಪಕ್ಷಗಳು ಒತ್ತಾಯಿಸುತ್ತಲೇ ಬಂದಿದ್ದು ಸದನದಲ್ಲಿ ತೀವ್ರ ಗದ್ದಲ ನಡೆಸುವ ಸಾಧ್ಯತೆಯಿದೆ.

ದೆಹಲಿ ಅಧಿಕಾರಶಾಹಿಗಳ ಮೇಲಿನ ಮಸೂದೆಗೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಮುಂಗಾರು ಅಧಿವೇಶದಲ್ಲಿ ಭಾರಿ ಮುಖಾಮುಖಿಯಾಗುವ ನಿರೀಕ್ಷೆಯಿದೆ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರೋಧ ಪಕ್ಷಗಳ ಬೆಂಬಲದೊಂದಿಗೆ ಪ್ರಚಾರ ಮಾಡುತ್ತಿದ್ದಾರೆ. ಪ್ರತಿಪಕ್ಷದಲ್ಲಿ 105 ಸದಸ್ಯರು ಮಸೂದೆಯನ್ನು ವಿರೋಧಿಸಿದ್ದಾರೆ.

ಮೇ 3 ರಿಂದ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗುತ್ತಿರುವ ಮಣಿಪುರ ರಾಜ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಇಂದು ಸಂಸತ್ತಿನ ಅಧಿವೇಶನ ಆರಂಭ ದಿನವೇ ಕೆಲವು ಪಕ್ಷಗಳು ಮುಂದೂಡಿಕೆ ನಿರ್ಣಯವನ್ನು ಮಂಡಿಸಲು ಯೋಜಿಸಿವೆ.

ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುಂಚಿತವಾಗಿ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ ನೀಡಿ, ನಮ್ಮ ಪಕ್ಷದ ಮೊದಲ ಬೇಡಿಕೆಯೆಂದರೆ ಮಣಿಪುರ ವಿಷಯದ ಬಗ್ಗೆ ಸದನದಲ್ಲಿ ಪ್ರಧಾನಿ ಹೇಳಿಕೆ ನೀಡುವುದು ಮತ್ತು ಅದನ್ನು ಚರ್ಚಿಸಲು ನಮಗೆ ಅವಕಾಶ ನೀಡುವುದು. ನಾಳೆ, ನಾವು ಇದರ ಮೇಲೆ ಮುಂದೂಡಿಕೆ ನಿರ್ಣಯವನ್ನು ತರಲು ಬಯಸುತ್ತೇವೆ. ದೇಶದ ಪ್ರಮುಖ ಭಾಗವು ಪ್ರವಾಹದಿಂದ ತತ್ತರಿಸಿದೆ. ಈ ಬಗ್ಗೆಯೂ ಚರ್ಚೆಯಾಗಬೇಕು. ಬಾಲಸೋರ್ ರೈಲ್ವೆ ಅಪಘಾತದ ಬಗ್ಗೆಯೂ ಚರ್ಚಿಸಬೇಕು. ನಿರುದ್ಯೋಗ ಮತ್ತು ಹಣದುಬ್ಬರ ದೇಶದ ಸಾಮಾನ್ಯ ಸಮಸ್ಯೆಗಳಾಗಿವೆ. ದೇಶದ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ಹೊಡೆತದ ಬಗ್ಗೆಯೂ ಚರ್ಚಿಸಬೇಕು. ಭಾರತ-ಚೀನಾ ಗಡಿ ಪರಿಸ್ಥಿತಿ ಮತ್ತು ಉಭಯ ದೇಶಗಳ ನಡುವಿನ ವ್ಯಾಪಾರವನ್ನು ಸಹ ಚರ್ಚೆಗೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನವು ಆಗಸ್ಟ್ 11 ರವರೆಗೆ ಮುಂದುವರಿಯುತ್ತದೆ. ಅಧಿವೇಶನದಲ್ಲಿ ಒಟ್ಟು 17 ದಿನ ಕಲಾಪಗಳು ನಡೆಯಲಿವೆ. ಹಳೆಯ ಸಂಸತ್ ಭವನದಲ್ಲಿ ಅಧಿವೇಶನ ಆರಂಭವಾಗಲಿದ್ದು, ನಂತರ ಹೊಸ ಕಟ್ಟಡಕ್ಕೆ ಮಧ್ಯಭಾಗದಲ್ಲಿ ವರ್ಗಾವಣೆಯಾಗಲಿದ್ದಾರೆ.

ಈ ವರ್ಷದ ಮೇ ತಿಂಗಳಲ್ಲಿ ಹೊಸ ಸಂಸತ್ತನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಇದು 1927 ರಲ್ಲಿ ನಿರ್ಮಿಸಲಾದ ಪ್ರಸ್ತುತ ಕಟ್ಟಡಕ್ಕಿಂತ ಹೆಚ್ಚಿನ ಸ್ಥಳವನ್ನು ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...