Homeಮುಖಪುಟಅಧಿಕಾರಕ್ಕೆ ಬಂದರೆ ದೇವಾಲಯ-ಗುರುದ್ವಾರದ ಅರ್ಚಕರಿಗೆ ಮಾಸಿಕ 18 ಸಾವಿರ ಭತ್ಯೆ: ಕೇಜ್ರಿವಾಲ್

ಅಧಿಕಾರಕ್ಕೆ ಬಂದರೆ ದೇವಾಲಯ-ಗುರುದ್ವಾರದ ಅರ್ಚಕರಿಗೆ ಮಾಸಿಕ 18 ಸಾವಿರ ಭತ್ಯೆ: ಕೇಜ್ರಿವಾಲ್

- Advertisement -
- Advertisement -

ದಿಲ್ಲಿ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಆಮ್ ಆದ್ಮಿ ಪಕ್ಷವು ಅಧಿಕಾರಕ್ಕೆ ಬಂದರೆ ದೇವಾಲಯ ಹಾಗೂ ಗುರುದ್ವಾರದ ಅರ್ಚಕರಿಗೆ ಮಾಸಿಕ ತಲಾ 18 ಸಾವಿರ ಭತ್ಯೆ ನೀಡುವ ಯೋಜನೆಯನ್ನು ದಿಲ್ಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಪ್ರಕಟಿಸಿದ್ದಾರೆ.

ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ತೀವ್ರ ಕಸರತ್ತು ನಡೆಸಿರುವ ಕೇಜ್ರಿವಾಲ್ ಈ ಮಹತ್ಮದ ಯೋಜನೆಗಳನ್ನು ಇಂದು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.

ಅರ್ಚಕರು “ಗ್ರಂಥಿ ಸಮ್ಮಾನ್” ಯೋಜನೆಯಲ್ಲಿ ಮಾಸಿಕ 18 ಸಾವಿರ ರೂ.ಗಳನ್ನು ಪಡೆಯುತ್ತಾರೆ. ನಾಳೆಯಿಂದಲ್ಲೇ ನೋಂದಣಿ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು. ನಾಳೆ ತಾವೇ ಖುದ್ದಾಗಿ ದೆಹಲಿ ಕನ್ನಾಟ್ ನಲ್ಲಿರುವ ಹನುಮಾನ್ ಮಂದಿರಕ್ಕೆ ಭೇಟಿ ನೀಡಿ ಅಲ್ಲಿನ ಅರ್ಚಕರ ನೋಂದಣಿ ಪ್ರಕ್ರಿಯೇ ಮೇಲ್ವಿಚಾರಣೆ ನಡೆಸುವುದಾಗಿ ಹೇಳಿದರು.

ಮಹಿಳಾ ಸಮ್ಮಾನ್ ಯೋಜನೆಗೆ ದೆಹಲಿಯ ಮಹಿಳೆಯರ ವೈಯಕ್ತ ಮಾಹಿತಿ ಸಂಗ್ರಹಿಸಿರುವ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಆದೇಶ ನೀಡಿರುವ ಬೆನ್ನಲ್ಲೇ ಕೇಜ್ರಿವಾಲ್ ದೇವಾಲಯ ಗುರುದ್ವಾರದ ಅರ್ಚಕರಿಗೆ ಬಂಪರ್ ಯೋಜನೆ ಘೋಷಿಸಿದ್ದಾರೆ.

ಡಿಸೆಂಬರ್ 12ರಂದು ದೆಹಲಿ ಕ್ಯಾಬಿನೆಟ್  ಮಹಿಳೆಯರಿಗೆ ಮಾಸಿಕ ₹ 1,000 ನೀಡುವ “ಮುಖ್ಯ ಮಂತ್ರಿ ಮಹಿಳಾ ಸಮ್ಮಾನ್ ಯೋಜನೆ” ಯನ್ನು ಅನುಮೋದಿಸಿತ್ತು. ಅದೇ ದಿನ ಎಎಪಿ ಮತ್ತೆ ಅಧಿಕಾರಕ್ಕೆ ಬಂದರೆ ಯೋಜನೆಯಡಿ ಭತ್ಯೆಯನ್ನು ತಿಂಗಳಿಗೆ ₹ 2,100ಕ್ಕೆ ಹೆಚ್ಚಿಸಲಾಗುವುದು ಎಂದು ಕೇಜ್ರಿವಾಲ್ ಘೋಷಿಸಿದ್ದರು.

ಅರ್ಚಕರ ನೋಂದಣಿಯನ್ನು ತಡೆಯಲು ಪೊಲೀಸರನ್ನು ಕಳುಹಿಸಬೇಡಿ ಎಂದು ಬಿಜೆಪಿಯನ್ನು ಕೇಳಿದ ಕೇಜ್ರಿವಾಲ್,  ಅರ್ಚಕರು ನಮ್ಮ ಪ್ರಾರ್ಥನೆಗಳನ್ನು ದೇವರಿಗೆ ತಲುಪಿಸುತ್ತಾರೆ. ಬಿಜೆಪಿಯವರು ನಕಲಿ ಪ್ರಕರಣ ದಾಖಲಿಸಿ, ಮಹಿಳಾ ಸಮ್ಮಾನ್ ಯೋಜನೆಯಡಿ ನೋಂದಣಿಯನ್ನು ನಿಲ್ಲಿಸುವಂತೆ ಪೊಲೀಸರನ್ನು ಕಳುಹಿಸಿದ್ದರು. ಆದರೆ ಅದನ್ನು ತಡೆಯಲು ಸಾಧ್ಯವಾಗಲಿಲ್ಲ. ಆ ನೋಂದಣಿ ಮುಂದುವರಿದಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಅರ್ಚಕರಿಗೆ ಪಾವತಿಸಲು ಸರ್ಕಾರ ಹೇಗೆ ಹಣವನ್ನು ವ್ಯವಸ್ಥೆ ಮಾಡುತ್ತದೆ ಎಂದು ಮಾಧ್ಯಮದವರು ಕೇಳಿದಾಗ, “ಈ ಯೋಜನೆಗೆ ಯಾವುದೇ ಹಣದ ಕೊರತೆಯಾಗಲು ನಾನು ಬಿಡುವುದಿಲ್ಲ” ಎಂದು ಕೇಜ್ರಿವಾಲ್ ಹೇಳಿದರು.

ದೆಹಲಿಯ 70 ವಿಧಾನಸಭಾ ಕ್ಷೇತ್ರಗಳ ಪೈಕಿ ಸುಮಾರು ಐದರಲ್ಲಿ ಸಿಖ್ಖರು ಗಮನಾರ್ಹ ಹಿಡಿತ ಹೊಂದಿದ್ದಾರೆ. ಇತರ ಐದು ಕ್ಷೇತ್ರಗಳಲ್ಲಿ ಗಣನೀಯ ಪ್ರಮಾಣದ ಸಿಖ್ ಮತದಾರರಿದ್ದಾರೆ.

ಎಎಪಿ ಸರ್ಕಾರವು 2019ರಲ್ಲಿ ದೆಹಲಿ ಇಮಾಮ್‌ಗಳ ಮಾಸಿಕ ಭತ್ಯೆಯನ್ನು ಮಾಸಿಕ ₹ 10,000 ರಿಂದ ₹ 18,000ಕ್ಕೆ ಹೆಚ್ಚಿಸಿತ್ತು. ಕಳೆದ 14 ತಿಂಗಳಿಂದ ಇಮಾಮ್‌ಗಳ ವೇತನವನ್ನು ಪಾವತಿಸಲಾಗಿಲ್ಲ ಎಂದು ಇಮಾಮ್ ಗಳು ಈಗ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಮನುಸ್ಮೃತಿ ಸುಟ್ಟ ಆರೋಪ: 13 ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....