Homeಮುಖಪುಟಕೋಮು ದ್ವೇಷಿ ಮೋನು ಮಾನೇಸರ್‌‌ ವಿಡಿಯೊಗಳಿಗೆ ಯೂಟ್ಯೂಬ್‌ನಲ್ಲಿ ನಿರ್ಬಂಧ

ಕೋಮು ದ್ವೇಷಿ ಮೋನು ಮಾನೇಸರ್‌‌ ವಿಡಿಯೊಗಳಿಗೆ ಯೂಟ್ಯೂಬ್‌ನಲ್ಲಿ ನಿರ್ಬಂಧ

- Advertisement -
- Advertisement -

ಸ್ವಯಂ ಘೋಷಿತ ಗೋರಕ್ಷಕ, ಇಬ್ಬರು ಮುಸ್ಲಿಮರ ಕೊಲೆ ಪ್ರಕರಣದ ಆರೋಪಿ ಮೋನು ಮಾನೇಸರ್‌ನ ಕಾರ್ಯಕ್ರಮಗಳನ್ನು ಯೂಟ್ಯೂಬ್‌ ತನ್ನ ಮ್ಯಾನಿಟೈಸೇಷನ್‌ ವ್ಯಾಪ್ತಿಯಿಂದ ಹೊರಗಿಟ್ಟಿದೆ. ಹೀಗಾಗಿ ಮೋನು ಮಾನೇಸರ್‌ ಪೋಸ್ಟ್‌ ಮಾಡುವ ವಿಡಿಯೊಗಳಿಗೆ ಇನ್ನು ಮುಂದೆ ಹಣ ಬರುವುದಿಲ್ಲ.

ಸಮುದಾಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆತನ ಯೂಟ್ಯೂಬ್‌ ಚಾನೆಲ್‌ನಿಂದ ಒಂಬತ್ತು ವೀಡಿಯೊಗಳನ್ನು ತೆರೆವು ಮಾಡಲಾಗಿದೆ. ಇತರ ಇಬ್ಬರಿಗೆ ವಯಸ್ಸಿನ ನಿರ್ಬಂಧಗಳನ್ನು ಹಾಕಿದೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಅಮೆರಿಕ ಮೂಲದ ಸುದ್ದಿ ವೆಬ್‌ಸೈಟ್‌ Codastorಗೆ ಯೂಟ್ಯೂಟ್‌‌ ಸಂಸ್ಥೆ ಮಂಗಳವಾರ ಇಮೇಲ್ ಮೂಲಕ ಸ್ಪಷ್ಟನೆ ನೀಡಿದೆ. ಮೋನು ಮೋನೇಸರ್‌‌ ಕಮ್ಯುನಿಟಿ ಸ್ಟಾಡರ್ಡ್‌ಗಳನ್ನು ಉಲ್ಲಂಘಿಸುತ್ತಿರುವುದನ್ನು ಉಲ್ಲೇಖಿಸಿದೆ. ಮೋನೇಸರ್‌ ಮತ್ತು ಇತರರು ಇಬ್ಬರು ಮುಸ್ಲಿಂ ಯುವಕರ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿ ಗುರುತಿಸಲ್ಪಟ್ಟಿದ್ದಾರೆ.

ಭಿವಾನಿ ಜಿಲ್ಲೆಯಲ್ಲಿ ಇಬ್ಬರು ಮುಸ್ಲಿಮರ ಹತ್ಯೆಯಾಗುವ ಕೆಲವು ದಿನಗಳ ಮೊದಲು ತನಿಖಾ ವರದಿ ಪ್ರಕಟಿಸಿದ್ದ ಆಲ್ಟ್‌ನ್ಯೂಸ್‌, ಮೋನು ಹೇಗೆ ಕಾನೂನಿನ ತಡೆ ಇಲ್ಲದೆ ಹಲವಾರು ಹಿಂಸಾತ್ಮಕ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿದ್ದಾರೆ ಎಂಬುದನ್ನು ಹೊರಗೆಳೆದಿತ್ತು. ಆಲ್ಟ್‌ನ್ಯೂಸ್‌ನ ಶಿಂಜಿನಿ ಮಜುಂದಾರ್‌ ತನಿಖಾ ವರದಿ ಬರೆದಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಮೋನು, ಸಾಕಷ್ಟು ಫಾಲೋಯರ್ಸ್‌‌ಗಳನ್ನು ಹೊಂದಿದ್ದಾರೆ. ಯೂಟ್ಯೂಬ್‌ನಲ್ಲಿ 2 ಲಕ್ಷಕ್ಕೂ ಹೆಚ್ಚು, ಫೇಸ್‌ಬುಕ್ ಪುಟದಲ್ಲಿ 83,000 ಫಾಲೋಯರ್ಸ್‌ಗಳನ್ನು ಹೊಂದಿದ್ದಾರೆ. ಮೆಟಾ ಮತ್ತು ಯೂಟ್ಯೂಬ್‌ನ ಸುರಕ್ಷತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಹಲವಾರು ವಿಷಯಗಳನ್ನು ಮೋನು ಅಪ್‌ಲೋಡ್‌ ಮಾಡುತ್ತಲೇ ಬಂದಿದ್ದಾನೆ.

ಗಾಯಗೊಂಡ ಸ್ಥಿತಿಯಲ್ಲಿರುವ ವ್ಯಕ್ತಿಗಳ ತಲೆಗೂದಲಿಡಿದು ಚಿತ್ರ ಹಿಂಸೆ ನೀಡುತ್ತಿರುವ ಪೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಮೋನು ಮತ್ತು ಆತನ ಸಹಚರರು ಅಪ್‌ಲೋಡ್ ಮಾಡುತ್ತಾ ಬಂದಿದ್ದಾರೆ. ಹಸುವಿನ ಕಳ್ಳಸಾಗಣೆಯಲ್ಲಿ ತೊಡಗಿದ ವ್ಯಕ್ತಿಗಳು ಇವರೆಂದು ಮೋನು ಬಣದವರು ವಾದಿಸುತ್ತಾರೆ.

ಮೋನು ಅವರ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಲಾದ ಯಾವುದೇ ವಿಷಯದ ಕುರಿತು ಮೆಟಾ ಸಂಸ್ಥೆ ಈವರೆಗೆ ಕ್ರಮ ಜರುಗಿಸಿಲ್ಲ.

ಕೊಲೆ ಪ್ರಕರಣ

ಹರಿಯಾಣದ ಜಿಂದ್‌ನಲ್ಲಿರುವ ಗೋಶಾಲೆಯಿಂದ ಪತ್ತೆಯಾದ ಸುಟ್ಟ ದೇಹಗಳು ಮತ್ತು ಎಸ್‌ಯುವಿ ಕಾರ್‌ನಲ್ಲಿ ಪತ್ತೆಯಾದ ರಕ್ತದ ಕಲೆಗಳು ಜುನೈದ್ ಮತ್ತು ನಾಸಿರ್‌ ಅವರದ್ದೇ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ದೃಢಪಡಿಸಿದೆ ಎಂದು ರಾಜಸ್ಥಾನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಹರಣಕ್ಕೊಳಗಾಗಿದ್ದ ರಾಜಸ್ಥಾನದ ಭರತ್‌ಪುರ ಮೂಲದ ವ್ಯಕ್ತಿಗಳ ಶವಗಳು ಫೆಬ್ರವರಿ 16ರಂದು ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ವಾಹನದೊಳಗೆ ಪತ್ತೆಯಾಗಿದ್ದವು. ಈ ಇಬ್ಬರು ಮುಸ್ಲಿಮರನ್ನು ಬಜರಂಗದಳದ ಗೂಂಡಾಗಳು ಹೊಡೆದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

“ಜಿಂದ್‌ನ (ಹರಿಯಾಣ) ಗೋಶಾಲಾದಿಂದ ವಶಪಡಿಸಿಕೊಂಡ ಎಸ್‌ಯುವಿಯಲ್ಲಿನ ಸುಟ್ಟ ದೇಹಗಳು ಮತ್ತು ರಕ್ತದ ಕಲೆಗಳು ನಾಸಿರ್ ಮತ್ತು ಜುನೈದ್ ಅವರದ್ದು ಎಂದು ಎಫ್‌ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿಯು ದೃಢಪಡಿಸುತ್ತದೆ” ಎಂದು ಭರತ್‌ಪುರ ರೇಂಜ್ ಐಜಿ ಗೌರವ್ ಶ್ರೀವಾಸ್ತವ್ ಹೇಳಿದ್ದಾರೆ.

ನಾಸಿರ್ ಮತ್ತು ಜುನೈದ್ ಅವರ ಕುಟುಂಬದ ಸದಸ್ಯರ ರಕ್ತದ ಮಾದರಿಗಳನ್ನು ಸಹ ಸಂಗ್ರಹಿಸಲಾಗಿದ್ದು, ಎಸ್‌ಯುವಿಯಲ್ಲಿ ಕಂಡುಬಂದ ರಕ್ತದ ಕಲೆಗಳು ಮತ್ತು ಸುಟ್ಟ ವಾಹನದಲ್ಲಿ ಪತ್ತೆಯಾದ ಮೂಳೆಗಳು ಹೊಂದಾಣಿಕೆಯಾಗುತ್ತವೆ. ವರದಿಯು ಈಗ ಎರಡೂ ಶವಗಳ ಗುರುತನ್ನು ದೃಢಪಡಿಸಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...