Homeಕರ್ನಾಟಕಉಳ್ಳಾಲ ಬೀಚ್‌ನಲ್ಲಿ ಮತೀಯ ಗೂಂಡಾಗಿರಿ: ನಾಲ್ವರ ಬಂಧನ

ಉಳ್ಳಾಲ ಬೀಚ್‌ನಲ್ಲಿ ಮತೀಯ ಗೂಂಡಾಗಿರಿ: ನಾಲ್ವರ ಬಂಧನ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಬಳಿಯ ಸೋಮೇಶ್ವರ ಬೀಚ್‌ಗೆ ವಿಹಾರಕ್ಕೆಂದು ಬಂದಿದ್ದು ಕೇರಳ ಮೂಲದ  ವಿದ್ಯಾರ್ಥಿಗಳ ಮೇಲೆ ಮತೀಯ ಗೂಂಡಾಗಿರಿ ನಡೆಸಲಾಗಿದೆ. ಹುಡುಗಿಯರು ಮತ್ತು ಮೂವರು ಹುಡುಗರನ್ನು ಹಿಂಬಾಲಿಸಿದ ಪುಂಡರ ತಂಡವೊಂದು ಯುವಕರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಪ್ಯಾರ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಗುರುವಾರ ಸಂಜೆ ಸೋಮೇಶ್ವರ ಬೀಚ್‌ಗೆ ತೆರಳಿದ್ದರು. ಜಾಫರ್ ಶರೀಫ್, ಮುಜೀಬ್ ಮತ್ತು ಆಶಿಕ್ ಎಂಬ ಮುಸ್ಲಿಂ ಯುವಕರು ಜೊತೆಗಿದ್ದುದ್ದನ್ನು ಆಕ್ಷೇಪಿಸಿದ ಪುಂಡರ ತಂಡವೊಂದು ಅವರ ಮೇಲೆ ಹಲ್ಲೆ ನಡೆಸಿದೆ. ಈ ಆರೋಪದ ಮೇಲೆ ಉಳ್ಳಾಲದ ನಿವಾಸಿಗಳಾದ ಯತೀಶ್, ಸಚಿನ್, ಮೋಕ್ಷಿತ್ ಮತ್ತು ಸುಹಾನ್ ಎಂಬುವವರನ್ನು ಬಂಧಿಸಲಾಗಿದೆ.

ಸದ್ಯ ಸಂತ್ರಸ್ತ ಯುವಕರು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಯುವತಿಯರು ಕೇರಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ  ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ವಿಚಾರಣೆಗಾಗಿ ವಿಶೇ‍ಷ ತಂಡವನ್ನು ರಚಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ.

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ಗೂಂಡಾಗಿರಿ ಪ್ರಕರಣಗಳು ಮಿತಿ ಮೀರುತ್ತಿವೆ. ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರೆ ಕ್ರಿಯೆಗೆ ಪ್ರತಿಕ್ರಿಯೆ ಇದ್ದೆ ಇರುತ್ತದೆ ಎಂಬ ಹೇಳಿಕೆ ನೀಡುವ ಮೂಲಕ ಮತೀಯ ಗೂಂಡಾಗಿರಿಗಳನ್ನು ಸಮರ್ಥಿಸಿದ್ದರು. ಆದಾದ ನಂತರ 8 ತಿಂಗಳಲ್ಲಿ 15ಕ್ಕೂ ಹೆಚ್ಚು ಮತೀಯ ಗೂಂಡಾಗಿರಿ ಪ್ರಕರಣಗಳು ಜರುಗಿದ್ದವು. ಈ ಸಂದರ್ಭದಲ್ಲಿ ಸಂತ್ರಸ್ತರ ಮೇಲೆ ಪ್ರಕರಣ ದಾಖಲಿಸಿ ಆರೋಪಿಗಳ ಪರ ವಹಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈಗ ಸರ್ಕಾರ ಬದಲಾಗಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದು ಈ ರೀತಿಯ ಮತೀಯ ಗೂಂಡಾಗಿರಿ ಪ್ರಕರಣಗಳನ್ನು ಹೇಗೆ ತಡೆಯುತ್ತದೆ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ; ಇದ್ರೀಸ್ ಪಾಶ ಹತ್ಯೆಗೆ ಪೊಲೀಸರ ಕರ್ತವ್ಯ ಲೋಪವೂ ಕಾರಣ: ಸತ್ಯಶೋಧನಾ ವರದಿ ಬಿಡುಗಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಟಿಪ್ಪು ಸುಲ್ತಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬುವುದು ಸುಳ್ಳು

0
"ಜಿಹಾದಿ ಶಾರುಖ್ ಖಾನ್‌ನ ಭಾರೀ ಬಜೆಟ್‌ನಿಂದ ತಯಾರಾದ ದೇಶದ್ರೋಹಿ, ಮತಾಂಧ ತಿಪ್ಪೆ ಸುಲ್ತಾನನ ನಕಲಿ ಚರಿತ್ರೆ ಬರುತ್ತಿದೆ. ಇಂತಹ ದೇಶದ್ರೋಹಿಯ ಸಿನಿಮಾವನ್ನು ಬಹಿಷ್ಕರಿಸಲು ಶೇರ್ ಮಾಡಿ" ಎಂದು ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ...