Homeಕರ್ನಾಟಕಬೆಳಗಾವಿ: ಪಾರ್ಕ್‌ಗೆ ಹೊರಟಿದ್ದ ಯುವಕ-ಯುವತಿಗೆ ಥಳಿಸಿ ಮತೀಯ ಗೂಂಡಾಗಿರಿ

ಬೆಳಗಾವಿ: ಪಾರ್ಕ್‌ಗೆ ಹೊರಟಿದ್ದ ಯುವಕ-ಯುವತಿಗೆ ಥಳಿಸಿ ಮತೀಯ ಗೂಂಡಾಗಿರಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೆ ಮೊನ್ನೆ ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿ ಮಾತನಾಡಿದ್ದರು. ಅದಕ್ಕೆ ವ್ಯಾಪಕ ಟೀಕೆ ಕೂಡ ವ್ಯಕ್ತವಾಗಿತ್ತು.

- Advertisement -
- Advertisement -

ನಗರದಲ್ಲಿ ಸುತ್ತಾಡಿ ಕಾಲಕಳೆಯಲು ಬಂದಿದ್ದ ಪರಸ್ಪರ ಪರಿಚಯವಿದ್ದ ವಿಭಿನ್ನ ಧರ್ಮಕ್ಕೆ ಸೇರಿದ ಸ್ನೇಹಿತರಿಬ್ಬರನ್ನು ದುಷ್ಕರ್ಮಿಗಳು ತಡೆದು ಯುವಕನನ್ನು ಥಳಿಸಿ, ಯುವತಿಯನ್ನು ಎಳೆದಾಡಿರುವ ಮತೀಯ ಗೂಂಡಾಗಿರಿ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ನಗರದ ಉದ್ಯಾನವನವೊಂದರಲ್ಲಿ ವಿಹಾರಕ್ಕೆ ಹೋಗಲು ಬಯಸಿದ್ದ, ಚಿಂಚಲಿ ಗ್ರಾಮದ ರಾಹುಲ್‌ ರಾಜು ಗುರವ್‌ ಮತ್ತು ಸಂಕೇಶ್ವರದ ಶಕೀರಾ ಬಾನು ಭಾನುವಾರ (ಇಂದು) ಬೆಳಗ್ಗೆ ಬೆಳಗಾವಿಯ ಬಸ್‌ ನಿಲ್ದಾಣಕ್ಕೆ ಬಂದಿದ್ದರು.

ಬಸ್‌ ನಿಲ್ದಾಣದಿಂದ ಉದ್ಯಾನವನಕ್ಕೆ ಆಟೋದಲ್ಲಿ ಹೊರಟಿದ್ದಾರೆ. ಆಟೋ ಚಾಲಕನು ಯುವತಿ ಬುರ್ಖಾ ಧರಿಸಿರುವುದನ್ನು ಮತ್ತು ಯುವಕ ತನ್ನ ಹಣೆಯ ಮೇಲೆ ಕುಂಕುಮ ಇಟ್ಟುಕೊಂಡಿರುವುದನ್ನು ಗಮನಿಸಿದ್ದಾನೆ. ಅವರನ್ನು ಪಾರ್ಕಿಗೆ ಕರೆದೊಯ್ಯೊವ ಬದಲು ಅಮನ್‌ ನಗರದ ಖಾಲಿ ನಿವೇಶನಕ್ಕೆ ಅವರನ್ನು ಕರೆದೊಯ್ದಿದ್ದಾನೆ. ಆಟೋ ಚಾಲಕ ತನ್ನ ಸ್ನೇಹಿತರಿ ಕರೆಮಾಡಿ ಆ ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡು ಜೋಡಿ ಮೇಲೆ ಹಲ್ಲೆ ಮಾಡಿದ್ದಾರೆ. ಚಾಲಕ ಹಾಗೂ ಆತನ ಸ್ನೇಹಿತರು ಮುಸ್ಲಿಂ ಹುಡುಗಿಯ ಜೊತೆ ಸುತ್ತಾಡಿದ್ದಕ್ಕೆ ಯುವಕನನ್ನು ನಿಂದಿಸಿ, ಥಳಿಸಿದ್ದಾರೆ. ಯುವತಿನ್ನು ಎಳೆದಾಡಿದ್ದು ಮಾತ್ರವಲ್ಲದೇ ಬೇಕಾದರೆ ಅವರ  ಸಮುದಾಯದಲ್ಲಿಯೇ ಒಬ್ಬ ಸ್ನೇಹಿತನನ್ನು ಹುಡುಕಿಕೊ ಎಂದು ತಾಕೀತು ಮಾಡಿದ್ದಾರೆ.

ಈ ಘಟನೆಯ ನಂತರ ಯುವಕ – ಯುವತಿಯರಿಬ್ಬರು ಮಾಲಾ ಮಾರುತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ, ದುಷ್ಕರ್ಮಿಗಳು ತಮ್ಮ ಮೊಬೈಲ್‌ ಫೋನಗಳು ಮತ್ತು 20 ಸಾವಿರ ಹಣವನ್ನು ಬಲವಂತವಾಗಿ ಕಸಿದುಕೊಂಡು ಹೋಗಿದ್ದಾರೆ ಎಂದು ದೂರಿದ್ದಾರೆ.

ಬೆಂಗಳೂರು, ಮಂಗಳೂರು, ಮಂಡ್ಯದಲ್ಲಿ ನಡೆದಿದ್ದ ಮತೀಯ ಗೂಂಡಾಗಿರಿ ಘಟನೆಗಳು ಮಾಸುವ ಮುಂಚೆಯೇ ಬೆಳಗಾವಿಯಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೆ ಮೊನ್ನೆ ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿ ಮಾತನಾಡಿದ್ದರು. ಅದಕ್ಕೆ ವ್ಯಾಪಕ ಟೀಕೆ ಕೂಡ ವ್ಯಕ್ತವಾಗಿತ್ತು.


ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...