Homeಕರ್ನಾಟಕಕೋಲಾರ: ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಾಂಶುಪಾಲೆ ಸೇರಿ ಇಬ್ಬರ ಬಂಧನ, ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕೋಲಾರ: ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಾಂಶುಪಾಲೆ ಸೇರಿ ಇಬ್ಬರ ಬಂಧನ, ವಿದ್ಯಾರ್ಥಿಗಳಿಂದ ಪ್ರತಿಭಟನೆ

- Advertisement -
- Advertisement -

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚ ಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಶುಪಾಲರು ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ. ಇದಲ್ಲದೆ ನಾಪತ್ತೆಯಾಗಿರುವ ಹಾಸ್ಟೆಲ್ ವಾರ್ಡನ್ ಮಂಜುನಾಥ್ ಮತ್ತು ಅತಿಥಿ ಶಿಕ್ಷಕ ಅಭಿಷೇಕ್‌ಗಾಗಿ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ.

ಶಾಲೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಮಕ್ಕಳಿಂದ ಶೌಚ ಗುಂಡಿ ಸ್ವಚ್ಛಗೊಳಿಸಿದ ಪ್ರಕರಣ ಬಯಲಾಗುತ್ತಿದ್ದಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಗಳ ವಿರುದ್ಧ ಮಲಹೊರುವ ಪದ್ಧತಿ ನಿಯಂತ್ರಣ ಕಾಯ್ದೆ, ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಘಟನೆಯ ವಿವರ:

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಶಾಲಾ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರು ಸ್ವಚ್ಛತೆ ಮಾಡಿಸಿದ್ದರು. ಈ ಕುರಿತ ಪೋಟೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿತ್ತು.

ಇದಲ್ಲದೆ ವೈರಲ್‌ ಆಗಿರುವ ವಿಡಿಯೋವೊಂದರಲ್ಲಿ ಶಾಲಾ ವಿದ್ಯಾರ್ಥಿಯೋರ್ವ, ನಾವು ಐದಾರು ಮಂದಿ ಇದ್ದೆವು. ಶೌಚ ಗುಂಡಿಗೆ ಇಳಿಸಿ ಕಸ ತೆಗೆಸಿದರು. ನಾವು ಬಕೆಟ್‌ಗಳಲ್ಲಿ ಕಸ ತುಂಬಿ ಕೊಟ್ಟೆವು. ಕೆಲವರು ಮೇಲಿಂದ ನೀರು ಹಾಕಿದರು. ಇಲ್ಲಿ ವಿಪರೀತ ಹಿಂಸೆ ಕೊಡುತ್ತಾರೆ. ನಮ್ಮ ಮೇಲೆ ಹಲ್ಲೆ ನಡೆಸುತ್ತಾರೆ ಎಂದು ಹೇಳುವುದು ಸೆರೆಯಾಗಿತ್ತು. ಈ ಕುರಿತ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಶಾಲೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಾಗರತ್ನ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಾರದ ಆರ್.ಶ್ರೀನಿವಾಸ್ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಾಗರತ್ನ ಅವರು ವಸತಿ ಶಾಲೆಯಲ್ಲಿ ಪರಿಶೀಲನೆ ನಡೆಸಿದ್ದು, ಮಕ್ಕಳನ್ನು ಈ ರೀತಿಯ ಕೆಲಸಕ್ಕೆ ಬಳಸಿಕೊಂಡಿರುವುದು ತಪ್ಪು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಾರದ ಆರ್.ಶ್ರೀನಿವಾಸ್ ಅವರು ಶಾಲೆಗೆ ತೆರಳಿ ಪರಿಶೀಲನೆ ನಡೆಸಿದ್ದು, ಮಕ್ಕಳಲ್ಲಿ ಈ ರೀತಿಯ ಕೆಲಸ ಇನ್ನು ಮಾಡಿಸಬಾರದು ಎಂದು ಎಚ್ಚರಿಕೆ ನೀಡಿದ್ದರು. ಇದಲ್ಲದೆ ಮಕ್ಕಳಲ್ಲಿ ಶೌಚ ಗುಂಡಿ ಶುಚಿ ಗೊಳಿಸಿದ ಮತ್ತು ಮಕ್ಕಳಿಗೆ ಚಿತ್ರಹಿಂಸೆ ಕೊಟ್ಟ ಶಿಕ್ಷಕರ ವಿರುದ್ಧ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಿದ್ದರು.

ಮಾಲೂರಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ರಿಂದ 10ನೇ ತರಗತಿಯ 250 ಮಕ್ಕಳು ಓದುತ್ತಿದ್ದರು. ಕೆಲ ಮಕ್ಕಳನ್ನು ಶೌಚ ಗುಂಡಿಯೊಳಗೆ ಇಳಿಸಿ ಸ್ವಚ್ಛತಾ ಕಾರ್ಯವನ್ನು ನಡೆಲಾಗಿದೆ. ಇದಲ್ಲದೆ ಮಕ್ಕಳಿಗೆ ವಸತಿ ನಿಲಯದಲ್ಲಿ ಚಿತ್ರಹಿಂಸೆ ನೀಡುವ ವಿಡಿಯೋಗಳು ಕೂಡ ವೈರಲ್‌ ಆಗಿತ್ತು. ರಾತ್ರಿ ಲೈಟ್ ಆಫ್ ಮಾಡಿ ಬ್ಯಾಗ್ ಸಮೇತ ಮಕ್ಕಳನ್ನು ಹಾಸ್ಟೆಲ್ ಹೊರಗಡೆ ಮಂಡಿಯೂರಿ ಕೂರಿಸಿ ಶಿಕ್ಷೆ ಕೊಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಘಟನೆಯ ವಿಡಿಯೋವನ್ನು ಸಹ ಶಿಕ್ಷಕರರೋರ್ವರು ಮಾಡಿ ವೈರಲ್‌ ಮಾಡಿದ್ದರು ಎನ್ನಲಾಗಿದೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಆರೋಪಿತ ಶಿಕ್ಷಕರ ವಿರುದ್ಧ ಕ್ರಮಕ್ಕೆ ವ್ಯಾಪಕ ಆಗ್ರಹ ಕೇಳಿ ಬಂದಿತ್ತು.

ಮಕ್ಕಳ ಕೈಯ್ಯಲ್ಲಿ ಶೌಚಾಲಯ ಸ್ವಚ್ಛತೆ ಮಾಡಿಸಿರುವುದು ಅಬಾಲಿಶನ್ ಆಫ್ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಆ್ಯಕ್ಟ್-1993ರ ಉಲ್ಲಂಘನೆ ಆಗಿದೆ. ಆದರೆ ಸ್ವಚ್ಛತಾ ಅಂದೋಲನದ ಭಾಗವಾಗಿ ಚೇಂಬರ್ ಒಳಗೆ ಇಳಿಸಿ ಸ್ವಚ್ಛಗೊಳಿಸಲಾಗಿದೆ. ಅದು ಮಲದ ಗುಂಡಿ ಅಲ್ಲ ಎಂದು ಕೂಡ ಶಿಕ್ಷಕರು ಈ ಬಗ್ಗೆ ಸಮಜಾಯಿಸಿ ನೀಡಿದ್ದರು. ಇದಲ್ಲದೆ ಶಾಲೆಯಲ್ಲಿ ಮಾರೇಶ್​ ಮತ್ತು ಚಿತ್ರಕಲಾ ಶಿಕ್ಷಕ ಮುನಿಯಪ್ಪರಿಂದ ಗುಂಪುಗಾರಿಕೆ ನಡೆದಿದೆ ಎಂದು ಪ್ರಾಂಶುಪಾಲೆ ಭಾರತಮ್ಮ ಆರೋಪಿಸಿದ್ದರು.

ವಿದ್ಯಾರ್ಥಿಗಳಿಂದ ಪ್ರತಿಭಟನೆ:
ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛಗೊಳಿಸಿದ್ದ ಆರೋಪದಲ್ಲಿ ವಸತಿ ಶಾಲೆಯ ಪ್ರಾಂಶುಪಾಲೆ ಮತ್ತು ಶಿಕ್ಷಕನನ್ನು ಬಂಧಿಸಿರುವುದನ್ನು ಖಂಡಿಸಿ ಶಾಲೆಯ ವಿದ್ಯಾರ್ಥಿಗಳೇ ಪ್ರತಿಭಟನೆ ನಡೆಸಿದ್ದಾರೆ. ವಸತಿ ಶಾಲೆಯಲ್ಲಿ ಮಕ್ಕಳು ಪ್ರತಿಭಟನೆ ಆರಂಭಿಸಿದ್ದು, ಶಿಕ್ಷಕರ ವಿರುದ್ಧದ ಪ್ರಕರಣವನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸುವಂತೆ ಒತ್ತಾಯಿಸುತ್ತಿರುವ ವಿದ್ಯಾರ್ಥಿಗಳು, ಊಟ ತಿಂಡಿ ಬಿಟ್ಟು ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿ: ಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...