Homeಮುಖಪುಟಮೊರ್ಬಿ ವಿವಾದ: ಜಾಮೀನಿನ ಬಳಿಕ ಟಿಎಂಸಿ ನಾಯಕ ಸಾಕೇತ್‌ ಮತ್ತೆ ಬಂಧನ

ಮೊರ್ಬಿ ವಿವಾದ: ಜಾಮೀನಿನ ಬಳಿಕ ಟಿಎಂಸಿ ನಾಯಕ ಸಾಕೇತ್‌ ಮತ್ತೆ ಬಂಧನ

- Advertisement -
- Advertisement -

ಗುಜರಾತ್‌ನ ಮೋರ್ಬಿ ಸೇತುವೆ ಕುಸಿತದ ಕುರಿತು ಸುಳ್ಳು ಸುದ್ದಿ ಟ್ವೀಟ್ ಮಾಡಿದ ಆರೋಪದಲ್ಲಿ ಬಂಧಿತರಾಗಿದ್ದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ವಕ್ತಾರ ಸಾಕೇತ್ ಗೋಖಲೆ ಅವರಿಗೆ ಜಾಮೀನು ದೊರೆತ ಕೆಲವೇ ಗಂಟೆಗಳಲ್ಲಿ ಅವರನ್ನು ಗುರುವಾರ ಮತ್ತೆ ಬಂಧಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಸೇತುವೆ ಕುಸಿದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದರ ಕುರಿತು ಸುಳ್ಳು ಸುದ್ದಿಯನ್ನು ಹರಡುವ ಮೂಲಕ ‘ಚುನಾವಣೆ ಸಮಯದಲ್ಲಿ ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸಲಾಗಿದೆ’ ಎಂಬ ಆರೋಪದ ಮೇಲೆ ಮೊರ್ಬಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಗುರುವಾರ ಸಾಕೇತ್‌ ಅವರರನ್ನು ಬಂಧಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ವರದಿಯ ಪ್ರಕಾರ ಮೊದಲ ಪ್ರಕರಣದಲ್ಲಿ ಗೋಖಲೆ ಜಾಮೀನು ಪಡೆದ ‘ಕೇವಲ ಒಂದು ಗಂಟೆ’ ನಂತರ ಹೊಸ ಪ್ರಕರಣವನ್ನು ದಾಖಲಿಸಲಾಗಿದೆ.

ಈ ಪ್ರಕರಣದಲ್ಲಿ ಮಾಡಲಾದ ಆರೋಪಗಳು ಅಹಮದಾಬಾದ್‌ನಲ್ಲಿ ದಾಖಲಾಗಿರುವ ಮೊದಲ ಪ್ರಕರಣದಂತೆಯೇ ಇವೆ. ಮಚ್ಚು ನದಿಯ ಸೇತುವೆ ಕುಸಿದು 141 ಜನರು ಸಾವನ್ನಪ್ಪಿದ ಒಂದು ದಿನದ ನಂತರ ನವೆಂಬರ್ 1 ರಂದು ಪ್ರಧಾನಿ ಮೊರ್ಬಿಗೆ ಭೇಟಿ ನೀಡಿದ್ದರು.

ಡಿಸೆಂಬರ್ 1ರಂದು ಗೋಖಲೆ ಅವರು ಟ್ವೀಟ್ ಮಾಡಿ, “ಮೋದಿಯವರು ಮೊರ್ಬಿಗೆ ಭೇಟಿ ನೀಡಲು 30 ಕೋಟಿ ರೂಪಾಯಿ ಖರ್ಚಾಗಿದೆ ಎಂಬ ವಿಷಯವನ್ನು ಮಾಹಿತಿ ಹಕ್ಕು ಅರ್ಜಿ ಬಹಿರಂಗಪಡಿಸಿದೆ” ಎಂದು ಆರೋಪಿಸಿ ಸುದ್ದಿ ಕ್ಲಿಪ್ಪಿಂಗ್ ಹಂಚಿಕೊಂಡಿದ್ದರು. ಆದರೆ ಪ್ರೆಸ್ ಇನ್‌ಫರ್ಮೇಷನ್ ಬ್ಯೂರೋ (ಪಿಐಬಿ) ಫ್ಯಾಕ್ಟ್‌ಚೆಕ್‌ ಖಾತೆಯು ಈ ಆರೋಪವನ್ನು ನಿರಾಕರಿಸಿತ್ತು.

ಈ ಸುದ್ದಿ ಕ್ಲಿಪ್ಪಿಂಗ್ ಸ್ಥಳೀಯ ಪತ್ರಿಕೆ ಗುಜರಾತ್ ಸಮಾಚಾರ್‌ಗೆ ಸಂಬಂಧಿಸಿದೆ. ಆದರೆ ಪತ್ರಿಕೆಯು ಈ ಸುದ್ದಿಯನ್ನು ಪ್ರಕಟಿಸಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ.

ಗೋಖಲೆ ಅವರನ್ನು ಮೊದಲು ಡಿಸೆಂಬರ್ 5 ರಂದು ರಾಜಸ್ಥಾನದ ಜೈಪುರದಲ್ಲಿ ಗುಜರಾತ್ ಪೊಲೀಸರು ಬಂಧಿಸಿದ್ದರು. ಅವರನ್ನು ಅಹಮದಾಬಾದ್‌ಗೆ ಕರೆತಂದ ನಂತರ ಔಪಚಾರಿಕವಾಗಿ ಅರೆಸ್ಟ್‌ ಮಾಡಲಾಯಿತು. ನಂತರ ಡಿಸೆಂಬರ್ 8 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು. ರಾಜಕೀಯ ಮೈಲೇಜ್ ಪಡೆಯುವುದಕ್ಕಾಗಿ ಮೋದಿಯವರ ಮೋರ್ಬಿ ಭೇಟಿಯ ಬಗ್ಗೆ ಗೋಖಲೆ ಸುಳ್ಳು ಸುದ್ದಿಯನ್ನು ಟ್ವೀಟ್ ಮಾಡಿದ್ದಾರೆ ಎಂದು ಗುಜರಾತ್ ಪೊಲೀಸರು ಆರೋಪಿಸಿದ್ದರು.

ಗುರುವಾರ, ತೃಣಮೂಲ ಕಾಂಗ್ರೆಸ್ ವಕ್ತಾರರಿಗೆ ಅಹಮದಾಬಾದ್ ನ್ಯಾಯಾಲಯವು ಪ್ರಕರಣದಲ್ಲಿ ಜಾಮೀನು ನೀಡಿತು. ಪಕ್ಷದ ಸಂಸದ ಡೆರೆಕ್ ಒ’ಬ್ರಿಯಾನ್ ಗುರುವಾರ ಸಂಜೆ 4.47 ಕ್ಕೆ ಜಾಮೀನಿನ ಬಗ್ಗೆ ಟ್ವೀಟ್ ಮಾಡಿದ್ದಾರೆ. ಆದಾಗ್ಯೂ, ಐದು ಗಂಟೆಗಳ ನಂತರ, ರಾತ್ರಿ 8.45ಕ್ಕೆ ಗೋಖಲೆಯನ್ನು ಮತ್ತೆ ಬಂಧಿಸಲಾಯಿತು ಎಂದು ಒ’ಬ್ರಿಯಾನ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಯಾವುದೇ ಸೂಚನೆ ಅಥವಾ ವಾರಂಟ್ ಇಲ್ಲದೆ ವಕ್ತಾರರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ‘ಅಜ್ಞಾತ ಸ್ಥಳ’ಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಎರಡನೇ ಪ್ರಕರಣದಲ್ಲಿ, ಗೋಖಲೆ ವಿರುದ್ಧ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125ರ (ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಮೊರ್ಬಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯೊಬ್ಬರು, ಪ್ರಥಮ ಮಾಹಿತಿ ವರದಿಯನ್ನು ಸಲ್ಲಿಸಿದ್ದಾರೆ. ಗುಜರಾತ್‌ನಲ್ಲಿ ರಾಜ್ಯ ಚುನಾವಣೆಗಳ ಕಾರಣ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಮಯದಲ್ಲಿ ಗೋಖಲೆ ಅವರು ಸುಳ್ಳು ಸುದ್ದಿಯನ್ನು ಟ್ವೀಟ್ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.

ಏತನ್ಮಧ್ಯೆ, ತೃಣಮೂಲ ಕಾಂಗ್ರೆಸ್ ಪಕ್ಷವು ಐದು ಸದಸ್ಯರ ನಿಯೋಗವನ್ನು ಮೊರ್ಬಿಗೆ ಕಳುಹಿಸಿದೆ. “ಮೊರ್ಬಿ ದುರಂತಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನೂ ಈವರೆಗೆ ಬಂಧಿಸಿಲ್ಲ. ಆದರೆ ಸತ್ಯ ಹೇಳುವವರಿಗೆ ಕಿರುಕುಳ ನೀಡಲಾಗುತ್ತಿದೆ” ಎಂದು ಪಕ್ಷವು ಟ್ವೀಟ್ ಮಾಡಿದೆ. “ನಾವು ಸಾಕೇತ್ ಗೋಖಲೆ ಅವರ ಪರವಾಗಿ ನಿಲ್ಲುತ್ತೇವೆ ಮತ್ತು ನಾವು ನಮ್ಮ ಎಲ್ಲಾ ಶಕ್ತಿಯೊಂದಿಗೆ ಹೋರಾಡುತ್ತೇವೆ” ಎಂದು ಪ್ರತಿಕ್ರಿಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...