Homeಮುಖಪುಟ'ಜೈ ಭೀಮ್‌' ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ಬಹುನಿರೀಕ್ಷಿತ ‘ಜೈ ಭೀಮ್‌’ ಸಿನಿಮಾ ನವೆಂಬರ್ 02 ರಂದು ಅಮೆಜಾನ್‌ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ.

- Advertisement -
- Advertisement -

ತಮಿಳಿನ ಖ್ಯಾತ ನಟ ಸೂರಿಯಾ ಅಭಿನಯದ ಹಾಗೂ ಅವರ 2ಡಿ ನಿರ್ಮಾಣ ಸಂಸ್ಥೆಯಿಂದ ನಿರ್ಮಿಸಿರುವ ಬಹುನಿರೀಕ್ಷಿತ ‘ಜೈ ಭೀಮ್‌’ ಸಿನಿಮಾ ನವೆಂಬರ್ 02 ರಂದು ಅಮೆಜಾನ್‌ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ. ಪ್ರೀಮಿಯರ್ ಶೋನಲ್ಲಿ ಚಿತ್ರ ವೀಕ್ಷಿಸಿರುವ ತಮಿಳುನಾಡು ಸಿಎಂ ಸ್ಟಾಲಿನ್ ‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ ಎಂದು ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಪ್ರೇಕ್ಷಕರ ಮನಸ್ಸಿನ ಮೇಲೆ ಪ್ರಭಾವ ಬೀರುವುದು ಮತ್ತು ಆ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರುವುದು ಉತ್ತಮ ಕಲೆಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಚಿತ್ರವನ್ನು ನಿರ್ಮಾಣ ಮಾಡಿರುವ ಗೆಳೆಯ ಸೂರಿಯಾ ಅವರು ‘ಇರುವ ಬುಡಕಟ್ಟು ಸಮುದಾಯ ಶಿಕ್ಷಣ ಸಂಸ್ಥೆಗೆ’ ಒಂದು ಕೋಟಿ ರೂ ದೇಣಿಗೆ ನೀಡಿದ್ದಾರೆ. ಅದಕ್ಕಾಗಿ ಅವರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ. ಜೈ ಭೀಮ್ ನಂತಹ ಚಿತ್ರಗಳು ಮತ್ತಷ್ಟು ಬರಲಿ. ಚಿತ್ರತಂಡಕ್ಕೆ ಶುಭವಾಗಲಿ ಎಂದು ಸ್ಟಾಲಿನ್ ತಿಳಿಸಿದ್ದಾರೆ.

ಕೋರ್ಟ್ ರೂಮ್‌ ಡ್ರಾಮಾ ಎಂದೇ ಗುರುತಿಸಲಾಗಿರುವ ‘ಜೈ ಭೀಮ್‌’ ಬಿಡುಗಡೆಗೂ ಮುನ್ನವೇ ಸಾಕಷ್ಟು ಗಮನ ಸೆಳೆದಿದೆ. ಆದಿವಾಸಿ ಮಹಿಳೆಯೊಬ್ಬಳ ನ್ಯಾಯಕ್ಕಾಗಿನ ಹೋರಾಟವು ಟ್ರೇಲರ್‌ನಲ್ಲಿ ಕಂಡುಬಂದಿದೆ.

ಗರ್ಭಿಣಿ ಮಹಿಳೆಯೊಂದಿಗೆ ಮಗು ಹಾಗೂ ವಕೀಲರಾಗಿ ಸೂರ್ಯ ಕಾಣಿಸಿಕೊಂಡಿರುವ ಪೋಸ್ಟರ್‌ಅನ್ನು ಹಂಚಿಕೊಳ್ಳಲಾಗಿದೆ. ಜೈ ಭೀಮ್‌ ಸಿನಿಮಾವನ್ನು ಜ್ಞಾನವೇಲ್‌ ನಿರ್ದೇಶಿಸಿದ್ದು, 2ಡಿ ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಸೂರಿಯಾ ಹಾಗೂ ಜ್ಯೋತಿಕ ನಿರ್ಮಾಣ ಮಾಡಿದ್ದಾರೆ. ಬುಡಕಟ್ಟು ಸಮುದಾಯಗಳ ಪರವಾಗಿ ಹೋರಾಟ ಮಾಡುವ ವಕೀಲನಾಗಿ ಸೂರಿಯಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

‘ನ್ಯಾಯದ ಅನ್ವೇಷಣೆಯಲ್ಲಿನ ಧೈರ್ಯ ಮತ್ತು ನಂಬಿಕೆಯ ಈ ಕಥೆಯನ್ನು ತೆರೆಗೆ ತರಲು ಹೆಮ್ಮೆಯಾಗುತ್ತಿದೆ’ ಎಂದು ಸೂರಿಯಾ ತಮ್ಮ ಟ್ವೀಟರ್‌ ಖಾತೆಯಲ್ಲಿ ಈ ಹಿಂದೆ ಬರೆದುಕೊಂಡಿದ್ದರು. ‘ಸೂರರೈ ಪೋಟ್ರು’ ಯಶಸ್ಸಿನ ಬಳಿಕ ಬಿಡುಗಡೆಯಾಗುತ್ತಿರುವ ಸೂರಿಯಾ ಅಭಿನಯದ ಸಿನಿಮಾ ಇದಾಗಿದೆ.

‘ಕರ್ಣನ್‌’ ಖ್ಯಾತಿಯ ರಜಿಶಾ ವಿಜಯನ್‌ ಪ್ರಧಾನ ಮಹಿಳಾ ಪಾತ್ರದಲ್ಲಿ ಅಭಿನಯಿಸಿದ್ದು, ಪ್ರಕಾಶ್‌ ರಾಜ್‌, ರಾವ್‌ ರಮೇಶ್‌ ಮತ್ತು ಲಿಜೋ ಮೋಲ್‌ ಜೋಸ್‌ ಥರದ ಪ್ರಮುಖ ಕಲಾವಿದರು ಈ ಚಿತ್ರದಲ್ಲಿದ್ದಾರೆ. ‘ಜೈ ಭೀಮ್‌’ ಸಿನಿಮಾ ತಮಿಳು ಮತ್ತು ತೆಲಗು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಸೀನ್‌ ರೋಲ್ಡನ್‌ ಅವರ ಸಂಗೀತ, ಎಸ್‌.ಆರ್‌.ಖದೀರ್‌ ಅವರ ಸಿನಿಮಾಟೋಗ್ರಫಿ, ಪಿಲೋಮಿನ್‌ ರಾಜ್‌ ಅವರ ಸಂಕಲನ ಈ ಸಿನಿಮಾಕ್ಕಿದೆ.


ಇದನ್ನೂ ಓದಿ: ಟೀಸರ್ ಬಿಡುಗಡೆ: ನವೆಂಬರ್ 02 ಕ್ಕೆ ಅಮೆಜಾನ್‌ ಪ್ರೈಮ್‌ನಲ್ಲಿ ಜೈಭೀಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...