Homeಕರ್ನಾಟಕಬಂಧಿಸಿದಷ್ಟೂ ಭುಗಿಲೆದ್ದ ಪ್ರತಿಭಟನೆ: ಟೌನ್‌ಹಾಲ್‌ ಮುಂದೆ ಜಮಾಯಿಸುತ್ತಿರುವ ಸಾವಿರಾರು ಜನ

ಬಂಧಿಸಿದಷ್ಟೂ ಭುಗಿಲೆದ್ದ ಪ್ರತಿಭಟನೆ: ಟೌನ್‌ಹಾಲ್‌ ಮುಂದೆ ಜಮಾಯಿಸುತ್ತಿರುವ ಸಾವಿರಾರು ಜನ

- Advertisement -
- Advertisement -

ಪೊಲೀಸರ ನಿಷೇದಾಜ್ಞೆ, ನೂರಾರು ಜನರ ಬಂಧನದ ನಡುವೆಯೂ ಪೌರತ್ವ ತಿದ್ದುಪಡಿಯ ವಿರುದ್ಧದ ಪ್ರತಿಭಟನೆ ಮುಗಿಲು ಮುಟ್ಟಿದೆ. ಈಗ ಸಾವಿರಕ್ಕೂ ಹೆಚ್ಚು ಜನ ಟೌನ್‌ ಹಾಲ್‌ ಮುಂದೆ ಜಮಾಯಿಸಿದ್ದು ಪ್ರತಿಭಟನೆ ಭುಗಿಲೆದ್ದಿದೆ.

ಮುಖ್ಯವಾಗಿ ವಿದ್ಯಾರ್ಥಿಗಳು ಸೇರಿದಂತೆ ಎರಡು ಸಾವಿರ ಜನ ಬೆಂಗಳೂರಿನ ಟೌನ್‌ ಹಾಲ್‌ ಮುಂದೆ ಜಮಾಯಿಸಿದ್ದು ಪ್ರತಿಭಟನಾಕಾರರ ಹರಿವು ಹೆಚ್ಚುತ್ತಲೇ ಇದೆ. ಎಲ್ಲೆಲ್ಲೂ ಭಾರತದ ತ್ರಿವರ್ಣ ಧ್ವಜಗಳು ಹಾರಾಡುತ್ತಿದ್ದು ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧಧ ಘೋಷಣೆಗಳು ಮುಗಿಲು ಮುಟ್ಟಿವೆ.

ಪೊಲೀಸರ ಪ್ರತಭಟನಾಕಾರರನ್ನು ನಿಭಾಯಿಸಲು ಹರಸಾಹಸಪಡುತ್ತಿದ್ದು ಲಾಠಿ ಚಾರ್ಜ್‌ ಮಾಡುವ ಸಂಭವವೂ ಇದೆ.

ಇನ್ನೊಂದೆಡೆ ಮುಖ್ಯಮಂತ್ರಿ ಯಡಿಯೂರಪ್ಪನವರು ಮಾತನಾಡಿ ದಯವಿಟ್ಟು ಕಾಯ್ದೆಯನ್ನು ವಿರೋಧಿಸಬೇಡಿ, ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

ಶಿವಾಜಿನಗರ ಶಾಸಕ ರಿಜ್ವಾನ್‌ ಹರ್ಷದ್‌ ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ. ಸೆಕ್ಷನ್‌ 144 ಹಾಕಿದ್ದು ಏಕೆ? ಹಿಟ್ಲರ್‌ನ ಜರ್ಮನಿ ದೇಶವೇ ಇದು? ಇದು ಗಾಂಧಿಯವರ ಭಾರತ ಎಂಬುದು ನೆನಪಿರಲಿ. ಯಾವುದೇ ಕಾರಣಕ್ಕೂ ಶಾಂತಿಯುತ ಪ್ರತಿಭಟನೆ ನಡೆಸುವ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಮಾಡಬಾರದು. ಪ್ರತಿಭಟನೆಯನ್ನು ಶಾಂತಿಯುತವಾಗಿ ನಿರ್ವಹಿಸಲು ಯಡಿಯೂರಪ್ಪ ವಿಫಲವಾದರೆ ರಾಜೀನಾಮೆ ಕೊಡಲಿ ಎಂದಿದ್ದಾರೆ.

ದೇಶದ ಯುವಕರು ನಿರುದ್ಯೋಗದ ಬಗ್ಗೆ ಮಾತಾಡುತ್ತಾರೆ ಎಂದು ದಿಕ್ಕುತಪ್ಪಿಸಲು ಈ ಕಾಯ್ದೆಗಳನ್ನು ತರಲಾಗಿದೆ. ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಮಾಹಿತಿ ಹಕ್ಕು ಕಾಯ್ದೆ, ಶಿಕ್ಷಣದ ಕಾಯ್ದೆ ಮತ್ತು ಆಹಾರದ ಹಕ್ಕಿನ ಕಾಯ್ದೆ ತಂದಿದ್ದೆವು, ಈ ರೀತಿಯ ದೇಶ ಒಡೆಯುವ ಕಾಯ್ದೆಗಳನ್ನಲ್ಲ ಎಂದು ಕಿಡಿಕಾರಿದ್ದಾರೆ.

ಮೈಸೂರು, ಬಳ್ಳಾರಿ, ಹಾಸನ ಮತ್ತು ಕಲಬರುಗಿ ಸೇರಿದಂತೆ ರಾಜ್ಯದ್ಯಂತ ಪ್ರತಿಭಟನೆ ಜೋರಾಗುತ್ತಲೇ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...