Homeಕರೋನಾ ತಲ್ಲಣಕೊರೊನಾ: ದೇಶದಲ್ಲಿ ಒಂದೇ ದಿನ 1 ಲಕ್ಷಕ್ಕೂ ಅಧಿಕ ಮಂದಿ ಗುಣಮುಖ

ಕೊರೊನಾ: ದೇಶದಲ್ಲಿ ಒಂದೇ ದಿನ 1 ಲಕ್ಷಕ್ಕೂ ಅಧಿಕ ಮಂದಿ ಗುಣಮುಖ

ಭಾರತದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳಿಗಿಂತಲೂ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗುತ್ತಿದ್ದು, ಈಗ ದೇಶದಲ್ಲಿ 9,75,861 ಪ್ರಕರಣಗಳು ಮಾತ್ರ ಸಕ್ರಿಯವಾಗಿದ್ದು, 44,97,868 ಮಂದಿ ಗುಣಮುಖರಾಗಿದ್ದಾರೆ.

- Advertisement -
- Advertisement -

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 75,083 ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 55,62,663ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1,053 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 88,935ಕ್ಕೆ ಏರಿಕೆಯಾಗಿದೆ.

ಈ ನಡುವೆಯೂ ಭಾರತದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳಿಗಿಂತಲೂ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗುತ್ತಿದ್ದು, ಈಗ ದೇಶದಲ್ಲಿ 9,75,861 ಪ್ರಕರಣಗಳು ಮಾತ್ರ ಸಕ್ರಿಯವಾಗಿದ್ದು, 44,97,868 ಮಂದಿ ಗುಣಮುಖರಾಗಿದ್ದಾರೆ. 24 ಗಂಟೆಯಲ್ಲಿ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 1,01,468. ಅಂದರೆ ಒಂದೇ ದಿನದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದಾರೆ.

ಇದನ್ನೂ ಓದಿ: ವಿಧಾನಸಭಾ ಅಧಿವೇಶನ ಲೈವ್‌; ಕೊರೊನಾ ನಿರ್ವಹಣೆ ಬಗ್ಗೆ ಸಿದ್ದರಾಮಯ್ಯ ಮಾತು

ಕಳೆದ ಮೂರು ದಿನಗಳಿಂದ ದೇಶದಲ್ಲಿ ಪ್ರತಿದಿನ 90 ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗುತ್ತಿದ್ದಾರೆ. ಮೂರು ದಿನಗಳಲ್ಲೂ ಹೊಸ ಸೋಂಕಿತರ ಪ್ರಕರಣಗಳಿಗಿಂತ ಬಿಡುಗಡೆಯಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ನಿನ್ನೆ 9,33,185 ಮಾದರಿಗಳ ಪರೀಕ್ಷೆ ನಡೆಸಿರುವುದಾಗಿ ಐಸಿಎಂಆರ್‌ ತಿಳಿಸಿದೆ.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,879ಕ್ಕೆ ಏರಿಕೆಯಾಗಿದೆ. ನಿನ್ನೆ ರಾಜ್ಯದಲ್ಲಿ 9,925 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರು.


ಇದನ್ನೂ ಓದಿ: ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ: ಸೆ. 21ರಿಂದ ಶಾಲಾ-ಕಾಲೇಜು ತೆರೆಯುವುದಿಲ್ಲ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಷ್ಟ್ರಧ್ವಜ ಹಾರಿಸದ ಮನೆಗಳ ಫೋಟೋ ತೆಗೆದುಕೊಳ್ಳಿ: ಉತ್ತರಾಖಾಂಡ್‌ ಬಿಜೆಪಿ ರಾಜ್ಯಾಧ್ಯಕ್ಷ ಹೇಳಿಕೆ

0
“75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಯಾರ ಮನೆಯ ಮೇಲೆ ತಿರಂಗ ಧ್ವಜಗಳಿರುವುದಿಲ್ಲವೋ ಆ ಮನೆಯ ಫೋಟೋಗಳನ್ನು ತೆಗೆದುಕೊಳ್ಳಿ” ಎಂದು ಉತ್ತರಾಖಂಡ ಬಿಜೆಪಿ ಘಟಕದ ಮುಖ್ಯಸ್ಥ ತನ್ನ ಬೆಂಬಲಿಗರಿಗೆ ಸೂಚನೆ ನೀಡಿರುವುದಾಗಿ ‘ಟೈಮ್ಸ್ ಆಫ್...