Homeಮುಖಪುಟಗಾಝಾದ ಶಾಲೆ ಮೇಲೆ ಇಸ್ರೇಲ್ ದಾಳಿ : 100ಕ್ಕೂ ಅಧಿಕ ಜನರು ಸಾವು

ಗಾಝಾದ ಶಾಲೆ ಮೇಲೆ ಇಸ್ರೇಲ್ ದಾಳಿ : 100ಕ್ಕೂ ಅಧಿಕ ಜನರು ಸಾವು

- Advertisement -
- Advertisement -

ಗಾಝಾ ನಗರದ ಶಾಲೆಯೊಂದರ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 100ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ದರಾಜ್ ಪ್ರದೇಶದ ಅಲ್-ತಬಿನ್ ಶಾಲೆಯಲ್ಲಿ ಬೆಳಗ್ಗಿನ ಪ್ರಾಥನೆ ನಡೆಯುತ್ತಿದ್ದ ವೇಳೆ ಇಸ್ರೇಲ್ ದಾಳಿ ನಡೆಸಿದೆ. ಇದರಿಂದ ಹೆಚ್ಚು ಸಾವು ನೋವುಗಳು ಸಂಭವಿಸಿದೆ ಎಂದು ಗಾಝಾದ ಸರ್ಕಾರಿ ಮಾಧ್ಯಮಗಳು ಹೇಳಿವೆ.

ಶಾಲೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡಿರುವ ಇಸ್ರೇಲ್ ವಾಯುಪಡೆ, ಹಮಾಸ್ ಕಮಾಂಡ್ ಸೆಂಟರ್‌ಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದಿದೆ.

ದಾಳಿಗೂ ಮುನ್ನ ನಾಗರಿಕರಿಗೆ ಅಪಾಯ ಉಂಟಾಗುವುದನ್ನು ತಪ್ಪಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ಹೇಳಿದೆ. ಹಾಗಿದ್ದರೆ, 100 ಅಧಿಕ ಜನರು ವಿಶೇಷವಾಗಿ ಮಕ್ಕಳು ಬಲಿಯಾಗಿದ್ದು ಹೇಗೆ? ಎಂಬ ಪ್ರಶ್ನೆ ಉದ್ಬವಿಸಿದೆ.

ಅಲ್-ತಬಿನ್ ಶಾಲೆಯ ಪ್ರಾರ್ಥನಾ ಕೊಠಡಿಯನ್ನು ಗುರಿಯಾಗಿಸಿ ಇಸ್ರೇಲ್ ದಾಳಿ ನಡೆಸಿದ್ದು, ತರಗತಿ ಕೊಠಡಿಗಳಲ್ಲೂ ಜನರನ್ನು ಹತ್ಯೆ ಮಾಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಬಲಿಯಾಗಿದ್ದಾರೆ. ಹಲವು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಅಲ್ ಅಹ್ಲಿ ಅರಬ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾಳಿಯ ತೀವ್ರತೆಗೆ ಜನರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೆಲವರ ದೇಹಗಳು ಸುಟ್ಟು ಕರಕಲಾಗಿತ್ತು. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ಸಿಬ್ಬಂದಿ, ಮತ್ತು ಅಗತ್ಯ ವಸ್ತುಗಳು ಲಭ್ಯವಿಲ್ಲ. ಹಾಗಾಗಿ, ಬಳಸಿದ ವಸ್ತುಗಳನ್ನೇ ಮತ್ತೆ ಬಳಸುವ ಅನಿವಾರ್ಯತೆ ಎದುರಾಗಿದೆ. ಇತರ ಸಮಯಗಳಲ್ಲಿ ಬಳಸಿ ಬಿಸಾಡುವ ವೈದ್ಯಕೀಯ ಸಾಮಗ್ರಿಗಳನ್ನು ಇಲ್ಲಿ ಜೀವ ಉಳಿಸಲು ಪುನರ್ಬಳಕೆ ಮಾಡಲಾಗುತ್ತಿದೆ ಎಂದು ಅಲ್-ಜಝೀರಾದ ವರದಿಗಾರ ಹನಿ ಮಹಮೂದ್ ಹೇಳಿದ್ದಾರೆ.

ಪ್ಯಾಲೇಸ್ತೀನ್ ನಿರಾಶ್ರಿತರಿಗಾಗಿ ಕೆಲಸ ಮಾಡುವ ವಿಶ್ವಸಂಸ್ಥೆಯ ‘ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ ಫಾರ್ ಪ್ಯಾಲೆಸ್ತೀನ್ ‘ ಪ್ರಕಾರ ಇಸ್ರೇಲಿ ಸೇನಾಪಡೆ ದಕ್ಷಿಣ ಗಾಝಾದ ಖಾನ್ ಯೂನುಸ್ ಪ್ರದೇಶದಿಂದ ಸುಮಾರು 60ರಿಂದ 70 ಸಾವಿರ ಜನರನ್ನು ಈಗಾಗಲೇ ಜನಸಂಖ್ಯೆಯಿಂದ ತುಂಬಿರುವ ಮವಾಸಿ ಪ್ರದೇಶಕ್ಕೆ ಸ್ಥಳಾಂತರಿಸಿದೆ ಎಂದು ಅಲ್‌ ಜಝೀರಾ ವರದಿ ಮಾಡಿದೆ.

ದರಾಜ್ ಶಾಲೆ ಮೇಲಿನ ದಾಳಿಗೆ ಇಸ್ರೇಲ್ 2,000 ಪೌಂಡ್ ಬಾಂಬ್‌ಗಳನ್ನು ಬಳಸಿದೆ ಎಂದು ಗಾಝಾದ ಮಾಧ್ಯಮ ಕಚೇರಿಗಳು ಹೇಳಿವೆ.

ಇಂದಿನ ದಾಳಿಗೂ ಮುನ್ನ ಕೊನೆಯದಾಗಿ ಇಸ್ರೇಲ್ ನಡೆಸಿದ ದಾಳಿಯಿಂದ ಖಾನ್ ಯೂನುಸ್‌ನಲ್ಲಿ 19 ಸೇರಿ ಗಾಝಾದ ವಿವಿದೆಡೆ ಒಟ್ಟು 35 ಮಂದಿ ಸಾವನ್ನಪ್ಪಿದ್ದಾರೆ.

ಅಕ್ಟೋಬರ್ 7, 2023ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಿಂದ ಇದುವರೆಗೆ 39,699 ಜನರು ಸಾವನ್ನಪ್ಪಿದ್ದು, 91,722 ಜನರು ಗಾಯಗೊಂಡಿದ್ದಾರೆ.

ಫೋಟೋ ಸಾಂದರ್ಭಿಕ

ಇದನ್ನೂ ಓದಿ : ಎಸ್‌ಸಿ, ಎಸ್‌ಟಿಯಲ್ಲಿ ‘ಕೆನೆಪದರ’ಕ್ಕೆ ಅವಕಾಶವಿಲ್ಲ, ಸಂವಿಧಾನಕ್ಕೆ ಬದ್ದ : ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...