Homeಕರ್ನಾಟಕಬೆಂಗಳೂರಿನಲ್ಲೂ ಶತಕ ಬಾರಿಸಿದ ಡೀಸೆಲ್ ಬೆಲೆ: ಜನಸಾಮಾನ್ಯರು ಕಂಗಾಲು

ಬೆಂಗಳೂರಿನಲ್ಲೂ ಶತಕ ಬಾರಿಸಿದ ಡೀಸೆಲ್ ಬೆಲೆ: ಜನಸಾಮಾನ್ಯರು ಕಂಗಾಲು

- Advertisement -
- Advertisement -

ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿನ ನಿರಂತರ ಏರಿಕೆ ಮುಂದುವರೆದಿದೆ. ಇಂದು ಬೆಂಗಳೂರಿನಲ್ಲಿ ಲೀಟರ್ ಡೀಸೆಲ್ ಮೇಲೆ 37 ಪೈಸೆ ಹೆಚ್ಚಳದೊಂದಿಗೆ ಡೀಸೆಲ್ ಬೆಲೆ 100.37 ಪೈಸೆಗೆ ತಲುಪುವ ಮೂಲಕ ಶತಕ ಬಾರಿಸಿದೆ. ಇದೇ ಸಂದರ್ಭದಲ್ಲಿ ಪೆಟ್ರೋಲ್ ಬೆಲೆ ಬೆಂಗಳೂರಿನಲ್ಲಿ 109.53 ರೂಗೆ ತಲುಪಿದೆ.

ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ಸರ್ಕಾರಿ ತೈಲ ಸಂಸ್ಕರಣಾ ಸಂಸ್ಥೆಗಳು ದಿನನಿತ್ಯ ಇಂಧನ ದರಗಳನ್ನು ಪರಿಷ್ಕರಿಸುತ್ತವೆ. ಅಂತರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಮತ್ತು ರುಪಾಯಿ ಡಾಲರ್ ವಿನಿಮಯ ದರದ ಆಧಾರದಲ್ಲಿ ಬೆಲೆ ನಿಗಧಿಯಾಗುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದಲೇ ಜಾರಿಗೆ ತರಲಾಗುತ್ತದೆ.


ಇದನ್ನೂ ಓದಿ: ಉಚಿತ ಲಸಿಕೆ ನೀಡಿದ್ದೆ ಇಂಧನ ಬೆಲೆ ಏರಿಕೆಗೆ ಕಾರಣವೆಂದ ಕೇಂದ್ರ ಸಚಿವ: ವಾಸ್ತವವೇನು?


ಇಂಧನ ದರ ಏರಿಕೆಯಿಂದ ಎಲ್ಲಾ ವರ್ಗದ ಜನರ ಮೇಲೆಯೂ ಹೊರೆ ಹೆಚ್ಚಾಗಲಿದೆ. ಕರ್ನಾಟಕದಲ್ಲಿ 2 ಕೋಟಿಗೂ ಅಧಿಕ ನೋಂದಾಯಿತ ವಾಹನಗಳಿವೆ. ಇವುಗಳ ಮಾಲಿಕರು ನೇರವಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ಬಾಧಿತರಾದರೆ ಕರ್ನಾಟಕದ ಉಳಿದ 5 ಕೋಟಿ ಜನರು ಸಹ ಪೆಟ್ರೋಲ್ ಬೆಲೆ ಏರಿಕೆಯ ದುಷ್ಪರಿಣಾಮಗಳನ್ನು ಅನುಭವಿಸಬೇಕಾಗಿದೆ.

ನೇರ ಪರಿಣಾಮ

* ಇಂಧನ ಬೆಲೆ ಏರಿಕೆಯಿಂದಾಗಿ ಬಸ್, ರೈಲು, ಆಟೋ, ಟ್ಯಾಕ್ಸಿ ದರಗಳು ಹೆಚ್ಚಾಗುತ್ತವೆ.

* ಸ್ವಂತ ವಾಹನಕ್ಕೆ ದುಬಾರಿ ಬೆಲೆ ತೆತ್ತು ಪೆಟ್ರೋಲ್ ಹಾಕಿಸಬೇಕಾಗುತ್ತದೆ. ನನ್ನದೇ ಸ್ವಂತ ಉದಾಹರಣೆಯ ಮೂಲಕ ಹೇಳುವುದಾದರೆ 2020ರ ಜೂನ್‌ನಲ್ಲಿ ಬೈಕ್ ಫುಲ್‌ಟ್ಯಾಂಕ್ ಮಾಡಲು 882ರೂ ತಗುಲುತ್ತಿತ್ತು (73.55ರೂ 12ಲೀ). ಆಗಸ್ಟ್ 2021ರಲ್ಲಿ ಫುಲ್‌ಟ್ಯಾಂಕ್ ಮಾಡಲು 1,314ರೂ ತಗುಲುತ್ತಿದೆ (109.53ರೂ-12ಲೀ). ಅಂದರೆ 432ರೂ ಹೆಚ್ಚಾಗಿದೆ. ತಿಂಗಳಿಗೆ ಎರಡು ಬಾರಿ ಫುಲ್ ಟ್ಯಾಂಕ್ ಮಾಡಿಸಿದರೆ 864ರೂ ಹೆಚ್ಚು ಪಾವತಿಸಬೇಕಾಗಿದೆ. ಇದು ನನ್ನ ಪರಿಸ್ಥಿತಿಯಾದರೆ ಬಹುದೂರ ಪ್ರಯಾಣಿಸುವವರ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಯೋಚಿಸಿ.

* ಡೀಸೆಲ್ ಬೆಲೆಯಲ್ಲಿನ ಹೆಚ್ಚಳದಿಂದಾಗಿ ಎಲ್ಲಾ ಸಾಗಣೆ ವಾಹನಗಳು ಬಾಡಿಗೆ ಏರಿಸಬೇಕಾಗುತ್ತದೆ. ಇದರಿಂದ ಆಹಾರ, ತರಕಾರಿ, ದಿನಸಿ, ಹಣ್ಣು ಸೇರಿದಂತೆ ದಿನಬಳಕೆಯ ಪ್ರತಿಯೊಂದು ವಸ್ತುಗಳ ಬೆಲೆ ಏರುತ್ತದೆ.

* ಟ್ರ್ಯಾಕ್ಟರ್, ಟಿಲ್ಲರ್, ಲಗೇಜ್ ವಾಹನಗಳಿಗೆ ಡೀಸೆಲ್ ಬೇಕಿರುವುದರಿಂದ ಕೃಷಿಯ ಮೇಲಿನ ಹೂಡಿಕೆ ಹೆಚ್ಚಾಗುತ್ತದೆ. ರೈತರಿಗೆ ಹೊರೆಯಾಗುತ್ತದೆ.

ಇದನ್ನೂ ಓದಿ: ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?

ಇಂಧನಗಳ ಮೇಲೆ ಅತಿ ಹೆಚ್ಚು ತೆರಿಗೆ ಭಾರ

ಒಂದು ಲೀಟರ್ ಪೆಟ್ರೋಲ್‌ನ ಮೂಲ ಬೆಲೆ 37 ರೂಪಾಯಿಗಳಿದ್ದರೆ ಅದರ ಮೇಲೆ ಕೇಂದ್ರ ಸರ್ಕಾರವೊಂದೇ 35.90 ರೂ ಅಬಕಾರಿ ಸುಂಕ ವಿಧಿಸುತ್ತದೆ. ರಾಜ್ಯಗಳು ಸುಮಾರು 28 ರೂಪಾಯಿಯಷ್ಟು ತೆರಿಗೆ ವಿಧಿಸುತ್ತವೆ. ಸಾಗಣೆ, ಸಂಸ್ಕರಣೆ ಮತ್ತು ಡೀಲರ್ ಕಮಿಷನ್ 8ರೂ ಆಗುತ್ತದೆ. ಅಲ್ಲಿಗೆ ಪೆಟ್ರೋಲ್ ಬೆಲೆ 109ರೂ ದಾಟುತ್ತದೆ.


ಇದನ್ನೂ ಓದಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ನಿಂತಿಲ್ಲ: ಏಕೆ ಗೊತ್ತೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

0
ದೇಶವನ್ನೇ ತಲ್ಲಣಗೊಳಿಸಿದ್ದ ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಒಂದು ವರ್ಷವಾಗಿದೆ. ಕಳೆದ 2023ರ ಮೇ.3ರಂದು ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಸಾಕ್ಷಿಯಾಗಿತ್ತು. ಇದರ ನೆನಪಿಗಾಗಿ ಸಂಘರ್ಷದ ಭಾಗವಾಗಿದ್ದ ಕುಕಿ-ಜೋ ಮತ್ತು ಮೈತೈ ನಾಗರಿಕ ಸಮಾಜ ಸಂಘಟನೆಗಳು ಮೇ...